AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RR vs SRH: ವೈಭವ್ ಅಬ್ಬರದ ಶತಕಕ್ಕೂ ಒಲಿಯದ ಜಯ; ಸನ್‌ರೈಸರ್ಸ್​ಗೆ ಸುಲಭ ಗೆಲುವು

IPL 2026 Match 36: ಐಪಿಎಲ್ 2026 ರ 36ನೇ ಪಂದ್ಯದಲ್ಲಿ, ಸನ್‌ರೈಸರ್ಸ್ ಹೈದರಾಬಾದ್ ರಾಜಸ್ಥಾನ್ ರಾಯಲ್ಸ್ ವಿರುದ್ಧ ರೋಚಕ ಗೆಲುವು ಸಾಧಿಸಿತು. ವೈಭವ್ ಸೂರ್ಯವಂಶಿ ಅವರ ದಾಖಲೆಯ ಶತಕ (103 ರನ್)ದ ನೆರವಿನಿಂದ ರಾಜಸ್ಥಾನ್ 229 ರನ್ ಗಳಿಸಿದರೂ, ಇಶಾನ್ ಕಿಶನ್ ಮತ್ತು ಅಭಿಷೇಕ್ ಶರ್ಮಾ ಅವರ ಅರ್ಧಶತಕಗಳೊಂದಿಗೆ ಹೈದರಾಬಾದ್ 19ನೇ ಓವರ್‌ನಲ್ಲಿ ಗುರಿ ತಲುಪಿತು. ಈ ಗೆಲುವಿನೊಂದಿಗೆ SRH ಪಾಯಿಂಟ್ ಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಿತು.

RR vs SRH: ವೈಭವ್ ಅಬ್ಬರದ ಶತಕಕ್ಕೂ ಒಲಿಯದ ಜಯ; ಸನ್‌ರೈಸರ್ಸ್​ಗೆ ಸುಲಭ ಗೆಲುವು
Srh
ಪೃಥ್ವಿಶಂಕರ
|

Updated on:Apr 25, 2026 | 11:38 PM

Share

ಐಪಿಎಲ್ 2026 (IPL 2026) ರ 36 ನೇ ಪಂದ್ಯದಲ್ಲಿ, ರಾಜಸ್ಥಾನ್ ರಾಯಲ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ (RR vs SRH) ಪರಸ್ಪರ ಮುಖಾಮುಖಿಯಾಗಿದ್ದವು. ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಆತಿಥೇಯ ರಾಜಸ್ಥಾನ್ ತಂಡವನ್ನು ಮಣಿಸಿದ ಸನ್‌ರೈಸರ್ಸ್ ತಂಡ ಈ ಲೀಗ್​ನ 5ನೇ ಗೆಲುವು ದಾಖಲಿಸಿತು. ಈ ಗೆಲುವಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 3ನೇ ಸ್ಥಾನವನ್ನು ಅಲಂಕರಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್ ತಂಡ ವೈಭವ್ ಸೂರ್ಯವಂಶಿ ಅವರ ದಾಖಲೆಯ ಶತಕದಿಂದ 229 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಸನ್‌ರೈಸರ್ಸ್ ನಾಯಕ ಇಶಾನ್ ಕಿಶನ್ ಹಾಗೂ ಅಭಿಷೇಕ್ ಶರ್ಮಾ ಅವರ ಅರ್ಧಶತಕದ ನೆರವಿನಿಂದ 19ನೇ ಓವರ್​ನಲ್ಲಿ ಗೆಲುವು ಸಾಧಿಸಿತು.

ವೈಭವ್ ಸ್ಫೋಟಕ ಶತಕ

ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್ ಪರ ಆರಂಭಿಕ ಜೋಡಿಯಾದ ವೈಭವ್ ಸೂರ್ಯವಂಶಿ ಮತ್ತು ಯಶಸ್ವಿ ಜೈಸ್ವಾಲ್ ಮೊದಲ ವಿಕೆಟ್​ಗೆ 40 ರನ್​ಗಳ ಜೊತೆಯಾಟ ನೀಡಿದರು. ಯಶಸ್ವಿ 10 ರನ್‌ಗಳಿಗೆ ಔಟಾದರೆ, ನಂತರ ಬಂದ ಧ್ರುವ್ ಜುರೇಲ್ ಹಾಗೂ ವೈಭವ್ ಎರಡನೇ ವಿಕೆಟ್‌ಗೆ ಕೇವಲ 62 ಎಸೆತಗಳಲ್ಲಿ 112 ರನ್‌ಗಳ ಪಾಲುದಾರಿಕೆಯನ್ನು ನೀಡಿದರು. ಧ್ರುವ್ 35 ಎಸೆತಗಳಲ್ಲಿ 51 ರನ್ ಗಳಿಸಿ ಔಟಾದರು. ಇತ್ತ ತನ್ನ ಸಿಡಿಲಬ್ಬರದ ಬ್ಯಾಟಿಂಗ್‌ ಮುಂದುವರೆಸಿದ ವೈಭವ್ ಐಪಿಎಲ್ ವೃತ್ತಿಜೀವನದಲ್ಲಿ ತಮ್ಮ ಎರಡನೇ ಶತಕ ಮತ್ತು ಈ ಆವೃತ್ತಿಯ ಮೊದಲ ಶತಕ ಬಾರಿಸಿದರು.

