AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಭವ್ ಸೂರ್ಯವಂಶಿ ಆರ್ಭಟಕ್ಕೆ ತತ್ತರಿಸಿದ ಲಕ್ನೋ ಸೂಪರ್ ಜೈಂಟ್ಸ್

IPL Rajasthan Royals vs Lucknow Super Giants: ರಾಜಸ್ಥಾನ್ ರಾಯಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಈವರೆಗೆ 8 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ರಾಜಸ್ಥಾನ್ ರಾಯಲ್ಸ್ 6 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಲಕ್ನೋ ಸೂಪರ್ ಜೈಂಟ್ಸ್ 2 ಬಾರಿ ಮಾತ್ರ ಗೆಲುವು ದಾಖಲಿಸಿದೆ. 

ವೈಭವ್ ಸೂರ್ಯವಂಶಿ ಆರ್ಭಟಕ್ಕೆ ತತ್ತರಿಸಿದ ಲಕ್ನೋ ಸೂಪರ್ ಜೈಂಟ್ಸ್
Vaibhav Sooryavanshi
ಝಾಹಿರ್ ಯೂಸುಫ್
|

Updated on: May 19, 2026 | 11:32 PM

Share

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 64ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿ ಯುವ ದಾಂಡಿಗ ವೈಭವ್ ಸೂರ್ಯವಂಶಿ. ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ಪರ ಮಿಚೆಲ್ ಮಾರ್ಚ್ (96) ಅಬ್ಬರಿಸಿದರು. ಈ ಅಬ್ಬರದೊಂದಿಗೆ ಲಕ್ನೋ ಸೂಪರ್ ಜೈಂಟ್ಸ್ 20 ಓವರ್​ಗಳಲ್ಲಿ ಬರೋಬ್ಬರಿ 220 ರನ್ ಕಲೆಹಾಕಿತು.

ಈ ಕಠಿಣ ಗುರಿ ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ವೈಭವ್ ಸೂರ್ಯವಂಶಿ ಹಾಗೂ ಯಶಸ್ವಿ ಜೈಸ್ವಾಲ್ ಸ್ಫೋಟಕ ಆರಂಭ ಒದಗಿಸಿದ್ದರು. ಇಬ್ಬರು ಯುವ ದಾಂಡಿಗರ ಅಬ್ಬರದೊಂದಿಗೆ ಆರ್​ಆರ್ ಪಡೆ ಪವರ್​ಪ್ಲೇನಲ್ಲಿ 71 ರನ್ ಕಲೆಹಾಕಿತು.

ಈ ಹಂತದಲ್ಲಿ ಯಶಸ್ವಿ ಜೈಸ್ವಾಲ್ (43) ಔಟಾದರು. ಜೈಸ್ವಾಲ್ ನಿರ್ಗಮನದ ಬೆನ್ನಲ್ಲೇ ವೈಭವ್ ಸೂರ್ಯವಂಶಿ ಆರ್ಭಟ ಶುರು ಮಾಡಿದರು. ಯುವ ದಾಂಡಿಗನ ಈ ಆರ್ಭಟಕ್ಕೆ ಲಕ್ನೋ ಸೂಪರ್ ಜೈಂಟ್ಸ್ ಬೌಲರ್​ಗಳ ಲಯ ತಪ್ಪಿದರು. ಇದರ ಸಂಪೂರ್ಣ ಲಾಭ ಪಡೆದ ವೈಭವ್ ಮೈದಾನದ ಮೂಲೆ ಮೂಲೆಗೆ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು.

ಈ ಮೂಲಕ ವೈಭವ್ ಕೇವಲ 23 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಸ್ಫೋಟಕ ಹಾಫ್ ಸೆಂಚುರಿ ಬಳಿಕ ಕೂಡ ಸಿಡಿಲಬ್ಬರ ಮುಂದುವರೆಸಿದ ವೈಭವ್ ಲಕ್ನೋ ಸೂಪರ್ ಜೈಂಟ್ಸ್ ಬೌಲರ್​ಗಳನ್ನು ಮನಸೋ ಇಚ್ಚೆ ದಂಡಿಸಿದರು. ಪರಿಣಾಮ 38 ಎಸೆತಗಳಲ್ಲಿ 10 ಭರ್ಜರಿ ಸಿಕ್ಸರ್ ಹಾಗೂ 7 ಫೋರ್​ಗಳು ಮೂಡಿಬಂದವು.

