AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಮುಂಬೈ- ರಾಜಸ್ಥಾನ್ ಪಂದ್ಯ ಯಾವಾಗ ಎಷ್ಟು ಗಂಟೆಗೆ ಆರಂಭ? ಉಚಿತವಾಗಿ ವೀಕ್ಷಿಸುವುದು ಹೇಗೆ?

IPL 2026, MI vs RR Match 13 Preview: ಐಪಿಎಲ್ 2026ರ 13ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಲಿವೆ. ರಾಜಸ್ಥಾನ್ ಸತತ ಎರಡು ಗೆಲುವು ಸಾಧಿಸಿದ್ದರೆ, ಮುಂಬೈ ಒಂದು ಗೆಲುವು, ಒಂದು ಸೋಲು ಕಂಡಿದೆ. ಏಪ್ರಿಲ್ 7ರಂದು ಗುವಾಹಟಿಯಲ್ಲಿ ನಡೆಯುವ ಈ ಪಂದ್ಯದಲ್ಲಿ, ಮುಂಬೈ 16-14 ಹೆಡ್-ಟು-ಹೆಡ್ ಮುನ್ನಡೆ ಸಾಧಿಸಿದೆ. ಉಭಯ ತಂಡಗಳಿಗೂ ಈ ಪಂದ್ಯ ಮಹತ್ವದ್ದಾಗಿದೆ.

IPL 2026: ಮುಂಬೈ- ರಾಜಸ್ಥಾನ್ ಪಂದ್ಯ ಯಾವಾಗ ಎಷ್ಟು ಗಂಟೆಗೆ ಆರಂಭ? ಉಚಿತವಾಗಿ ವೀಕ್ಷಿಸುವುದು ಹೇಗೆ?
Mi Vs Rr
ಪೃಥ್ವಿಶಂಕರ
|

Updated on: Apr 06, 2026 | 10:08 PM

Share

ಐಪಿಎಲ್ 2026 (IPL 2026) ರ 13 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ (MI vs RR) ತಂಡಗಳು ಪರಸ್ಪರ ಮುಖಾಮುಖಿಯಾಗಲಿವೆ. ಈ ಟೂರ್ನಿಯಲ್ಲಿ ಎರಡೂ ತಂಡಗಳ ಮೂರನೇ ಪಂದ್ಯ ಇದಾಗಿದೆ. ರಾಜಸ್ಥಾನ್ ರಾಯಲ್ಸ್ ತಂಡ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳನ್ನು ಸೋಲಿಸಿ ಸತತ ಎರಡು ಪಂದ್ಯಗಳನ್ನು ಗೆದ್ದು ಬೀಗಿದೆ. ಇತ್ತ ಮುಂಬೈ ಇಂಡಿಯನ್ಸ್ ತನ್ನ ಮೊದಲ ಪಂದ್ಯದಲ್ಲಿ ಕೋಲ್ಕತ್ತಾವನ್ನು ಸೋಲಿಸಿದರೆ, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋಲನ್ನು ಎದುರಿಸಿದೆ. ಹೀಗಾಗಿ ಈ ಪಂದ್ಯ ಉಭಯ ತಂಡಗಳಿಗೂ ಬಹುಮುಖ್ಯವಾಗಿದೆ. ಅದರಲ್ಲೂ ಈ ಸೀಸನ್​ನಲ್ಲಿ ಎರಡೂ ತಂಡಗಳು ಸಾಕಷ್ಟು ಬಲಿಷ್ಠವಾಗಿ ಕಾಣುತ್ತಿರುವುದರಿಂದ ಈ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿದೆ.

ಹೆಡ್ ಟು ಹೆಡ್ ದಾಖಲೆ

ಐಪಿಎಲ್ ಇತಿಹಾಸದಲ್ಲಿ, ಮುಂಬೈ ಇಂಡಿಯನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಐಪಿಎಲ್‌ನ ಮೊದಲ ಸೀಸನ್‌ನಿಂದ ಆಡುತ್ತಿವೆ. ಈ ಎರಡೂ ತಂಡಗಳು 31 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಎರಡೂ ತಂಡಗಳು ಸಮತೋಲಿತ ಪ್ರದರ್ಶನ ನೀಡಿವೆ. ಮುಂಬೈ ಇಂಡಿಯನ್ಸ್ 16 ಬಾರಿ ಗೆದ್ದಿದ್ದರೆ, ರಾಜಸ್ಥಾನ್ ರಾಯಲ್ಸ್ 14 ಬಾರಿ ಗೆದ್ದಿದೆ. ಒಂದು ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಹೀಗಾಗಿ ಈ ಪಂದ್ಯವನ್ನು ಗೆದ್ದು ಮುನ್ನಡೆ ಕಾಯ್ದುಕೊಳ್ಳಲು ಮುಂಬೈ ಪ್ರಯತ್ನಿಸಿದರೆ, ಇತ್ತ ರಾಜಸ್ಥಾನ್ ಈ ಪಂದ್ಯವನ್ನು ಗೆದ್ದು ಅಂತರವನ್ನು ಕಡಿಮೆ ಮಾಡುವ ಇರಾದೆಯಲ್ಲಿದೆ.

