IPL 2026: ಆರ್‌ಸಿಬಿ ಮುಂದಿನ ಪಂದ್ಯ ಯಾವಾಗ? ಎದುರಾಳಿ ಯಾರು?
IPL 2026, RCB vs KKR Playoff Battle: ಆರ್‌ಸಿಬಿ ಪ್ಲೇಆಫ್‌ಗೆ ಹತ್ತಿರವಾಗಿದ್ದು, ಮುಂಬೈ ವಿರುದ್ಧದ ಗೆಲುವಿನ ನಂತರ ಪಾಯಿಂಟ್ಸ್ ಟೇಬಲ್‌ನಲ್ಲಿ ಅಗ್ರಸ್ಥಾನದಲ್ಲಿದೆ. ಅಗ್ರ 2 ಸ್ಥಾನ ಪಡೆಯಲು ಉಳಿದ ಪಂದ್ಯಗಳನ್ನು ಗೆಲ್ಲುವುದು ಅನಿವಾರ್ಯ. ಮೇ 13 ರಂದು ರಾಯ್‌ಪುರದಲ್ಲಿ ನಡೆಯಲಿರುವ ಕೆಕೆಆರ್ ವಿರುದ್ಧದ 57ನೇ ಪಂದ್ಯವು ಆರ್‌ಸಿಬಿಗೆ ನಿರ್ಣಾಯಕವಾಗಿದೆ. ಪಂದ್ಯದ ವಿವರ, ನೇರಪ್ರಸಾರ ಮತ್ತು ತಂಡಗಳ ಮಾಹಿತಿ ಲಭ್ಯವಿದೆ.

ಆರ್ಸಿಬಿಯ (RCB) ಎರಡನೇ ತವರು ಮೈದಾನದವಾದ ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ರೋಮಾಂಚಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಎರಡು ವಿಕೆಟ್‌ಗಳಿಂದ ಸೋಲಿಸಿದ ಆರ್‌ಸಿಬಿ ಪ್ಲೇಆಫ್‌ಗೆ ಮತ್ತಷ್ಟು ಹತ್ತಿರವಾಗಿದಲ್ಲದೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೂ ಏರಿತು. ಇದೀಗ ಈ ಅಗ್ರಸ್ಥಾನದಲ್ಲಿ ಮುಂದುವರೆಯಬೇಕಾದರೆ ಆರ್‌ಸಿಬಿ ಉಳಿದಿರುವ ಎಲ್ಲಾ ಪಂದ್ಯಗಳನ್ನು ಗೆಲ್ಲಲೇಬೇಕು. ಲೀಗ್ ಹಂತದಲ್ಲಿ ಆರ್‌ಸಿಬಿ ಈಗಾಗಲೇ 11 ಪಂದ್ಯಗಳನ್ನಾಡಿದ್ದು, ಇದರಲ್ಲಿ 7 ಪಂದ್ಯಗಳನ್ನು ಗೆದ್ದು ಐದು ಪಂದ್ಯಗಳಲ್ಲಿ ಸೋತಿದೆ. ಆರ್‌ಸಿಬಿ ಬಳಿ ಪ್ರಸ್ತುತ 14 ಅಂಕಗಳಿವೆ. ಲೀಗ್ ಹಂತದಲ್ಲಿ ಉಳಿದಿರುವ 3 ಪಂದ್ಯಗಳನ್ನು ಗೆದ್ದರೆ ಆರ್‌ಸಿಬಿ ಬಳಿ 20 ಅಂಕಗಳು ಇರಲಿದ್ದು ಖಚಿತವಾಗಿ ಟಾಪ್ 2 ಸ್ಥಾನ ಪಡೆಯಲಿದೆ. ಹೀಗಿರುವಾಗ ಆರ್‌ಸಿಬಿ ತನ್ನ ಮುಂದಿನ ಪಂದ್ಯದಲ್ಲಿ ಕೆಕೆಆರ್ (KKR) ತಂಡವನ್ನು ಎದುರಿಸಲಿದ್ದು, ಈ ಪಂದ್ಯವನ್ನು ಶತಾಯಗತಾಯ ಗೆಲ್ಲಲೇಬೇಕಿದೆ.
ಆರ್‌ಸಿಬಿ ಹಾಗೂ ಕೆಕೆಆರ್ ನಡುವಿನ ಐಪಿಎಲ್ 2026 ರ 57ನೇ ಪಂದ್ಯ ಯಾವಾಗ ನಡೆಯಲಿದೆ?
ಆರ್‌ಸಿಬಿ ಹಾಗೂ ಕೆಕೆಆರ್ ನಡುವಿನ ಐಪಿಎಲ್ 2026 ರ 57ನೇ ಪಂದ್ಯ ಮೇ 13 ರಂದು ನಡೆಯಲಿದೆ.
ಆರ್‌ಸಿಬಿ ಹಾಗೂ ಕೆಕೆಆರ್ ನಡುವಿನ ಐಪಿಎಲ್ 2026 ರ 57ನೇ ಪಂದ್ಯ ಎಲ್ಲಿ ನಡೆಯಲಿದೆ?
ಆರ್‌ಸಿಬಿ ಹಾಗೂ ಕೆಕೆಆರ್ ನಡುವಿನ ಐಪಿಎಲ್ 2026 ರ 57ನೇ ಪಂದ್ಯ ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಕ್ರೀಡಾಂಗಣದಲ್ಲಿ ನಡೆದಲ್ಲಿ ನಡೆಯಲಿದೆ.
