AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SRH vs CSK: ಸನ್‌ರೈಸರ್ಸ್ ವಿರುದ್ಧ 10 ರನ್​ಗಳಿಂದ ಸೋತ ಸಿಎಸ್​ಕೆ

SRH vs CSK: ಐಪಿಎಲ್ 2026 ರ 27ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 10 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಮೊದಲು ಬ್ಯಾಟ್ ಮಾಡಿದ ಸನ್‌ರೈಸರ್ಸ್ 194 ರನ್ ಗಳಿಸಿದರೆ, ಸಿಎಸ್‌ಕೆ 184 ರನ್‌ಗಳಿಸಿ ಸೋಲೊಪ್ಪಿಕೊಂಡಿತು. ಈ ಗೆಲುವಿನೊಂದಿಗೆ ಸನ್‌ರೈಸರ್ಸ್ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಏರಿದೆ, ಆದರೆ ಸಿಎಸ್‌ಕೆ 7ನೇ ಸ್ಥಾನದಲ್ಲಿ ಉಳಿದಿದೆ.

SRH vs CSK: ಸನ್‌ರೈಸರ್ಸ್ ವಿರುದ್ಧ 10 ರನ್​ಗಳಿಂದ ಸೋತ ಸಿಎಸ್​ಕೆ
Csk
ಪೃಥ್ವಿಶಂಕರ
|

Updated on:Apr 18, 2026 | 11:49 PM

Share

ಐಪಿಎಲ್ 2026 (IPL 2026) ರ 27 ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಸನ್​ರೈಸರ್ಸ್​ ಹೈದರಾಬಾದ್ (CSK vs SRH) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಸಿಎಸ್​ಕೆ ತಂಡವನ್ನು ಮಣಿಸಿದ ಸನ್‌ರೈಸರ್ಸ್ ಲೀಗ್​ನಲ್ಲಿ ಮೂರನೇ ಗೆಲುವು ದಾಖಲಿಸುವ ಮೂಲಕ ಪಾಯಿಂಟ್ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದೆ. ಇತ್ತ ಕಳೆದೆರಡು ಪಂದ್ಯಗಳಲ್ಲಿ ಗೆದ್ದು ಗೆಲುವಿನ ಹಾದಿಗೆ ಮರಳಿದ್ದ ಸಿಎಸ್​ಕೆ ಮತ್ತೆ ಸೋಲಿನ ಸುಳಿಗೆ ಸಿಲುಕಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ ತಂಡ 194 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಸಿಎಸ್​ಕೆ 184 ರನ್ ಕಲೆಹಾಕಲಷ್ಟೇ ಶಕ್ತವಾಗಿ 10 ರನ್​​ಗಳಿಂದ ಸೋಲೊಪ್ಪಿಕೊಂಡಿತು. ಈ ಸೋಲಿನೊಂದಿಗೆ ಸಿಎಸ್​ಕೆ ಪಾಯಿಂಟ್​ ಪಟ್ಟಿಯಲ್ಲಿ 7ನೇ ಸ್ಥಾನದಲ್ಲೇ ಉಳಿದಿದೆ.

15 ಎಸೆತಗಳಲ್ಲಿ ಅಭಿಷೇಕ್ ಅರ್ಧಶತಕ

ಟಾಸ್ ಸೋತು ಮೊದಲು ಬ್ಯಾಟಿಂಗ್‌ ಆರಂಭಿಸಿದ ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಉತ್ತಮ ಆರಂಭ ಸಿಕ್ಕಿತು. ಎಂದಿನಂತೆ ಆಕ್ರಮಣಕಾರಿ ಬ್ಯಾಟಿಂಗ್‌ ಪ್ರದರ್ಶಿಸಿದ ಅಭಿಷೇಕ್ ಶರ್ಮಾ 22 ಎಸೆತಗಳಲ್ಲಿ 59 ರನ್ ಗಳಿಸಿದರು. ಇದರಲ್ಲಿ ಅವರು 6 ಬೌಂಡರಿ ಮತ್ತು 4 ಸಿಕ್ಸರ್‌ಗಳನ್ನು ಬಾರಿಸಿದರು. ಟ್ರಾವಿಸ್ ಹೆಡ್ 20 ಎಸೆತಗಳಲ್ಲಿ 23 ರನ್ ಗಳಿಸಿ ಔಟಾದರು. ನಾಯಕ ಇಶಾನ್ ಕಿಶನ್ ಈ ಪಂದ್ಯದಲ್ಲಿ ನಿರಾಶೆ ಮೂಡಿಸಿ ಶೂನ್ಯಕ್ಕೆ ಔಟಾದರು.

