AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

LSG vs RCB: ಸತತ ಸೋಲುಗಳಿಂದ ಕಂಗೆಟ್ಟಿದ್ದ ಲಕ್ನೋ ವಿರುದ್ಧವೂ ಸೋತ ಆರ್​ಸಿಬಿ

LSG vs RCB IPL 2026 Match 50: ಐಪಿಎಲ್ 2026ರ 50ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 9 ರನ್‌ಗಳಿಂದ ಸೋಲಿಸಿತು. ಎಕಾನಾ ಸ್ಟೇಡಿಯಂನಲ್ಲಿ ನಡೆದ ಈ ರೋಚಕ ಪಂದ್ಯದಲ್ಲಿ ಲಕ್ನೋ 213 ರನ್ ಗಳಿಸಿತ್ತು. ಆರ್‌ಸಿಬಿ 203 ರನ್ ಗಳಿಸಿ ಸೋಲು ಅನುಭವಿಸಿತು. ಲಕ್ನೋಗೆ ಮೂರನೇ ಗೆಲುವು ದಕ್ಕಿತು.

LSG vs RCB: ಸತತ ಸೋಲುಗಳಿಂದ ಕಂಗೆಟ್ಟಿದ್ದ ಲಕ್ನೋ ವಿರುದ್ಧವೂ ಸೋತ ಆರ್​ಸಿಬಿ
Rcb
ಪೃಥ್ವಿಶಂಕರ
|

Updated on:May 08, 2026 | 12:44 AM

Share

ಐಪಿಎಲ್ 2026 (IPL 2026) ರ 50 ನೇ ಲೀಗ್ ಪಂದ್ಯವು ಲಕ್ನೋದ ಎಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (LSG vs RCB) ನಡುವೆ ನಡೆಯಿತು. ಈ ಪಂದ್ಯದಲ್ಲಿ ಆರ್​ಸಿಬಿ ತಂಡವನ್ನು 9 ರನ್​ಗಳಿಂದ ಸೋಲಿಸಿದ ಲಕ್ನೋ ಈ ಆವೃತ್ತಿಯಲ್ಲಿ ಮೂರನೇ ಗೆಲುವು ದಾಖಲಿಸಿತು. ಇತ್ತ ಆರ್​ಸಿಬಿ ಸತತ 2ನೇ ಸೋಲು ಅನುಭವಿಸಿತು. ಮಳೆ ಪೀಡಿತ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ 213 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆರ್​ಸಿಬಿ 203 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಈ ಗೆಲುವಿನೊಂದಿಗೆ ಲಕ್ನೋ ತಂಡಕ್ಕೆ 2 ಅಂಕ ಸಿಕ್ಕಿತ್ತಾದರೂ ಪಾಯಿಂಟ್ ಪಟ್ಟಿಯಲ್ಲಿ ಸ್ಥಾನ ಬದಲಾಗಿಲ್ಲ. ಇತ್ತ ಆರ್​ಸಿಬಿ ಈ ಪಂದ್ಯದಲ್ಲಿ ಸೋತರೂ ಅದು ಕೂಡ ಮೂರನೇ ಸ್ಥಾನದಲ್ಲೇ ಉಳಿದಿದೆ.

ಆರ್​ಸಿಬಿಗೆ 213 ರನ್ ಗುರಿ

ಮೇ ಹೇಳಿದಂತೆ ಮಳೆಯಿಂದಾಗಿ ಈ ಪಂದ್ಯವನ್ನು ತಲಾ 19 ಓವರ್​ಗಳಿಗೆ ನಿಗದಿಪಡಿಸಲಾಯಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 19 ಓವರ್‌ಗಳಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ 209 ರನ್‌ಗಳ ಬೃಹತ್ ಮೊತ್ತ ದಾಖಲಿಸಿತು. ತಂಡದ ಪರ ಮಿಚೆಲ್ ಮಾರ್ಷ್ ಕೇವಲ 56 ಎಸೆತಗಳಲ್ಲಿ 9 ಬೌಂಡರಿ ಮತ್ತು 9 ಸಿಕ್ಸರ್‌ಗಳನ್ನು ಒಳಗೊಂಡಂತೆ 111 ರನ್ ಗಳಿಸಿದರೆ, ನಿಕೋಲಸ್ ಪೂರನ್ 38 ರನ್ ಗಳಿಸಿದರು. ಕೊನೆಯಲ್ಲಿ ಅಬ್ಬರದ ಇನ್ನಿಂಗ್ಸ್ ಆಡಿದ ನಾಯಕ ರಿಷಭ್ ಪಂತ್ 10 ಎಸೆತಗಳಲ್ಲಿ ಅಜೇಯ 32 ರನ್ ಗಳಿಸಿ ತಂಡವು ಈ ಮೊತ್ತವನ್ನು ತಲುಪಲು ಸಹಾಯ ಮಾಡಿದರು. ಆರ್‌ಸಿಬಿ ಪರ ಜೋಶ್ ಹ್ಯಾಜಲ್‌ವುಡ್, ಕೃನಾಲ್ ಪಾಂಡ್ಯ ಮತ್ತು ರಸಿಕ್ ಸಲಾಮ್ ತಲಾ 1 ವಿಕೆಟ್ ಪಡೆದರು.