ಆರ್‌ಸಿಬಿ ಹಾಗೂ ಕೆಕೆಆರ್ ನಡುವಿನ ಐಪಿಎಲ್ 2026 ರ 57ನೇ ಪಂದ್ಯ ಎಷ್ಟು ಗಂಟೆಗೆ ಆರಂಭ?
ಆರ್‌ಸಿಬಿ ಹಾಗೂ ಕೆಕೆಆರ್ ನಡುವಿನ ಐಪಿಎಲ್ 2026 ರ 57ನೇ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ. ಟಾಸ್ ಸಂಜೆ 6:30 ಕ್ಕೆ ನಡೆಯಲಿದೆ.
ಆರ್‌ಸಿಬಿ ಹಾಗೂ ಕೆಕೆಆರ್ ನಡುವಿನ ಐಪಿಎಲ್ 2026 ರ 57ನೇ ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?
ಆರ್‌ಸಿಬಿ ಹಾಗೂ ಕೆಕೆಆರ್ ನಡುವಿನ ಐಪಿಎಲ್ 2026 ರ 57ನೇ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಹಾಗೆಯೇ ಮೊಬೈಲ್ ಅಥವಾ ಲ್ಯಾಪ್‌ಟಾಪ್‌ನಲ್ಲಿ ಪಂದ್ಯವನ್ನು ವೀಕ್ಷಿಸಲು ಇಷ್ಟಪಡುವ ವೀಕ್ಷಕರಿಗೆ, ಜಿಯೋ ಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಲಭ್ಯವಿರುತ್ತದೆ.
ಉಭಯ ತಂಡಗಳು
ರಾಯಲ್ ಚಾಲೆಂಜರ್ಸ್ ಬೆಂಗಳೂರು: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ಟಿಮ್ ಡೇವಿಡ್, ಜಾಕೋಬ್ ಬೆಥೆಲ್, ರೊಮಾರಿಯೊ ಶೆಫರ್ಡ್, ಜೋಶ್ ಹ್ಯಾಜಲ್‌ವುಡ್, ನುವಾನ್ ತುಷಾರ, ದೇವದತ್ ಪಡಿಕ್ಕಲ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ರಸಿಖ್ ದಾರ್, ಭುವನೇಶ್ವರ್ ಕುಮಾರ್, ಜೋರ್ಡಾನ್ ಕಾಕ್ಸ್, ವೆಂಕಟ್ ಸಿಂಗ್, ಸುಯಶ್ ಲ್ಯೂನ್ ಕಾಕ್ಸ್, ವೆಂಕಟ್ ಸಿಂಗ್ ಶರ್ಮಾ, ಭುವನೇಶ್ವರ್ ಕುಮಾರ್ ಕಾನಿಷ್ಕ್ ಚೌಹಾಣ್, ಅಭಿನಂದನ್ ಸಿಂಗ್, ಮಂಗೇಶ್ ಯಾದವ್, ಫಿಲ್ ಸಾಲ್ಟ್, ಸಾತ್ವಿಕ್ ದೇಸ್ವಾಲ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ.
RCB vs MI: ಮುಂಬೈ ವಿರುದ್ಧ ಕೃನಾಲ್, ಭುವಿ ಕೆಚ್ಚೆದೆಯ ಆಟಕ್ಕೆ ಆರ್‌ಸಿಬಿಗೆ ಒಲಿದ ಜಯ
ಕೋಲ್ಕತ್ತಾ ನೈಟ್ ರೈಡರ್ಸ್: ಅಜಿಂಕ್ಯ ರಹಾನೆ(ನಾಯಕ), ಫಿನ್ ಅಲೆನ್, ಆಂಗ್ಕ್ರಿಶ್ ರಘುವಂಶಿ(ವಿಕೆಟ್ ಕೀಪರ್), ರಿಂಕು ಸಿಂಗ್, ಕ್ಯಾಮರೂನ್ ಗ್ರೀನ್, ರೋವ್ಮನ್ ಪೊವೆಲ್, ಮನೀಶ್ ಪಾಂಡೆ, ಅನುಕುಲ್ ರಾಯ್, ಸುನಿಲ್ ನರೈನ್, ವೈಭವ್ ಅರೋರಾ, ಕಾರ್ತಿಕ್ ತ್ಯಾಗಿ, ವರುಣ್ ಚಕ್ರವರ್ತಿ, ರಮಣದೀಪ್ ಸಿಂಗ್, ತೇಜಸ್ವಿ ದಹಿಯಾ, ನವದೀಪ್ ಸೈನಿ, ಟಿಮ್ ಸೀಫರ್ಟ್, ರಚಿನ್ ರವೀಂದ್ರ, ಬ್ಲೆಸಿಂಗ್ ಮುಜರಬಾನಿ, ಮಥೀಶ ಪತಿರಾನ, ರಾಹುಲ್ ತ್ರಿಪಾಠಿ, ಸಾರ್ಥಕ್ ರಂಜನ್, ಪ್ರಶಾಂತ್ ಸೋಲಂಕಿ, ಸೌರಭ್ ದುಬೆ, ಉಮ್ರಾನ್ ಮಲಿಕ್, ದಕ್ಷ್ ಕಮ್ರಾ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




