AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೈನಲ್ ಪಂದ್ಯಕ್ಕೂ ಮುನ್ನ ಸಂಕಷ್ಟಕ್ಕೆ ಸಿಲುಕಿದ ಗುಜರಾತ್ ಟೈಟಾನ್ಸ್​!

IPL 2026 Final, Royal Challengers Bengaluru vs Gujarat Titans: ಇಂಡಿಯನ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಶುಭ್​ಮನ್ ಗಿಲ್​ ಪಡೆ ಸಂಕಷ್ಟಕ್ಕೆ ಸಿಲುಕಿದೆ.

ಫೈನಲ್ ಪಂದ್ಯಕ್ಕೂ ಮುನ್ನ ಸಂಕಷ್ಟಕ್ಕೆ ಸಿಲುಕಿದ ಗುಜರಾತ್ ಟೈಟಾನ್ಸ್​!
Gujarat Titans Image Credit source: IPL
ಝಾಹಿರ್ ಯೂಸುಫ್
|

Updated on: May 31, 2026 | 8:21 AM

Share

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯಕ್ಕೂ ಮುನ್ನ ಗುಜರಾತ್ ಟೈಟಾನ್ಸ್​ ತಂಡವು ಭಾರೀ ಸಂಕಷ್ಟಕ್ಕೆ ಸಿಲುಕಿದೆ. ವಾಯುವ್ಯ ಭಾರತದಲ್ಲಿ ಎದ್ದಿರುವ ಧೂಳಿನ ಬಿರುಗಾಗಿ ಹಾಗೂ ಭಾರೀ ಮಳೆಯಿಂದಾಗಿ ಶುಭ್​ಮನ್ ಗಿಲ್ ನೇತೃತ್ವದ ಜಿಟಿ ಪಡೆಯ ವಿಮಾನ ಪ್ರಯಾಣ ಗಂಟೆಗಟ್ಟಲೆ ವಿಳಂಬವಾಗಿದೆ. ಇದರಿಂದ ಶನಿವಾರದ ಅಭ್ಯಾಸವನ್ನು ತಪ್ಪಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಫೈನಲ್ ಪಂದ್ಯಕ್ಕೆ 24 ಗಂಟೆಗಳಿಗಿಂತ ಕಡಿಮೆ ಸಮಯ ಬಾಕಿ ಇರುವಾಗ ಗುಜರಾತ್ ಟೈಟಾನ್ಸ್ ಅಹಮದಾಬಾದ್​ಗೆ ಬಂದಿಳಿದಿದೆ.

ಎಷ್ಟು ಗಂಟೆಗೆ ಬರಬೇಕಿತ್ತು?

ಶುಕ್ರವಾರ ನಡೆದ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವು ನ್ಯೂ ಚಂಡೀಗಢ್​ನಿಂದ ಶನಿವಾರ ಮಧ್ಯಾಹ್ನದೊಳಗೆ ಅಹಮದಾಬಾದ್​ಗೆ ವಿಶೇಷ ಚಾರ್ಟರ್ಡ್ ವಿಮಾನದಲ್ಲಿ ಬಂದಿಳಿಯಬೇಕಿತ್ತು. ಆದರೆ ಪಂಜಾಬ್ ಮತ್ತು ರಾಜಸ್ಥಾನದಲ್ಲಿ ಆವರಿಸಿದ ಭೀಕರ ಚಂಡಮಾರುತ ಮತ್ತು ಮಳೆಯಿಂದಾಗಿ ವಿಮಾನದ ಟೇಕ್ ಆಫ್​ ಅನುಮತಿಯನ್ನು ನಿರಾಕರಿಸಲಾಯಿತು.

ಹೀಗಾಗಿ ಗುಜರಾತ್ ಟೈಟಾನ್ಸ್ ಆಟಗಾರರು ನ್ಯೂ ಚಂಡೀಗಢ್​ನಲ್ಲೇ ಉಳಿದಿದ್ದರು. ಅಲ್ಲದೆ ಸುದೀರ್ಘ ಕಾಯುವಿಕೆಯ ನಂತರ ಶನಿವಾರ ತಡರಾತ್ರಿ (10 ಗಂಟೆಯ ನಂತರ) ಗುಜರಾತ್ ಟೈಟಾನ್ಸ್ ಆಟಗಾರರು ಅಹಮದಾಬಾದ್​ಗೆ ಬಂದಿಳಿದಿದ್ದಾರೆ. ಅಲ್ಲದೆ ಅಲ್ಲಿಂದ ಟೀಮ್ ಹೊಟೇಲ್ ತಲುಪುವಷ್ಟರಲ್ಲಿ ಮಧ್ಯ ರಾತ್ರಿಯಾಗಿತ್ತು ಎಂದು ತಿಳಿದು ಬಂದಿದೆ.

