AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs LSG: ತವರಿನಲ್ಲಿ ಲಕ್ನೋ ವಿರುದ್ಧ ಆರ್​ಸಿಬಿಗೆ ಮೊಟ್ಟ ಮೊದಲ ಜಯ

RCB Dominates LSG at Chinnaswamy: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಲಕ್ನೋ ಸೂಪರ್‌ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ಭರ್ಜರಿ ಜಯಗಳಿಸಿದೆ. ಇದು ಸತತ ಎರಡನೇ ಗೆಲುವಾಗಿದ್ದು, ತಂಡ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. 5 ಪಂದ್ಯಗಳಲ್ಲಿ 4 ಗೆದ್ದು, 8 ಅಂಕಗಳಿಸಿರುವ ಆರ್‌ಸಿಬಿ, ರಾಜಸ್ಥಾನ್ ರಾಯಲ್ಸ್ ತಂಡವನ್ನು ಹಿಂದಿಕ್ಕಿದೆ. ಲಕ್ನೋ ನೀಡಿದ 147 ರನ್ ಗುರಿಯನ್ನು ಆರ್‌ಸಿಬಿ 15.1 ಓವರ್‌ಗಳಲ್ಲಿ ಸುಲಭವಾಗಿ ಸಾಧಿಸಿತು.

RCB vs LSG: ತವರಿನಲ್ಲಿ ಲಕ್ನೋ ವಿರುದ್ಧ ಆರ್​ಸಿಬಿಗೆ ಮೊಟ್ಟ ಮೊದಲ ಜಯ
Rcb
ಪೃಥ್ವಿಶಂಕರ
|

Updated on:Apr 15, 2026 | 11:09 PM

Share

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಲಕ್ನೋ ಸೂಪರ್‌ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಆತಿಥೇಯ ಆರ್​ಸಿಬಿ (RCB vs LSG) ಸತತ ಎರಡನೇ ಪಂದ್ಯವನ್ನು ಗೆದ್ದುಕೊಳ್ಳುವ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಲೀಗ್​ನಲ್ಲಿ ಇದುವರೆಗೆ 5 ಪಂದ್ಯಗಳನ್ನಾಡಿರುವ ಆರ್​​ಸಿಬಿ (RCB) ಇದರಲ್ಲಿ 4 ಪಂದ್ಯಗಳನ್ನು ಗೆದ್ದು, ಒಂದು ಪಂದ್ಯವನ್ನು ಸೋತಿದೆ. ಹೀಗಾಗಿ 8 ಅಂಕಗಳು ಮತ್ತು ನೆಟ್​ ರನ್​ರೇಟ್​ನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಹಿಂದಿಕ್ಕಿ ಆ ಸ್ಥಾನವನ್ನು ಆಕ್ರಮಿಸಿಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ 147 ರನ್​ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಆರ್​ಸಿಬಿ 15.1 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು ಜಯದ ನಗೆ ಬೀರಿತು. ಈ ಮೂಲಕ ಆರ್​​ಸಿಬಿ ಮೊಟ್ಟ ಮೊದಲ ಬಾರಿಗೆ ಚಿನ್ನಸ್ವಾಮಿ ಮೈದಾನದಲ್ಲಿ ಲಕ್ನೋ ತಂಡವನ್ನು ಸೋಲಿಸಿದ ಸಾಧನೆ ಮಾಡಿತು. ಈ ಹಿಂದೆ ಉಭಯ ತಂಡಗಳು ಚಿನ್ನಸ್ವಾಮಿಯಲ್ಲಿ 2 ಪಂದ್ಯಗಳನ್ನು ಆಡಿದ್ದವು. ಈ ಎರಡೂ ಪಂದ್ಯಗಳಲ್ಲೂ ಲಕ್ನೋ ಗೆಲುವು ಸಾಧಿಸಿತ್ತು.

