AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಅನ್ಯಾಯ… ಫೈನಲ್ ಮ್ಯಾಚ್ ಮುಂದೂಡಬೇಕಿತ್ತು: ಸುನಿಲ್ ಗವಾಸ್ಕರ್

IPL 2026 RCB vs GT: ಇಂಡಿಯನ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 155 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18 ಓವರ್​ಗಳಲ್ಲಿ 161 ರನ್​ ಬಾರಿಸಿ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್​ಸಿಬಿ ತಂಡ 2ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಇದು ಅನ್ಯಾಯ... ಫೈನಲ್ ಮ್ಯಾಚ್ ಮುಂದೂಡಬೇಕಿತ್ತು: ಸುನಿಲ್ ಗವಾಸ್ಕರ್
Sunil GavaskarImage Credit source: IPL/Mint
ಝಾಹಿರ್ ಯೂಸುಫ್
|

Updated on:Jun 03, 2026 | 9:54 PM

Share

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಆದರೆ ಈ ನಿರ್ಣಾಯಕ ಪಂದ್ಯಕ್ಕೂ ಮುನ್ನ ನಡೆದ ಕೆಳ ಬೆಳವಣಿಗಳು ಇದೀಗ ಚರ್ಚೆಗೆ ಕಾರಣವಾಗಿದೆ. ಫೈನಲ್ ಪಂದ್ಯಕ್ಕೂ ಮುನ್ನ ಗುಜರಾತ್ ಟೈಟಾನ್ಸ್ ತಂಡ ಎದುರಿಸಿದ ಸಂಕಷ್ಟಗಳನ್ನು ಪರಿಗಣಿಸಿ “ಫೈನಲ್​ ಮ್ಯಾಚ್​ ಅನ್ನು ಒಂದು ದಿನಮುಂದೂಡಬೇಕಿತ್ತು” ಎಂದು ಭಾರತದ ದಿಗ್ಗಜ ಸುನಿಲ್ ಗವಾಸ್ಕರ್ ಬಿಸಿಸಿಐ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಗವಾಸ್ಕರ್ ಅಸಮಾಧಾನಕ್ಕೆ ಕಾರಣವೇನು?

ನ್ಯೂ ಚಂಡೀಗಢ್​​ನಲ್ಲಿ ರಾಜಸ್ಥಾನ್ ರಾಯಲ್ಸ್​ ವಿರುದ್ಧ ದ್ವಿತೀಯ ಕ್ವಾಲಿಫೈಯರ್​ ಪಂದ್ಯವಾಡಿದ್ದ ಗುಜರಾತ್ ಟೈಟಾನ್ಸ್ ತಂಡವು ಅಹಮದಾಬಾದ್​ ತಲುಪಿದ್ದು ಶನಿವಾರ ಮಧ್ಯರಾತ್ರಿ. ಅಂದರೆ ಫೈನಲ್ ಪಂದ್ಯಕ್ಕೂ ಮುನ್ನ ಜಿಟಿ ಪಡೆಗೆ ಅಭ್ಯಾಸ ನಡೆಸಲು ಯಾವುದೇ ಅವಕಾಶ ಇರಲಿಲ್ಲ.

ಹೀಗೆ ಗುಜರಾತ್ ಟೈಟಾನ್ಸ್ ತಡವಾಗಿ ಅಹಮದಾಬಾದ್​ಗೆ ಬರಲು ಮುಖ್ಯ ಕಾರಣ ವಿಮಾನ ವಿಳಂಬ. ಶನಿವಾರ ರಾಜಸ್ಥಾನ್ ಸುತ್ತ ಮುತ್ತ ಸುರಿದ ಭಾರೀ ಮಳೆಯಿಂದಾಗಿ ಹಾಗೂ ಚಂಡಮಾರುತದ ಕಾರಣ ಗುಜರಾತ್ ಟೈಟಾನ್ಸ್ ತಂಡದ ಚಾರ್ಟರ್ಡ್​ ವಿಮಾನ ಟೇಕ್ ಆಫ್​ ಆಗಲು ವಿಳಂಬವಾಗಿತ್ತು. ಇದರಿಂದ ಆಟಗಾರರು ಮಧ್ಯಾಹ್ನದಿಂದ ವಿಮಾನ ನಿಲ್ದಾಣದಲ್ಲೇ ಕಾಯಬೇಕಾಗಿ ಬಂತು.

