ಗೆದ್ದವರು ಫೈನಲ್​ಗೆ, ಸೋತವರಿಗೆ ಮತ್ತೆ ಚಾನ್ಸ್​: ಹೀಗಿರಲಿದೆ ಪ್ಲೇಆಫ್ ಫೈಟ್

IPL 2026 Playoffs: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಪ್ಲೇಆಫ್ ಆಡಲಿರುವ ತಂಡಗಳೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಗುಜರಾತ್ ಟೈಟಾನ್ಸ್, ಸನ್​ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್​ ಈ ನಾಲ್ಕು ತಂಡಗಳಲ್ಲಿ ಎರಡು ಟೀಮ್​ಗಳು ಕ್ವಾಲಿಫೈಯರ್-1 ಪಂದ್ಯವಾಡಿದರೆ, ಮತ್ತೆರಡು ತಂಡಗಳು ಎಲಿಮಿನೇಟರ್ ಮ್ಯಾಚ್ ಆಡಲಿದೆ.

ಗೆದ್ದವರು ಫೈನಲ್​ಗೆ, ಸೋತವರಿಗೆ ಮತ್ತೆ ಚಾನ್ಸ್​: ಹೀಗಿರಲಿದೆ ಪ್ಲೇಆಫ್ ಫೈಟ್
Ipl 2026
Image Credit source: Iplt20.com

Updated on: May 26, 2026 | 8:51 AM

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಪ್ಲೇಆಫ್ ಪಂದ್ಯಗಳಿಗೆ ವೇದಿಕೆ ಸಿದ್ಧವಾಗಿದೆ. ಮೊದಲ ಸುತ್ತಿನಲ್ಲಿ ಭರ್ಜರಿ ಪ್ರದರ್ಶನ ನೀಡಿದ ನಾಲ್ಕು ತಂಡಗಳು ಪ್ಲೇಆಫ್​ ಸುತ್ತಿನಲ್ಲಿ ಕಣಕ್ಕಿಳಿಯಲಿದೆ. ಅಂದರೆ ಲೀಗ್​ ಹಂತದ 70 ಪಂದ್ಯಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಅತ್ಯಧಿಕ ಅಂಕಗಳನ್ನು ಪಡೆದು, ಪಾಯಿಂಟ್ಟ್​ ಟೇಬಲ್​ನಲ್ಲಿ ಟಾಪ್-4 ನಲ್ಲಿ ಕಾಣಿಸಿಕೊಂಡಿರುವ ನಾಲ್ಕು ತಂಡಗಳು ದ್ವಿತೀಯ ಸುತ್ತಿನಲ್ಲಿ ಕಣಕ್ಕಿಳಿಯಲಿವೆ. ಅದರಂತೆ ಈ ಬಾರಿ ಪ್ಲೇಆಫ್ ಆಡಲಿರುವ ತಂಡಗಳೆಂದರೆ…

  • ರಾಯಲ್ ಚಾಲೆಂಜರ್ಸ್ ಬೆಂಗಳೂರು
  • ಗುಜರಾತ್ ಟೈಟಾನ್ಸ್​
  • ಸನ್​ರೈಸರ್ಸ್ ಹೈದರಾಬಾದ್
  • ರಾಜಸ್ಥಾನ್ ರಾಯಲ್ಸ್.

ಇಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳಲ್ಲಿ ಕಾಣಿಸಿಕೊಂಡಿರುವ ಕಾರಣ ಮೊದಲ ಕ್ವಾಲಿಫೈಯರ್ ಪಂದ್ಯವಾಡಲಿದೆ.

