AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026, RCB vs CSK: ತವರಿನಲ್ಲಿ ಆರ್​ಸಿಬಿಗೆ 2ನೇ ಪಂದ್ಯ; ಎದುರಾಳಿ ಯಾರು ಗೊತ್ತಲ್ಲ?

IPL 2026, RCB vs CSK Live Streaming: ಐಪಿಎಲ್ 2026 ಏಪ್ರಿಲ್ 5 ರಂದು ಡಬಲ್ ಹೆಡರ್ ಪಂದ್ಯಗಳಿಗೆ ಸಾಕ್ಷಿಯಾಗಲಿದೆ. ಪ್ರಮುಖವಾಗಿ RCB vs CSK 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಗೆಲುವಿನ ಖಾತೆ ತೆರೆಯದ CSKಗೆ ಇದು ನಿರ್ಣಾಯಕ ಪಂದ್ಯವಾದರೆ, RCB ತನ್ನ ಅಜೇಯ ಓಟ ಮುಂದುವರಿಸಲು ನೋಡುತ್ತಿದೆ. ಪಂದ್ಯ ಸಂಜೆ 7:30ಕ್ಕೆ ಆರಂಭವಾಗಲಿದ್ದು, ಜಿಯೋ-ಹಾಟ್‌ಸ್ಟಾರ್‌ನಲ್ಲಿ ಲೈವ್ ವೀಕ್ಷಿಸಬಹುದು. ಮುಖಾಮುಖಿ ದಾಖಲೆಗಳಲ್ಲಿ CSK ಮೇಲುಗೈ ಸಾಧಿಸಿದೆ.

IPL 2026, RCB vs CSK: ತವರಿನಲ್ಲಿ ಆರ್​ಸಿಬಿಗೆ 2ನೇ ಪಂದ್ಯ; ಎದುರಾಳಿ ಯಾರು ಗೊತ್ತಲ್ಲ?
Rcb Vs Csk
ಪೃಥ್ವಿಶಂಕರ
|

Updated on: Apr 04, 2026 | 8:15 PM

Share

ಐಪಿಎಲ್ 2026 (IPL 2026) ಏಪ್ರಿಲ್ 5 ರಂದು ಡಬಲ್ ಹೆಡರ್ ಪಂದ್ಯಗಳು ನಡೆಯಿವೆ. ದಿನದ ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್, ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಿದರೆ, ಸಂಜೆಯ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (CSK vs RCB) ತಂಡವನ್ನು ಎದುರಿಸಲಿದೆ. ಸಿಎಸ್​ಕೆ ತಂಡ ಇದುವರೆಗೆ ಗೆಲುವಿನ ಖಾತೆ ತೆರೆದಿಲ್ಲ. ಆಡಿದ ಎರಡೂ ಪಂದ್ಯಗಳನ್ನು ಸೋತಿದ್ದು, ಹ್ಯಾಟ್ರಿಕ್ ಸೋಲಿನ ಆತಂಕದಲ್ಲಿದೆ. ಇತ್ತ ತನ್ನ ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ ತಂಡವನ್ನು ಮಣಿಸಿರುವ ಆರ್​ಸಿಬಿ, ಇದೀಗ ತನ್ನ ಅಜೇಯ ಓಟವನ್ನು ಮುಂದುವರೆಸಲು ನೋಡುತ್ತಿದೆ. ಹೀಗಾಗಿ ಈ ಪಂದ್ಯದಲ್ಲಿ ಯಾರು ಗೆಲ್ಲುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.

ಆರ್​ಸಿಬಿ ಮತ್ತು ಸಿಎಸ್​ಕೆ ನಡುವಿನ ಐಪಿಎಲ್ 2026 ರ 11 ನೇ ಪಂದ್ಯ ಯಾವಾಗ ನಡೆಯಲಿದೆ?

ಆರ್​ಸಿಬಿ ಮತ್ತು ಸಿಎಸ್​ಕೆ ನಡುವಿನ ಐಪಿಎಲ್ 2026 ರ 11 ನೇ ಪಂದ್ಯವು ಏಪ್ರಿಲ್ 5 ರ ಭಾನುವಾರದಂದು ನಡೆಯಲಿದೆ.

ಆರ್​ಸಿಬಿ ಮತ್ತು ಸಿಎಸ್​ಕೆ ನಡುವಿನ ಐಪಿಎಲ್ 2026 ರ 11 ನೇ ಪಂದ್ಯ ಎಲ್ಲಿ ನಡೆಯಲಿದೆ?

ಆರ್​ಸಿಬಿ ಮತ್ತು ಸಿಎಸ್​ಕೆ ನಡುವಿನ ಐಪಿಎಲ್ 2026 ರ 11 ನೇ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಆರ್​ಸಿಬಿ ಮತ್ತು ಸಿಎಸ್​ಕೆ ನಡುವಿನ ಐಪಿಎಲ್ 2026 ರ 11 ನೇ ಪಂದ್ಯಯ ಯಾವ ಸಮಯಕ್ಕೆ ಪ್ರಾರಂಭವಾಗುತ್ತದೆ?

ಆರ್​ಸಿಬಿ ಮತ್ತು ಸಿಎಸ್​ಕೆ ನಡುವಿನ ಐಪಿಎಲ್ 2026 ರ 11 ನೇ ಪಂದ್ಯವು ಭಾರತೀಯ ಕಾಲಮಾನ ಸಂಜೆ 7:30 ಕ್ಕೆ ಪ್ರಾರಂಭವಾಗಲಿದ್ದು, ಟಾಸ್ ಸಂಜೆ 7 ಗಂಟೆಗೆ ನಡೆಯಲಿದೆ.

