AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MI vs RR: ಮುಂಬೈ ಮಣಿಸಿ 4ನೇ ತಂಡವಾಗಿ ಪ್ಲೇಆಫ್‌ಗೇರಿದ ರಾಜಸ್ಥಾನ್

MI vs RR IPL 2026 Match 69: ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಐಪಿಎಲ್ 2026 ರ 69ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿ ಪ್ಲೇಆಫ್‌ಗೆ ಅರ್ಹತೆ ಗಳಿಸಿತು. ರಾಜಸ್ಥಾನ್‌ಗೆ ಇದು ಅತ್ಯಂತ ನಿರ್ಣಾಯಕ ಪಂದ್ಯವಾಗಿತ್ತು. ಈ ಗೆಲುವಿನಿಂದಾಗಿ ರಾಜಸ್ಥಾನ್ ನಾಲ್ಕನೇ ತಂಡವಾಗಿ ಪ್ಲೇಆಫ್ ಪ್ರವೇಶಿಸಿತು. ಮುಂಬೈ ಇಂಡಿಯನ್ಸ್ ಸೋಲಪ್ಪಿಕೊಂಡಿತು, ಹಾಗೂ ಪಂಜಾಬ್ ಕಿಂಗ್ಸ್ ಮತ್ತು ಕೆಕೆಆರ್ ತಂಡಗಳ ಪ್ಲೇಆಫ್ ಕನಸು ಕೊನೆಗೊಂಡಿತು.

MI vs RR: ಮುಂಬೈ ಮಣಿಸಿ 4ನೇ ತಂಡವಾಗಿ ಪ್ಲೇಆಫ್‌ಗೇರಿದ ರಾಜಸ್ಥಾನ್
Rajasthan Royals
ಪೃಥ್ವಿಶಂಕರ
|

Updated on:May 24, 2026 | 8:07 PM

Share

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಐಪಿಎಲ್ 2026 (IPL 2026) ರ 69ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ (MI vs RR) ತಂಡಗಳು ಮುಖಾಮುಖಿಯಾಗಿದ್ದವು. ಇದು ಲೀಗ್‌ ಹಂತದಲ್ಲಿ ಎರಡು ತಂಡಗಳ ಕೊನೆಯ ಪಂದ್ಯವಾಗಿತ್ತು. ಪ್ಲೇಆಫ್ ದೃಷ್ಟಿಯಿಂದ ಈ ಪಂದ್ಯ ರಾಜಸ್ಥಾನ್​ಗೆ ಬಹಳ ಮುಖ್ಯವಾಗಿತ್ತು. ಇಂದಿನ ಪಂದ್ಯದಲ್ಲಿ ಗೆದ್ದರಷ್ಟೇ ರಾಜಸ್ಥಾನ್ ಪ್ಲೇಆಫ್​ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳುತ್ತಿತ್ತು. ಅದರಂತೆ ಗೆಲ್ಲಲೇಬೇಕಾದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿದ ರಾಜಸ್ಥಾನ್ ರಾಯಲ್ಸ್ ತಂಡ 4ನೇ ತಂಡವಾಗಿ ಪ್ಲೇಆಫ್‌ಗೆ ಅರ್ಹತೆ ಪಡೆದುಕೊಂಡಿದೆ. ರಾಜಸ್ಥಾನ್ ಗೆಲುವಿನಿಂದ ಪಂಜಾಬ್ ಕಿಂಗ್ಸ್ ಹಾಗೂ ಕೆಕೆಆರ್ ತಂಡಗಳ ಪ್ಲೇಆಫ್‌ಗೇರುವ ಕನಸು ಕಮರಿ ಹೋಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ 205 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಮುಂಬೈ 175 ರನ್​ಗಳಿಸಲಷ್ಟೇ ಶಕ್ತವಾಗಿ 30 ರನ್​ಗಳಿಂದ ಸೋಲೊಪ್ಪಿಕೊಂಡಿತು.

ರಾಜಸ್ಥಾನ್​ಗೆ ಆರಂಭಿಕ ಆಘಾತ

ಈ ಪಂದ್ಯದಲ್ಲಿ, ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ 20 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 205 ರನ್ ಗಳಿಸಿತು. ಆದಾಗ್ಯೂ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕರಾದ ಯಶಸ್ವಿ ಜೈಸ್ವಾಲ್ 27 ರನ್‌ಗಳಿಗೆ ಮತ್ತು ವೈಭವ್ ಸೂರ್ಯವಂಶಿ 4 ರನ್‌ಗಳಿಗೆ ಔಟಾದರು. 38 ರನ್‌ಗಳ ನಂತರ ಧ್ರುವ್ ಜುರೆಲ್ ಕೂಡ ವಿಕೆಟ್ ಕಳೆದುಕೊಂಡರು. ನಾಯಕ ರಿಯಾನ್ ಪರಾಗ್ ಕೂಡ 14 ರನ್‌ಗಳಿಗೆ ಸುಸ್ತಾದರು. ಹೀಗಾಗಿ ರಾಜಸ್ಥಾನ ತಂಡ ಪ್ರಮುಖ 5 ವಿಕೆಟ್‌ಗಳನ್ನು ಕಳೆದುಕೊಂಡು 119 ರನ್‌ ಕಲೆಹಾಕಿತ್ತು.

