AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026 Mini Auction: ಐಪಿಎಲ್ 2026 ರ ಮಿನಿ ಹರಾಜಿಗೆ ದಿನಾಂಕ ನಿಗದಿ

IPL 2026 Mini Auction: 2026ರ ಐಪಿಎಲ್ ಮಿನಿ ಹರಾಜು ಡಿಸೆಂಬರ್ 13-15 ರ ನಡುವೆ ನಡೆಯುವ ಸಾಧ್ಯತೆಯಿದೆ. ಆಟಗಾರರನ್ನು ಉಳಿಸಿಕೊಳ್ಳಲು ಫ್ರಾಂಚೈಸಿಗಳಿಗೆ ನವೆಂಬರ್ 15 ಕೊನೆಯ ದಿನಾಂಕ. ಹರಾಜು ಈ ಬಾರಿ ಭಾರತದಲ್ಲಿಯೇ ನಡೆಯುವ ನಿರೀಕ್ಷೆಯಿದೆ. ಸಿಎಸ್​ಕೆ ಮತ್ತು ರಾಜಸ್ಥಾನ ರಾಯಲ್ಸ್‌ನಂತಹ ತಂಡಗಳು ಕೆಲವು ಪ್ರಮುಖ ಆಟಗಾರರನ್ನು ಬಿಡುಗಡೆ ಮಾಡುವ ಸಾಧ್ಯತೆಗಳಿದ್ದು, ಸಂಜು ಸ್ಯಾಮ್ಸನ್ ಕೂಡ ತಂಡ ಬದಲಿಸುವ ಸುಳಿವು ಇದೆ.

IPL 2026 Mini Auction: ಐಪಿಎಲ್ 2026 ರ ಮಿನಿ ಹರಾಜಿಗೆ ದಿನಾಂಕ ನಿಗದಿ
Ipl 2026
ಪೃಥ್ವಿಶಂಕರ
|

Updated on:Oct 10, 2025 | 2:43 PM

Share

2026 ರ ಐಪಿಎಲ್​ಗೆ (IPL 2026) ಈಗಾಗಲೇ ಎಲ್ಲಾ ಫ್ರಾಂಚೈಸಿಗಳಿಂದ ತಯಾರಿ ಶುರುವಾಗಿದೆ. ಇತ್ತ ಬಿಸಿಸಿಐ (BCCI) ಕೂಡ ಮುಂಬರುವ ಐಪಿಎಲ್​ಗೂ ಮುನ್ನ ನಡೆಯಬೇಕಾಗಿರುವ ಮಿನಿ ಹರಾಜಿಗೆ (IPL 2026 mini auction) ದಿನಾಂಕ ನಿಗದಿಪಡಿಸಿದೆ. ಕ್ರಿಕ್‌ಬಜ್ ವರದಿಯ ಪ್ರಕಾರ, ಐಪಿಎಲ್ 2026 ರ ಮಿನಿ ಹರಾಜು ಈ ವರ್ಷದ ಡಿಸೆಂಬರ್‌ನಲ್ಲಿ ನಡೆಯಲಿದೆ. ಈ ಹರಾಜು ಡಿಸೆಂಬರ್ ಎರಡನೇ ಅಥವಾ ಮೂರನೇ ವಾರದಲ್ಲಿ ನಡೆಯಬಹುದು. ಡಿಸೆಂಬರ್ 13 ಮತ್ತು 15 ರ ನಡುವೆ ಹರಾಜು ನಡೆಯುವ ಸಾಧ್ಯತೆಯಿದೆ. ಹೀಗಾಗಿ ಫ್ರಾಂಚೈಸಿಗಳು ಆಟಗಾರರನ್ನು ಉಳಿಸಿಕೊಳ್ಳಲು ಹಾಗೂ ತಂಡದಿಂದ ಬಿಡುಗಡೆ ಮಾಡಲು ನವೆಂಬರ್ 15 ರವರೆಗೆ ಸಮಯಾವಕಾಶವಿರಲಿದೆ.

ಐಪಿಎಲ್ ಮಿನಿ ಹರಾಜು ಎಲ್ಲಿ ನಡೆಯಲಿದೆ?