ಆರ್​ಸಿಬಿ ಮತ್ತು ಸಿಎಸ್​ಕೆ ನಡುವಿನ ಐಪಿಎಲ್ 2026 ರ 11 ನೇ ಪಂದ್ಯನ್ನು ಟಿವಿಯಲ್ಲಿ ವೀಕ್ಷಿಸುವುದು ಹೇಗೆ?

ನೀವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಟಿವಿಯಲ್ಲಿ ಆರ್​ಸಿಬಿ ಮತ್ತು ಸಿಎಸ್​ಕೆ ನಡುವಿನ ಐಪಿಎಲ್ 2026 ರ 11 ನೇ ಪಂದ್ಯವನ್ನು ವೀಕ್ಷಿಸಬಹುದು.

ಆರ್​ಸಿಬಿ ಮತ್ತು ಸಿಎಸ್​ಕೆ ನಡುವಿನ ಐಪಿಎಲ್ 2026 ರ 11 ನೇ ಪಂದ್ಯನ್ನು ಮೊಬೈಲ್‌ನಲ್ಲಿ ವೀಕ್ಷಿಸುವುದು ಹೇಗೆ?

ಜಿಯೋ-ಹಾಟ್‌ಸ್ಟಾರ್ ಅಪ್ಲಿಕೇಶನ್ ಬಳಸಿಕೊಂಡು ನಿಮ್ಮ ಮೊಬೈಲ್​ಲ್ಲಿ ಆರ್​ಸಿಬಿ ಮತ್ತು ಸಿಎಸ್​ಕೆ ನಡುವಿನ ಐಪಿಎಲ್ 2026 ರ 11 ನೇ ಪಂದ್ಯವನ್ನು ನೀವು ವೀಕ್ಷಿಸಬಹುದು.

GT vs RR IPL 2026 Live Score: ರಾಜಸ್ಥಾನ್ ಮೊದಲ ವಿಕೆಟ್ ಪತನ

ಮುಖಾಮುಖಿ ದಾಖಲೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಇದುವರೆಗೆ 35 ಪಂದ್ಯಗಳು ನಡೆದಿವೆ. ಇದರಲ್ಲಿ ಸಿಎಸ್​ಕೆ 21 ಪಂದ್ಯಗಳನ್ನು ಗೆದ್ದಿದ್ದರೆ, ಆರ್​ಸಿಬಿ 13 ಪಂದ್ಯಗಳನ್ನು ಗೆದ್ದುಕೊಂಡಿದೆ. ಉಳಿದಂತೆ ಒಂದು ಪಂದ್ಯ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ. ಆದಾಗ್ಯೂ ಕಳೆದ ಆವೃತ್ತಿಯಿಂದ ಆರ್​ಸಿಬಿ ಬಲಿಷ್ಠವಾಗಿ ಕಾಣುತ್ತಿದ್ದು, ಸಿಎಸ್​ಕೆ ವಿರುದ್ಧ ಗೆಲುವು ಸಾಧಿಸುವ ಆತ್ಮವಿಶ್ವಾಸದಲ್ಲಿ ಬೀಗುತ್ತಿದೆ.

ಸಂಭಾವ್ಯ ಪ್ಲೇಯಿಂಗ್ 11

ಚೆನ್ನೈ ಸೂಪರ್ ಕಿಂಗ್ಸ್‌: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್ (ನಾಯಕ), ಆಯುಷ್ ಮ್ಹಾತ್ರೆ, ಸರ್ಫರಾಜ್ ಖಾನ್, ಶಿವಂ ದುಬೆ, ಕಾರ್ತಿಕ್ ಶರ್ಮಾ, ಪ್ರಶಾಂತ್ ವೀರ್, ನೂರ್ ಅಹ್ಮದ್, ಅನ್ಶುಲ್ ಕಾಂಬೋಜ್, ಮ್ಯಾಟ್ ಹೆನ್ರಿ, ಖಲೀಲ್ ಅಹ್ಮದ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಿಲಿಪ್ ಸಾಲ್ಟ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಅಭಿನಂದನ್ ಸಿಂಗ್, ಜಾಕೋಬ್ ಡಫಿ, ಸುಯಾಶ್ ಶರ್ಮಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಗೋಡೆ ಹಾಗೂ ಥಾರ್ ನಡುವೆ ಸಿಲುಕಿ ಅಪ್ಪಚ್ಚಿಯಾದ ವೃದ್ಧೆ
ಗೋಡೆ ಹಾಗೂ ಥಾರ್ ನಡುವೆ ಸಿಲುಕಿ ಅಪ್ಪಚ್ಚಿಯಾದ ವೃದ್ಧೆ
ಉರುಳಿ ಬಿದ್ದ ಪ್ರವಾಸಿಗರ ಬಸ್: ಕಾರಿನಲ್ಲಿದ್ದ ನಾಲ್ವರು ಜಸ್ಟ್​ ಮಿಸ್​!
ಉರುಳಿ ಬಿದ್ದ ಪ್ರವಾಸಿಗರ ಬಸ್: ಕಾರಿನಲ್ಲಿದ್ದ ನಾಲ್ವರು ಜಸ್ಟ್​ ಮಿಸ್​!