IPL 2026: ತನ್ನ 3ನೇ ಪಂದ್ಯದಲ್ಲಿ ಮತ್ತೊಂದು ಬಲಿಷ್ಠ ತಂಡವನ್ನು ಎದುರಿಸಲಿದೆ ಆರ್ಸಿಬಿ..!
RCB's IPL 2026 3rd Match: ಐಪಿಎಲ್ 2026ರಲ್ಲಿ ಹಾಲಿ ಚಾಂಪಿಯನ್ ಆರ್ಸಿಬಿ ಸತತ ಎರಡು ಪಂದ್ಯಗಳನ್ನು ಗೆದ್ದು ಪಾಯಿಂಟ್ಸ್ ಟೇಬಲ್‌ನಲ್ಲಿ ಅಗ್ರಸ್ಥಾನದಲ್ಲಿದೆ. ತನ್ನ ಹ್ಯಾಟ್ರಿಕ್ ಗೆಲುವಿಗಾಗಿ, ಏಪ್ರಿಲ್ 10 ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧ 16ನೇ ಪಂದ್ಯವನ್ನಾಡಲಿದೆ. ಗುವಾಹಟಿಯ ಬರ್ಸಾಪರ ಸ್ಟೇಡಿಯಂನಲ್ಲಿ ಸಂಜೆ 7:30ಕ್ಕೆ ಆರಂಭವಾಗುವ ಈ ಮಹತ್ವದ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ಮತ್ತು ಜಿಯೋ-ಹಾಟ್‌ಸ್ಟಾರ್‌ನಲ್ಲಿ ವೀಕ್ಷಿಸಬಹುದು.

2026 ರ ಐಪಿಎಲ್‌ನಲ್ಲಿ (IPL 2026) ಹಾಲಿ ಚಾಂಪಿಯನ್ ಆಗಿ ಕಣಕ್ಕಿಳಿದಿರುವ ಆರ್ಸಿಬಿ (RCB) ಇದುವರೆಗೆ ಆಡಿರುವ ಮೊದಲ ಎರಡು ಪಂದ್ಯಗಳನ್ನು ಗೆದ್ದುಕೊಂಡಿದೆ. ತನ್ನ ತವರಿನಲ್ಲಿ ಮೊದಲ ಎರಡು ಪಂದ್ಯಗಳನ್ನು ಆಡಿದ ಆರ್ಸಿಬಿ ಎರಡು ಪಂದ್ಯಗಳಲ್ಲೂ ಏಕಪಕ್ಷೀಯ ಗೆಲುವು ಸಾಧಿಸಿದೆ. ಲೀಗ್ನ ಉದ್ಘಾಟನಾ ಪಂದ್ಯದಲ್ಲಿ ಬಲಿಷ್ಠ ಬ್ಯಾಟಿಂಗ್ ವಿಭಾಗವನ್ನು ಹೊಂದಿರುವ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಏಕಪಕ್ಷೀಯವಾಗಿ ಸೋಲಿಸಿದ್ದ ಆರ್ಸಿಬಿ, ಅದಾದ ಬಳಿಕ ನಡೆದಿದ್ದ ಎರಡನೇ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಸಿಎಸ್ಕೆ ತಂಡವನ್ನು ಕೂಡ ಏಕಪಕ್ಷೀಯವಾಗಿ ಸೋಲಿಸಿತ್ತು. ಈ ಎರಡು ಗೆಲುವುಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಆರ್ಸಿಬಿ ಇದೀಗ ತನ್ನ ಮೂರನೇ ಪಂದ್ಯಕ್ಕಾಗಿ ತಯಾರಿ ನಡೆಸುತ್ತಿದೆ. ಹಾಗಿದ್ದರೆ, ಆರ್ಸಿಬಿಯ ಮೂರನೇ ಪಂದ್ಯ ಯಾವಾಗ? ಯಾವ ತಂಡದ ವಿರುದ್ಧ ನಡೆಯಲಿದೆ ಎಂಬುದನ್ನು ನೋಡುವುದಾದರೆ..
ಆರ್ಸಿಬಿ ಮತ್ತು ರಾಜಸ್ಥಾನ್ ನಡುವಿನ ಐಪಿಎಲ್ 2026 ರ 16 ನೇ ಪಂದ್ಯ ಯಾವಾಗ ನಡೆಯಲಿದೆ?
ಆರ್ಸಿಬಿ ಮತ್ತು ರಾಜಸ್ಥಾನ್ ನಡುವಿನ ಐಪಿಎಲ್ 2026 ರ 16 ನೇ ಪಂದ್ಯವು ಏಪ್ರಿಲ್ 10 ರ ಶುಕ್ರವಾರದಂದು ನಡೆಯಲಿದೆ.
ಆರ್ಸಿಬಿ ಮತ್ತು ರಾಜಸ್ಥಾನ್ ನಡುವಿನ ಐಪಿಎಲ್ 2026 ರ 16 ನೇ ಪಂದ್ಯ ಎಲ್ಲಿ ನಡೆಯಲಿದೆ?
ಆರ್ಸಿಬಿ ಮತ್ತು ರಾಜಸ್ಥಾನ್ ನಡುವಿನ ಐಪಿಎಲ್ 2026 ರ 16 ನೇ ಪಂದ್ಯ ಬರ್ಸಾಪರ ಸ್ಟೇಡಿಯಂ, ಗುವಾಹಟಿಯಲ್ಲಿ ನಡೆಯಲಿದೆ.
