IPL 2026: ಓರ್ವ ಆಟಗಾರ ಹೊರಕ್ಕೆ… ಹೀಗಿರಲಿದೆ RCB ಪ್ಲೇಯಿಂಗ್ 11

IPL 2026 MI vs RCB: ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಈವರೆಗೆ 34 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಆರ್​ಸಿಬಿ ತಂಡ ಗೆದ್ದಿರುವುದು 15 ಪಂದ್ಯಗಳಲ್ಲಿ ಮಾತ್ರ. ಇದೇ ವೇಳೆ ಮುಂಬೈ ಇಂಡಿಯನ್ಸ್ ತಂಡ 19 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಹೀಗಾಗಿ ಐಪಿಎಲ್​ನ 20ನೇ ಪಂದ್ಯದಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

IPL 2026: ಓರ್ವ ಆಟಗಾರ ಹೊರಕ್ಕೆ... ಹೀಗಿರಲಿದೆ RCB ಪ್ಲೇಯಿಂಗ್ 11
Rcb

Updated on: Apr 11, 2026 | 2:29 PM

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 20ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಮುಂಬೈ ಇಂಡಿಯನ್ಸ್ (MI) ತಂಡಗಳು ಮುಖಾಮುಖಿಯಾಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಾಳೆ (ಏ.12) ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ಒಂದು ಬದಲಾವಣೆ ಮಾಡುವುದು ಖಚಿತ.

ಏಕೆಂದರೆ ಕಳೆದ ಮೂರು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಆರ್​ಸಿಬಿ ವೇಗಿ ಅಭಿನಂದನ್ ಸಿಂಗ್ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ಆಡಿದ ಮೂರು ಮ್ಯಾಚ್​ಗಳಲ್ಲಿ ಒಟ್ಟು 58 ಎಸೆತಗಳನ್ನು ಎಸೆದಿರುವ ಅಭಿನಂದನ್ ನೀಡಿರುವುದು ಬರೋಬ್ಬರಿ 122 ರನ್​ಗಳು. ಅದರಲ್ಲೂ ರಾಜಸ್ಥಾನ್ ರಾಯಲ್ಸ್ ವಿರುದ್ಧ 3 ಓವರ್​ಗಳಲ್ಲಿ ಬರೋಬ್ಬರಿ 54 ರನ್​ ಚಚ್ಚಿಸಿಕೊಂಡಿದ್ದರು.

ಇತ್ತ ಮೂರು ಮ್ಯಾಚ್​ಗಳಲ್ಲಿ 12.62ರ ಸರಾಸರಿಯಲ್ಲಿ ರನ್ ನೀಡಿರುವ ಅಭಿನಂದನ್ ಸಿಂಗ್ ಪಡೆದಿರುವುದು ಕೇವಲ ಮೂರು ವಿಕೆಟ್​ಗಳು ಮಾತ್ರ. ಹೀಗಾಗಿಯೇ ಮುಂದಿನ ಪಂದ್ಯದಿಂದ ಅವರನ್ನು ಕೈ ಬಿಡುವ ಸಾಧ್ಯತೆ ಹೆಚ್ಚಿದೆ.  ಅದರಂತೆ ಮುಂಬೈ ಇಂಡಿಯನ್ಸ್ ವಿರುದ್ಧ ಅಭಿನಂದನ್ ಬದಲಿಗೆ ಆರ್​ಸಿಬಿ ರಾಸಿಖ್ ದಾರ್ ಸಲಾಂ ಅಥವಾ ಮಂಗೇಶ್ ಯಾದವ್ ಅವರನ್ನು ಕಣಕ್ಕಿಳಿಸಬಹುದು.

ಇಲ್ಲಿ ಅನುಭವಕ್ಕೆ ಮಣೆಹಾಕುವುದಾದರೆ ರಾಸಿಖ್ ದಾರ್​ಗೆ ಚಾನ್ಸ್ ಸಿಗುವ ಸಾಧ್ಯತೆಯಿದೆ. ಏಕೆಂದರೆ ರಾಸಿಖ್ ಈಗಾಗಲೇ 13 ಪಂದ್ಯಗಳನ್ನಾಡಿದ್ದಾರೆ. ಹೀಗಾಗಿ ವಾಂಖೆಡೆ ಪಿಚ್​ನಲ್ಲಿ ಜಮ್ಮು-ಕಾಶ್ಮೀರದ ಯುವ ವೇಗಿಗೆ ಅವಕಾಶ ನೀಡಬಹುದು. ಅದರಂತೆ ಆರ್​ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…

  • ಫಿಲ್ ಸಾಲ್ಟ್
  • ವಿರಾಟ್ ಕೊಹ್ಲಿ
  • ದೇವದತ್ ಪಡಿಕ್ಕಲ್
  • ರಜತ್ ಪಾಟಿದಾರ್ (ನಾಯಕ)
  • ಜಿತೇಶ್ ಶರ್ಮಾ (ವಿಕೆಟ್ ಕೀಪರ್)
  • ಟಿಮ್ ಡೇವಿಡ್
  • ರೊಮಾರಿಯೋ ಶೆಫರ್ಡ್
  • ಕೃನಾಲ್ ಪಾಂಡ್ಯ
  • ಭುವನೇಶ್ವರ್ ಕುಮಾರ್
  • ರಾಸಿಖ್ ದಾರ ಸಲಾಂ
  • ಜೋಶ್ ಹೇಝಲ್​ವುಡ್.
  • ಸುಯಶ್ ಶರ್ಮಾ (ಇಂಪ್ಯಾಕ್ಟ್ ಪ್ಲೇಯರ್).

ಇದನ್ನೂ ಓದಿ: ವೈಭವ್ ಸೂರ್ಯವಂಶಿಗೆ ವಿಶೇಷ ಗಿಫ್ಟ್ ನೀಡಿದ ವಿರಾಟ್ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್​ವುಡ್, ಯಶ್ ದಯಾಲ್, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ರಾಸಿಖ್ ಸಲಾಂ, ವೆಂಕಟೇಶ್ ಅಯ್ಯರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ಜೇಕಬ್ ಡಫಿ, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ಜೋರ್ಡನ್ ಕಾಕ್ಸ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾನ್, ಯಶ್ ದಯಾಳ್ (ಅಲಭ್ಯ).

 

Follow Us