AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CSK vs PBKS: ಸತತ 2ನೇ ಸೋಲು; ಸಿಎಸ್​ಕೆಗೆ ತವರಿನಲ್ಲೂ ಧಕ್ಕಲಿಲ್ಲ ಗೆಲುವು

IPL 2026, CSK vs PBKS: ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಐಪಿಎಲ್ 2026ರ 7ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್‌ಕೆ 209 ರನ್ ಗಳಿಸಿದರೂ, ಪಂಜಾಬ್ ನಾಯಕ ಶ್ರೇಯಸ್ ಅವರ ಅರ್ಧಶತಕದ ನೆರವಿನಿಂದ ಗುರಿ ತಲುಪಿತು. ಈ ಗೆಲುವಿನೊಂದಿಗೆ ಪಂಜಾಬ್ ಲೀಗ್‌ನಲ್ಲಿ ಸತತ ಎರಡನೇ ಜಯ ದಾಖಲಿಸಿದರೆ, ಚೆನ್ನೈ ತಂಡಕ್ಕೆ ಸತತ ಎರಡನೇ ಸೋಲಾಗಿದೆ.

CSK vs PBKS: ಸತತ 2ನೇ ಸೋಲು; ಸಿಎಸ್​ಕೆಗೆ ತವರಿನಲ್ಲೂ ಧಕ್ಕಲಿಲ್ಲ ಗೆಲುವು
Csk Vs Pbks
ಪೃಥ್ವಿಶಂಕರ
|

Updated on:Apr 03, 2026 | 11:40 PM

Share

ಚೆನ್ನೈನ ಚೆಪಾಕ್​ ಮೈದಾನದಲ್ಲಿ ನಡೆದ ಐಪಿಎಲ್ 2026 (IPL 2026) ರ 7ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಪಂಜಾಬ್ ಕಿಂಗ್ಸ್ (CSK vs PBKS) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ತಂಡವು 20 ಓವರ್‌ಗಳಲ್ಲಿ ಐದು ವಿಕೆಟ್‌ಗಳಿಗೆ 209 ರನ್ ಗಳಿಸಿತು. ತಂಡದ ಪರ ಆಯುಷ್ ಮ್ಹಾತ್ರೆ 73 ರನ್‌ಗಳೊಂದಿಗೆ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ಈ ಗುರಿ ಬೆನ್ನಟ್ಟಿದ ಪಂಜಾಬ್ ನಾಯಕ ಶ್ರೇಯಸ್ ಅವರ ಅರ್ಧಶತಕದ ನೆರವಿನಿಂದ 18.4 ಓವರ್​ಗಳಲ್ಲಿ 5 ವಿಕೆಟ್‌ಗಳನ್ನು ಕಳೆದುಕೊಂಡು ಗೆಲುವಿನ ದಡ ಮುಟ್ಟಿತು. ಇದರೊಂದಿಗೆ ಪಂಜಾಬ್​ ಲೀಗ್​ನಲ್ಲಿ ಸತತ ಎರಡನೇ ಗೆಲುವು ದಾಖಲಿಸಿದರೆ, ಇತ್ತ ಸಿಎಸ್​ಕೆ ಸತತ ಎರಡನೇ ಸೋಲು ಕಂಡಿತು.

ಸಂಜು ಮತ್ತೆ ವಿಫಲ

ಎಂದಿನಂತೆ ಈ ಪಂದ್ಯದಲ್ಲೂ ಚೆನ್ನೈಗೆ ಉತ್ತಮ ಆರಂಭ ಸಿಗಲಿಲ್ಲ. ಬಹುನಿರೀಕ್ಷಿತ ಪಂದ್ಯದಲ್ಲೂ ಸಂಜು ಸ್ಯಾಮ್ಸನ್ ಮತ್ತೆ ವಿಫಲರಾದರು. ಆದಾಗ್ಯೂ 20 ವರ್ಷದ ಆಯುಷ್ ಮ್ಹಾತ್ರೆ 73 ರನ್ ಗಳಿಸುವ ಮೂಲಕ ತಂಡವನ್ನು ಬಲವಾದ ಸ್ಥಿತಿಗೆ ಕೊಂಡೊಯ್ದರು. ಸರ್ಫರಾಜ್ ಖಾನ್ ಕೂಡ ಕೇವಲ 12 ಎಸೆತಗಳಲ್ಲಿ 6 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ 32 ರನ್ ಗಳಿಸಿದರು. ಅದೇ ಸಮಯದಲ್ಲಿ, ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಕಾರ್ತಿಕ್ ಶರ್ಮಾ ವಿಶೇಷವಾದದ್ದೇನೂ ಮಾಡಲು ಸಾಧ್ಯವಾಗಲಿಲ್ಲ. ಆದರೆ ಶಿವಂ ದುಬೆ ಕೊನೆಯ ಓವರ್‌ನಲ್ಲಿ ತಮ್ಮ ಅನುಭವವನ್ನು ಪೂರ್ಣವಾಗಿ ಬಳಸಿಕೊಂಡು 28 ಎಸೆತಗಳಲ್ಲಿ 45 ರನ್ ಗಳಿಸಿ ಅಜೇಯರಾಗಿ ಉಳಿದರು. ಅವರ ಪ್ರದರ್ಶನವು ಚೆನ್ನೈ ತಂಡವನ್ನು 200 ರನ್‌ಗಳ ಗಡಿ ದಾಟಿಸಿತು.

