IPL 2026: RCB ತಂಡದ ಮುಂದಿನ ಪಂದ್ಯಗಳ ಮಾಹಿತಿ ಇಲ್ಲಿದೆ
IPL 2026: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಈವರೆಗೆ 9 ಪಂದ್ಯಗಳನ್ನಾಡಿದೆ. ಈ 9 ಪಂದ್ಯಗಳಲ್ಲಿ 6 ಮ್ಯಾಚ್ಗಳಲ್ಲಿ ಜಯ ಸಾಧಿಸಿದೆ. ಇನ್ನು ಆರ್‌ಸಿಬಿ ತಂಡ ಸೋತಿರುವುದು ಗುಜರಾತ್ ಟೈಟಾನ್ಸ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ವಿರುದ್ಧ ಮಾತ್ರ. ಇನ್ನುಳಿದ 5 ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಆರ್‌ಸಿಬಿ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವ ನಿರೀಕ್ಷೆಯಿದೆ.

ಐಪಿಎಲ್ 2026ರ ಆವೃತ್ತಿಯು ರೋಚಕ ಹಂತಕ್ಕೆ ತಲುಪಿದೆ. ಹಾಲಿ ಚಾಂಪಿಯನ್ಸ್ ಪಟ್ಟದೊಂದಿಗೆ ಕಣಕ್ಕಿಳಿದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಈ ಸೀಸನ್‌ನಲ್ಲಿ ಏರಿಳಿತದ ಹಾದಿ ಸವಿಯುತ್ತಿದೆ. ಏಪ್ರಿಲ್ 30ರಂದು ಗುಜರಾತ್ ಟೈಟಾನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಅನುಭವಿಸಿದ ಸೋಲು ತಂಡಕ್ಕೆ ಸ್ವಲ್ಪ ಹಿನ್ನಡೆ ತಂದಿದ್ದರೂ, ಪ್ಲೇ-ಆಫ್ಗೇರಲು ಮುಂದಿನ ಪಂದ್ಯಗಳು ಅತ್ಯಂತ ನಿರ್ಣಾಯಕವಾಗಿವೆ.
ಅದರಲ್ಲೂ ಮುಂದಿನ ಮ್ಯಾಚ್ನಲ್ಲಿ ಆರ್‌ಸಿಬಿ ತಂಡದ ಜಯ ಸಾಧಿಸಿದರೆ ಪ್ಲೇಆಫ್ಗೆ ಎಂಟ್ರಿ ಕೊಡುವುದು ಬಹುತೇಕ ಖಚಿತವಾಗಲಿದೆ. ಏಕೆಂದರೆ ಮುಂದಿನ ಪಂದ್ಯದ ಬಳಿಕ ಆರ್‌ಸಿಬಿ 4 ಮ್ಯಾಚ್ಗಳನ್ನಾಡಲಿದ್ದು, ಅದರಲ್ಲಿ ಒಂದು ಪಂದ್ಯ ಗೆದ್ದರೂ 16 ಅಂಕಗಳನ್ನು ಪಡೆಯಬಹುದು.
ಇಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮುಂದಿನ ಎದುರಾಳಿ ಲಕ್ನೋ ಸೂಪರ್ ಜೈಂಟ್ಸ್. ಮೇ 7 ರಂದು ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್‌ಸಿಬಿ ಗೆದ್ದರೆ ಒಟ್ಟು 14 ಅಂಕಗಳನ್ನು ಪಡೆಯಲಿದೆ. ಇದಾದ ಬಳಿಕ ಪ್ಲೇಆಫ್ ಆಡುವುದು ಖಚಿತವಾಗಲು ಕೇವಲ ಒಂದು ಜಯ ಸಿಕ್ಕರೆ ಸಾಕು. ಅದರಂತೆ ಆರ್‌ಸಿಬಿ ತಂಡದ ಮುಂದಿನ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿದೆ…
- ಲಕ್ನೋ ಸೂಪರ್ ಜೈಂಟ್ಸ್ (LSG): ಮೇ 7, ರಾತ್ರಿ 7:30ಕ್ಕೆ ಲಕ್ನೋದ ಏಕನಾ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ. ಲಕ್ನೋದ ಸ್ಪಿನ್ ಸ್ನೇಹಿ ಪಿಚ್‌ನಲ್ಲಿ ಆರ್‌ಸಿಬಿ ಬ್ಯಾಟರ್‌ಗಳಿಗೆ ದೊಡ್ಡ ಸವಾಲು ಎದುರಾಗಲಿದೆ.
- ಮುಂಬೈ ಇಂಡಿಯನ್ಸ್ (MI): ಮೇ 10ರಂದು ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಕ್ರೀಡಾಂಗಣದಲ್ಲಿ ಆರ್‌ಸಿಬಿ ತಂಡ ಮುಂಬೈ ಇಂಡಿಯನ್ಸ್ ಸವಾಲನ್ನು ಎದುರಿಸಲಿದೆ.
- ಕೋಲ್ಕತ್ತಾ ನೈಟ್ ರೈಡರ್ಸ್ (KKR): ಮೇ 13ರಂದು ಮತ್ತೆ ರಾಯ್‌ಪುರದಲ್ಲಿ ಕೆಕೆಆರ್ ಮತ್ತು ಆರ್‌ಸಿಬಿ ಸೆಣಸಲಿದೆ.
- ಪಂಜಾಬ್ ಕಿಂಗ್ಸ್ (PBKS): ಮೇ 17ರಂದು ಧರ್ಮಶಾಲಾದಲ್ಲಿ ನಡೆಯಲಿರುವ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಆರ್‌ಸಿಬಿ ಮುಖಾಮುಖಿಯಾಗಲಿದೆ.
- ಸನ್‌ರೈಸರ್ಸ್ ಹೈದರಾಬಾದ್ (SRH): ಮೇ 22ರಂದು ಹೈದರಾಬಾದ್‌ನಲ್ಲಿ ನಡೆಯಲಿರುವ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಎಸ್ಆರ್ಹೆಚ್ ಮತ್ತು ಆರ್‌ಸಿಬಿ ತಂಡಗಳು ಮುಖಾಮುಖಿಯಾಗಲಿದೆ.
ಇದನ್ನೂ ಓದಿ: ನಾನು ಅಷ್ಟೊಂದು ಹೆದರಿದ್ದೆ… ಕೈಲ್ ಜೇಮಿಸನ್ ಬಹಿರಂಗ ಹೇಳಿಕೆ
ಸದ್ಯ ಗುಜರಾತ್ ಟೈಟಾನ್ಸ್ ವಿರುದ್ಧದ ಸೋಲಿನ ಬಳಿಕ ಲಕ್ನೋನತ್ತ ಮುಖ ಮಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂದಿನ 5 ಪಂದ್ಯಗಳಲ್ಲಿ 2 ಗೆಲುವು ದಾಖಲಿಸುವ ಮೂಲಕ ಪ್ಲೇಆಫ್ಗೇರುವ ವಿಶ್ವಾಸದಲ್ಲಿದೆ. ಅದರಲ್ಲೂ ಮುಂದಿನ ಐದು ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡಿದರೆ ಮಾತ್ರ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಬಹುದು. ಹೀಗಾಗಿ ಮುಂಬರುವ ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಪಡೆಯಿಂದ ಭರ್ಜರಿ ಪ್ರದರ್ಶನ ನಿರೀಕ್ಷಿಸಬಹುದು.




