
2026 ರ ಐಪಿಎಲ್ (IPL 2026) ಫೈನಲ್ಗೆ ಕ್ಷಣಗಣನೆ ಶುರುವಾಗಿದೆ. ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (GT vs RCB) ಪ್ರಶಸ್ತಿಗಾಗಿ ಸೆಣಸಾಡಲಿವೆ. ಈ ಹೈವೋಲ್ಟೇಜ್ ಕದನ ಭಾನುವಾರ ಸಂಜೆ 7:30 ಕ್ಕೆ ಆರಂಭವಾಗಲಿದೆ. ಈ ಆವೃತ್ತಿಯಲ್ಲಿ ಉಭಯ ತಂಡಗಳು ಅಮೋಘ ಪ್ರದರ್ಶನ ನೀಡಿದ್ದು, ಯಾವ ತಂಡಕ್ಕೆ ಟ್ರೋಫಿ ಸಿಗಲಿದೆ ಎಂಬುದು ಕುತೂಹಲ ಮೂಡಿಸಿದೆ. ಒಂದೆಡೆ ಆರ್ಸಿಬಿ ಇದೇ ಗುಜರಾತ್ ತಂಡವನ್ನು ಕ್ವಾಲಿಫೈಯರ್ 1 ರಲ್ಲಿ ಸೋಲಿಸಿ ಫೈನಲ್ಗೆ ಅರ್ಹತೆ ಪಡೆದಿದ್ದರೆ, ಇತ್ತ ಆರ್ಸಿಬಿ ವಿರುದ್ಧ ಸೋತಿದ್ದ ಗುಜರಾತ್, ಕ್ವಾಲಿಫೈಯರ್ 2 ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮಣಿಸಿ ಫೈನಲ್ಗೇರಿದೆ. ಹೀಗಾಗಿ ಗುಜರಾತ್ಗೆ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಅವಕಾಶವಿದ್ದರೆ, ಇತ್ತ ಆರ್ಸಿಬಿ ಸತತ ಎರಡನೇ ಬಾರಿಗೆ ಟ್ರೋಫಿ ಗೆಲ್ಲುವ ಇರಾದೆಯಲ್ಲಿದೆ. ಆದ್ದರಿಂದ ಐಪಿಎಲ್‌ನಲ್ಲಿ ಎರಡು ತಂಡಗಳು ಮುಖಾಮುಖಿ ದಾಖಲೆ ಹೇಗಿದೆ ಎಂಬುದನ್ನು ನೋಡೋಣ..
ಐಪಿಎಲ್ ಇತಿಹಾಸದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡಗಳ ನಡುವೆ ಒಟ್ಟು ಒಂಬತ್ತು ಪಂದ್ಯಗಳು ನಡೆದಿವೆ. ಈ 9 ಪಂದ್ಯಗಳಲ್ಲಿ ಆರ್ಸಿಬಿ ಐದು ಪಂದ್ಯಗಳನ್ನು ಗೆದ್ದಿದ್ದರೆ, ಗುಜರಾತ್ ನಾಲ್ಕು ಪಂದ್ಯಗಳನ್ನು ಗೆದ್ದಿದೆ. ಇದರರ್ಥ ಉಭಯ ತಂಡಗಳ ಮುಖಾಮುಖಿಯಲ್ಲಿ ನಿಕಟ ಸ್ಪರ್ಧೆ ನಡೆದಿರುವುದನ್ನು ನಾವು ಕಾಣಬಹುದು. ಹೀಗಾಗಿ ಫೈನಲ್ ಪಂದ್ಯದ ಮೇಲೆ ನಿರೀಕ್ಷೆಗಳು ಹೆಚ್ಚಿವೆ. ಆದಾಗ್ಯೂ ಕ್ವಾಲಿಫೈಯರ್ 1ರಲ್ಲಿ ಗುಜರಾತ್ ವಿರುದ್ಧ ಗೆದ್ದಿರುವುದು ಆರ್ಸಿಬಿಯ ಆತ್ಮವಿಶ್ವಾಸವನ್ನು ಇಮ್ಮಡಿಗೊಳಿಸಿದೆ. ಆದರೆ ಫೈನಲ್ ಪಂದ್ಯ ಗುಜರಾತ್ ಟೈಟಾನ್ಸ್ ತಂಡದ ತವರು ನೆಲವಾದ ಅಹಮದಾಬಾದ್‌ನಲ್ಲಿ ನಡೆಯುವುದರಿಂದ ಗುಜರಾತ್ಗೆ ತವರಿನ ಲಾಭ ಸಿಗುವ ಆತಂಕ ಆರ್ಸಿಬಿಗಿದೆ.
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಸಮಬಲದ ಹೋರಾಟ ನೀಡಿವೆ. ಈ ಮೈದಾನದಲ್ಲಿ ಎರಡೂ ತಂಡಗಳು ಮೇಲುಗೈ ಸಾಧಿಸಲು ಸಾಧ್ಯವಾಗಿಲ್ಲ. ಈ ಮೈದಾನದಲ್ಲಿ ಎರಡೂ ತಂಡಗಳ ನಡುವೆ ಕೇವಲ ಎರಡು ಐಪಿಎಲ್ ಪಂದ್ಯಗಳು ನಡೆದಿದ್ದು, ಎರಡೂ ಪಂದ್ಯಗಳಲ್ಲಿ, ಚೇಸಿಂಗ್ ತಂಡವು ಏಕಪಕ್ಷೀಯವಾಗಿ ಗೆದ್ದಿದೆ.
RCB vs GT: ಐಪಿಎಲ್ ಪ್ಲೇಆಫ್‌ನಲ್ಲಿ ಹೊಸ ದಾಖಲೆ ಬರೆದ ವಿರಾಟ್ ಕೊಹ್ಲಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವೆಂಕಟೇಶ್ ಅಯ್ಯರ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜಾಕೋಬ್ ಡಫಿ, ಜೋಶ್ ಹ್ಯಾಜಲ್‌ವುಡ್, ರಸಿಖ್ ಸಲಾಂ ದಾರ್.
ಗುಜರಾತ್ ಟೈಟಾನ್ಸ್: ಸಾಯಿ ಸುದರ್ಶನ್, ಶುಭಮನ್ ಗಿಲ್ (ನಾಯಕ), ಜೋಸ್ ಬಟ್ಲರ್ (ವಿಕೆಟ್ ಕೀಪರ್), ನಿಶಾಂತ್ ಸಿಂಧು, ವಾಷಿಂಗ್ಟನ್ ಸುಂದರ್, ಜೇಸನ್ ಹೋಲ್ಡರ್, ರಾಹುಲ್ ತೆವಾಟಿಯಾ, ರಶೀದ್ ಖಾನ್ , ಅರ್ಷದ್ ಖಾನ್, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್ , ಪ್ರಸಿದ್ಧ್ ಕೃಷ್ಣ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