ಐಪಿಎಲ್ ಪ್ಲೇಆಫ್ ನಿಯಮದ ಪ್ರಕಾರ, ಲೀಗ್ ಹಂತದ ಮುಕ್ತಾಯದ ವೇಳೆ ಅಂಕ ಪಟ್ಟಿಯಲ್ಲಿ ಟಾಪ್-2 ನಲ್ಲಿ ಸ್ಥಾನ ಪಡೆಯುವ ತಂಡಗಳು ಮೊದಲ ಕ್ವಾಲಿಫೈಯರ್ ಹಾಗೂ 3ನೇ ಮತ್ತು 4ನೇ ಸ್ಥಾನಗಳನ್ನು ಪಡೆಯುವ ತಂಡಗಳು ಎಲಿಮಿನೇಟರ್ ಪಂದ್ಯವಾಡಬೇಕಾಗುತ್ತದೆ.

  • ಮೊದಲ ಕ್ವಾಲಿಫೈಯರ್: ಪ್ಲೇಆಫ್​ ಸುತ್ತಿನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಆರ್​ಸಿಬಿ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ.
  • ಎಲಿಮಿನೇಟರ್​ ಪಂದ್ಯ: ಪ್ಲೇಆಫ್ ಸುತ್ತಿನ ಎರಡನೇ ಪಂದ್ಯವು ಎಲಿಮಿನೇಟರ್ ಮ್ಯಾಚ್ ಆಗಿದ್ದು, ಈ ಪಂಧ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಲಿದೆ.
  • ದ್ವಿತೀಯ ಕ್ವಾಲಿಫೈಯರ್: ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋತ ಹಾಗೂ ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ತಂಡಗಳು ದ್ವಿತೀಯ ಕ್ವಾಲಿಫೈಯರ್ ಪಂದ್ಯವಾಡಲಿದೆ.

ಗೆದ್ದವರು ಫೈನಲ್​ಗೆ, ಸೋತವರಿಗೆ ಮತ್ತೊಂದು ಚಾನ್ಸ್​!

  • ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್​ಗೇರಲಿದೆ. ಅಂದರೆ ಇಂದಿನ ಮ್ಯಾಚ್​ನಲ್ಲಿ ಆರ್​ಸಿಬಿ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದ್ದು, ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​ಗೆ ಎಂಟ್ರಿ ಕೊಡಲಿದೆ.
  • ಹಾಗೆಯೇ ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಸೋತ ತಂಡ ಟೂರ್ನಿಯಿಂದ ಹೊರಬೀಳುವುದಿಲ್ಲ. ಬದಲಾಗಿ ಎರಡನೇ ಕ್ವಾಲಿಫೈಯರ್ ಪಂದ್ಯವಾಡಲು ಅವಕಾಶ ಇರಲಿದೆ. ಅಂದರೆ ಮೊದಲ ಕ್ವಾಲಿಫೈಯರ್​ನಲ್ಲಿ ಸೋತ ತಂಡಕ್ಕೆ ಫೈನಲ್​ಗೇರಲು ಎರಡನೇ ಚಾನ್ಸ್ ಸಿಗಲಿದೆ.

ಮಾಡು ಇಲ್ಲವೇ ಮಡಿ ಪಂದ್ಯ:

  • ಎಲಿಮಿನೇಟರ್ ಪಂದ್ಯ ಎಂಬುದು ಮಾಡು ಇಲ್ಲವೇ ಮಡಿ ಪಂದ್ಯ. ಅಂದರೆ ಈ ಮ್ಯಾಚ್​ನಲ್ಲಿ ಸೋತ ತಂಡ ಟೂರ್ನಿಯಿಂದಲೇ ಹೊರಬೀಳಲಿದೆ. ಈ ಡು ಆರ್ ಡೈ  ಮ್ಯಾಚ್​ನಲ್ಲಿ ಈ ಬಾರಿ ಕಣಕ್ಕಿಳಿಯಲಿರುವುದು ಸನ್​ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್. ಈ ಎರಡು ತಂಡಗಳಲ್ಲಿ ಒಂದು ಟೀಮ್ ಇಂಡಿಯಾ ಮೇ 27 ರಂದು ಐಪಿಎಲ್ ಅಭಿಯಾನ ಕೊನೆಗೊಳಿಸಲಿದೆ.
  • ಇನ್ನು ಎಲಿಮಿನೇಟರ್ ಪಂದ್ಯದಲ್ಲಿ ಗೆಲ್ಲುವ ತಂಡ ನೇರವಾಗಿ ಫೈನಲ್​ಗೆ ಪ್ರವೇಶಿಸುವುದಿಲ್ಲ. ಬದಲಾಗಿ ದ್ವಿತೀಯ ಕ್ವಾಲಿಫೈಯರ್ ಪಂದ್ಯ ಆಡಬೇಕಾಗುತ್ತದೆ. ಅಂದರೆ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋತ ತಂಡದೊಂದಿಗೆ ಎಲಿಮಿನೇಟರ್ ಪಂದ್ಯ ಗೆದ್ದ ತಂಡ ಪಂದ್ಯವಾಡಬೇಕಾಗುತ್ತದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​ಗೇರಲಿದೆ.

