AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಮೂವರು ಅಲಭ್ಯ: RCB ತಂಡದ ಪ್ಲೇಯಿಂಗ್ 11 ಹೀಗಿರಲಿದೆ

IPL 2026 RCB vs LSG: ಐಪಿಎಲ್​ನ 19ನೇ ಆವೃತ್ತಿಯಲ್ಲಿ ಈವರೆಗೆ 4 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಇಂದು (ಏ.15) ಮುಖಾಮುಖಿಯಾಗಲಿದೆ. ಬೆಂಗಳೂರಿನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಆರ್​ಸಿಬಿ ತಂಡದ ಮೂವರು ಆಟಗಾರರು ಅಲಭ್ಯರಾಗಲಿದ್ದಾರೆ.

IPL 2026: ಮೂವರು ಅಲಭ್ಯ: RCB ತಂಡದ ಪ್ಲೇಯಿಂಗ್ 11 ಹೀಗಿರಲಿದೆ
RCB
ಝಾಹಿರ್ ಯೂಸುಫ್
|

Updated on:Apr 15, 2026 | 8:55 AM

Share

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 22ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಆರ್​ಸಿಬಿ ತಂಡದ ಮೂವರು ಅಲಭ್ಯರಾಗಲಿದ್ದಾರೆ. ಅವರೆಂದರೆ…

  • ನುವಾನ್ ತುಷಾರ: ಶ್ರೀಲಂಕಾ ವೇಗಿ ನುವಾನ್ ತುಷಾರ ಫಿಟ್​ನೆಸ್ ಸಮಸ್ಯೆಯ ಕಾರಣ ಇನ್ನೂ ಕೂಡ ಆರ್​ಸಿಬಿ ತಂಡವನ್ನು ಕೂಡಿಕೊಂಡಿಲ್ಲ.
  • ಯಶ್ ದಯಾಳ್: ಆರ್​ಸಿಬಿ ವೇಗಿ ಯಶ್ ದಯಾಳ್ ವೈಯುಕ್ತಿಕ ಕಾರಣಗಳಿಂದಾಗಿ ಐಪಿಎಲ್​ನಿಂದ ಹೊರಗುಳಿದಿದ್ದಾರೆ.
  • ಜೋಶ್ ಹೇಝಲ್​ವುಡ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ಬೌಲರ್ ಜೋಶ್ ಹೇಝಲ್​ವುಡ್ ಮಂಗಳವಾರ ನಡೆದ ಆರ್​ಸಿಬಿ ತಂಡದ ಅಭ್ಯಾಸಕ್ಕೆ ಗೈರುಹಾಜರಾಗಿದ್ದರು. ಹೀಗಾಗಿ ಫಿಟ್​ನೆಸ್ ಸಮಸ್ಯೆಯ ಕಾರಣ ಇಂದಿನ ಮ್ಯಾಚ್​ನಿಂದಲೂ ಹೇಝಲ್​ವುಡ್ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ.

ಈ ಮೂವರ ಅಲಭ್ಯತೆಯ ನಡುವೆಯೂ ಆರ್​ಸಿಬಿ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಅಂದರೆ ಮುಂಬೈ ಇಂಡಿಯನ್ಸ್ ವಿರುದ್ಧ ಕಣಕ್ಕಿಳಿದ ಬಳಗವನ್ನೇ ಈ ಮ್ಯಾಚ್​ನಲ್ಲೂ ಮುಂದುವರೆಸುವ ಸಾಧ್ಯತೆಯಿದೆ.

ಅದರಂತೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕೂಡ ವಿರಾಟ್ ಕೊಹ್ಲಿ ಹಾಗೂ ಫಿಲ್ ಸಾಲ್ಟ್ ಇನಿಂಗ್ಸ್ ಆರಂಭಿಸಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ದೇವದತ್ ಪಡಿಕ್ಕಲ್ ಕಣಕ್ಕಿಳಿದರೆ, ನಾಲ್ಕನೇ ಕ್ರಮಾಂಕದಲ್ಲಿ ರಜತ್ ಪಾಟಿದಾರ್ ಆಡಲಿದ್ದಾರೆ. ಇನ್ನು ಐದನೇ ಕ್ರಮಾಂಕವು ಟಿಮ್ ಡೇವಿಡ್​ಗೆ ಫಿಕ್ಸ್​.