ಈಗ ಪ್ರಶ್ನೆ ಏನೆಂದರೆ, ಮುಂದಿನ ಐಪಿಎಲ್ ಮಿನಿ ಹರಾಜು ಎಲ್ಲಿ ನಡೆಯುತ್ತದೆ?. ಕ್ರಿಕ್‌ಬಜ್ ಪ್ರಕಾರ, ಕಳೆದ ಎರಡು ಆವೃತ್ತಿಗಳಂತೆ ಮಿನಿ ಹರಾಜು ಭಾರತದಲ್ಲಿ ಅಥವಾ ವಿದೇಶದಲ್ಲಿ ನಡೆಯುತ್ತದೆಯೇ ಎಂಬುದರ ಕುರಿತು ಪ್ರಸ್ತುತ ಯಾವುದೇ ಮಾಹಿತಿ ಇಲ್ಲ. ಐಪಿಎಲ್ 2023 ರ ಹರಾಜು ದುಬೈನಲ್ಲಿ ನಡೆದಿತ್ತು. ಹಾಗೆಯೇ 2024 ರ ಹರಾಜು ಜೆಡ್ಡಾದಲ್ಲಿ ನಡೆದಿತ್ತು. ಫ್ರಾಂಚೈಸಿಗಳಿಗೆ ಹತ್ತಿರವಿರುವ ಮೂಲಗಳನ್ನು ಉಲ್ಲೇಖಿಸಿ, ಬಿಸಿಸಿಐ ಈ ಬಾರಿ ಭಾರತದಲ್ಲಿ ಮಿನಿ-ಹರಾಜನ್ನು ನಡೆಸಿದರೆ ಆಶ್ಚರ್ಯವೇನಿಲ್ಲ ಎಂದು ವರದಿ ಹೇಳುತ್ತದೆ. ಆದಾಗ್ಯೂ, ಈ ಬಗ್ಗೆ ನಿರ್ಧಾರ ಇನ್ನೂ ಬಾಕಿ ಇದೆ.

ಐಪಿಎಲ್ 2026 ರ ಮಿನಿ ಹರಾಜಿನ ಮೊದಲು ಫ್ರಾಂಚೈಸಿಗಳು ಆಟಗಾರರನ್ನು ಉಳಿಸಿಕೊಳ್ಳಲು ಕೊನೆಯ ದಿನಾಂಕವಾಗಿ ನವೆಂಬರ್ 15 ಅನ್ನು ನಿಗದಿಪಡಿಸಲಾಗಿದೆ. ಹೀಗಾಗಿ ಎಲ್ಲಾ ಫ್ರಾಂಚೈಸಿಗಳು ಈ ದಿನಾಂಕದೊಳಗೆ ತಾವು ತಂಡದಲ್ಲಿ ಉಳಿಸಿಕೊಂಡ ಆಟಗಾರರ ಪಟ್ಟಿಯನ್ನು ಬಿಸಿಸಿಐಗೆ ಸಲ್ಲಿಸಬೇಕು. ವರದಿಗಳ ಪ್ರಕಾರ, ಚೆನ್ನೈ ಮತ್ತು ರಾಜಸ್ಥಾನ ಹೊರತುಪಡಿಸಿ, ಉಳಿದ ಫ್ರಾಂಚೈಸಿಗಳು ಹೆಚ್ಚಿನ ಆಟಗಾರರನ್ನು ಬಿಡುಗಡೆ ಮಾಡುವ ಸಾಧ್ಯತೆ ಕಡಿಮೆ ಇದೆ.

IPL 2026: ಪೃಥ್ವಿ ಶಾ ಖರೀದಿಗೆ ಮೂರು ಐಪಿಎಲ್ ಫ್ರಾಂಚೈಸಿಗಳಿಂದ ತಯಾರಿ

ಸಿಎಸ್​ಕೆ, ಆರ್​ಆರ್​ ತಂಡದಿಂದ ಹೊರಬಿಳುವವರ್ಯಾರು?

ವರದಿಗಳ ಪ್ರಕಾರ, ಚೆನ್ನೈ ಸೂಪರ್ ಕಿಂಗ್ಸ್‌ನಿಂದ ಬಿಡುಗಡೆಯಾಗುವ ಆಟಗಾರರ ಪಟ್ಟಿಯಲ್ಲಿ ದೀಪಕ್ ಹೂಡಾ, ವಿಜಯ್ ಶಂಕರ್, ರಾಹುಲ್ ತ್ರಿಪಾಠಿ, ಸ್ಯಾಮ್ ಕರನ್ ಮತ್ತು ಡೆವೊನ್ ಕಾನ್ವೇ ಸೇರಿದ್ದಾರೆ. ಇದಲ್ಲದೆ, ಅಶ್ವಿನ್ ನಿವೃತ್ತಿಯಿಂದ ಅವರ ಪರ್ಸ್‌ನಲ್ಲಿ ಗಮನಾರ್ಹ ಪ್ರಮಾಣದ ಹಣ ಉಳಿಯುತ್ತದೆ. ಏತನ್ಮಧ್ಯೆ, ರಾಜಸ್ಥಾನ ರಾಯಲ್ಸ್ ತಂಡವು ವನಿಂದು ಹಸರಂಗ ಮತ್ತು ಮಹೇಶ್ ತೀಕ್ಷಣ ಅವರಂತಹ ಸ್ಪಿನ್ನರ್‌ಗಳನ್ನು ಬಿಡುಗಡೆ ಮಾಡಬಹುದು. ಇದಲ್ಲದೆ, ಸಂಜು ಸ್ಯಾಮ್ಸನ್ ಮುಂದಿನ ಆವೃತ್ತಿಯಲ್ಲಿ ಬೇರೆ ತಂಡದ ಪರ ಆಡುವ ಇರಾದೆಯಲಿದ್ದಾರೆ ಎಂದು ವರದಿಯಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:35 pm, Fri, 10 October 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