AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MI vs PBKS: ಡಿ ಕಾಕ್ ಶತಕ ವ್ಯರ್ಥ; ಮುಂಬೈಗೆ ಸತತ 4ನೇ ಸೋಲು

IPL 2026, MI vs PBKS: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ 24ನೇ ಪಂದ್ಯದಲ್ಲಿ, ಪಂಜಾಬ್ ಕಿಂಗ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಈ ಜಯದೊಂದಿಗೆ ಪಂಜಾಬ್ ತಮ್ಮ ಅಜೇಯ ಓಟ ಮುಂದುವರಿಸಿದೆ ಮತ್ತು ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಸತತ ಸೋಲುಗಳಿಂದ ಮುಂಬೈ 9ನೇ ಸ್ಥಾನಕ್ಕೆ ಕುಸಿದಿದೆ. 195 ರನ್‌ಗಳ ಗುರಿಯನ್ನು ಪಂಜಾಬ್ ಸುಲಭವಾಗಿ ತಲುಪಿತು.

MI vs PBKS: ಡಿ ಕಾಕ್ ಶತಕ ವ್ಯರ್ಥ; ಮುಂಬೈಗೆ ಸತತ 4ನೇ ಸೋಲು
Pbks
ಪೃಥ್ವಿಶಂಕರ
|

Updated on:Apr 16, 2026 | 11:12 PM

Share

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಐಪಿಎಲ್ 2026 (IPL 2026) ರ 24ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಹಾಗೂ ಪಂಜಾಬ್ ಕಿಂಗ್ಸ್ (MI vs PBKS) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಆತಿಥೇಯ ಮುಂಬೈ ತಂಡವನ್ನು 7 ವಿಕೆಟ್​ಗಳಿಂದ ಮಣಿಸಿದ ಪಂಜಾಬ್ ಕಿಂಗ್ಸ್ ಈ ಲೀಗ್‌ನಲ್ಲಿ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ಹಾಗೆಯೇ ತನ್ನ 4ನೇ ಗೆಲುವಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಇತ್ತ ತನ್ನ ತವರಿನಲ್ಲಿ ಸತತ ಎರಡನೇ ಪಂದ್ಯವನ್ನು ಸೋತ ಮುಂಬೈ ಆಡಿರುವ 5 ಪಂದ್ಯಗಳಲ್ಲಿ 4 ಸೋಲುಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ 195 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಪಂಜಾಬ್ ಇನ್ನು 21 ಎಸೆತಗಳು ಬಾಕಿ ಇರುವಂತೆಯೇ ಜಯದ ನಗೆಬೀರಿತು.

ಡಿ ಕಾಕ್ ಶತಕದ ಇನ್ನಿಂಗ್ಸ್

ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೇಯಸ್ ಅಯ್ಯರ್ ಮುಂಬೈ ತಂಡವನ್ನು ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಿದರು. ಆದಾಗ್ಯೂ ತಂಡಕ್ಕೆ ಕಳಪೆ ಆರಂಭ ಸಿಕ್ಕಿತು. ರಿಕಲ್ಟನ್ 2 ರನ್‌ಗಳಿಸಿ ಔಟಾದರು. ನಂತರ ಬಂದ ಸೂರ್ಯಕುಮಾರ್ ಯಾದವ್ ಗೋಲ್ಡನ್ ಡಕ್‌ಗೆ ಔಟಾದರು. ಅರ್ಶ್‌ದೀಪ್ ಸಿಂಗ್ ಈ ಎರಡೂ ವಿಕೆಟ್‌ಗಳನ್ನು ಪಡೆದರು. ಆದಾಗ್ಯೂ, ನಂತರ ಕ್ವಿಂಟನ್ ಡಿ ಕಾಕ್ ಮತ್ತು ನಮನ್ ಧೀರ್ ಪಂಜಾಬ್‌ಗೆ ಶತಕದ ಜೊತೆಯಾಟದೊಂದಿಗೆ ಉತ್ತರಿಸಿದರು.

