AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RR vs MI: ಯುವ ದಾಂಡಿಗರ ಆರ್ಭಟಕ್ಕೆ ತತ್ತರಿಸಿದ ಮುಂಬೈ ಇಂಡಿಯನ್ಸ್

IPL 2026 RR vs MI: ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್​ ತಂಡಗಳು ಈವರೆಗೆ 31 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಮುಂಬೈ ಇಂಡಿಯನ್ಸ್ ತಂಡವು 16 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದರೆ, ರಾಜಸ್ಥಾನ್ ರಾಯಲ್ಸ್ ತಂಡವು 15 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನೊಂದು ಪಂದ್ಯವು ಕಾರಣಾಂತರಗಳಿಂದ ರದ್ದಾಗಿತ್ತು.

RR vs MI: ಯುವ ದಾಂಡಿಗರ ಆರ್ಭಟಕ್ಕೆ ತತ್ತರಿಸಿದ ಮುಂಬೈ ಇಂಡಿಯನ್ಸ್
Vaibhav Suryavanshi - Yashasvi Jaiswal
ಝಾಹಿರ್ ಯೂಸುಫ್
|

Updated on:Apr 13, 2026 | 10:14 AM

Share

IPL 2026: ಗುವಾಹಟಿಯ ಬರ್ಸಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್​ನ 13ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಜಯಭೇರಿ ಬಾರಿಸಿದೆ. ಮಳೆಯ ಕಾರಣ 11 ಓವರ್​ಗಳಿಗೆ ನಿಗದಿತವಾಗಿದ್ದ ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಯುವ ದಾಂಡಿಗರಾದ ವೈಭವ್ ಸೂರ್ಯವಂಶಿ ಹಾಗೂ ಯಶಸ್ವಿ ಜೈಸ್ವಾಲ್ ಸಿಡಿಲಬ್ಬರದ ಆರಂಭ ಒದಗಿಸಿದ್ದರು.

ದೀಪಕ್ ಚಹರ್ ಎಸೆದ ಮೊದಲ ಪಂದ್ಯದಲ್ಲಿ ಬರೋಬ್ಬರಿ 22 ರನ್ ಚಚ್ಚುವ ಮೂಲಕ ಯಶಸ್ವಿ ಜೈಸ್ವಾಲ್ ಸ್ಫೋಟಕ ಆರಂಭ ಒದಗಿಸಿದರೆ, ಮತ್ತೊಂದೆಡೆ ಬುಮ್ರಾ ಎಸೆದ 2ನೇ ಓವರ್​ನಲ್ಲಿ ವೈಭವ್ ಸೂರ್ಯವಂಶಿ 2 ಭರ್ಜರಿ ಸಿಕ್ಸ್ ಸಿಡಿಸಿದರು. ಇನ್ನು ಟ್ರೆಂಟ್ ಬೌಲ್ಟ್ ಎಸೆದ ಮೂರನೇ ಓವರ್​ನಲ್ಲಿ ಈ ಜೋಡಿ ಕಲೆಹಾಕಿದ್ದು ಬರೋಬ್ಬರಿ 22 ರನ್​ಗಳು. ಈ ಮೂಲಕ ಕೇವಲ 3 ಓವರ್​ಗಳಲ್ಲೇ ತಂಡದ ಸ್ಕೋರ್​ ಅನ್ನು 50ರ ಗಡಿದಾಟಿಸಿದರು.

ಇದಾದ ಬಳಿಕ ಬಿರುಸಿನ ಬ್ಯಾಟಿಂಗ್ ಮುಂದುವರೆಸಿದ ವೈಭವ್ ಸೂರ್ಯವಂಶಿ 14 ಎಸೆತಗಳಲ್ಲಿ 39 ರನ್ ಬಾರಿಸಿ ಔಟಾದರು. ಇದರ ಬೆನ್ನಲ್ಲೇ ಧ್ರುವ್ ಜುರೆಲ್ (2) ಕೂಡ ವಿಕೆಟ್ ಒಪ್ಪಿಸಿದರು. ಆ ಬಳಿಕ ಬಂದ ರಿಯಾನ್ ಪರಾಗ್ 20 ರನ್​ಗಳ ಕೊಡುಗೆ ನೀಡಿದರು.

ಮತ್ತೊಂದೆಡೆ ಆಕ್ರಮಣಕಾರಿ ಬ್ಯಾಟಿಂಗ್ ಮುಂದುವರೆಸಿದ ಯಶಸ್ವಿ ಜೈಸ್ವಾಲ್ ಕೇವಲ 32 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 10 ಫೋರ್​ಗಳೊಂದಿಗೆ ಅಜೇಯ 77 ರನ್ ಬಾರಿಸಿದರು. ಈ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡವು ನಿಗದಿತ 11 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 150 ರನ್​ ಕಲೆಹಾಕಿತು.

