CSK vs SRH: ನಾಯಕನಾಗಿ ಹೆಚ್ಚು ವಿಕೆಟ್; ಪಾಂಡ್ಯ ದಾಖಲೆ ಮುರಿದ ಕಮ್ಮಿನ್ಸ್

Updated on: May 18, 2026 | 9:23 PM

Pat Cummins' IPL 2026 Heroics: ಐಪಿಎಲ್ 2026 ರ 63ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ನಾಯಕ ಪ್ಯಾಟ್ ಕಮ್ಮಿನ್ಸ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮಿಂಚಿದರು. ಪ್ರಮುಖ ವಿಕೆಟ್‌ಗಳನ್ನು ಕಬಳಿಸುವ ಮೂಲಕ, ಕಮ್ಮಿನ್ಸ್ ನಾಯಕನಾಗಿ 42 ಐಪಿಎಲ್ ವಿಕೆಟ್‌ಗಳನ್ನು ಪಡೆದು ಹಾರ್ದಿಕ್ ಪಾಂಡ್ಯ ಅವರನ್ನು ಹಿಂದಿಕ್ಕಿದರು. ಶೇನ್ ವಾರ್ನ್ ನಂತರ, ನಾಯಕನಾಗಿ ಅತಿ ಹೆಚ್ಚು ವಿಕೆಟ್ ಪಡೆದ ಎರಡನೇ ಬೌಲರ್ ಎನಿಸಿಕೊಂಡರು.

ಐಪಿಎಲ್ 2026 ರ 63ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ನಾಯಕ ಪ್ಯಾಟ್ ಕಮ್ಮಿನ್ಸ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಭರ್ಜರಿ ಪ್ರದರ್ಶನ ನೀಡಿದರು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಸಿಎಸ್​ಕೆ ತಂಡದ ಬ್ಯಾಟಿಂಗ್‌ ಬೆನ್ನೆಲುಬು ಮುರಿದ ಕಮ್ಮಿನ್ಸ್, ಸಿಎಸ್​ಕೆ ಆರಂಭಿಕರಾದ ಸಂಜು ಸ್ಯಾಮ್ಸನ್, ರುತುರಾಜ್ ಗಾಯಕ್ವಾಡ್ ಮತ್ತು ಕಾರ್ತಿಕ್ ಶರ್ಮಾ ಅವರನ್ನು ಔಟ್ ಮಾಡಿದರು. ಕಾರ್ತಿಕ್ ಅವರನ್ನು ಔಟ್ ಮಾಡುವ ಮೂಲಕ, ಕಮ್ಮಿನ್ಸ್ ಮಹತ್ವದ ಮೈಲಿಗಲ್ಲನ್ನು ಸಾಧಿಸಿದರು.

ಐಪಿಎಲ್‌ನಲ್ಲಿ ಪ್ಯಾಟ್ ಕಮ್ಮಿನ್ಸ್ ನಾಯಕನಾಗಿ 42 ವಿಕೆಟ್‌ಗಳನ್ನು ಪಡೆದಿದ್ದಾರೆ. ಈ ಮೂಲಕ ಅವರು ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಅವರನ್ನು ಹಿಂದಿಕ್ಕಿದ್ದಾರೆ. ಪಾಂಡ್ಯ ನಾಯಕನಾಗಿ 40 ವಿಕೆಟ್‌ಗಳನ್ನು ಹೊಂದಿದ್ದಾರೆ. ಇನ್ನು ಐಪಿಎಲ್‌ನಲ್ಲಿ ನಾಯಕನಾಗಿ ಅತಿ ಹೆಚ್ಚು ವಿಕೆಟ್ ಉರುಳಿಸಿದವರ ಪಟ್ಟಿಯಲ್ಲಿ ಶೇನ್ ವಾರ್ನ್ ಅಗ್ರಸ್ಥಾನದಲ್ಲಿದ್ದು, ಅವರ ಖಾತೆಯಲ್ಲಿ 57 ವಿಕೆಟ್‌ಗಳಿವೆ.

ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿರುವ ಅನಿಲ್ ಕುಂಬ್ಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕನಾಗಿ 30 ವಿಕೆಟ್ ಪಡೆದಿದ್ದರು. ಹಾಗೆಯೇ ರವಿಚಂದ್ರನ್ ಅಶ್ವಿನ್ ಕೂಡ ನಾಯಕನಾಗಿ 25 ವಿಕೆಟ್ ಪಡೆದಿದ್ದರೆ, ಜಹೀರ್ ಖಾನ್ 20 ವಿಕೆಟ್ ಪಡೆದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: May 18, 2026 09:22 PM
Loading...
Unable to load recommendations.
Follow Us
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More