ಅಂದರೆ ಎಲಿಮಿನೇಟರ್ ಪಂದ್ಯವಾಡುವ ತಂಡ ಫೈನಲ್​ಗೇರಬೇಕಿದ್ದರೆ 2 ಮ್ಯಾಚ್​ಗಳಲ್ಲಿ ಜಯ ಸಾಧಿಸಬೇಕು. ಅದೇ ವೇಳೆ ಮೊದಲ ಕ್ವಾಲಿಫೈಯರ್​ನಲ್ಲಿ ಗೆಲ್ಲುವ ತಂಡ ನೇರವಾಗಿ ಫೈನಲ್​ಗೆ ಪ್ರವೇಶಿಸುತ್ತದೆ. ಇನ್ನು ಸೋತ ತಂಡಕ್ಕೆ ಸಿಗುವ ಎರಡನೇ ಚಾನ್ಸ್​ (ದ್ವಿತೀಯ ಕ್ವಾಲಿಫೈಯರ್) ಮೂಲಕ ಫೈನಲ್​ಗೆ ಪ್ರವೇಶಿಸಲು ಅವಕಾಶ ಇರಲಿದೆ.

ಇದನ್ನೂ ಓದಿ: IPL 2026: ಐಪಿಎಲ್ ಪ್ಲೇಆಫ್ ವೇಳಾಪಟ್ಟಿ ಇಲ್ಲಿದೆ

ಹೀಗಾಗಿ ಇಂದಿನ (ಮೇ 26) ಮ್ಯಾಚ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಥವಾ ಗುಜರಾತ್ ಟೈಟಾನ್ಸ್ ತಂಡಗಳು ಸೋತರೆ ಐಪಿಎಲ್​ನಿಂದ ಹೊರಬೀಳುವುದಿಲ್ಲ. ಬದಲಾಗಿ ದ್ವಿತೀಯ ಕ್ವಾಲಿಫೈಯರ್ ಆಡಲು ಅವಕಾಶ ಪಡೆಯಲಿದೆ. ಆದರೆ ಅತ್ತ ಎಲಿಮಿನೇಟರ್ ಪಂದ್ಯದಲ್ಲಿ ಸೋಲುವ ತಂಡದ ಐಪಿಎಲ್ ಅಭಿಯಾನ ನಾಳೆ (ಮೇ 27) ಅಂತ್ಯವಾಗಲಿದೆ. ಅಂದರೆ ಸನ್​ರೈಸರ್ಸ್ ಹೈದರಾಬಾದ್ ಅಥವಾ ರಾಜಸ್ಥಾನ್ ರಾಯಲ್ಸ್ ತಂಡಗಳಲ್ಲಿ ಒಂದು ಟೀಮ್ ಬುಧವಾರ ಐಪಿಎಲ್ ಅಭಿಯಾನ ಅಂತ್ಯಗೊಳಿಸಲಿದೆ.

 

Published On - 8:50 am, Tue, 26 May 26

Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us