ಮಧ್ಯಮ ಕ್ರಮಾಂಕದಲ್ಲಿ ತಂಡದ ಇನ್ನಿಂಗ್ಸ್ ನಿಭಾಯಿಸಿದ ಹೆನ್ರಿಕ್ ಕ್ಲಾಸೆನ್ 39 ಎಸೆತಗಳಲ್ಲಿ 59 ರನ್​ಗಳ ಇನ್ನಿಂಗ್ಸ್ ಆಡಿದರು. ಇವರನ್ನು ಹೊರತುಪಡಿಸಿ ತಂಡದ ಯಾವುದೇ ಬ್ಯಾಟ್ಸ್‌ಮನ್​ಗೆ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಅನಿಕೇತ್ ವರ್ಮಾ 2, ನಿತೀಶ್ ಕುಮಾರ್ ರೆಡ್ಡಿ 12, ಸಲೀಲ್ ಅರೋರಾ 13, ಲಿಯಾಮ್ ಲಿವಿಂಗ್‌ಸ್ಟೋನ್ 1, ಶಿವಾಂಗ್ ಕುಮಾರ್ 12 ರನ್ ಗಳಿಸಲಷ್ಟೇ ಶಕ್ತರಾದರು.

ಸಂಜು- ರುತುರಾಜ್ ಮತ್ತೆ ವಿಫಲ

ಈ ಗುರಿ ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್ ಆಕ್ರಮಣಕಾರಿಯಾಗಿ ಆರಂಭಿಸಿತು. ಆದರೆ ಸಂಜು ಸ್ಯಾಮ್ಸನ್, ರುತುರಾಜ್ ಗಾಯಕ್ವಾಡ್ ಮತ್ತೆ ವಿಫಲರಾದರು. ಸಂಜು ಸ್ಯಾಮ್ಸನ್ 7 ರನ್‌ಗಳಿಗೆ ಔಟಾದರೆ, ನಾಯಕ ರುತುರಾಜ್ ಗಾಯಕ್ವಾಡ್ 13 ಎಸೆತಗಳಲ್ಲಿ 19 ರನ್ ಗಳಿಸಿ ಔಟಾದರು. ಆಯುಷ್ ಮ್ಹಾತ್ರೆ ಆಕ್ರಮಣಕಾರಿ ಇನ್ನಿಂಗ್ಸ್ ಆಡಿ 13 ಎಸೆತಗಳಲ್ಲಿ 5 ಬೌಂಡರಿ ಮತ್ತು ಒಂದು ಸಿಕ್ಸರ್‌ನೊಂದಿಗೆ 30 ರನ್ ಗಳಿಸಿ ಔಟಾದರು. ಆ ನಂತರ ಬಂದ ಮ್ಯಾಥ್ಯೂ ಶಾರ್ಟ್ ಮತ್ತು ಸರ್ಫರಾಜ್ ಖಾನ್ ಉತ್ತಮ ಜೊತೆಯಾಟ ನಡೆಸಿದರು.

SRH vs CSK: ಈ ಆವೃತ್ತಿಯ ವೇಗದ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ

ಈ ಜೋಡಿ 33 ಎಸೆತಗಳಲ್ಲಿ 46 ರನ್ ಕಲೆಹಾಕಿತು. ಮ್ಯಾಥ್ಯೂ ಶಾರ್ಟ್ 34 ರನ್‌ಗಳಿಗೆ ಔಟಾದರೆ, ಸರ್ಫರಾಜ್ ಖಾನ್ 25 ರನ್‌ಗಳಿಗೆ ಔಟಾದರು. ಡೆವಾಲ್ಡ್ ಬ್ರೆವಿಸ್​ಗೆ ಖಾತೆ ತೆರೆಯಲೂ ಸಾಧ್ಯವಾಗಲಿಲ್ಲ. ಶಿವಂ ದುಬೆ 21 ರನ್‌ಗಳಿಗೆ ಔಟಾದರು. ಇದರಿಂದಾಗಿ ಗೆಲುವಿನ ಜವಾಬ್ದಾರಿ ಅನ್ಶುಲ್ ಕಾಂಬೋಜ್ ಮತ್ತು ಜೇಮೀ ಓವರ್ಟನ್ ಮೇಲೆ ಬಿತ್ತು. ಆದರೆ ಈ ಬಾಲಂಗೋಚಿಗಳಿಗೆ ತಂಡವನ್ನು ಗೆಲುವಿನ ದಡ ಮುಟ್ಟಿಸಲು ಸಾಧ್ಯವಾಗಲಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:39 pm, Sat, 18 April 26

Follow Us
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ": ಪ್ರಹ್ಲಾದ್ ಜೋಶಿ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್
ಕುರುಬ ಸಮುದಾಯದ ಆಕ್ರೋಶ ಬೆನ್ನಲ್ಲೇ ವಿಷಾದ ವ್ಯಕ್ತಪಡಿಸಿದ ಬಿಜೆಪಿ ಶಾಸಕ
ಕುರುಬ ಸಮುದಾಯದ ಆಕ್ರೋಶ ಬೆನ್ನಲ್ಲೇ ವಿಷಾದ ವ್ಯಕ್ತಪಡಿಸಿದ ಬಿಜೆಪಿ ಶಾಸಕ