ರಸಿಕ್, ಭುವಿ ಮಾರಕ ದಾಳಿ

ಈ ಪಂದ್ಯದಲ್ಲಿ ರಜತ್ ಪಾಟಿದಾರ್ ನಾಯಕತ್ವದ ಆರ್​​ಸಿಬಿ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಸಂಪೂರ್ಣ 20 ಓವರ್‌ಗಳಲ್ಲಿ 146 ರನ್‌ಗಳಿಗೆ ಆಲೌಟ್ ಆಯಿತು.ಇದಕ್ಕೆ ಕಾರಣ ತಂಡಕ್ಕೆ ಸಿಕ್ಕ ಕಳಪೆ ಆರಂಭ. ಆರಂಭಿಕ ಐಡೆನ್ ಮಾರ್ಕ್ರಾಮ್‌ಗೆ ಕೇವಲ 12 ರನ್‌ಗೆ ಔಟಾದರೆ, ನಾಯಕ ರಿಷಭ್ ಪಂತ್ ಐದನೇ ಓವರ್‌ನಲ್ಲಿ ಜೋಶ್ ಹ್ಯಾಜಲ್‌ವುಡ್ ಎಸೆತದಿಂದ ಗಾಯಗೊಂಡು ನಿವೃತ್ತರಾದರು. ಕೊನೆಯಲ್ಲಿ ಪಂತ್ ಬ್ಯಾಟಿಂಗ್​ಗೆ ಮರಳಿದರಾದರೂ ಕೇವಲ ಒಂದು ರನ್ ಗಳಿಸಿ ಔಟಾದರು. ಉಳಿದಂತೆ ಆಯುಷ್ ಬಡೋನಿ 38 ರನ್ ಗಳಿಸಿದರೆ, ಮುಕುಲ್ ಚೌಧರಿ 39 ರನ್ ಗಳಿಸಿ ತಂಡವನ್ನು ಈ ಸ್ಕೋರ್ ತಲುಪಿಸಿದರು. ಮತ್ತೊಂದೆಡೆ, ಆರ್‌ಸಿಬಿ ಪರ ಮಿಂಚಿದ ರಸಿಕ್ ದಾರ್ ನಾಲ್ಕು ವಿಕೆಟ್‌ ಪಡೆದು ಮಿಂಚಿದರೆ, ಭುವನೇಶ್ವರ್ ಕುಮಾರ್ ಮೂರು ವಿಕೆಟ್‌ಗಳನ್ನು ಮತ್ತು ಕೃನಾಲ್ ಪಾಂಡ್ಯ ಎರಡು ವಿಕೆಟ್‌ಗಳನ್ನು ಪಡೆದರು. ಜೋಶ್ ಹ್ಯಾಜಲ್‌ವುಡ್ ಕೂಡ ಒಂದು ವಿಕೆಟ್ ಪಡೆದರು.

RCB vs LSG: ಬರೋಬ್ಬರಿ 102 ಮೀಟರ್; ಸ್ಟೇಡಿಯಂನಿಂದ ಹೊರ ಹೋದ ಚೆಂಡು

ಆರ್​​ಸಿಬಿಗೆ ಸುಲಭ ಜಯ

ಈ ಗುರಿ ಬೆನ್ನಟ್ಟಿದ ಆರ್‌ಸಿಬಿ ಪರ ವಿರಾಟ್ ಕೊಹ್ಲಿ ಆಕ್ರಮಣಕಾರಿ ಆರಂಭ ಒದಗಿಸಿಕೊಟ್ಟರು. ಕೇವಲ 34 ಎಸೆತಗಳಲ್ಲಿ 6 ಬೌಂಡರಿ ಮತ್ತು 1 ಸಿಕ್ಸ್ ಸೇರಿದಂತೆ 49 ರನ್ ಗಳಿಸಿದರು. ಅವರ ಇನ್ನಿಂಗ್ಸ್ ತಂಡಕ್ಕೆ ರನ್ ಚೇಸಿಂಗ್ ಅನ್ನು ಹೆಚ್ಚು ಸುಲಭಗೊಳಿಸಿತು. ಇದರ ಜೊತೆಗೆ ಕೊಹ್ಲಿ, ದೇವದತ್ ಪಡಿಕ್ಕಲ್ ಅವರೊಂದಿಗೆ ಎರಡನೇ ವಿಕೆಟ್‌ಗೆ ನಿರ್ಣಾಯಕ ಪಾಲುದಾರಿಕೆಯನ್ನು ರೂಪಿಸಿದರು. ನಂತರ ನಾಯಕ ರಜತ್ ಪಾಟಿದಾರ್ 13 ಎಸೆತಗಳಲ್ಲಿ 27 ರನ್ ಮತ್ತು ಜಿತೇಶ್ ಶರ್ಮಾ ಕೂಡ 9 ಎಸೆತಗಳಲ್ಲಿ 23 ರನ್​ಗಳ ಕಾಣಿಕೆ ನೀಡಿದರು. ಕೊನೆಯಲ್ಲಿ, ಟಿಮ್ ಡೇವಿಡ್ ಮತ್ತು ರೊಮಾರಿಯೊ ಶೆಫರ್ಡ್ ಪಂದ್ಯವನ್ನು ಮುಕ್ತಾಯಗೊಳಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:56 pm, Wed, 15 April 26

Follow Us