ಆರ್ಸಿಬಿ ಮತ್ತು ರಾಜಸ್ಥಾನ್ ನಡುವಿನ ಐಪಿಎಲ್ 2026 ರ 16 ನೇ ಪಂದ್ಯ ಯಾವ ಸಮಯಕ್ಕೆ ಪ್ರಾರಂಭವಾಗುತ್ತದೆ?
ಆರ್ಸಿಬಿ ಮತ್ತು ರಾಜಸ್ಥಾನ್ ನಡುವಿನ ಐಪಿಎಲ್ 2026 ರ 16 ನೇ ಪಂದ್ಯವು ಭಾರತೀಯ ಕಾಲಮಾನ ಸಂಜೆ 7:30 ಕ್ಕೆ ಪ್ರಾರಂಭವಾಗಲಿದ್ದು, ಟಾಸ್ ಸಂಜೆ 7 ಗಂಟೆಗೆ ನಡೆಯಲಿದೆ.
ಆರ್ಸಿಬಿ ಮತ್ತು ರಾಜಸ್ಥಾನ್ ನಡುವಿನ ಐಪಿಎಲ್ 2026 ರ 16 ನೇ ಪಂದ್ಯವನ್ನು ಟಿವಿಯಲ್ಲಿ ವೀಕ್ಷಿಸುವುದು ಹೇಗೆ?
ನೀವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಟಿವಿಯಲ್ಲಿ ಆರ್ಸಿಬಿ ಮತ್ತು ರಾಜಸ್ಥಾನ್ ನಡುವಿನ ಐಪಿಎಲ್ 2026 ರ 16 ನೇ ಪಂದ್ಯವನ್ನು ವೀಕ್ಷಿಸಬಹುದು.
ಆರ್ಸಿಬಿ ಮತ್ತು ರಾಜಸ್ಥಾನ್ ನಡುವಿನ ಐಪಿಎಲ್ 2026 ರ 16 ನೇ ಪಂದ್ಯವನ್ನು ಮೊಬೈಲ್‌ನಲ್ಲಿ ವೀಕ್ಷಿಸುವುದು ಹೇಗೆ?
ಜಿಯೋ-ಹಾಟ್‌ಸ್ಟಾರ್ ಅಪ್ಲಿಕೇಶನ್ ಬಳಸಿಕೊಂಡು ನಿಮ್ಮ ಮೊಬೈಲ್ಲ್ಲಿ ಆರ್ಸಿಬಿ ಮತ್ತು ರಾಜಸ್ಥಾನ್ ನಡುವಿನ ಐಪಿಎಲ್ 2026 ರ 16ನೇ ಪಂದ್ಯವನ್ನು ನೀವು ವೀಕ್ಷಿಸಬಹುದು.
RCB vs CSK IPL 2026 Highlights: ಸಿಎಸ್ಕೆ ವಿರುದ್ಧ ಆರ್ಸಿಬಿಗೆ 43 ರನ್ ಜಯ
ಉಭಯ ತಂಡಗಳು
ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ವೈಭವ್ ಸೂರ್ಯವಂಶಿ, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರಿಯಾನ್ ಪರಾಗ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ರವೀಂದ್ರ ಜಡೇಜಾ, ಜೋಫ್ರಾ ಆರ್ಚರ್, ನಾಂದ್ರೆ ಬರ್ಗರ್, ಸಂದೀಪ್ ಶರ್ಮಾ, ರವಿ ಬಿಷ್ಣೋಯ್, ಬ್ರಿಜೇಶ್ ಶರ್ಮಾ, ಲುವಾನ್ ಸಿಂಗ್-ಪ್ರೇರಿರಾ, ರವಿ ಬಿಷ್ಣೋಯ್, ಎಸ್. ತುಷಾರ್ ದೇಶಪಾಂಡೆ, ಆಡಮ್ ಮಿಲ್ನೆ, ದಸುನ್ ಶನಕ, ಕುಲದೀಪ್ ಸೇನ್, ಯುದ್ವೀರ್ ಸಿಂಗ್ ಚರಕ್, ಶುಭಂ ದುಬೆ, ಕ್ವೀನಾ ಎಂಫಕಾ, ವಿಘ್ನೇಶ್ ಪುತ್ತೂರು, ಅಮನ್ ರಾವ್ ಪೆರಾಲ.
ಆರ್ಸಿಬಿ ಪೂರ್ಣ ತಂಡ: ರಜತ್ ಪಾಟಿದಾರ್, ವಿರಾಟ್ ಕೊಹ್ಲಿ, ದೇವದತ್ತ್ ಪಡಿಕ್ಕಲ್, ರಜತ್ ಪಾಟಿದಾರ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋರ್ಡಾನ್ ಕಾಕ್ಸ್, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಜಾಕೋಬ್ ಬೆಥೆಲ್, ವೆಂಕಟೇಶ್ ಅಯ್ಯರ್, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ವಿಕ್ಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾಣ್, ಜೋಶ್ ಹೇಜಲ್ವುಡ್, ರಸಿಖ್ ದಾರ್, ಸುಯಶ್ ಶರ್ಮಾ, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ಅಭಿನಂದನ್ ಸಿಂಗ್, ಜಾಕೋಬ್ ಡಫಿ,
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:31 pm, Mon, 6 April 26