ನಮನ್ ಧೀರ್ 31 ಎಸೆತಗಳಲ್ಲಿ 50 ರನ್ ಗಳಿಸಿದರೆ, ಕ್ವಿಂಟನ್ ಡಿ ಕಾಕ್ ಕೂಡ 60 ಎಸೆತಗಳಲ್ಲಿ 112 ರನ್ ಗಳಿಸಿ ಅದ್ಭುತ ಶತಕ ಗಳಿಸಿದರು. ಆದಾಗ್ಯೂ, ಮುಂಬೈ ಮಧ್ಯಮ ಕ್ರಮಾಂಕ ಸಂಪೂರ್ಣವಾಗಿ ವಿಫಲವಾಯಿತು. ನಾಯಕ ಪಾಂಡ್ಯ 12 ಎಸೆತಗಳಲ್ಲಿ ಕೇವಲ 14 ರನ್ ಗಳಿಸಿದರೆ, ರುದರ್ಫೋರ್ಡ್ 1 ರನ್ ಗಳಿಸಿದರು. ತಿಲಕ್ ವರ್ಮಾ 8 ರನ್ ಗಳಿಸಿ ಔಟಾದರು. ಒಂದು ಹಂತದಲ್ಲಿ, ಮುಂಬೈ 215 ತಲುಪುತ್ತದೆ ಎಂದು ತೋರುತ್ತಿತ್ತು, ಆದರೆ ಅಂತಿಮವಾಗ 195 ರನ್ ಕಲೆಹಾಕಲಷ್ಟೇ ಶಕ್ತವಾಯಿತು.

MI vs PBKS IPL 2026 Highlights: ಮುಂಬೈ ವಿರುದ್ಧ 7 ವಿಕೆಟ್​ಗಳಿಂದ ಗೆದ್ದ ಪಂಜಾಬ್​

ಮುಂಬೈ ಬೌಲಿಂಗ್ ವೈಫಲ್ಯ

196 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಪಂಜಾಬ್ ತಂಡಕ್ಕೆ ಆರಂಭಿಕರಾದ ಪ್ರಿಯಾಂಶ್ ಆರ್ಯ ಮತ್ತು ಪ್ರಭ್ಸಿಮ್ರಾನ್ ಸಿಂಗ್ ತ್ವರಿತ ಆರಂಭ ನೀಡಿದರು. ಪ್ರಿಯಾಂಶ್ ಆರ್ಯ 9 ಎಸೆತಗಳಲ್ಲಿ 15 ರನ್‌ಗಳಿಗೆ ಔಟಾದರೂ, ನಂತರ ಪ್ರಭ್ಸಿಮ್ರಾನ್ 39 ಎಸೆತಗಳಲ್ಲಿ ಅಜೇಯ 80 ರನ್ ಗಳಿಸುವ ಮೂಲಕ ಮುಂಬೈ ತಂಡವನ್ನು ಪಂದ್ಯದಿಂದ ಹೊರದಬ್ಬಿದರು. ನಾಯಕ ಶ್ರೇಯಸ್ ಅಯ್ಯರ್ ಅವರೊಂದಿಗೆ 35 ಎಸೆತಗಳಲ್ಲಿ 66 ರನ್ ಗಳಿಸಿ ಶತಕದ ಪಾಲುದಾರಿಕೆಯನ್ನು ರೂಪಿಸಿದರು. ಇತ್ತ ಮುಂಬೈ ಬೌಲರ್‌ಗಳು ಮತ್ತೊಮ್ಮೆ ಸಂಪೂರ್ಣ ವಿಫಲರಾದರು. ದೀಪಕ್ ಚಾಹರ್, ಬುಮ್ರಾ ಮತ್ತು ಪಾಂಡ್ಯ ವಿಕೆಟ್ ಪಡೆಯಲು ವಿಫಲರಾದರು. ಗಜನ್‌ಫರ್ 2 ವಿಕೆಟ್ ಪಡೆದರೆ, ಶಾರ್ದುಲ್ 1 ವಿಕೆಟ್ ಪಡೆದರು

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:03 pm, Thu, 16 April 26

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