ಕಳಪೆ ಆರಂಭ ಕಂಡ ಆರ್​ಸಿಬಿ

ಡಿಎಲ್ಎಸ್ ವಿಧಾನದ ಪ್ರಕಾರ, ಈ ಪಂದ್ಯವನ್ನು ಗೆಲ್ಲಲು ಆರ್‌ಸಿಬಿಗೆ 19 ಓವರ್‌ಗಳಲ್ಲಿ 213 ರನ್‌ಗಳ ಗುರಿಯನ್ನು ನೀಡಲಾಗಿತ್ತು. ಆದಾಗ್ಯೂ, ಈ ಗುರಿ ಬೆನ್ನಟ್ಟಿದ ಆರ್‌ಸಿಬಿಯ ಆರಂಭ ಕಳಪೆಯಾಗಿತ್ತು. ಮೊದಲ ಓವರ್‌ನಲ್ಲಿ ಮೊಹಮ್ಮದ್ ಶಮಿ ಜಾಕೋಬ್ ಬೆಥೆಲ್ ಅವರನ್ನು ಔಟ್ ಮಾಡಿದರೆ, ನಂತರ ಪ್ರಿನ್ಸ್ ಯಾದವ್ ಎರಡನೇ ಓವರ್‌ನಲ್ಲಿ ವಿರಾಟ್ ಕೊಹ್ಲಿಯನ್ನು ಡಕ್ ಔಟ್ ಮಾಡಿದರು. ಈ ಪಂದ್ಯದಲ್ಲಿ ಯಾದವ್ ಒಟ್ಟು ಮೂರು ವಿಕೆಟ್‌ಗಳನ್ನು ಕಬಳಿಸಿ ಗಮನಾರ್ಹ ಪ್ರದರ್ಶನ ನೀಡಿ, ಲಕ್ನೋ ಗೆಲುವಿನ ನಾಯಕರಾದರು.

LSG vs RCB IPL 2026 Live Score: ಲಕ್ನೋ ವಿರುದ್ಧ ಆರ್​​ಸಿಬಿಗೆ 9 ರನ್ ಸೋಲು​

ರಜತ್, ಡೇವಿಡ್ ಹೋರಾಟ ವ್ಯರ್ಥ

ಆದಾಗ್ಯೂ, ನಾಯಕ ರಜತ್ ಪಾಟಿದಾರ್ 61 ರನ್‌ಗಳ ಉಪಯುಕ್ತ ಇನ್ನಿಂಗ್ಸ್ ಆಡಿದರೆ, ಟಿಮ್ ಡೇವಿಡ್ ಕೂಡ 40 ರನ್ ಗಳಿಸಿದರು. ಆದಾಗ್ಯೂ, ಶಹಬಾಜ್ ಅಹ್ಮದ್ ಈ ಇಬ್ಬರೂ ಬ್ಯಾಟ್ಸ್‌ಮನ್‌ಗಳನ್ನು ಔಟ್ ಮಾಡಿ ಆರ್​ಸಿಬಿ ಗೆಲುವಿಗೆ ಅಡ್ಡಿಯಾದರು. ಅಂತಿಮವಾಗಿ, ಕೃನಾಲ್ ಪಾಂಡ್ಯ 16 ಎಸೆತಗಳಲ್ಲಿ ಅಜೇಯ 28 ರನ್ ಗಳಿಸುವ ಮೂಲಕ ಆರ್‌ಸಿಬಿಯ ಭರವಸೆಯನ್ನು ಹೆಚ್ಚಿಸಿದರು. ಆದರೆ ದಿಗ್ವೇಶ್ ರಥಿ ಕೊನೆಯ ಓವರ್‌ನಲ್ಲಿ 20 ರನ್‌ಗಳನ್ನು ರಕ್ಷಿಸಿಕೊಂಡು ತಂಡಕ್ಕೆ 9 ರನ್‌ಗಳ ಗೆಲುವು ತಂದುಕೊಟ್ಟರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:37 am, Fri, 8 May 26