ಅಲ್ಲದೆ ಆಟಗಾರರು ಅಹಮದಾಬಾದ್​ನ ಬಂದು ತಲುಪಿದ್ದು ತಡರಾತ್ರಿ 10.45 ಕ್ಕೆ.  ಅಲ್ಲಿಂದ ಹೊಟೇಲ್​ಗೆ ತಲುವಷ್ಟರಲ್ಲಿ ಮಧ್ಯರಾತ್ರಿ 12 ಗಂಟೆಯಾಗಿತ್ತು. ಅಂದರೆ ಫೈನಲ್ ಪಂದ್ಯಕ್ಕೂ ಕೇವಲ 20 ಗಂಟೆಗಳ ಮುಂಚಿತವಾಗಿ ಗುಜರಾತ್ ಟೈಟಾನ್ಸ್ ಆಟಗಾರರು ಆಗಮಿಸಿದ್ದರು.

ಇಷ್ಟೊಂದು ಕಡಿಮೆ ಅವಧಿಯಲ್ಲಿ ಗುಜರಾತ್ ಟೈಟಾನ್ಸ್ ತಂಡದ ಆಟಗಾರರು ವಿಶ್ರಾಂತಿ ಪಡೆದು, ಫೈನಲ್ ಪಂದ್ಯಕ್ಕೆ ಸಜ್ಜಾಗಬೇಕಿತ್ತು.

ಅದೇ ವೇಳೆ ಆರ್​ಸಿಬಿ ತಂಡವು ಮೇ 26 ರಿಂದಲೇ ಅಹಮದಾಬಾದ್​ನಲ್ಲಿದ್ದರು.  ಅಂದರೆ ನಾಲ್ಕು ದಿನಗಳ ಕಾಲ ಬಿಡುವು ಸಿಕ್ಕಿತ್ತು. ಇತ್ತ ಗುಜರಾತ್ ಟೈಟಾನ್ಸ್ ತಂಡಕ್ಕೆ ವಿಶ್ರಾಂತಿಗಾಗಿ ಒಂದು ದಿನದ ಅವಧಿ ಕೂಡ ಸಿಕ್ಕಿರಲಿಲ್ಲ.

ಅತ್ತ ಫೈನಲ್ ಪಂದ್ಯಕ್ಕೆ ಮೀಸಲು ದಿನ ಇದ್ದರೂ ಅದನ್ನು ಬಳಸಿಯಾದರೂ ಗುಜರಾತ್ ಟೈಟಾನ್ಸ್ ತಂಡಕ್ಕೆ ವಿಶ್ರಾಂತಿಗೆ ಅನುವು ಮಾಡಿಕೊಡಬಹುದಿತ್ತು.

ಅಂದರೆ ಸೋಮವಾರಕ್ಕೆ ಫೈನಲ್ ಪಂದ್ಯವನ್ನು ಮುಂದೂಡಿದ್ದರೆ ಗುಜರಾತ್ ಟೈಟಾನ್ಸ್ ತಂಡದ ಆಟಗಾರರು ಸಂಪೂರ್ಣ ವಿಶ್ರಾಂತಿ ಪಡೆದು ಅಂತಿಮ ಮ್ಯಾಚ್​ಗೆ ಸಜ್ಜಾಗುತ್ತಿದ್ದರು.

ಇದರಿಂದ ಅಭಿಮಾನಿಗಳಿಗೆ ಮತ್ತಷ್ಟು ರೋಚಕ ಹಾಗೂ ಸಮಬಲದ ಹೋರಾಟದ ಫೈನಲ್ ಪಂದ್ಯವನ್ನು ನೋಡುವ ಅವಕಾಶ ದೊರೆಯುತ್ತಿತ್ತು.

