AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: RCB ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಖಚಿತ

IPL 2026 SRH vs RCB: ಸನ್​ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಈ ಬಾರಿಯ ಐಪಿಎಲ್​ನ ಉದ್ಘಾಟನಾ ಪಂದ್ಯದಲ್ಲಿ ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಆರ್​ಸಿಬಿ ತಂಡವು 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಇದೀಗ ಉಭಯ ತಂಡಗಳ ಎರಡನೇ ಮುಖಾಮುಖಿಗೆ ವೇದಿಕೆ ಸಿದ್ಧವಾಗಿದೆ.

IPL 2026: RCB ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಖಚಿತ
RCB
ಝಾಹಿರ್ ಯೂಸುಫ್
|

Updated on: May 21, 2026 | 1:53 PM

Share

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19ರ 67ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಸನ್​ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ. ನಾಳೆ (ಮೆ.22) ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಮಾಡಿಕೊಳ್ಳುವುದು ಖಚಿತ.

ಏಕೆಂದರೆ ಪಂಜಾಬ್ ಕಿಂಗ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಆರ್​ಸಿಬಿ ನಾಯಕ ರಜತ್ ಪಾಟಿದಾರ್ ಕಣಕ್ಕಿಳಿದಿರಲಿಲ್ಲ. ಅವರ ಬದಲಿಗೆ ಜಿತೇಶ್ ಶರ್ಮಾ ತಂಡವನ್ನು ಮುನ್ನಡೆಸಿದ್ದರು. ಇದೇ ವೇಳೆ ರಜತ್ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯಕ್ಕೆ ಲಭ್ಯರಿರಲಿದ್ದಾರೆ ಎಂದು ತಿಳಿಸಿದ್ದರು.

ಅದರಂತೆ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ರಜತ್ ಪಾಟಿದಾರ್ ಕಣಕ್ಕಿಳಿಯಲಿದ್ದಾರೆ. ಇತ್ತ ರಜತ್ ಪಾಟಿದಾರ್ ಕಣಕ್ಕಿಳಿದರೆ ಸುಯಶ್ ಶರ್ಮಾ ಹೊರಗುಳಿಯಬೇಕಾಗಿ ಬರಬಹುದು. ಏಕೆಂದರೆ ಕಳೆದ ಮ್ಯಾಚ್​ನಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವೆಂಕಟೇಶ್ ಅಯ್ಯರ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.

ಇದನ್ನೂ ಓದಿ: IPL 2026: ಹೀಗಾದ್ರೆ CSK ಪ್ಲೇಆಫ್​ಗೇರುವುದು ಖಚಿತ..!

ಇದೀಗ ಆರ್​ಸಿಬಿ ಮತ್ತು ಎಸ್​ಆರ್​ಹೆಚ್ ಮುಖಾಮುಖಿಯಾಗುತ್ತಿರುವುದು ಹೈದರಾಬಾದ್​ನ ಬ್ಯಾಟಿಂಗ್ ಪಿಚ್​ನಲ್ಲಿ. ಹೀಗಾಗಿ ಆರ್​ಸಿಬಿ ಬಲಿಷ್ಠ ಬ್ಯಾಟಿಂಗ್ ಲೈನಪ್​ನೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಅದರಂತೆ ಆರ್​ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…

  1. ವಿರಾಟ್ ಕೊಹ್ಲಿ
  2. ಜೇಕಬ್ ಬೆಥೆಲ್
  3. ದೇವದತ್ ಪಡಿಕ್ಕಲ್
  4. ರಜತ್ ಪಾಟಿದಾರ್ (ನಾಯಕ)
  5. ಟಿಮ್ ಡೇವಿಡ್
  6. ವೆಂಕಟೇಶ್ ಅಯ್ಯರ್
  7. ಜಿತೇಶ್ ಶರ್ಮಾ
  8. ಕೃನಾಲ್ ಪಾಂಡ್ಯ
  9. ರೊಮಾರಿಯೊ ಶೆಫರ್ಡ್​
  10. ಜೋಶ್ ಹೇಝಲ್​ವುಡ್
  11. ಭುವನೇಶ್ವರ್ ಕುಮಾರ್
  12. ರಾಸಿಖ್ ಸಲಾಂ ಅಥವಾ ಸುಯಶ್ ಶರ್ಮಾ (ಇಂಪ್ಯಾಕ್ಟ್ ಪ್ಲೇಯರ್).

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್​ವುಡ್, ಯಶ್ ದಯಾಲ್, ಭುವನೇಶ್ವರ್ ಕುಮಾರ್, ಯಶ್ ದಯಾಳ್, ರಾಸಿಖ್ ಸಲಾಂ, ವೆಂಕಟೇಶ್ ಅಯ್ಯರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ಜೇಕಬ್ ಡಫಿ, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ಜೋರ್ಡನ್ ಕಾಕ್ಸ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾನ್, ರಿಚರ್ಡ್ ಗ್ಲೀಸನ್.

Follow Us