ಆರ್ಚರ್ ಸ್ಫೋಟಕ ಬ್ಯಾಟಿಂಗ್

ಇಲ್ಲಿಂದ ತಂಡದ ಇನ್ನಿಂಗ್ಸ್ ನಿಭಾಯಿಸಿದ ಜೋಫ್ರಾ ಆರ್ಚರ್ ತಂಡವನ್ನು 200 ರನ್​ಗಳ ಗಡಿಗೆ ತಂದರು. ಜೋಫ್ರಾ ಆರ್ಚರ್ ಕೇವಲ 15 ಎಸೆತಗಳಲ್ಲಿ 213.33 ಸ್ಟ್ರೈಕ್ ರೇಟ್‌ನಲ್ಲಿ 32 ರನ್ ಗಳಿಸಿದರು. ಇದರಲ್ಲಿ 1 ಬೌಂಡರಿ ಮತ್ತು 3 ಸಿಕ್ಸರ್‌ಗಳು ಸೇರಿದ್ದವು. ಆರ್ಚರ್ ಜೊತೆಗೆ ಜಡೇಜಾ ಹಾಗೂ ಬರ್ಗರ್ ಕೂಡ ಉಪಯುಕ್ತ ಇನ್ನಿಂಗ್ಸ್ ಆಡುವ ಮೂಲಕ ತಂಡವನ್ನು 205 ರನ್​ಗಳಿಗೆ ಕೊಂಡೊಯ್ದರು. ಮುಂಬೈ ಇಂಡಿಯನ್ಸ್ ಪರ ದೀಪಕ್ ಚಾಹರ್ ಮತ್ತು ಶಾರ್ದೂಲ್ ಠಾಕೂರ್ ತಲಾ 2 ವಿಕೆಟ್‌ಗಳನ್ನು ಪಡೆದರು.

MI vs RR IPL 2026 Highlights: ಕೊನೆಯ ಲೀಗ್ ಪಂದ್ಯದಲ್ಲೂ ಸೋತ ಮುಂಬೈ

ಸೂರ್ಯಕುಮಾರ್ ಏಕಾಂಗಿ ಹೋರಾಟ

206 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಮುಂಬೈ ಇಂಡಿಯನ್ಸ್​ಗೂ ಉತ್ತಮ ಆರಂಭ ಸಿಗಲಿಲ್ಲ. ಜೋಫ್ರಾ ಆರ್ಚರ್ ಮೊದಲ ಓವರ್‌ನಲ್ಲೇ ರೋಹಿತ್ ಶರ್ಮಾ ಅವರನ್ನು ಶೂನ್ಯಕ್ಕೆ ಔಟ್ ಮಾಡಿದರು. ನಂತರ ನಮನ್ ಧೀರ್ ಕೂಡ ಆರ್ಚರ್​ಗೆ ಬಲಿಯಾದರು. ರಯಾನ್ ರಿಕಲ್ಟನ್ 12 ರನ್‌ ಬಾರಿಸಿ ಬರ್ಗರ್​ಗೆ ವಿಕೆಟ್ ಒಪ್ಪಿಸಿದರು. ಆದಾಗ್ಯೂ ಒಂದು ತುದಿಯಲ್ಲಿ ತಂಡದ ಇನ್ನಿಂಗ್ಸ್ ನಿಭಾಯಿಸಿದ ಸೂರ್ಯಕುಮಾರ್ ಯಾದವ್ 60 ರನ್‌ಗಳ ಹೋರಾಟದ ಇನ್ನಿಂಗ್ಸ್ ಆಡಿದರಾದರೂ ತಂಡವನ್ನು ಗೆಲುವಿನ ದಡ ಮುಟ್ಟಿಸುವಲ್ಲಿ ವಿಫಲರಾದರು. ಸೂರ್ಯಕುಮಾರ್ ಹೊರತುಪಡಿಸಿ ವಿಲ್ ಜ್ಯಾಕ್ಸ್ 33 ಮತ್ತು ಹಾರ್ದಿಕ್ ಪಾಂಡ್ಯ 34 ರನ್​ಗಳ ಇನ್ನಿಂಗ್ಸ್ ಆಡಿದರು.

ರಾಜಸ್ಥಾನ್ ಪರ ಆಲ್‌ರೌಂಡರ್ ಪ್ರದರ್ಶನ ನೀಡಿದ ಜೋಫ್ರಾ ಆರ್ಚರ್ ಬೌಲಿಂಗ್‌ನಲ್ಲಿ 3 ವಿಕೆಟ್ ಪಡೆದರೆ, ಬ್ರಿಜೇಶ್ ಶರ್ಮಾ ಕೂಡ ಎರಡು ವಿಕೆಟ್ ಪಡೆಯುವ ಮೂಲಕ ತಂಡದ ಗೆಲುವಿಗೆ ಗಣನೀಯ ಕೊಡುಗೆ ನೀಡಿದರು. ಇವಲ್ಲದೆ, ಯುವ ಸ್ಪಿನ್ನರ್ ಯಶ್ ರಾಜ್ ಪುಂಜಾ ಕೂಡ ಎರಡು ವಿಕೆಟ್ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:48 pm, Sun, 24 May 26

Follow Us
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ
ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ
ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಹೈಡ್ರಾಮಾ
ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಹೈಡ್ರಾಮಾ
ರಾತ್ರೋರಾತ್ರಿ ಮೆಟ್ರೋ ಕ್ರೇನ್ ಏರಿ ಕೆಳಗಿಳಿಯಲಾಗದೆ ಒದ್ದಾಡಿದ ವ್ಯಕ್ತಿ
ರಾತ್ರೋರಾತ್ರಿ ಮೆಟ್ರೋ ಕ್ರೇನ್ ಏರಿ ಕೆಳಗಿಳಿಯಲಾಗದೆ ಒದ್ದಾಡಿದ ವ್ಯಕ್ತಿ
ಪಂಜಾಬ್‌ನಲ್ಲಿ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ
ಪಂಜಾಬ್‌ನಲ್ಲಿ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