229 ರನ್ ದಾಖಲಿಸಿದ ರಾಜಸ್ಥಾನ್

ವೈಭವ್ ಕೇವಲ 37 ಎಸೆತಗಳಲ್ಲಿ 12 ಸಿಕ್ಸರ್ ಮತ್ತು 5 ಬೌಂಡರಿಗಳ ಸಹಾಯದಿಂದ 103 ರನ್ ಗಳಿಸಿ ಔಟಾದರು. ಕೊನೆಯಲ್ಲಿ ಡೊವೊವನ್ ಫೆರೇರಾ 33 ರನ್ ಗಳಿಸಿದರೆ, ಶಿಮ್ರಾನ್ ಹೆಟ್ಮೆಯರ್ 11 ರನ್ ಗಳಿಸಿದರು. ನಾಯಕ ರಿಯಾನ್ ಪರಾಗ್ 7 ರನ್ ಗಳಿಸಿ ಔಟಾದರೆ, ರವೀಂದ್ರ ಜಡೇಜಾ 4 ರನ್ ಗಳಿಸಿ ಅಜೇಯರಾಗಿ ಮರಳಿದರು. ಹೈದರಾಬಾದ್ ಪರ ಇಶಾನ್ ಮಾಲಿಂಗ 2, ಪ್ರುಫಲ್ ಹಿಂಗೆ, ಪ್ಯಾಟ್ ಕಮ್ಮಿನ್ಸ್, ಶಕೀಬ್ ಹುಸೇನ್ ಮತ್ತು ನಿತೀಶ್ ಕುಮಾರ್ ರೆಡ್ಡಿ ತಲಾ 1 ವಿಕೆಟ್ ಪಡೆದರು.

RR vs SRH: 15ನೇ ವಯಸ್ಸಿನಲ್ಲೇ ಎರಡೆರಡು ವಿಶ್ವದಾಖಲೆ ನಿರ್ಮಿಸಿದ ವೈಭವ್

ಸನ್​ರೈಸರ್ಸ್​ಗೆ ಸುಲಭ ಜಯ

ಈ ಗುರಿ ಬೆನ್ನಟ್ಟಿದ ಸನ್‌ರೈಸರ್ಸ್​ಗೂ ಉತ್ತಮ ಆರಂಭ ಸಿಗಲಿಲ್ಲ. ಟ್ರಾವಿಸ್ ಹೆಡ್ ಮೊದಲ ಓವರ್​ನಲ್ಲೇ ವಿಕೆಟ್ ಒಪ್ಪಿಸಿದರು. ಆ ಬಳಿಕ ಜೊತೆಯಾದ ಇಶಾನ್ ಕಿಶನ್ ಹಾಗೂ ಅಭಿಷೇಕ್ ಶರ್ಮಾ ಶತಕದ ಜೊತೆಯಾಟ ನಡೆಸಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು. ಇವರಿಬ್ಬರು 131 ರನ್​ಗಳ ಜೊತೆಯಾಟ ನಡೆಸಿ ಗೆಲುವನ್ನು ಖಚಿತಪಡಿಸಿದರು. ಅಭಿಷೇಕ್ 57 ರನ್ ಬಾರಿಸಿ ಔಟಾದರೆ, ಕಿಶನ್ 74 ರನ್​ಗಳಿಗೆ ವಿಕೆಟ್ ಒಪ್ಪಿಸಿದರು. ಆ ನಂತರ ನಿತೀಶ್ ಹಾಗೂ ಕ್ಲಾಸೆನ್ ಜೊತೆಯಾಟ ನಡೆಸಿ ತಂಡವನ್ನು ಗೆಲುವಿನ ದಡ ಮುಟ್ಟಿಸುವಲ್ಲಿ ನೆರವಾದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:30 pm, Sat, 25 April 26

