
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ (RCB vs GT) ನಡುವೆ ಐಪಿಎಲ್ 2026 ರ ಫೈನಲ್ (IPL 2026 Final) ಪಂದ್ಯ ನಡೆಯುತ್ತಿದೆ. ಸತತ ಎರಡನೇ ಬಾರಿಗೆ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಬೆಂಗಳೂರು ಇತಿಹಾಸ ನಿರ್ಮಿಸುವ ಅವಕಾಶವನ್ನು ಹೊಂದಿದೆ. ಆರ್ಸಿಬಿ ಈ ಸಾಧನೆ ಮಾಡಿದರೆ ಐಪಿಎಲ್‌ನಲ್ಲಿ ಸತತ ಎರಡನೇ ಬಾರಿಗೆ ಟ್ರೋಫಿ ಗೆದ್ದ ಮೂರನೇ ತಂಡ ಎನಿಸಿಕೊಳ್ಳಲಿದೆ. ಇತ್ತ ಗುಜರಾತ್ ಕೂಡ 2022 ರ ನಂತರ ಚಾಂಪಿಯನ್ ಪಟ್ಟವನ್ನು ಅಲಂಕರಿಸಲು ನೋಡುತ್ತಿದೆ. ಇನ್ನು ಈ ಪಂದ್ಯದ ಟಾಸ್ ಕೂಡ ನಡೆದಿದ್ದು, ಟಾಸ್ ಗೆದ್ದ ಆರ್ಸಿಬಿ ನಾಯಕ ರಜತ್ ಪಾಟಿದರ್ ಬೌಲಿಂಗ್ ಆಯ್ದುಕೊಂಡಿದ್ದಾರೆ.
ಮೇಲೆ ಹೇಳಿದಂತೆ ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕ ರಜತ್ ಪಾಟಿದಾರ್ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಆ ಬಳಿಕ ಪ್ಲೇಯಿಂಗ್ 11 ಬಗ್ಗೆ ಮಾಹಿತಿ ನೀಡಿದ ರಜತ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ ಎಂದರು. ಅಂದರೆ ಈ ನಿರ್ಣಾಯಕ ಪಂದ್ಯದಲ್ಲೂ ಫಿಲ್ ಸಾಲ್ಟ್ ಇಲ್ಲದೆ ಆರ್ಸಿಬಿ ಕಣಕ್ಕಿಳಿಯುತ್ತಿದೆ. ಇತ್ತ ಟಾಸ್ ಸೋತ ಗುಜರಾತ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಸಾಯಿ ಕಿಶೋರ್ ಬದಲಿಗೆ ಅರ್ಷದ್ ಖಾನ್ ತಂಡಕ್ಕೆ ಆಯ್ಕೆಯಾಗಿದ್ದಾರೆ.
RCB vs GT, IPL 2026 Final Live Score: ಟಾಸ್ ಗೆದ್ದ ಆರ್ಸಿಬಿ ಬೌಲಿಂಗ್ ಆಯ್ಕೆ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ XI: ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಕೃನಾಲ್ ಪಾಂಡ್ಯ, ಟಿಮ್ ಡೇವಿಡ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರೊಮಾರಿಯೋ ಶೆಫರ್ಡ್, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಜಾಕೋಬ್ ಡಫ್ಫಿ ಮತ್ತು ರಸಿಖ್ ಸಲಾಂ.
ಇಂಪ್ಯಾಕ್ಟ್ ಪ್ಲೇಯರ್ಸ್: ವೆಂಕಟೇಶ್ ಅಯ್ಯರ್, ಕನಿಷ್ಕ್ ಚೌಹಾನ್, ಸ್ವಪ್ನಿಲ್ ಸಿಂಗ್, ಅಭಿನಂದನ್ ಸಿಂಗ್ ಮತ್ತು ಜೋರ್ಡಾನ್ ಕಾಕ್ಸ್.
🚨 Toss Update from the FINAL 🚨@RCBTweets have won the toss & will bowl first against @gujarat_titans in Ahmedabad.
Updates ▶️ https://t.co/Yz6K3q6w0X#TATAIPL | #Final | #TheFinalLeap | #RCBvGT pic.twitter.com/kgrF0LJ0gQ
— IndianPremierLeague (@IPL) May 31, 2026
ಗುಜರಾತ್ ಟೈಟಾನ್ಸ್ ಪ್ಲೇಯಿಂಗ್ XI: ಶುಭಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಜೇಸನ್ ಹೋಲ್ಡರ್, ವಾಷಿಂಗ್ಟನ್ ಸುಂದರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ನಿಶಾಂತ್ ಸಿಂಧು, ಕಗಿಸೋ ರಬಾಡ, ಅರ್ಷದ್ ಖಾನ್ (ಸಾಯಿ ಕಿಶೋರ್ ಬದಲಿಗೆ) ಮೊಹಮ್ಮದ್ ಸಿರಾಜ್.
ಇಂಪ್ಯಾಕ್ಟ್ ಪ್ಲೇಯರ್ಸ್: ಪ್ರಸಿದ್ಧ್ ಕೃಷ್ಣ, ಗ್ಲೆನ್ ಫಿಲಿಪ್ಸ್, ಅನುಜ್ ರಾವತ್, ಕುಮಾರ್ ಕುಶಾಗ್ರಾ, ಸಾಯಿ ಕಿಶೋರ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:17 pm, Sun, 31 May 26