ಈ ಹಂತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿ ಕ್ಯಾಚ್ ನೀಡುವ ಮೂಲಕ  ಕೇವಲ 7 ರನ್​ಗಳಿಂದ ವೈಭವ್ ಸೂರ್ಯವಂಶಿ (93) ಶತಕ ವಂಚಿತರಾದರು. ಆದರೆ ಅಷ್ಟರಲ್ಲಾಗಲೇ ರಾಜಸ್ಥಾನ್ ರಾಯಲ್ಸ್ ತಂಡದ ಸ್ಕೋರ್ 14 ಓವರ್​ಗಳಲ್ಲಿ 180 ಕ್ಕೆ ಬಂದು ನಿಂತಿತ್ತು.

ವೈಭವ್ ಸೂರ್ಯವಂಶಿ ಔಟಾದ ಬಳಿಕ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ಧ್ರುವ್ ಜುರೆಲ್ 38 ಎಸೆತಗಳಲ್ಲಿ ಅಜೇಯ 53 ರನ್ ಬಾರಿಸಿದರು. ಈ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡವು 19.1 ಓವರ್​ಗಳಲ್ಲಿ 225 ರನ್ ಬಾರಿಸಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಈ ಗೆಲುವಿನೊಂದಿಗೆ ರಾಜಸ್ಥಾನ್ ರಾಯಲ್ಸ್ ತಂಡದ ಪ್ಲೇಆಫ್ ಹಾದಿ ಮತ್ತಷ್ಟು ಸುಲಭವಾಗಿದೆ. ಅಂದರೆ ಮುಂದಿನ ಪಂದ್ಯದಲ್ಲಿ ಆರ್​ಆರ್​ ಪಡೆ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿದರೆ 16 ಅಂಕಗಳೊಂದಿಗೆ ನೇರವಾಗಿ ಪ್ಲೇಆಫ್​ಗೇರಲಿದೆ.

ರಾಜಸ್ಥಾನ್ ರಾಯಲ್ಸ್ (ಪ್ಲೇಯಿಂಗ್ XI): ಯಶಸ್ವಿ ಜೈಸ್ವಾಲ್ (ನಾಯಕ), ಲುವಾನ್-ಡ್ರೆ ಪ್ರಿಟೋರಿಯಸ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಡೊನೊವನ್ ಫೆರೇರಾ, ಶುಭಂ ದುಬೆ, ದಸುನ್ ಶಾನಕ, ಜೋಫ್ರಾ ಆರ್ಚರ್, ಸುಶಾಂತ್ ಮಿಶ್ರಾ, ಸಂದೀಪ್ ಶರ್ಮಾ, ಬ್ರಿಜೇಶ್ ಶರ್ಮಾ, ಯಶ್ ರಾಜ್ ಪುಂಜಾ.

ಇದನ್ನೂ ಓದಿ: “ದೇಹ ದಣಿದರೂ ನಾವು ಬಿಡಲ್ಲ”- ಧೋನಿ ಬಗ್ಗೆ ರೈನಾ ಮಾತು

ಲಕ್ನೋ ಸೂಪರ್ ಜೈಂಟ್ಸ್ (ಪ್ಲೇಯಿಂಗ್ XI): ಮಿಚೆಲ್ ಮಾರ್ಷ್, ಜೋಶ್ ಇಂಗ್ಲಿಸ್, ನಿಕೋಲಸ್ ಪೂರನ್, ರಿಷಭ್ ಪಂತ್ (ನಾಯಕ), ಆಯುಷ್ ಬದೋನಿ, ಅಬ್ದುಲ್ ಸಮದ್, ಶಹಬಾಝ್ ಅಹ್ಮದ್, ಮೊಹ್ಸಿನ್ ಖಾನ್, ಮಯಾಂಕ್ ಯಾದವ್, ಆಕಾಶ್ ಮಹಾರಾಜ್ ಸಿಂಗ್, ಪ್ರಿನ್ಸ್ ಯಾದವ್.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