Follow Us
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಮೆಟ್ಟಿಲುಗಳಿಗೆ ಕೈ ಮುಗಿದು ವಿಧಾನಸೌಧಕ್ಕೆ ಸಮರ್ಥ್​ ಎಂಟ್ರಿ
ಮೆಟ್ಟಿಲುಗಳಿಗೆ ಕೈ ಮುಗಿದು ವಿಧಾನಸೌಧಕ್ಕೆ ಸಮರ್ಥ್​ ಎಂಟ್ರಿ
ಉಡುಪಿಯಲ್ಲಿ ಅಬ್ಬರಿಸಿದ ವರುಣ: ರಸ್ತೆಯಲ್ಲೇ ನೀರು ನಿಂತು ಸವಾರರ ಪರದಾಟ
ಉಡುಪಿಯಲ್ಲಿ ಅಬ್ಬರಿಸಿದ ವರುಣ: ರಸ್ತೆಯಲ್ಲೇ ನೀರು ನಿಂತು ಸವಾರರ ಪರದಾಟ
ಸ್ಟ್ರಾಂಗ್‌ ರೂಮ್‌ವೊಂದರ ಬೀಗ ಕಳೆದಿರೋದನ್ನು ನಾವು ಎಂದೂ ಕೇಳಿರಲಿಲ್ಲ
ಸ್ಟ್ರಾಂಗ್‌ ರೂಮ್‌ವೊಂದರ ಬೀಗ ಕಳೆದಿರೋದನ್ನು ನಾವು ಎಂದೂ ಕೇಳಿರಲಿಲ್ಲ
IPL ಫೈನಲ್ ಬೆಂಗಳೂರಿನಿಂದ ಸ್ಥಳಾಂತರಗೊಂಡಿದ್ದೇಕೆ? ಅಸಲಿ ಕಾರಣ ಇಲ್ಲಿದೆ
IPL ಫೈನಲ್ ಬೆಂಗಳೂರಿನಿಂದ ಸ್ಥಳಾಂತರಗೊಂಡಿದ್ದೇಕೆ? ಅಸಲಿ ಕಾರಣ ಇಲ್ಲಿದೆ
ಚುನಾವಣಾ ರಾಜಕೀಯಕ್ಕೆ ವಿಶ್ವನಾಥ್ ಕುಟುಂಬ ವಿದಾಯ
ಚುನಾವಣಾ ರಾಜಕೀಯಕ್ಕೆ ವಿಶ್ವನಾಥ್ ಕುಟುಂಬ ವಿದಾಯ
ಪೋಕ್ಸೋ ಪ್ರಕರಣವಿದೆ: ಯಡಿಯೂರಪ್ಪ ಅಭಿಮಾನೋತ್ಸವ ಸರಿಯಲ್ಲ ಎಂದ ಬಿಜೆಪಿ ನಾಯಕ
ಪೋಕ್ಸೋ ಪ್ರಕರಣವಿದೆ: ಯಡಿಯೂರಪ್ಪ ಅಭಿಮಾನೋತ್ಸವ ಸರಿಯಲ್ಲ ಎಂದ ಬಿಜೆಪಿ ನಾಯಕ
ಕಲಬುರಗಿ: ಕಾಣೆಯಾಗಿದ್ದ 1.44 ಕೋಟಿ ರೂ. ಮೌಲ್ಯದ 785 ಮೊಬೈಲ್‌ಗಳ ಹಸ್ತಾಂತರ!
ಕಲಬುರಗಿ: ಕಾಣೆಯಾಗಿದ್ದ 1.44 ಕೋಟಿ ರೂ. ಮೌಲ್ಯದ 785 ಮೊಬೈಲ್‌ಗಳ ಹಸ್ತಾಂತರ!