ಪಂಜಾಬ್​ಗೆ ಸ್ಫೋಟಕ ಆರಂಭ

ಗೆಲುವಿಗೆ 210 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ತಂಡದ ಪರ ಪ್ರಿಯಾಂಶ್ ಆರ್ಯ ಮತ್ತು ಪ್ರಬ್ಸಿಮ್ರಾನ್ ಸಿಂಗ್ ಉತ್ತಮ ಆರಂಭ ನೀಡಿದರು. ಆರಂಭದಿಂದಲೇ ಅಬ್ಬರಿಸಿದ ಆರ್ಯ ಕೇವಲ 11 ಎಸೆತಗಳಲ್ಲಿ 3 ಬೌಂಡರಿ ಮತ್ತು 4 ಸಿಕ್ಸರ್‌ಗಳ ಸಹಾಯದಿಂದ 39 ರನ್ ಗಳಿಸಿ ಔಟಾದರು. ಇದರ ನಂತರ, ಪ್ರಬ್ಸಿಮ್ರಾನ್ 34 ಎಸೆತಗಳಲ್ಲಿ 43 ರನ್ ಗಳಿಸಿದರೆ, ಕೂಪರ್ 22 ಎಸೆತಗಳಲ್ಲಿ 36 ರನ್ ಗಳಿಸಿದರು. ನಂತರ, ಶ್ರೇಯಸ್ ಅಯ್ಯರ್ ಜೊತೆಗೂಡಿದ ನೆಹಾಲ್ ವದೇರಾ, ಚೆನ್ನೈ ಸೂಪರ್ ಕಿಂಗ್ಸ್ ಬೌಲರ್​ಗಳಿಗೆ ನೀರುಣಿಸಲು ಪ್ರಾರಂಭಿಸಿದರು.

CSK vs PBKS IPL 2026 Highlights: ತವರಿನಲ್ಲಿ ಸತತ 6ನೇ ಪಂದ್ಯ ಸೋತ ಸಿಎಸ್​ಕೆ

ಅಯ್ಯರ್ ಅರ್ಧಶತಕ

ಇಬ್ಬರೂ ಅದ್ಭುತವಾಗಿ ಆಡಿ ಪಂಜಾಬ್ ಕಿಂಗ್ಸ್ ತಂಡವನ್ನು ಗೆಲುವಿನ ಸಮೀಪಕ್ಕೆ ತಂದರು. 29 ಎಸೆತಗಳಲ್ಲಿ ಅರ್ಧಶತಕ ಗಳಿಸಿದ ನಾಯಕ ಶ್ರೇಯಸ್ ಅಯ್ಯರ್ ಅವರನ್ನು ಅನ್ಶುಲ್ ಕಾಂಬೋಜ್ ಔಟ್ ಮಾಡಿದರೆ, 9 ಎಸೆತಗಳಲ್ಲಿ 10 ರನ್ ಗಳಿಸಿ ವದೇರಾ ಕೂಡ ಔಟಾದರು. ಕೊನೆಯಲ್ಲಿ ಪಂಜಾಬ್ ಕಿಂಗ್ಸ್ ಗೆಲ್ಲಲು 12 ಎಸೆತಗಳಲ್ಲಿ 12 ರನ್ ಅಗತ್ಯವಿದ್ದಾಗ, ಶಶಾಂಕ್ ಸಿಂಗ್ ಮತ್ತು ಸ್ಟೊಯಿನಿಸ್ ಜೊತೆಯಾಟದಿಂದ ಇನ್ನೂ 8 ಎಸೆತಗಳು ಬಾಕಿ ಇರುವಾಗಲೇ ಗೆಲುವು ಸಾಧಿಸಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:23 pm, Fri, 3 April 26

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