Follow Us
ಬಿಎಂಟಿಸಿ ಚಾಲಕ ಹೃದಯಾಘಾತದಿಂದ ಸಾವು: ಪರಿಹಾರ ನೀಡುವವರೆಗೂ ಡ್ಯೂಟಿ ಮಾಡಲ್ಲ
ಬಿಎಂಟಿಸಿ ಚಾಲಕ ಹೃದಯಾಘಾತದಿಂದ ಸಾವು: ಪರಿಹಾರ ನೀಡುವವರೆಗೂ ಡ್ಯೂಟಿ ಮಾಡಲ್ಲ
ಮತ್ತೆ ಕುದಿಯುತ್ತಿದೆ ಮಣಿಪುರ; ಇಂಪಾಲ್​ನ ಘರ್ಷಣೆಯಲ್ಲಿ ಹಲವರಿಗೆ ಗಾಯ
ಮತ್ತೆ ಕುದಿಯುತ್ತಿದೆ ಮಣಿಪುರ; ಇಂಪಾಲ್​ನ ಘರ್ಷಣೆಯಲ್ಲಿ ಹಲವರಿಗೆ ಗಾಯ
ಕೇಜ್ರಿವಾಲ್ ಸಿಎಂ ಆದಮೇಲೆ 100 ಕೋಟಿ ಮನೆ ಕಟ್ಟಿದರು; ಸ್ವಾತಿ ಮಲಿವಾಲ್ ಟೀಕೆ
ಕೇಜ್ರಿವಾಲ್ ಸಿಎಂ ಆದಮೇಲೆ 100 ಕೋಟಿ ಮನೆ ಕಟ್ಟಿದರು; ಸ್ವಾತಿ ಮಲಿವಾಲ್ ಟೀಕೆ
ತುಂಗಭದ್ರಾದಿಂದ ಕದ್ದುಮುಚ್ಚಿ ಕಾರ್ಖಾನೆಗಳಿಗೆ ಹರಿಸಲಾಗುತ್ತಿದ್ದ ನೀರು ಬಂದ್
ತುಂಗಭದ್ರಾದಿಂದ ಕದ್ದುಮುಚ್ಚಿ ಕಾರ್ಖಾನೆಗಳಿಗೆ ಹರಿಸಲಾಗುತ್ತಿದ್ದ ನೀರು ಬಂದ್
ರಾಹುಲ್ ಗಾಂಧಿಯ ಪ್ರತಿಕೃತಿ ದಹನದ ವೇಳೆ ಬಿಜೆಪಿ ಶಾಸಕಿಗೆ ಗಾಯ
ರಾಹುಲ್ ಗಾಂಧಿಯ ಪ್ರತಿಕೃತಿ ದಹನದ ವೇಳೆ ಬಿಜೆಪಿ ಶಾಸಕಿಗೆ ಗಾಯ
ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ
ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ
ರಾಜ್​​ಕುಮಾರ್ ಸಮಾಧಿ ಬಗ್ಗೆ ಪ್ರಶ್ನೆ, ವಿತಂಡ ವಾದ ಮುಂದುವರೆಸಿದ ಚೇತನ್
ರಾಜ್​​ಕುಮಾರ್ ಸಮಾಧಿ ಬಗ್ಗೆ ಪ್ರಶ್ನೆ, ವಿತಂಡ ವಾದ ಮುಂದುವರೆಸಿದ ಚೇತನ್
ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ, SSLC ಫಲಿತಾಂಶ ಏರಿಕೆ ಆಗಿದ್ಹೇಗೆ? ವಿಶ್ವನಾಥ್
ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ, SSLC ಫಲಿತಾಂಶ ಏರಿಕೆ ಆಗಿದ್ಹೇಗೆ? ವಿಶ್ವನಾಥ್
ಉಕ್ರೇನ್ ಮೇಲೆ ಮತ್ತೆ ರಷ್ಯಾದಿಂದ ಡ್ರೋನ್ ದಾಳಿ; ನಾಲ್ವರು ಸಾವು
ಉಕ್ರೇನ್ ಮೇಲೆ ಮತ್ತೆ ರಷ್ಯಾದಿಂದ ಡ್ರೋನ್ ದಾಳಿ; ನಾಲ್ವರು ಸಾವು
3 ತಿಂಗಳ ಕಂದನನ್ನ ತನ್ನದೇ ಮಗು ಎಂಬಂತೆ ಅಪ್ಪಿಕೊಂಡು ಮುದ್ದಾಡಿದ ಮಂಗ
3 ತಿಂಗಳ ಕಂದನನ್ನ ತನ್ನದೇ ಮಗು ಎಂಬಂತೆ ಅಪ್ಪಿಕೊಂಡು ಮುದ್ದಾಡಿದ ಮಂಗ