151 ರನ್​ಗಳ ಗುರಿ:

ಈ ಕಠಿಣ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು ಜೋಫ್ರಾ ಆರ್ಚರ್ ಎಸೆದ ಮೊದಲ ಓವರ್​ನಲ್ಲೇ ರಯಾನ್ ರಿಕೆಲ್ಟನ್ (8) ವಿಕೆಟ್ ಕಳೆದುಕೊಂಡಿತು. ಇದರ ಬೆನ್ನಲ್ಲೇ ಒಂದು ಸಿಕ್ಸ್ ಬಾರಿಸಿ ಸೂರ್ಯಕುಮಾರ್ ಯಾದವ್ (6) ನಾಂಡ್ರೆ ಬರ್ಗರ್​ಗೆ ವಿಕೆಟ್ ಒಪ್ಪಿಸಿದರು.

ಇನ್ನು ರೋಹಿತ್ ಶರ್ಮಾ ಇನಿಂಗ್ಸ್ ಕೇವಲ 5 ರನ್​ಗಳಿಗೆ ಸೀಮಿತವಾಯಿತು. ಇದರ ಬೆನ್ನಲ್ಲೇ ನಾಯಕ ಹಾರ್ದಿಕ್ ಪಾಂಡ್ಯ (9) ಹಾಗೂ ತಿಲಕ್ ವರ್ಮಾ (14) ಕೂಡ ಕ್ಯಾಚಿತ್ತು ನಿರ್ಗಮಿಸಿದರು. ಪರಿಣಾಮ ಮುಂಬೈ ಇಂಡಿಯನ್ಸ್ ತಂಡಕ್ಕೆ ಅಂತಿಮ 6 ಓವರ್​ಗಳಲ್ಲಿ ಗೆಲ್ಲಲು ಬರೋಬ್ಬರಿ 105 ರನ್​ಗಳು ಬೇಕಿದ್ದವು.

ಈ ಹಂತದಲ್ಲಿ ಜೊತೆಗೂಡಿದ ಶೆರ್ಫೇನ್ ರದರ್​ಫೋರ್ಡ್ ಹಾಗೂ ನಮನ್​ಧೀರ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಅಲ್ಲದೆ 17 ಎಸೆತಗಳಲ್ಲಿ 47 ರನ್ ಚಚ್ಚಿದರು. ಈ ಹಂತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿ ರದರ್​ಫೋರ್ಡ್​ (25) ಔಟಾದರು. ಅದರಂತೆ ಕೊನೆಯ 18 ಎಸೆತಗಳಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ 57 ರನ್​ಗಳಿಸಬೇಕಿತ್ತು.

ಅಂತಿಮವಾಗಿ ಮುಂಬೈ ಇಂಡಿಯನ್ಸ್​ ತಂಡವು ನಿಗದಿತ 11 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 123 ರನ್​ ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡವು 27 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ರಾಜಸ್ಥಾನ್ ರಾಯಲ್ಸ್ (ಪ್ಲೇಯಿಂಗ್ XI): ವೈಭವ್ ಸೂರ್ಯವಂಶಿ, ಯಶಸ್ವಿ ಜೈಸ್ವಾಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರಿಯಾನ್ ಪರಾಗ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ಡೊನೊವನ್ ಫೆರೇರಾ, ರವೀಂದ್ರ ಜಡೇಜಾ, ಜೋಫ್ರಾ ಆರ್ಚರ್, ನಾಂಡ್ರೆ ಬರ್ಗರ್, ತುಷಾರ್ ದೇಶಪಾಂಡೆ, ಸಂದೀಪ್ ಶರ್ಮಾ.

ಇದನ್ನೂ ಓದಿ: IPL 2026: ಮೂರು ಪಂದ್ಯಗಳಿಗೆ ಆಸ್ಟ್ರೆಲಿಯನ್ ವೇಗಿ ಅಲಭ್ಯ

ಮುಂಬೈ ಇಂಡಿಯನ್ಸ್ (ಪ್ಲೇಯಿಂಗ್ XI): ರೋಹಿತ್ ಶರ್ಮಾ, ರಯಾನ್ ರಿಕಲ್ಟನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ನಾಯಕ), ನಮನ್ ಧೀರ್, ಶಾರ್ದೂಲ್ ಠಾಕೂರ್, ದೀಪಕ್ ಚಹರ್, ಅಲ್ಲಾ ಗಝನ್ಫನ್, ಟ್ರೆಂಟ್ ಬೌಲ್ಟ್, ಜಸ್​ಪ್ರೀತ್ ಬುಮ್ರಾ.

Published On - 12:28 am, Wed, 8 April 26

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ
ಮಾಂಗಲ್ಯ ಸರದಲ್ಲಿ ಮುತ್ತು-ಹವಳ ಧರಿಸುವುದರ ಅಸಲಿ ರಹಸ್ಯವೇನು?
ಮಾಂಗಲ್ಯ ಸರದಲ್ಲಿ ಮುತ್ತು-ಹವಳ ಧರಿಸುವುದರ ಅಸಲಿ ರಹಸ್ಯವೇನು?
ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಗೋವಾ ಮುಖ್ಯಮಂತ್ರಿ ಭೇಟಿ
ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಗೋವಾ ಮುಖ್ಯಮಂತ್ರಿ ಭೇಟಿ