
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ನಾಳೆ (ಮೇ 26) ಧರ್ಮಶಾಲಾದ ಹೆಚ್ಪಿಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಮ್ಯಾಚ್ನಲ್ಲಿ ಗೆಲ್ಲುವ ತಂಡ ನೇರವಾಗಿ ಫೈನಲ್ಗೆ ಎಂಟ್ರಿ ಕೊಡಲಿದೆ. ಹೀಗಾಗಿ ಆರ್ಸಿಬಿ ತಂಡವು ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಅನ್ನೇ ಕಣಕ್ಕಿಳಿಸಲಿದೆ.
ಇಲ್ಲಿ ಆರ್ಸಿಬಿ ತಂಡವು 6+2+3 ಸಂಯೋಜನೆಯಲ್ಲಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚು. ಏಕೆಂದರೆ ಧರ್ಮಶಾಲಾ ಪಿಚ್ ಬ್ಯಾಟಿಂಗ್ಗೆ ಪೂರಕ. ಹೀಗಾಗಿ ಆರ್ಸಿಬಿ ಫಿಲ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿಯನ್ನು ಆರಂಭಿಕರಾಗಿ ಕಣಕ್ಕಿಳಿಸಲಿದ್ದಾರೆ.
ಇನ್ನು ಮೂರನೇ ಕ್ರಮಾಂಕದಲ್ಲಿ ದೇವದತ್ ಪಡಿಕ್ಕಲ್ ಕಾಣಿಸಿಕೊಳ್ಳಲಿದ್ದಾರೆ. ನಾಲ್ಕನೇ ಕ್ರಮಾಂಕದಲ್ಲಿ ರಜತ್ ಪಾಟಿದಾರ್ ಬ್ಯಾಟ್ ಬೀಸಿದರೆ, ಐದನೇ ಕ್ರಮಾಂಕದಲ್ಲಿ ಟಿಮ್ ಡೇವಿಡ್ ಕಾಣಿಸಿಕೊಳ್ಳಲಿದ್ದಾರೆ. ಅದೇ ರೀತಿ ವಿಕೆಟ್ ಕೀಪರ್ ಆಗಿ ಜಿತೇಶ್ ಶರ್ಮಾ ಆಡುವ ಬಳಗದಲ್ಲಿ ಇರಲಿದ್ದಾರೆ.
ಹಾಗೆಯೇ ಆಲ್ರೌಂಡರ್ಗಳಾಗಿ ಕೃನಾಲ್ ಪಾಂಡ್ಯ ಹಾಗೂ ರೊಮಾರಿಯೊ ಶೆಫರ್ಡ್ ಅನ್ನು ಕಣಕ್ಕಿಳಿಸುವ ಸಾಧ್ಯತೆ ಹೆಚ್ಚು. ಇನ್ನು ಬೌಲರ್ಗಳಾಗಿ ಜೋಶ್ ಹೇಝಲ್ವುಡ್, ಭುವನೇಶ್ವರ್ ಕುಮಾರ್ ಹಾಗೂ ರಾಸಿಖ್ ಸಲಾಂ ಕಣಕ್ಕಿಳಿಯಲಿದ್ದಾರೆ.
ಇವರೊಂದಿಗೆ ಇಂಪ್ಯಾಕ್ಟ್ ಪ್ಲೇಯರ್ ಪಟ್ಟಿಯಲ್ಲಿ ವೆಂಕಟೇಶ್ ಅಯ್ಯರ್ ಹಾಗೂ ಸುಯಶ್ ಶರ್ಮಾ ಕಾಣಿಸಿಕೊಳ್ಳಲಿದ್ದಾರೆ. ಇಲ್ಲಿ ಬ್ಯಾಟರ್ನನ್ನು ಬಳಸಬೇಕಿದ್ದರೆ ವೆಂಕಟೇಶ್ ಅಯ್ಯರ್ ಅವರನ್ನು ಕಣಕ್ಕಿಳಿಸಬಹುದು. ಇಲ್ಲಾ ಬೌಲರ್ನ ಅವಶ್ಯಕತೆ ಇದ್ದರೆ ದೇವದತ್ ಪಡಿಕ್ಕಲ್ ಬದಲಿಗೆ ಸುಯಶ್ ಶರ್ಮಾ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿಯಲಿದ್ದಾರೆ.
ಅಂದರೆ ಆರ್ಸಿಬಿ ತಂಡವು 6 ಬ್ಯಾಟರ್ಗಳು, 2 ಆಲ್ರೌಂಡರ್ಗಳು ಹಾಗೂ 3 ಬೌಲರ್ಗಳನ್ನು ಒಳಗೊಂಡಂತೆ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಅದರಂತೆ ಆರ್ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…
ಇದನ್ನೂ ಓದಿ: IPL 2026: ಐಪಿಎಲ್ ಇತಿಹಾಸದಲ್ಲೇ ಈ ರೀತಿಯ ಪ್ಲೇಆಫ್ ಇದೇ ಮೊದಲು..!