AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RR vs GT: ಗುಜರಾತ್ ಸಾಂಘಿಕ ಪ್ರದರ್ಶನಕ್ಕೆ ಮಣಿದ ರಾಜಸ್ಥಾನ

IPL 2026 Match 52: ಐಪಿಎಲ್ 2026 ರ 52 ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ರಾಜಸ್ಥಾನ್ ರಾಯಲ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿದೆ. ಶುಭಮನ್ ಗಿಲ್ ಮತ್ತು ಸಾಯಿ ಸುದರ್ಶನ್ ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ 229 ರನ್ ಗಳಿಸಿದ ಗುಜರಾತ್, ರಾಜಸ್ಥಾನವನ್ನು ಸುಲಭವಾಗಿ ಮಣಿಸಿತು. ಈ ಗೆಲುವಿನೊಂದಿಗೆ ಗುಜರಾತ್ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದರೆ, ರಾಜಸ್ಥಾನ್ 5ನೇ ಸ್ಥಾನಕ್ಕೆ ಕುಸಿದಿದೆ. ಇದು ಗುಜರಾತ್‌ಗೆ 7ನೇ ಗೆಲುವಾಗಿದ್ದು, ಪ್ಲೇಆಫ್ ಹಾದಿ ಸುಗಮವಾಗಿದೆ.

RR vs GT: ಗುಜರಾತ್ ಸಾಂಘಿಕ ಪ್ರದರ್ಶನಕ್ಕೆ ಮಣಿದ ರಾಜಸ್ಥಾನ
Gujarat
ಪೃಥ್ವಿಶಂಕರ
|

Updated on:May 09, 2026 | 11:15 PM

Share

ಐಪಿಎಲ್ 2026 (IPL 2026 ) ರ 52 ನೇ ಪಂದ್ಯ ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟಾನ್ಸ್ (RR vs GT) ನಡುವೆ ನಡೆಯಿತು. ಈ ಪಂದ್ಯದಲ್ಲಿ ಬಲಿಷ್ಠ ರಾಜಸ್ಥಾನ್ ತಂಡವನ್ನು ಮಣಿಸಿದ ಗುಜರಾತ್ ಟೈಟಾನ್ಸ್ ಲೀಗ್​ನಲ್ಲಿ 7ನೇ ಗೆಲುವಿನೊಂದಿಗೆ 14 ಅಂಕಗಳನ್ನು ಕಲೆಹಾಕಿ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ. ಇತ್ತ ರಾಜಸ್ಥಾನ್ 5ನೇ ಸೋಲಿನೊಂದಿಗೆ 5ನೇ ಸ್ಥಾನಕ್ಕೆ ಕುಸಿದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್ ಬರೋಬ್ಬರಿ 229 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ರಾಜಸ್ಥಾನ್ ನಿಯಮಿತ ಅಂತರದಲ್ಲಿ ವಿಕೆಟ್ ಕಳೆದುಕೊಂಡು 152 ರನ್​ಗಳಿಗೆ ಆಲೌಟ್ ಆಗುವ ಮೂಲಕ 77 ರನ್​ಗಳ ಹೀನಾಯ ಸೋಲು ಅನುಭವಿಸಿತು.

ಗುಜರಾತ್​ಗೆ ಭರ್ಜರಿ ಆರಂಭ

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ ಆರಂಭದಿಂದಲೇ ಆಕ್ರಮಣಕಾರಿ ಧೋರಣೆ ಅನುಸರಿಸಿತು. ನಾಯಕ ಶುಭಮನ್ ಗಿಲ್ ಮತ್ತು ಸಾಯಿ ಸುದರ್ಶನ್ ರಾಜಸ್ಥಾನ ಬೌಲರ್‌ಗಳ ಮೇಲೆ ಒತ್ತಡ ಹೇರಿ ಮೊದಲ ವಿಕೆಟ್‌ಗೆ 118 ರನ್‌ಗಳ ಅದ್ಭುತ ಪಾಲುದಾರಿಕೆಯನ್ನು ಹಂಚಿಕೊಂಡರು. ಇಬ್ಬರೂ ಬ್ಯಾಟ್ಸ್‌ಮನ್‌ಗಳು ತ್ವರಿತ ರನ್ ಗಳಿಸಿ ತಂಡಕ್ಕೆ ಬಲವಾದ ಅಡಿಪಾಯ ಹಾಕಿದರು. ಶುಭ್​ಮನ್ ಗಿಲ್ ಕೇವಲ 44 ಎಸೆತಗಳಲ್ಲಿ 84 ರನ್ ಗಳಿಸಿ ಸ್ಫೋಟಕ ಇನ್ನಿಂಗ್ಸ್ ಆಡಿದರೆ, ಇತ್ತ ಸಾಯಿ ಸುದರ್ಶನ್ ಕೂಡ 36 ಎಸೆತಗಳಲ್ಲಿ 55 ರನ್​ಗಳ ಕೊಡುಗೆ ನೀಡಿದರು.

