AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs GT Qualifier-1: ಟಾಸ್ ಗೆದ್ದ ಗುಜರಾತ್; ಉಭಯ ತಂಡಗಳಲ್ಲೂ ಬದಲಾವಣೆ

RCB vs GT IPL 2026 Qualifier 1: ಐಪಿಎಲ್ 2026 ಕ್ವಾಲಿಫೈಯರ್ 1 ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ಧರ್ಮಶಾಲಾದಲ್ಲಿ ಸೆಣಸಲಿವೆ. ಫೈನಲ್‌ಗೆ ನೇರ ಪ್ರವೇಶಕ್ಕಾಗಿ ಈ ಮಹತ್ವದ ಕಾದಾಟದಲ್ಲಿ, ಗುಜರಾತ್ ಟೈಟಾನ್ಸ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡಿದೆ. ಆರ್​ಸಿಬಿ ಮೊದಲು ಬ್ಯಾಟಿಂಗ್ ಮಾಡಲಿದ್ದು, ಉಭಯ ತಂಡಗಳ ಪ್ಲೇಯಿಂಗ್ 11ರಲ್ಲಿ ಒಂದೊಂದು ಬದಲಾವಣೆ ಮಾಡಲಾಗಿದೆ. ಫೈನಲ್‌ಗೆ ಅರ್ಹತೆ ಪಡೆಯಲು ಈ ಪಂದ್ಯ ನಿರ್ಣಾಯಕವಾಗಿದೆ.

RCB vs GT Qualifier-1: ಟಾಸ್ ಗೆದ್ದ ಗುಜರಾತ್; ಉಭಯ ತಂಡಗಳಲ್ಲೂ ಬದಲಾವಣೆ
Rcb Vs Gt Toss
ಪೃಥ್ವಿಶಂಕರ
|

Updated on:May 26, 2026 | 7:21 PM

Share

ಐಪಿಎಲ್ 2026 ಕ್ವಾಲಿಫೈಯರ್ 1 (IPL 2026 Qualifier 1) ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ (RCB vs GT) ನಡುವೆ ನಡೆಯುತ್ತಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆಯಲಿರುವ ಕ್ವಾಲಿಫೈಯರ್ 1, ಐಪಿಎಲ್ 2026 ಫೈನಲ್‌ಗೆ ಅರ್ಹತೆ ಪಡೆಯಲು ನಿರ್ಣಾಯಕ ಪಂದ್ಯವಾಗಿದೆ. ವಿಜೇತ ತಂಡವು ಫೈನಲ್‌ಗೆ ನೇರವಾಗಿ ಅರ್ಹತೆ ಪಡೆದರೆ, ಸೋತ ತಂಡ ಕ್ವಾಲಿಫೈಯರ್ 2 ಆಡಬೇಕಾಗುತ್ತದೆ. ಇನ್ನು ಈ ಪಂದ್ಯದಲ್ಲಿ ಟಾಸ್ ಕೂಡ ಮುಗಿದಿದ್ದು, ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ದುಕೊಂಡಿದೆ.

ಟಾಸ್ ಗೆದ್ದ ಗುಜರಾತ್

ಮೇಲೆ ಹೇಳಿದಂತೆ ಕ್ವಾಲಿಫೈಯರ್ 1 ರಲ್ಲಿ ಗುಜರಾತ್ ಟೈಟಾನ್ಸ್ ನಾಯಕ ಶುಭ್​ಮನ್ ಗಿಲ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಆರ್​ಸಿಬಿ ಮೊದಲು ಬ್ಯಾಟಿಂಗ್‌ ಮಾಡಲಿದೆ. ಟಾಸ್ ಜೊತೆಗೆ ಎರಡೂ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದಿದ್ದು, ಉಭಯ ತಂಡಗಳಲ್ಲೂ ಒಂದೊಂದು ಬದಲಾವಣೆಗಳನ್ನು ಮಾಡಲಾಗಿದೆ. ಆರ್​ಸಿಬಿ ತಂಡದಲ್ಲಿ ರೋಮಾರಿಯೋ ಶೆಫರ್ಡ್​ ಬದಲಿಗೆ ಜೆಕೋಬ್ ಡಫಿಗೆ ತಂಡದಲ್ಲಿ ಅವಕಾಶ ನೀಡಲಾಗಿದೆ.

ಉಭಯ ತಂಡಗಳ ಪ್ಲೇಯಿಂಗ್ 11

ರಾಯಲ್ ಚಾಲೆಂಜರ್ಸ್ ಬೆಂಗಳೂರು : ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ವೆಂಕಟೇಶ್ ಅಯ್ಯರ್, ಕೃನಾಲ್ ಪಾಂಡ್ಯ, ಟಿಮ್ ಡೇವಿಡ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಜಾಕೋಬ್ ಡಫ್ಫಿ ಮತ್ತು ರಸಿಖ್ ಸಲಾಂ.

ಇಂಪ್ಯಾಕ್ಟ್ ಪ್ಲೇಯರ್ಸ್​: ರೊಮಾರಿಯೋ ಶೆಫರ್ಡ್, ಸುಯಾಶ್ ಶರ್ಮಾ, ಕನಿಷ್ಕ್ ಚೌಹಾನ್, ಅಭಿನಂದನ್ ಸಿಂಗ್ ಮತ್ತು ಜೋರ್ಡಾನ್ ಕಾಕ್ಸ್.

ಗುಜರಾತ್ ಟೈಟಾನ್ಸ್: ಶುಭಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ನಿಶಾಂತ್ ಸಿಂಧು, ಜೋಸ್ ಬಟ್ಲರ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಜೇಸನ್ ಹೋಲ್ಡರ್, ರಶೀದ್ ಖಾನ್, ಕುಲ್ವಂತ್ ಖೆಜ್ರೋಲಿಯಾ (ಅರ್ಷದ್ ಖಾನ್ ಬದಲಾಗಿ), ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

ಇಂಪ್ಯಾಕ್ಟ್ ಪ್ಲೇಯರ್ಸ್​: ರಾಹುಲ್ ತೆವಾಟಿಯಾ, ಗ್ಲೆನ್ ಫಿಲಿಪ್ಸ್, ಅನುಜ್ ರಾವತ್, ಕುಮಾರ್ ಕುಶಾಗ್ರಾ ಮತ್ತು ಸಾಯಿ ಕಿಶೋರ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:20 pm, Tue, 26 May 26

Follow Us
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!