
ಐಪಿಎಲ್ 2026 (IPL 2026) ಏಪ್ರಿಲ್ 5 ರಂದು ಡಬಲ್ ಹೆಡರ್ ಪಂದ್ಯಗಳು ನಡೆಯಿವೆ. ದಿನದ ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್, ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಿದರೆ, ಸಂಜೆಯ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (CSK vs RCB) ತಂಡವನ್ನು ಎದುರಿಸಲಿದೆ. ಸಿಎಸ್ಕೆ ತಂಡ ಇದುವರೆಗೆ ಗೆಲುವಿನ ಖಾತೆ ತೆರೆದಿಲ್ಲ. ಆಡಿದ ಎರಡೂ ಪಂದ್ಯಗಳನ್ನು ಸೋತಿದ್ದು, ಹ್ಯಾಟ್ರಿಕ್ ಸೋಲಿನ ಆತಂಕದಲ್ಲಿದೆ. ಇತ್ತ ತನ್ನ ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಮಣಿಸಿರುವ ಆರ್ಸಿಬಿ, ಇದೀಗ ತನ್ನ ಅಜೇಯ ಓಟವನ್ನು ಮುಂದುವರೆಸಲು ನೋಡುತ್ತಿದೆ. ಹೀಗಾಗಿ ಈ ಪಂದ್ಯದಲ್ಲಿ ಯಾರು ಗೆಲ್ಲುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.
ಆರ್ಸಿಬಿ ಮತ್ತು ಸಿಎಸ್ಕೆ ನಡುವಿನ ಐಪಿಎಲ್ 2026 ರ 11 ನೇ ಪಂದ್ಯವು ಏಪ್ರಿಲ್ 5 ರ ಭಾನುವಾರದಂದು ನಡೆಯಲಿದೆ.
ಆರ್ಸಿಬಿ ಮತ್ತು ಸಿಎಸ್ಕೆ ನಡುವಿನ ಐಪಿಎಲ್ 2026 ರ 11 ನೇ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.
ಆರ್ಸಿಬಿ ಮತ್ತು ಸಿಎಸ್ಕೆ ನಡುವಿನ ಐಪಿಎಲ್ 2026 ರ 11 ನೇ ಪಂದ್ಯವು ಭಾರತೀಯ ಕಾಲಮಾನ ಸಂಜೆ 7:30 ಕ್ಕೆ ಪ್ರಾರಂಭವಾಗಲಿದ್ದು, ಟಾಸ್ ಸಂಜೆ 7 ಗಂಟೆಗೆ ನಡೆಯಲಿದೆ.
ನೀವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಟಿವಿಯಲ್ಲಿ ಆರ್ಸಿಬಿ ಮತ್ತು ಸಿಎಸ್ಕೆ ನಡುವಿನ ಐಪಿಎಲ್ 2026 ರ 11 ನೇ ಪಂದ್ಯವನ್ನು ವೀಕ್ಷಿಸಬಹುದು.
ಜಿಯೋ-ಹಾಟ್‌ಸ್ಟಾರ್ ಅಪ್ಲಿಕೇಶನ್ ಬಳಸಿಕೊಂಡು ನಿಮ್ಮ ಮೊಬೈಲ್ಲ್ಲಿ ಆರ್ಸಿಬಿ ಮತ್ತು ಸಿಎಸ್ಕೆ ನಡುವಿನ ಐಪಿಎಲ್ 2026 ರ 11 ನೇ ಪಂದ್ಯವನ್ನು ನೀವು ವೀಕ್ಷಿಸಬಹುದು.
GT vs RR IPL 2026 Live Score: ರಾಜಸ್ಥಾನ್ ಮೊದಲ ವಿಕೆಟ್ ಪತನ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಇದುವರೆಗೆ 35 ಪಂದ್ಯಗಳು ನಡೆದಿವೆ. ಇದರಲ್ಲಿ ಸಿಎಸ್ಕೆ 21 ಪಂದ್ಯಗಳನ್ನು ಗೆದ್ದಿದ್ದರೆ, ಆರ್ಸಿಬಿ 13 ಪಂದ್ಯಗಳನ್ನು ಗೆದ್ದುಕೊಂಡಿದೆ. ಉಳಿದಂತೆ ಒಂದು ಪಂದ್ಯ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ. ಆದಾಗ್ಯೂ ಕಳೆದ ಆವೃತ್ತಿಯಿಂದ ಆರ್ಸಿಬಿ ಬಲಿಷ್ಠವಾಗಿ ಕಾಣುತ್ತಿದ್ದು, ಸಿಎಸ್ಕೆ ವಿರುದ್ಧ ಗೆಲುವು ಸಾಧಿಸುವ ಆತ್ಮವಿಶ್ವಾಸದಲ್ಲಿ ಬೀಗುತ್ತಿದೆ.
ಚೆನ್ನೈ ಸೂಪರ್ ಕಿಂಗ್ಸ್: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್ (ನಾಯಕ), ಆಯುಷ್ ಮ್ಹಾತ್ರೆ, ಸರ್ಫರಾಜ್ ಖಾನ್, ಶಿವಂ ದುಬೆ, ಕಾರ್ತಿಕ್ ಶರ್ಮಾ, ಪ್ರಶಾಂತ್ ವೀರ್, ನೂರ್ ಅಹ್ಮದ್, ಅನ್ಶುಲ್ ಕಾಂಬೋಜ್, ಮ್ಯಾಟ್ ಹೆನ್ರಿ, ಖಲೀಲ್ ಅಹ್ಮದ್.
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಿಲಿಪ್ ಸಾಲ್ಟ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಅಭಿನಂದನ್ ಸಿಂಗ್, ಜಾಕೋಬ್ ಡಫಿ, ಸುಯಾಶ್ ಶರ್ಮಾ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