
ಹಾರ್ದಿಕ್ ಪಾಂಡ್ಯ (Hardik Pandya) ನಾಯಕತ್ವದ ಮುಂಬೈ ಇಂಡಿಯನ್ಸ್, 2012 ರ ನಂತರ ಮೊದಲ ಬಾರಿಗೆ 19 ನೇ ಐಪಿಎಲ್ (IPL) ಸೀಸನ್‌ನಲ್ಲಿ ತಮ್ಮ ಅಭಿಯಾನವನ್ನು ಗೆಲುವಿನ ಆರಂಭವನ್ನು ಮಾಡಿತು. ಮಾರ್ಚ್ 29 ರಂದು ವಾಂಖೆಡೆ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಸೋಲಿಸುವ ಮೂಲಕ ಮುಂಬೈ ತನ್ನ ಅಭಿಯಾನವನ್ನು ಗೆಲುವಿನೊಂದಿಗೆ ಪ್ರಾರಂಭಿಸಿತು. ಆದರೆ, ಆ ನಂತರ ಮುಂಬೈ ತನ್ನ ಗೆಲುವಿನ ಓಟವನ್ನು ಕಾಯ್ದುಕೊಳ್ಳಲು ವಿಫಲವಾಯಿತು. ಶನಿವಾರ ನಡೆದ ತನ್ನ ಎರಡನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 6 ವಿಕೆಟ್‌ಗಳಿಂದ ಸೋಲನುಭವಿಸಿತು. ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಮುಂಬೈ ನಾಯಕ ಹಾರ್ದಿಕ್ ಪಾಂಡ್ಯ ಆಡಿರಲಿಲ್ಲ. ಇದು ತಂಡಕ್ಕೆ ದೊಡ್ಡ ಹೊಡೆತ ನೀಡಿತು.
ಹಾರ್ದಿಕ್ ಅನಾರೋಗ್ಯದ ಕಾರಣದಿಂದಾಗಿ ದೆಹಲಿ ವಿರುದ್ಧದ ಪಂದ್ಯವನ್ನು ಆಡಿರಲಿಲ್ಲ. ಹೀಗಾಗಿ ಹಾರ್ದಿಕ್ ಅನುಪಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್ ತಂಡವನ್ನು ಮುನ್ನಡೆಸಿದ್ದರು. ತನ್ನ ನಾಯಕತ್ವದಲ್ಲಿ ಮುಂಬೈ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಸೂರ್ಯ ವಿಫಲರಾದರು. ಈಗ ಮುಂಬೈ ತನ್ನ ಅಭಿಯಾನದ ಮೂರನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯ ಮಂಗಳವಾರ, ಏಪ್ರಿಲ್ 7 ರಂದು ನಡೆಯಲಿದೆ. ಹಾರ್ದಿಕ್ ಈ ಪಂದ್ಯದಲ್ಲಿ ಆಡುತ್ತಾರೋ ಇಲ್ಲವೋ? ಎಂಬುದು ಅಭಿಮಾನಿಗಳಲ್ಲಿ ಕಾಡುತ್ತಿರುವ ಪ್ರಶ್ನೆಯಾಗಿದೆ.
ಮುಂದಿನ ಪಂದ್ಯಕ್ಕೆ ಹಾರ್ದಿಕ್ ಲಭ್ಯತೆಯ ಬಗ್ಗೆ ಮುಂಬೈ ತಂಡ ಬೌಲಿಂಗ್ ಕೋಚ್ ಪಾರಸ್ ಮಾಂಬ್ರೆ ಮಾಹಿತಿ ನೀಡಿದ್ದು, ‘ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಆಡಲಿದ್ದಾರೆ. ಹಾರ್ದಿಕ್ ಗಾಯಗೊಂಡಿಲ್ಲ, ಅವರು ಅಸ್ವಸ್ಥರಾಗಿದ್ದರು. ಈಗ ಹಾರ್ದಿಕ್ ಚೆನ್ನಾಗಿದ್ದಾರೆ. ಹಾರ್ದಿಕ್ ನೆಟ್ಸ್‌ನಲ್ಲಿಯೂ ಅಭ್ಯಾಸ ಮಾಡುತ್ತಿದ್ದಾರೆ’ ಎಂದು ಪಂದ್ಯದ ಮುನ್ನಾದಿನದಂದು ಮಾಂಬ್ರೆ ಮಾಹಿತಿ ನೀಡಿದ್ದಾರೆ. ಮಾಂಬ್ರೆ ನೀಡಿದ ಮಾಹಿತಿಯ ಪ್ರಕಾರ, ಹಾರ್ದಿಕ್ ತಂಡದಲ್ಲಿ ಆಡುವುದು ಖಚಿತವಾಗಿರುವುದರಿಂದ ಅವರೇ ತಂಡವನ್ನು ಮುನ್ನಡೆಸುವುದು ಖಚಿತ.
IPL 2026: ಮುಂಬೈ- ರಾಜಸ್ಥಾನ್ ಪಂದ್ಯ ಯಾವಾಗ ಎಷ್ಟು ಗಂಟೆಗೆ ಆರಂಭ? ಉಚಿತವಾಗಿ ವೀಕ್ಷಿಸುವುದು ಹೇಗೆ?
ಹಾರ್ದಿಕ್ ಐಪಿಎಲ್ ಪಂದ್ಯಾವಳಿಯಲ್ಲಿ ಪ್ರಮುಖ ಆಲ್ರೌಂಡರ್‌ಗಳಲ್ಲಿ ಒಬ್ಬರಾಗಿದ್ದಾರೆ. ಹಾರ್ದಿಕ್ 2022 ರಲ್ಲಿ ನಾಯಕನಾಗಿ ಗುಜರಾತ್ ಟೈಟನ್ಸ್ ತಂಡವನ್ನು ಐಪಿಎಲ್ ಟ್ರೋಫಿಗೆ ಮುನ್ನಡೆಸಿದ್ದರು. ಹಾರ್ದಿಕ್ ಈ ಪಂದ್ಯಾವಳಿಯಲ್ಲಿ ಒಟ್ಟು 153 ಪಂದ್ಯಗಳಲ್ಲಿ 2,767 ರನ್ ಗಳಿಸಿದ್ದಾರೆ. ಹಾಗೆಯೇ 79 ವಿಕೆಟ್‌ಗಳನ್ನು ಸಹ ಪಡೆದಿದ್ದಾರೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