
IPL 2026: ಐಪಿಎಲ್ 2026ರ 16ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಬಲಿಷ್ಠ ರಾಜಸ್ಥಾನ್ ರಾಯಲ್ಸ್ (RR) ತಂಡವನ್ನು ಎದುರಿಸಲಿದೆ. ಗುವಾಹಟಿಯ ಎಸಿಎ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಸತತ ಗೆಲುವಿನ ಓಟವನ್ನು ಮುಂದುವರಿಸುವ ಗುರಿಯನ್ನು ಆರ್ಸಿಬಿ ಹೊಂದಿದೆ. ಇದಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಲಿದೆ.
ಬ್ಯಾಟರ್ಗಳೇ ಆರ್ಸಿಬಿ ತಂಡದ ಬಲಿಷ್ಠ ಶಕ್ತಿ. ವಿರಾಟ್ ಕೊಹ್ಲಿ ಮತ್ತು ಫಿಲ್ ಸಾಲ್ಟ್ ಅವರ ಸ್ಫೋಟಕ ಆರಂಭವು ತಂಡಕ್ಕೆ ದೊಡ್ಡ ಶಕ್ತಿಯಾಗಿ ಪರಿಣಮಿಸಿದೆ. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುತ್ತಿರುವ ದೇವದತ್ ಪಡಿಕ್ಕಲ್ ಕಳೆದ ಎರಡು ಮ್ಯಾಚ್ಗಳಲ್ಲೂ ಅರ್ಧಶತಕ ಸಿಡಿಸಿದ್ದಾರೆ.
ಇನ್ನು ನಾಯಕ ರಜತ್ ಪಾಟಿದಾರ್, ಟಿಮ್ ಡೇವಿಡ್ ಅವರ ಅಬ್ಬರವನ್ನು ತಡೆಯುವುದೇ ಬೌಲರ್ಗಳ ಮುಂದಿರುವ ಅತೀ ದೊಡ್ಡ ಸವಾಲು. ಇದಾದ ಬಳಿಕ ಅಬ್ಬರಿಸಲು ಕೃನಾಲ್ ಪಾಂಡ್ಯ, ಜಿತೇಶ್ ಶರ್ಮಾ ಹಾಗೂ ರೊಮಾರಿಯೋ ಶೆಫರ್ಡ್ ಇದ್ದಾರೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಆರ್ಸಿಬಿ ತಂಡದ ಬ್ಯಾಟಿಂಗ್ ಲೈನಪ್ನಲ್ಲಿ ಬದಲಾವಣೆ ಕಂಡು ಬರುವ ಸಾಧ್ಯತೆಯಿಲ್ಲ.
ಕಳೆದ ಎರಡು ಮ್ಯಾಚ್ಗಳಿಂದ ಹೊರಗುಳಿದಿದ್ದ ಜೋಶ್ ಹೇಝಲ್ವುಡ್ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕಣಕ್ಕಿಳಿಯುವ ಸಾಧ್ಯತೆಯಿದೆ. ಹೇಝಲ್ವುಡ್ ಆಡುವ ಬಳಗದಲ್ಲಿ ಕಾಣಿಸಿಕೊಂಡರೆ, ಜೇಕಪ್ ಡಫಿ ಹೊರಗುಳಿಯಬೇಕಾಗುತ್ತದೆ. ಹೀಗಾಗಿ ಆರ್ಆರ್ ವಿರುದ್ಧ ಆರ್ಸಿಬಿ ಪ್ಲೇಯಿಂಗ್ ಇಲೆವೆನ್ನಲ್ಲಿ ಒಂದು ಬದಲಾವಣೆ ಕಂಡು ಬರುವ ಸಾಧ್ಯತೆ ಹೆಚ್ಚಿದೆ. ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಈವರೆಗೆ 34 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಆರ್ಸಿಬಿ ಗೆದ್ದಿರುವುದು 17 ಪಂದ್ಯಗಳಲ್ಲಿ. ಹಾಗೆಯೇ 14 ಪಂದ್ಯಗಳಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಜಯ ಸಾಧಿಸಿದೆ. ಇನ್ನುಳಿದ 3 ಪಂದ್ಯಗಳು ಕಾರಣಾಂತರಗಳಿಂದ ರದ್ದಾಗಿದ್ದವು.
ಇನ್ನು ಕಳೆದ ಕಳೆದ ಐದು ಮುಖಾಮುಖಿಯಲ್ಲಿ ಆರ್ಸಿಬಿ 3 ಪಂದ್ಯಗಳನ್ನು ಗೆದ್ದಿದ್ದರೆ, ರಾಜಸ್ಥಾನ್ ರಾಯಲ್ಸ್ 2 ಮ್ಯಾಚ್ಗಳಲ್ಲಿ ಜಯ ಸಾಧಿಸಿದೆ. ಇದೀಗ ಉಭಯ ತಂಡಗಳು 35ನೇ ಬಾರಿ ಮುಖಾಮುಖಿಯಾಗಲು ಸಜ್ಜಾಗಿದೆ.
ಇದನ್ನೂ ಓದಿ: IPL 2026: ಹೀಗೆ ಮಾಡಿದ್ರೆ ಮಾತ್ರ RCB ಇಬ್ಬರನ್ನು ಜೊತೆಯಾಗಿ ಕಣಕ್ಕಿಳಿಸಬಹುದು..!
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್ವುಡ್, ಯಶ್ ದಯಾಲ್, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ರಾಸಿಖ್ ಸಲಾಂ, ವೆಂಕಟೇಶ್ ಅಯ್ಯರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ಜೇಕಬ್ ಡಫಿ, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ಜೋರ್ಡನ್ ಕಾಕ್ಸ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾನ್, ಯಶ್ ದಯಾಳ್ (ಅಲಭ್ಯ).