ಆರನೇ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಜಿತೇಶ್ ಶರ್ಮಾ ಕಾಣಿಸಿಕೊಂಡರೆ, ಏಳನೇ ಮತ್ತು ಎಂಟನೇ ಕ್ರಮಾಂಗಳಲ್ಲಿ ಕೃನಾಲ್ ಪಾಂಡ್ಯ ಮತ್ತು ರೊಮಾರಿಯೊ ಶೆಫರ್ಡ್ ಬ್ಯಾಟ್ ಬೀಸಲಿದ್ದಾರೆ.

ಇನ್ನು ಬೌಲರ್​ಗಳಾಗಿ ಭುವನೇಶ್ವರ್ ಕುಮಾರ್, ಜೇಕಬ್ ಡಫಿ ಹಾಗೂ ಸುಯಶ್ ಶರ್ಮಾ ಆಡುವ ಬಳಗದಲ್ಲಿ ಇರಲಿದ್ದಾರೆ. ಇವರೊಂದಿಗೆ ಇಂಪ್ಯಾಕ್ಟ್ ಪ್ಲೇಯರ್ ಆಗಿ ಯುವ ವೇಗಿ ರಾಸಿಖ್ ಸಲಾಂ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಅದರಂತೆ ಆರ್​ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…

  • ವಿರಾಟ್ ಕೊಹ್ಲಿ
  • ಫಿಲ್ ಸಾಲ್ಟ್
  • ದೇವದತ್ ಪಡಿಕ್ಕಲ್
  • ರಜತ್ ಪಾಟಿದಾರ್ (ನಾಯಕ)
  • ಟಿಮ್ ಡೇವಿಡ್
  • ಜಿತೇಶ್ ಶರ್ಮಾ (ವಿಕೆಟ್ ಕೀಪರ್)
  • ಕೃನಾಲ್ ಪಾಂಡ್ಯ
  • ರೊಮಾರಿಯೊ ಶೆಫರ್ಡ್​
  • ಭುವನೇಶ್ವರ್ ಕುಮಾರ್
  • ಜೇಕಬ್ ಡಫಿ
  • ಸುಯಶ್ ಶರ್ಮಾ
  • ರಾಸಿಖ್ ಸಲಾಂ (ಇಂಪ್ಯಾಕ್ಟ್ ಪ್ಲೇಯರ್).

ಇದನ್ನೂ ಓದಿ: ಆಸ್ಟ್ರೇಲಿಯಾದಲ್ಲಿ ಐಪಿಎಲ್ ಪಂದ್ಯ..!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್​ವುಡ್, ಯಶ್ ದಯಾಲ್, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ರಾಸಿಖ್ ಸಲಾಂ, ವೆಂಕಟೇಶ್ ಅಯ್ಯರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ಜೇಕಬ್ ಡಫಿ, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ಜೋರ್ಡನ್ ಕಾಕ್ಸ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾನ್, ಯಶ್ ದಯಾಳ್ (ಅಲಭ್ಯ).

