
ಐಪಿಎಲ್ 2026 (IPL 2026) ರ 33 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ (MI vs CSK) ನಡುವೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಿತು. ಮುಂಬೈನ ತವರು ಮೈದಾನವಾದ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಆತಿಥೇಯ ಮುಂಬೈ 103 ರನ್‌ಗಳ ಹೀನಾಯ ಸೋಲು ಅನುಭವಿಸಿತು. ಈ ಆವೃತ್ತಿಯಲ್ಲಿ ಮುಂಬೈ ತಂಡದ 5ನೇ ಸೋಲು ಇದಾದರೆ, ಸಿಎಸ್‌ಕೆ ತಂಡದ ಮೂರನೇ ಗೆಲುವಾಗಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್‌ಕೆ ತಂಡ 20 ಓವರ್‌ಗಳಲ್ಲಿ 207 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಮುಂಬೈ ತಂಡ ಬ್ಯಾಟಿಂಗ್ ವಿಭಾಗದ ವೈಫಲ್ಯದಿಂದಾಗಿ ಕೇವಲ 104 ರನ್ ಕಲೆಹಾಕಲಷ್ಟೇ ಶಕ್ತವಾಗಿ ಐಪಿಎಲ್ ಇತಿಹಾಸದಲ್ಲೇ ಅತಿ ದೊಡ್ಡ ಸೋಲು ದಾಖಲಿಸಿತು.
ಚೆನ್ನೈ ತಂಡದ ಈ ದಾಖಲೆಯ ಗೆಲುವಿನ ಹೀರೋ ಎಂದರೆ ಅದು ಸಂಜು ಸ್ಯಾಮ್ಸನ್. ಸಂಜು ಕೇವಲ 54 ಎಸೆತಗಳಲ್ಲಿ 10 ಬೌಂಡರಿ ಮತ್ತು 6 ಸಿಕ್ಸರ್‌ಗಳ ಸಹಾಯದಿಂದ ಅಜೇಯ 101 ರನ್ ಗಳಿಸಿದರು. ಸತತ 7ನೇ ಪಂದ್ಯದಲ್ಲೂ ಬಿಗ್ ಇನ್ನಿಂಗ್ಸ್ ಆಡುವಲ್ಲಿ ಎಡವಿದ ನಾಯಕ ರುತುರಾಜ್ ಗಾಯಕ್ವಾಡ್ ಕೂಡ 22 ರನ್‌ಗಳ ಕಾಣಿಕೆ ನೀಡಿದರು. ಡೆವಾಲ್ಡ್ ಬ್ರೆವಿಸ್ 21 ರನ್ ಮತ್ತು ಕಾರ್ತಿಕ್ ಶರ್ಮಾ 18 ರನ್‌ಗಳ ಇನ್ನಿಂಗ್ಸ್ ಆಡುವ ಮೂಲಕ ಸಂಜು ಇನ್ನಿಂಗ್ಸ್ಗೆ ಬಲ ತುಂಬಿದರು.
ಈ ಬೃಹತ್ ಗುರಿಯನ್ನು ಬೆನ್ನಟ್ಟಿದ ಮುಂಬೈ ತಂಡ ಕಳಪೆ ಆರಂಭವನ್ನೇ ಪಡೆಯಿತು. ಪವರ್‌ಪ್ಲೇನಲ್ಲಿ ಮೂರು ವಿಕೆಟ್‌ಗಳನ್ನು ಕಳೆದುಕೊಂಡು ತಂಡ ಸಂಕಷ್ಟದಲ್ಲಿ ಸಿಲುಕಿತು. ತಿಲಕ್ ವರ್ಮಾ 37 ರನ್ ಮತ್ತು ಸೂರ್ಯಕುಮಾರ್ ಯಾದವ್ 35 ರನ್ ಗಳಿಸಿದರಾದರೂ ಅವರು ಕೂಡ ಬಿಗ್ ಇನ್ನಿಂಗ್ಸ್ ಆಡಲಿಲ್ಲ. ಈ ಇಬ್ಬರನ್ನು ಹೊರತುಪಡಿಸಿ ಮುಂಬೈ ತಂಡದ ಯಾವುದೇ ಬ್ಯಾಟ್ಸ್‌ಮನ್ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಲಿಲ್ಲ. ಪರಿಣಾಮವಾಗಿ, ತಂಡವು 19 ಓವರ್‌ಗಳಲ್ಲಿ 104 ರನ್‌ಗಳಿಗೆ ಆಲೌಟ್ ಆಯಿತು.
MI vs CSK IPL 2026 Highlights: ಸಿಎಸ್‌ಕೆ ವಿರುದ್ಧ ಮುಂಬೈಗೆ 103 ರನ್‌ಗಳ ಹೀನಾಯ ಸೋಲು
ಚೆನ್ನೈ ಪರ ಬೌಲಿಂಗ್‌ನಲ್ಲಿ ಅಕೀಲ್ ಹುಸೇನ್ ಮತ್ತು ನೂರ್ ಅಹ್ಮದ್ ಪ್ರಾಬಲ್ಯ ಮೆರೆದರು. ಹುಸೇನ್ ನಾಲ್ಕು ಓವರ್‌ಗಳಲ್ಲಿ ಕೇವಲ 17 ರನ್‌ಗಳಿಗೆ ನಾಲ್ಕು ವಿಕೆಟ್‌ಗಳನ್ನು ಕಬಳಿಸಿದರು. ಅವರ ಮಾರಕ ಸ್ಪಿನ್ ಮುಂಬೈ ತಂಡದ ಬ್ಯಾಟಿಂಗ್ ವಿಭಾಗವನ್ನು ಸಂಪೂರ್ಣವಾಗಿ ನಾಶಮಾಡಿತು. ನೂರ್ ಅಹ್ಮದ್ ಕೂಡ ಎರಡು ವಿಕೆಟ್‌ಗಳನ್ನು ಪಡೆದರು. ಮುಖೇಶ್ ಚೌಧರಿ, ಅನ್ಶುಲ್ ಕಾಂಬೋಜ್, ಜೇಮಿ ಓವರ್ಟನ್ ಮತ್ತು ಗುರ್ಜಪ್ನೀತ್ ಸಿಂಗ್ ತಲಾ ಒಂದು ವಿಕೆಟ್ ಪಡೆದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:24 pm, Thu, 23 April 26