AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs GT: ಬೌಂಡರಿಗಳಿಂದಲೇ 60 ರನ್..! ಪವರ್​ಪ್ಲೇನಲ್ಲಿ ಅಬ್ಬರಿಸಿದ ಆರ್​ಸಿಬಿ

IPL 2026 Qualifier-1 RCB vs GT : ಐಪಿಎಲ್ 2026 ಕ್ವಾಲಿಫೈಯರ್ 1 ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ಧರ್ಮಶಾಲಾದಲ್ಲಿ ಸೆಣಸಾಡುತ್ತಿವೆ. ಟಾಸ್ ಗೆದ್ದ ಗುಜರಾತ್ ಮೊದಲು ಬೌಲಿಂಗ್ ಆಯ್ದುಕೊಂಡಿತು. ಬ್ಯಾಟಿಂಗ್ ಆರಂಭಿಸಿದ ಆರ್​ಸಿಬಿ ಪವರ್​ಪ್ಲೇನಲ್ಲಿ ಒಂದು ವಿಕೆಟ್ ಕಳೆದುಕೊಂಡು ಭರ್ಜರಿ 76 ರನ್ ಗಳಿಸಿತು. ಈ ಪೈಕಿ 60 ರನ್ ಕೇವಲ ಬೌಂಡರಿ, ಸಿಕ್ಸರ್​ಗಳಿಂದ ಬಂದಿದ್ದು, ಆರ್​ಸಿಬಿಯ ಸ್ಫೋಟಕ ಆರಂಭಕ್ಕೆ ಸಾಕ್ಷಿಯಾಗಿದೆ.

RCB vs GT: ಬೌಂಡರಿಗಳಿಂದಲೇ 60 ರನ್..! ಪವರ್​ಪ್ಲೇನಲ್ಲಿ ಅಬ್ಬರಿಸಿದ ಆರ್​ಸಿಬಿ
Rcb
ಪೃಥ್ವಿಶಂಕರ
|

Updated on:May 26, 2026 | 8:24 PM

Share

ಐಪಿಎಲ್ 2026 ಕ್ವಾಲಿಫೈಯರ್ 1 (IPL 2026 Qualifier  1) ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ (RCB vs GT) ನಡುವೆ ನಡೆಯುತ್ತಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡ ಮೊದಲು ಬೌಲಿಂಗ್ ಆಯ್ದುಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ ಮೊದಲ 6 ಓವರ್​ಗಳಲ್ಲಿ ಅಂದರೆ ಪವರ್​ಪ್ಲೇನಲ್ಲಿ ಒಂದು ವಿಕೆಟ್ ಕಳೆದುಕೊಂಡು 76 ರನ್ ಕಲೆಹಾಕಿದೆ. ಈ 76 ರನ್​ಗಳಲ್ಲಿ ಆರ್​ಸಿಬಿ ಕೇವಲ ಬೌಂಡರಿ ಹಾಗೂ ಸಿಕ್ಸರ್​ಗಳಿಂದಲೇ 60 ರನ್ ಕಲೆಹಾಕಿತು.

19  ರನ್​ಗೆ ಅಯ್ಯರ್ ಔಟ್

ವಾಸ್ತವವಾಗಿ ಇಂದಿನ ಪಂದ್ಯದಲ್ಲಿ ಫಿಲ್ ಸಾಲ್ಟ್ ಆಡುತ್ತಾರೆ ಎಂಬ ನಿರೀಕ್ಷೆ ಇತ್ತು. ಆದರೆ ಸಾಲ್ಟ್ ಚೇತರಿಸಿಕೊಂಡಿದ್ದರೂ ವೈದ್ಯಕೀಯ ವಿಭಾಗದಿಂದ ಗ್ರೀನ್ ಸಿಗ್ನಲ್ ಸಿಗದ ಕಾರಣ ಸಾಲ್ಟ್ ಈ ಪಂದ್ಯದಲ್ಲಿ ಆಡಲು ಸಾಧ್ಯವಾಗಲಿಲ್ಲ. ಹೀಗಾಗಿ ಕಳೆದ ಪಂದ್ಯದಂತೆ ಈ ಪಂದ್ಯದಲ್ಲೂ ಕೊಹ್ಲಿ ಹಾಗೂ ವೆಂಕಟೇಶ್ ಅಯ್ಯರ್ ಬ್ಯಾಟಿಂಗ್‌ ಆರಂಭಿಸಿದರು. ಗುಜರಾತ್ ಪರ ಬೌಲಿಂಗ್ ಆರಂಭಿಸಿದ ಸಿರಾಜ್ ಅವರ ಮೊದಲ ಓವರ್​ನಲ್ಲೇ ಅಯ್ಯರ್ 3 ಬೌಂಡರಿಗಳನ್ನು ಬಾರಿಸಿದರು. ರಬಾಡ ಎಸೆತದ ಎರಡನೇ ಓವರ್​ನಲ್ಲೂ ಅಯ್ಯರ್ ಒಂದು ಸಿಕ್ಸರ್ ಬಾರಿಸಿದರು. ಆದರೆ ಓವರ್​ನ ಕೊನೆಯ ಎಸೆತದಲ್ಲಿ ಕ್ಯಾಚಿತ್ತು ಔಟಾದರು.

ಕೊಹ್ಲಿ- ಪಡಿಕ್ಕಲ್ ಜೊತೆಯಾಟ

ಹೀಗಾಗಿ ಅಯ್ಯರ್ 7 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 19 ರನ್ ಬಾರಿಸಿ ಔಟಾದರು. ಆ ಬಳಿಕ ಜೊತೆಯಾದ ವಿರಾಟ್ ಕೊಹ್ಲಿ ಹಾಗೂ ದೇವದತ್ ಪಡಿಕ್ಕಲ್ ಉತ್ತಮ ಜೊತೆಯಾಟ ಕಟ್ಟಿದರು. ಇವರಿಬ್ಬರು ಪವರ್​ಪ್ಲೇನಲ್ಲಿ ತಂಡವನ್ನು 70ರನ್​ಗಳ ಗಡಿ ದಾಟಿಸಿದರು. ಸಿರಾಜ್ ಬೌಲ್ ಮಾಡಿದ 4ನೇ ಓವರ್​ನಲ್ಲಿ ಪಡಿಕ್ಕಲ್ 4 ಬೌಂಡರಿಗಳನ್ನು ಬಾರಿಸಿದರು. ರಬಾಡ ಬೌಲ್ ಮಾಡಿದ ಪವರ್​ಪ್ಲೇನ ಕೊನೆಯ ಓವರ್​ನಲ್ಲಿ ವಿರಾಟ್ ಕೊಹ್ಲಿ 2 ಬೌಂಡರಿ ಹಾಗೂ 1 ಸಿಕ್ಸರ್ ಕೂಡ ಬಾರಿಸಿದರು. ಈ ಮೂಲಕ ಇವರಿಬ್ಬರು ಅರ್ಧಶತಕದ ಜೊತೆಯಟವನ್ನು ಕಟ್ಟಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:06 pm, Tue, 26 May 26

Follow Us
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