
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 32ನೇ ಪಂದ್ಯದಲ್ಲಿ ಅಶಿಸ್ತು ತೋರಿದ ರಾಜಸ್ಥಾನ್ ರಾಯಲ್ಸ್ ತಂಡದ ವೇಗಿ ನಾಂಡ್ರೆ ಬರ್ಗರ್ ಅವರಿಗೆ ಪಂದ್ಯದ ಸಂಭಾವನೆಯ ಶೇ. 10 ರಷ್ಟು ದಂಡ ವಿಧಿಸಲಾಗಿದೆ. ಏಪ್ರಿಲ್ 22 ರಂದು ಲಕ್ನೋದ ಏಕನಾ ಕ್ರೀಡಾಂಗಣದಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಬರ್ಗರ್ ಆಕ್ರಮಣಕಾರಿಯಾಗಿ ಸಂಭ್ರಮಿಸಿದ್ದರು.
ಈ ಪಂದ್ಯದ ಎರಡನೇ ಓವರ್‌ನಲ್ಲಿ ನಾಂಡ್ರೆ ಬರ್ಗರ್ ಅವರು ಎಲ್‌ಎಸ್‌ಜಿ ನಾಯಕ ರಿಷಭ್ ಪಂತ್ ಅವರನ್ನು ಶೂನ್ಯಕ್ಕೆ ಔಟ್ ಮಾಡಿದರು. ವಿಕೆಟ್ ಪಡೆದ ಸಂಭ್ರಮದಲ್ಲಿ ಬರ್ಗರ್ ಅವರು ಪಂತ್ ಅವರತ್ತ ಬೆರಳು ತೋರಿಸಿ ಬೀಳ್ಕೊಡುಗೆ ನೀಡಿದ್ದರು. ಇದನ್ನು ಐಪಿಎಲ್ ನೀತಿ ಸಂಹಿತೆಯ ಉಲ್ಲಂಘನೆ ಎಂದು ಪರಿಗಣಿಸಲಾಗಿದೆ.
ಸೌತ್ ಆಫ್ರಿಕಾ ವೇಗಿ ನಾಂಡ್ರೆ ಬರ್ಗರ್ ಅವರನ್ನು ರಾಜಸ್ಥಾನ್ ರಾಯಲ್ಸ್ ತಂಡ 50 ಲಕ್ಷ ರೂ.ಗೆ ಖರೀದಿಸಿದೆ. ಅದರಂತೆ ಅವರ ಲೀಗ್ ಹಂತದ ಪ್ರತಿ ಪಂದ್ಯದ ಸಂಭಾವನೆ 3.57 ಲಕ್ಷ ರೂ.
3.57 ಲಕ್ಷ ರೂ. ಪಂದ್ಯ ಸಂಭಾವನೆಯಿಂದ 10% ದಂಡ ಕಟ್ಟಬೇಕಾಗಿದೆ. ಅಂದರೆ ಬೆರಳು ತೋರಿಸಿ ಆಕ್ರಮಣಕಾರಿಯಾಗಿ ಸಂಭ್ರಮಿಸಿದ್ದಕ್ಕೆ ನಾಂಡ್ರೆ ಬರ್ಗರ್ 35,700 ರೂ. ದಂಡ ಕಟ್ಟಬೇಕಾಗಿ ಬಂದಿದೆ.
Rishabh Pant ✅
Aiden Markram ✅Just the start @rajasthanroyals wanted with the ball 🩷
Updates ▶️ https://t.co/5SaPY8wfsc#TATAIPL | #KhelBindaas | #LSGvRR pic.twitter.com/A9vVrRyKxE
— IndianPremierLeague (@IPL) April 22, 2026
ಈ ಪಂದ್ಯದಲ್ಲಿ. ಮೊದಲು ಬ್ಯಾಟಿಂಗ್ ಮಾಡಿದ್ದ ರಾಜಸ್ಥಾನ್ ರಾಯಲ್ಸ್ ತಂಡವು ರವೀಂದ್ರ ಜಡೇಜಾ ಅವರ ಅಜೇಯ 43 ರನ್ ನೆರವಿನಿಂದ 159 ರನ್ ಗಳಿಸಿತ್ತು. ಈ ಗುರಿ ಬೆನ್ನಟ್ಟಿದ ಲಕ್ನೋ ತಂಡ 119 ರನ್‌ಗಳಿಗೆ ಆಲೌಟ್ ಆಗಿ 40 ರನ್‌ಗಳ ಸೋಲೊಪ್ಪಿಕೊಂಡಿದೆ.
ಇದನ್ನೂ ಓದಿ: 4 ಸರಣಿಗಳ ವೇಳೆ ಜಸ್ಪ್ರೀತ್ ಬುಮ್ರಾಗೆ ರೆಸ್ಟ್..!
ಈ ಗೆಲುವಿನೊಂದಿಗೆ ರಾಜಸ್ಥಾನ್ ರಾಯಲ್ಸ್ ತಂಡವು ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದರೆ, ಲಕ್ನೋ ಸೂಪರ್ ಜೈಂಟ್ಸ್ ತಂಡವು ಪಾಯಿಂಟ್ಸ್ ಟೇಬಲ್ನಲ್ಲಿ 9ನೇ ಸ್ಥಾನಕ್ಕೆ ಕುಸಿದಿದೆ.