ಐಪಿಎಲ್ 2026 ರಲ್ಲಿ ಮುಂಬೈ ಹಾಗೂ ರಾಜಸ್ಥಾನ್ ನಡುವಿನ ಪಂದ್ಯ ಯಾವಾಗ ನಡೆಯಲಿದೆ?

ಐಪಿಎಲ್ 2026 ರಲ್ಲಿ ಮುಂಬೈ ಹಾಗೂ ರಾಜಸ್ಥಾನ್ ನಡುವಿನ ಪಂದ್ಯ ಏಪ್ರಿಲ್ 7 ರಂದು ನಡೆಯಲಿದೆ.

ಐಪಿಎಲ್ 2026 ರಲ್ಲಿ ಮುಂಬೈ ಹಾಗೂ ರಾಜಸ್ಥಾನ್ ನಡುವಿನ ಪಂದ್ಯ ಎಲ್ಲಿ ನಡೆಯಲಿದೆ?

ಐಪಿಎಲ್ 2026 ರಲ್ಲಿ ಮುಂಬೈ ಹಾಗೂ ರಾಜಸ್ಥಾನ್ ನಡುವಿನ ಪಂದ್ಯ ರಾಜಸ್ಥಾನ್ ರಾಯಲ್ಸ್‌ನ ತವರು ಮೈದಾನವಾದ ಗುವಾಹಟಿಯ ಬರ್ಸಪರ ಕ್ರೀಡಾಂಗಣದಲ್ಲಿ ನಡೆಯಲಿದೆ.

ಐಪಿಎಲ್ 2026 ರಲ್ಲಿ ಮುಂಬೈ ಹಾಗೂ ರಾಜಸ್ಥಾನ್ ನಡುವಿನ ಪಂದ್ಯ ಎಷ್ಟು ಗಂಟೆಗೆ ಆರಂಭ?

ಐಪಿಎಲ್ 2026 ರಲ್ಲಿ ಮುಂಬೈ ಹಾಗೂ ರಾಜಸ್ಥಾನ್ ನಡುವಿನ ಪಂದ್ಯ ಭಾರತೀಯ ಕಾಲಮಾನ ಸಂಜೆ 7:30 ಕ್ಕೆ ಪ್ರಾರಂಭವಾಗಲಿದ್ದು, ಟಾಸ್ ಸಂಜೆ 7 ಗಂಟೆಗೆ ನಡೆಯಲಿದೆ.

ಐಪಿಎಲ್ 2026 ರಲ್ಲಿ ಮುಂಬೈ ಹಾಗೂ ರಾಜಸ್ಥಾನ್ ನಡುವಿನ ಪಂದ್ಯವನ್ನು ವೀಕ್ಷಿಸುವುದು ಹೇಗೆ?

ನೀವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಹಾಗೂ ಜಿಯೋ ಹಾಟ್‌ಸ್ಟಾರ್​ನಲ್ಲಿ ಮುಂಬೈ ಹಾಗೂ ರಾಜಸ್ಥಾನ್ ನಡುವಿನ ಪಂದ್ಯವನ್ನು ವೀಕ್ಷಿಸಬಹುದು.

IPL 2026: ಲೀಗ್ ಹಂತದಲ್ಲಿ ಮತ್ತೆ ಮುಖಾಮುಖಿಯಾಗಲ್ಲ ಆರ್​ಸಿಬಿ- ಸಿಎಸ್​ಕೆ..!

ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ 11

ರಾಜಸ್ಥಾನ್ ರಾಯಲ್ಸ್ ಸಂಭಾವ್ಯ ಪ್ಲೇಯಿಂಗ್ XI: ಯಶಸ್ವಿ ಜೈಸ್ವಾಲ್, ವೈಭವ್ ಸೂರ್ಯವಂಶಿ, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರಿಯಾನ್ ಪರಾಗ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ರವೀಂದ್ರ ಜಡೇಜಾ, ಜೋಫ್ರಾ ಆರ್ಚರ್, ನಾಂದ್ರೆ ಬರ್ಗರ್, ತುಮರ್ ದೇಶಪಾಂಡೆ, ಸಂದೀಪ್ ಶರ್ಮಾ, ರವಿ ಬಿಷ್ಣೋಯಿ. ಇಂಪ್ಯಾಕ್ಟ್ ಪ್ಲೇಯರ್: ಡೊನೊವನ್ ಫೆರೇರಾ.

ಮುಂಬೈ ಇಂಡಿಯನ್ಸ್ ಸಂಭಾವ್ಯ ಪ್ಲೇಯಿಂಗ್ XI: ರಿಯಾನ್ ರಿಕೆಲ್ಟನ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ನಮನ್ ಧೀರ್, ಶೆರ್ಫೇನ್ ರುದರ್‌ಫೋರ್ಡ್, ಮಿಚೆಲ್ ಸ್ಯಾಂಟ್ನರ್, ಕಾರ್ಬಿನ್ ಬಾಷ್, ದೀಪಕ್ ಚಹಾರ್, ಜಸ್ಪ್ರೀತ್ ಬುಮ್ರಾ. ಇಂಪ್ಯಾಕ್ಟ್ ಪ್ಲೇಯರ್: ಶಾರ್ದೂಲ್ ಠಾಕೂರ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us