ಆದಾಗ್ಯೂ ಜೋಸ್ ಬಟ್ಲರ್ ಮಧ್ಯಮ ಕ್ರಮಾಂಕದಲ್ಲಿ ಹೆಚ್ಚಿನ ಪರಿಣಾಮ ಬೀರದೆ 10 ಎಸೆತಗಳಲ್ಲಿ 13 ರನ್ ಗಳಿಸಿ ಔಟಾದರು. ಅಂತಿಮ ಓವರ್‌ಗಳಲ್ಲಿ ಅಬ್ಬರಿಸಿದ ವಾಷಿಂಗ್ಟನ್ ಸುಂದರ್ ಕೇವಲ 20 ಎಸೆತಗಳಲ್ಲಿ ಎರಡು ಬೌಂಡರಿ ಮತ್ತು ಮೂರು ಸಿಕ್ಸರ್‌ಗಳನ್ನು ಒಳಗೊಂಡ ಅಜೇಯ 37 ರನ್ ಗಳಿಸಿದರು. ರಾಹುಲ್ ತೆವಾಟಿಯಾ ಕೂಡ ನಾಲ್ಕು ಎಸೆತಗಳಲ್ಲಿ 14 ರನ್‌ಗಳ ತ್ವರಿತ ಇನ್ನಿಂಗ್ಸ್ ಆಡಿದರು. ರಾಜಸ್ಥಾನ್ ರಾಯಲ್ಸ್ ಪರ ಬ್ರಿಜೇಶ್ ಶರ್ಮಾ ಎರಡು ವಿಕೆಟ್ ಪಡೆದರೆ, ರವೀಂದ್ರ ಜಡೇಜಾ ಮತ್ತು ಯಶ್ ರಾಜ್ ಪುಂಜಾ ತಲಾ ಒಂದು ವಿಕೆಟ್ ಪಡೆದರು.

RR vs GT IPL 2026 Live Score: ರಾಜಸ್ಥಾನ್​ ವಿರುದ್ಧ 77 ರನ್​ಗಳಿಂದ ಗೆದ್ದ ಗುಜರಾತ್

ರಾಜಸ್ಥಾನ್​ಗೆ ಹೀನಾಯ ಸೋಲು

ಈ ಗುರಿ ಬೆನ್ನಟ್ಟಿದ ರಾಜಸ್ಥಾನ್ ಕೂಡ ಅಬ್ಬರದ ಆರಂಭ ಪಡೆಯಿತು. ಎಂದಿನಂತೆ ವೈಭವ್ ಸೂರ್ಯವಂಶಿ ಬೌಂಡರಿಗಳ ಮಳೆಗರೆದರು. ಆದರೆ ವೈಭವ್ ಆರ್ಭಟಕ್ಕೆ ಸಿರಾಜ್ ಬ್ರೇಕ್ ಹಾಕಿದರು. ವೈಭವ್ 16 ಎಸೆತಗಳಲ್ಲಿ 36 ರನ್ ಬಾರಿಸಿ ಔಟಾದರು. ಈ ವಿಕೆಟ್ ಪತನದ ಬಳಿಕ ರಾಜಸ್ಥಾನ್ ತಂಡದ ಪೆವಿಲಿಯನ್ ಪರೇಡ್ ಆರಂಭವಾಯಿತು. ನಾಯಕ ಜೈಸ್ವಾಲ್​ 3 ರನ್​ಗೆ ಔಟಾದರೆ, ಜುರೇಲ್ 24, ಹೆಟ್ಮಾಯರ್ 6, ಫೆರೆರಾ 4, ಶುಭಂ ದುಬೆ 15 ರನ್​ಗೆ ಪೆವಿಲಿಯನ್ ಸೇರಿಕೊಂಡರು. ಹೀಗಾಗಿ ರಾಜಸ್ಥಾನದ ಸೋಲು ಖಚಿತವಾಯಿತು. ಅಂತಿಮವಾಗಿ ರಾಜಸ್ಥಾನ್ 152 ರನ್​ಗಳಿಗೆ ಆಲೌಟ್ ಆಗುವ ಮೂಲಕ 77 ರನ್​ಗಳ ಹೀನಾಯ ಸೋಲು ಅನುಭವಿಸಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:11 pm, Sat, 9 May 26

Follow Us
ಫುಟ್‌ಪಾತ್ ಅಂಗಡಿಗಳ ತೆರವು ವೇಳೆ ಇಳಕಲ್​​ನಲ್ಲಿ ಹೈಡ್ರಾಮಾ
ಫುಟ್‌ಪಾತ್ ಅಂಗಡಿಗಳ ತೆರವು ವೇಳೆ ಇಳಕಲ್​​ನಲ್ಲಿ ಹೈಡ್ರಾಮಾ
ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೆ BJP ಸರ್ಕಾರ ಬರುತ್ತೆ: ಜೋಶಿ
ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೆ BJP ಸರ್ಕಾರ ಬರುತ್ತೆ: ಜೋಶಿ
ತಮ್ಮೂರು ತುಮಕೂರಿನ ಬಗ್ಗೆ ಧ್ರುವ ಸರ್ಜಾ ಮಾತು: ವಿಡಿಯೋ ನೋಡಿ
ತಮ್ಮೂರು ತುಮಕೂರಿನ ಬಗ್ಗೆ ಧ್ರುವ ಸರ್ಜಾ ಮಾತು: ವಿಡಿಯೋ ನೋಡಿ
ಅಭಿಮಾನೋತ್ಸವದಲ್ಲಿ ಭಾವುಕವಾಗಿ ಮಾತನಾಡಿದ ಯಡಿಯೂರಪ್ಪ
ಅಭಿಮಾನೋತ್ಸವದಲ್ಲಿ ಭಾವುಕವಾಗಿ ಮಾತನಾಡಿದ ಯಡಿಯೂರಪ್ಪ
ಮೊದಲ ಬಾರಿಗೆ ಕಾನ್ಸರ್ಟ್ ನೀಡುತ್ತಿದ್ದಾರೆ ಅಜನೀಶ್: ಇಲ್ಲಿದೆ ಮಾಹಿತಿ
ಮೊದಲ ಬಾರಿಗೆ ಕಾನ್ಸರ್ಟ್ ನೀಡುತ್ತಿದ್ದಾರೆ ಅಜನೀಶ್: ಇಲ್ಲಿದೆ ಮಾಹಿತಿ
ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ
ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