Published On - 8:52 am, Wed, 15 April 26

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಚೀಫ್ ಸಬ್ ಎಡಿಟರ್. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಇಂದು ಈ ರಾಶಿಯವರು ನಿಮ್ಮ ಕೋಪವನ್ನು ಹತೋಟಿಯಲ್ಲಿಡಲೇಬೇಕು!
ಇಂದು ಈ ರಾಶಿಯವರು ನಿಮ್ಮ ಕೋಪವನ್ನು ಹತೋಟಿಯಲ್ಲಿಡಲೇಬೇಕು!
ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳೊಂದಿಗೆ ಸಂವಾದ: ತೊಟ್ಟಿಲು ಖರೀದಿಸಿದ ಡಿಕೆಶಿ
ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳೊಂದಿಗೆ ಸಂವಾದ: ತೊಟ್ಟಿಲು ಖರೀದಿಸಿದ ಡಿಕೆಶಿ
ಹಾಸನಾಂಬೆ ದರ್ಶನ: ಸಿದ್ದರಾಮಯ್ಯ ಆಗಮನದ ವೇಳೆ ಗೊಂದಲ
ಹಾಸನಾಂಬೆ ದರ್ಶನ: ಸಿದ್ದರಾಮಯ್ಯ ಆಗಮನದ ವೇಳೆ ಗೊಂದಲ
ಪೀಣ್ಯ ಫ್ಲೈ ಓವರ್ ಮೇಲೆ ಚೆಲ್ಲಾಪಿಲ್ಲಿಯಾದ ಲಗ್ನ ಪತ್ರಿಕೆಗಳು
ಪೀಣ್ಯ ಫ್ಲೈ ಓವರ್ ಮೇಲೆ ಚೆಲ್ಲಾಪಿಲ್ಲಿಯಾದ ಲಗ್ನ ಪತ್ರಿಕೆಗಳು
ಅಪ್ಪ-ಅಮ್ಮನ ಪ್ರಭಾವ ಬಳಸಿ ಅವಕಾಶ ಪಡೆಯಲ್ಲ: ಖುಷಿ ಚಂದ್ರಶೇಖರ್ ದಿಟ್ಟ ಮಾತು
ಅಪ್ಪ-ಅಮ್ಮನ ಪ್ರಭಾವ ಬಳಸಿ ಅವಕಾಶ ಪಡೆಯಲ್ಲ: ಖುಷಿ ಚಂದ್ರಶೇಖರ್ ದಿಟ್ಟ ಮಾತು
ಉಗ್ರ ದಾವೂದ್ ಇಬ್ರಾಹಿಂ ವೈಭವೀಕರಣ: ಚಿಕ್ಕಮಗಳೂರಲ್ಲಿ ಬಸ್ ಸೀಜ್​​
ಉಗ್ರ ದಾವೂದ್ ಇಬ್ರಾಹಿಂ ವೈಭವೀಕರಣ: ಚಿಕ್ಕಮಗಳೂರಲ್ಲಿ ಬಸ್ ಸೀಜ್​​
ಕೆಟ್ಟದಾಗಿ ಬೈದ ಜಗ್ಗಮಮ್ಮಿಗೆ ಝಾಡಿಸಿದ ಸೌಂದರ್ಯಾ: ವಿಡಿಯೋ ನೋಡಿ
ಕೆಟ್ಟದಾಗಿ ಬೈದ ಜಗ್ಗಮಮ್ಮಿಗೆ ಝಾಡಿಸಿದ ಸೌಂದರ್ಯಾ: ವಿಡಿಯೋ ನೋಡಿ
7 ಜನರ ಕೊಲೆ: ಆರೊಪಿಯ ಮನಸ್ಥಿತಿ ಬಗ್ಗೆ ಮನೋವೈದ್ಯರ ಶಾಕಿಂಗ್ ಮಾತು
7 ಜನರ ಕೊಲೆ: ಆರೊಪಿಯ ಮನಸ್ಥಿತಿ ಬಗ್ಗೆ ಮನೋವೈದ್ಯರ ಶಾಕಿಂಗ್ ಮಾತು
ಒಂದೇ ಕುಟುಂಬ 7 ಜನರ ಹತ್ಯೆ: ಶವಗಳನ್ನ ಸಾಗಿದ ಸಿಸಿಟಿವಿ ದೃಶ್ಯ ಇಲ್ಲಿದೆ
ಒಂದೇ ಕುಟುಂಬ 7 ಜನರ ಹತ್ಯೆ: ಶವಗಳನ್ನ ಸಾಗಿದ ಸಿಸಿಟಿವಿ ದೃಶ್ಯ ಇಲ್ಲಿದೆ
70 ಕೋಟಿ ರೂ. ವೆಚ್ಚದ ಸೋಲಾರ್ ಪ್ಲಾಂಟ್‌ಗೆ ಭಾರಿ ಯಶಸ್ಸು
70 ಕೋಟಿ ರೂ. ವೆಚ್ಚದ ಸೋಲಾರ್ ಪ್ಲಾಂಟ್‌ಗೆ ಭಾರಿ ಯಶಸ್ಸು