ಆದರೆ ಬಿಸಿಸಿಐ ಗುಜರಾತ್ ಟೈಟಾನ್ಸ್ ತಂಡದ ಆಟಗಾರರ ಪ್ರಯಾಣದ ದಣಿವು ಹಾಗೂ ಮಾನಸಿಕ ಸ್ಥಿತಿಯನ್ನೇ ಪರಿಗಣಿಸಿಲ್ಲ. ಅಹಮದಾಬಾದ್​ಗೆ ಬಂದ 20 ಗಂಟೆಯೊಳಗೆ ಫೈನಲ್ ಮ್ಯಾಚ್ ಆಡಿಸಿದ್ದಾರೆ. ಇದು ನಿಜಕ್ಕೂ ಅನ್ಯಾಯ ಎಂದು ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

ಕನಿಷ್ಠ ಪಕ್ಷ ಮೀಸಲು ದಿನಕ್ಕೆ ಫೈನಲ್​ ಮ್ಯಾಚ್​ ಅನ್ನು ಮುಂದೂಡಬೇಕಿತ್ತು. ಈ ಮೂಲಕ ಗುಜರಾತ್ ಟೈಟಾನ್ಸ್ ತಂಡಕ್ಕೂ ಅಂತಿಮ ಪಂದ್ಯಕ್ಕೆ ಸಜ್ಜಾಗಲು ಅವಕಾಶ ಕಲ್ಪಿಸಬೇಕಿತ್ತು. ಆದರೆ ಇಲ್ಲಿ ಒಂದು ತಂಡಕ್ಕೆ 4 ದಿನಗಳ ವಿಶ್ರಾಂತಿ ಹಾಗೂ ಸಮಯ ಸಿಕ್ಕರೆ, ಒಂದು ತಂಡಕ್ಕೆ ಕೇವಲ 20 ಗಂಟೆಗಳ ಅವಧಿ ಮಾತ್ರ ಸಿಕ್ಕಿದೆ. ಇದು ಎರಡು ತಂಡಗಳ ನಡುವೆ ಅಸಮತೋಲನವನ್ನು ಉಂಟು ಮಾಡಿದೆ ಎಂದು ಸುನಿಲ್ ಗವಾಸ್ಕರ್ ಹೇಳಿದ್ದಾರೆ.

ಇದನ್ನೂ ಓದಿ: IPL 2026 Awards: ಯಾರಿಗೆ ಯಾವ ಪ್ರಶಸ್ತಿ? ಇಲ್ಲಿದೆ ಸಂಪೂರ್ಣ ಪಟ್ಟಿ

ಒಟ್ಟಾರೆಯಾಗಿ ಹೇಳುವುದಾದರೆ, ಸುನಿಲ್ ಗವಾಸ್ಕರ್ ಅವರ ವಾದದಲ್ಲಿ ತಾರ್ಕಿಕ ಸತ್ಯಾಂಶವಿದ್ದರೂ, ಕ್ರೀಡಾ ಜಗತ್ತಿನಲ್ಲಿ ಇಂತಹ ಅನಿರೀಕ್ಷಿತ ಸವಾಲುಗಳು ಸಾಮಾನ್ಯ. ಇದನ್ನು ಗಂಭೀರವಾಗಿ ಪರಿಗಣಿಸಿ ಬಿಸಿಸಿಐ ಮುಂಬರುವ ಐಪಿಎಲ್ ಸೀಸನ್‌ಗಳಲ್ಲಿ ಫೈನಲ್ ಆಡುವ ಎರಡು ತಂಡಗಳಿಗೆ ಕನಿಷ್ಠ ಎರಡು ದಿನಗಳ ವಿಶ್ರಾಂತಿಗೆ ವ್ಯವಸ್ಥೆ ಮಾಡಲಿದ್ದಾರಾ ಕಾದು ನೋಡಬೇಕಿದೆ.

Published On - 7:37 am, Tue, 2 June 26

Follow Us
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’