ತಂಡದ ಮೇಲೆ ಪರಿಣಾಮ:

ಗುಜರಾತ್ ಟೈಟಾನ್ಸ್ ತಂಡವು ಶನಿವಾರ ಮಧ್ಯರಾತ್ರಿ ಅಹಮದಾಬಾದ್​ ತಲುಪಿದ ಕಾರಣ ಅಭ್ಯಾಸ ನಡೆಸಲು ಸಾಧ್ಯವಾಗಿಲ್ಲ. ಇದು ತಂಡದ ಸಿದ್ಧತೆಯ ಮೇಲೆ ಪರಿಣಾಮ ಬೀರಲಿದೆ. ಏಕೆಂದರೆ ಕಳೆದ ಮಧ್ಯ ರಾತ್ರಿ ಅಹಮದಾಬಾದ್​ಗೆ ತಲುಪಿರುವ ಆಟಗಾರರು ಹೆಚ್ಚಿನ ಸಮಯ ವಿಶ್ರಾಂತಿ ಪಡೆಯಲಿದ್ದಾರೆ.

ಅಲ್ಲದೆ ಇಂದು ಹೊಟೇಲ್ ರೂಮ್​ನಿಂದ ಪಂದ್ಯದ ಆರಂಭಕ್ಕೂ ಮುನ್ನ ಮೈದಾನಕ್ಕೆ ಬರಲಿದ್ದಾರೆ. ಅಂದರೆ ಫೈನಲ್ ಪಂದ್ಯಕ್ಕಾಗಿ ಹೆಚ್ಚಿನ ಅಭ್ಯಾಸ ನಡೆಸಲು ಗುಜರಾತ್ ಟೈಟಾನ್ಸ್ ತಂಡಕ್ಕೆ ಸಮಯ ಸಿಗಲ್ಲ ಎಂದೇ ಹೇಳಬಹುದು.

ಆರ್​ಸಿಬಿ ನಿರಾಳ:

ಇತ್ತ ಗುಜರಾತ್ ಟೈಟಾನ್ಸ್ ತಂಡವು ವಿಮಾನ ಪ್ರಯಾಣ ವಿಳಂಬ, ದಣಿವು ಹಾಗೂ ಅಭ್ಯಾಸ ಕೈ ತಪ್ಪಿದ ಚಿಂತೆಯಲ್ಲಿದ್ದರೆ ಅತ್ತ ಆರ್​ಸಿಬಿ ತಂಡವು ನಿರಾಳವಾಗಿದೆ. ಏಕೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೊದಲ ಕ್ವಾಲಿಫೈಯರ್ ಪಂದ್ಯ ಗೆದ್ದ ಬೆನ್ನಲ್ಲೇ ಅಹಮದಾಬಾದ್​ಗೆ ಆಗಮಿಸಿದ್ದರು.

ಆರ್​ಸಿಬಿ ತಂಡಕ್ಕೆ ಎರಡು ದಿನಗಳ ಕಾಲ ಸಂಪೂರ್ಣ ವಿಶ್ರಾಂತಿ ಸಿಕ್ಕಿದ್ದು, ಇದರ ಜೊತೆಗೆ ತಾಲೀಮು ನಡೆಸಲು ಸಾಕಷ್ಟು ಸಮಯ ಕೂಡ ದಕ್ಕಿದೆ. ಹೀಗಾಗಿ ಫೈನಲ್ ಪಂದ್ಯಕ್ಕಾಗಿ ಸಕಲ ರೀತಿಯಲ್ಲೂ ಸಜ್ಜಾಗಿದ್ದಾರೆ.

ಇದನ್ನೂ ಓದಿ: RCB vs GT: ಯಾರೇ ಗೆದ್ದರೂ 2ನೇ ಬಾರಿ ಚಾಂಪಿಯನ್!

ಅತ್ತ ಫ್ಲೈಟ್ ಡಿಲೇಯಿಂದಾಗಿ ಗುಜರಾತ್ ಟೈಟಾನ್ಸ್ ತಂಡವು ಸಂಕಷ್ಟಕ್ಕೆ ಸಿಲುಕಿದ್ದು, ಇದಾಗ್ಯೂ ಭಾನುವಾರ ಸಂಜೆ ಮೈದಾನಕ್ಕಿಳಿಯುವ ಮೂಲಕ ಶುಭ್​ಮನ್ ಗಿಲ್ ಪಡೆ ಫೈನಲ್ ಪಂದ್ಯಕ್ಕಾಗಿ ಬೇಕಾದ ಸಿದ್ಧತೆಗಳನ್ನು ನಡೆಸುವ ನಿರೀಕ್ಷೆಯಿದೆ. ಈ ಅಲ್ಪಾವಧಿಯ ಸಿದ್ಧತೆಗಳೊಂದಿಗೆ ಗುಜರಾತ್ ಟೈಟಾನ್ಸ್ ಆರ್​ಸಿಬಿ ವಿರುದ್ಧ ಹೇಗೆ ಹೋರಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್