ಪ್ಲೇಆಫ್‌ಗೂ ಮುನ್ನ ಆರ್​ಸಿಬಿಗೆ ಆಘಾತ; ಐಪಿಎಲ್‌ನಿಂದ ಹೊರಬಿದ್ದ ಸ್ಟಾರ್ ಆರಂಭಿಕ

RCB IPL 2026 Playoffs: ಐಪಿಎಲ್ 2026 ಪ್ಲೇಆಫ್‌ಗೂ ಮುನ್ನ ಆರ್‌ಸಿಬಿಗೆ ಹಿನ್ನಡೆಯಾಗಿದೆ. ಯುವ ಆಟಗಾರ ಜಾಕೋಬ್ ಬೆಥೆಲ್ ಬೆರಳಿನ ಗಾಯದಿಂದ ಹೊರಬಿದ್ದಿದ್ದಾರೆ. ಆದರೆ, ತಂಡಕ್ಕೆ ಬಲ ತುಂಬುವಂತೆ ಗಾಯದಿಂದ ಚೇತರಿಸಿಕೊಂಡ ಫಿಲ್ ಸಾಲ್ಟ್ ಮರಳಿದ್ದಾರೆ. ಸಾಲ್ಟ್ ಆಗಮನ ವಿರಾಟ್ ಕೊಹ್ಲಿ ಜೊತೆ ಆರಂಭಿಕ ಬ್ಯಾಟಿಂಗ್ ವಿಭಾಗವನ್ನು ಬಲಪಡಿಸಿದೆ. ಇದು ಕ್ವಾಲಿಫೈಯರ್ 1 ರಲ್ಲಿ ಗುಜರಾತ್ ಟೈಟಾನ್ಸ್ ಎದುರಿಸಲು ಆರ್‌ಸಿಬಿಗೆ ಆನೆಬಲ ನೀಡಿದೆ.

ಪ್ಲೇಆಫ್‌ಗೂ ಮುನ್ನ ಆರ್​ಸಿಬಿಗೆ ಆಘಾತ; ಐಪಿಎಲ್‌ನಿಂದ ಹೊರಬಿದ್ದ ಸ್ಟಾರ್ ಆರಂಭಿಕ
Jacob Bethell

Updated on: May 23, 2026 | 9:21 PM

ಐಪಿಎಲ್ 2026 (IPL 2026) ರ ಪ್ಲೇಆಫ್‌ಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ಹಾಲಿ ಚಾಂಪಿಯನ್ ಆರ್​ಸಿಬಿ ಇದೇ ಮೇ 26 ರಂದು ಕ್ವಾಲಿಫೈಯರ್ 1 ರಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕಾಗಿ ಆರ್​ಸಿಬಿ ಸಕಲ ತಯಾರಿಯನ್ನು ನಡೆಸುತ್ತುದೆ. ಈ ನಡುವೆ ತಂಡಕ್ಕೆ ಹಿನ್ನಡೆಯುಂಟಾಗಿದ್ದು, ತಂಡದ ಯುವ ಇಂಗ್ಲಿಷ್ ಬ್ಯಾಟ್ಸ್‌ಮನ್ ಜಾಕೋಬ್ ಬೆಥೆಲ್ (Jacob Bethell) ಗಾಯದಿಂದಾಗಿ ಟೂರ್ನಿಯಿಂದ ಹೊರಗುಳಿದಿದ್ದಾರೆ. ಬೆರಳಿನ ಗಾಯದಿಂದ ಬಳಲುತ್ತಿರುವ ಬೆಥೆಲ್ ತಂಡವನ್ನು ತೊರೆದು ತವರಿಗೆ ಮರಳಿದ್ದಾರೆ. ಅಂದರೆ ಆರ್​ಸಿಬಿ ಬೆಥೆಲ್ ಇಲ್ಲದೆ ಪ್ಲೇಆಫ್‌ ಆಡಲಿದೆ.

ಐಪಿಎಲ್​ನಿಂದ ಹೊರಬಿದ್ದ ಬೆಥೆಲ್

ಗಾಯದ ಕಾರಣದಿಂದಾಗಿ ಬೆಥೆಲ್ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಕೊನೆಯ ಲೀಗ್ ಪಂದ್ಯವನ್ನು ಆಡಿರಲಿಲ್ಲ. ಅವರ ಸ್ಥಾನದಲ್ಲಿ ವೆಂಕಟೇಶ್ ಅಯ್ಯರ್ ಆರಂಭಿಕರಾಗಿ ಆಡಿದ್ದರು. ವಾಸ್ತವವಾಗಿ ಬೆಥೆಲ್ ಕೂಡ ಫಿಲ್ ಸಾಲ್ಟ್ ಗಾಯಗೊಂಡ ಕಾರಣ ತಂಡದಲ್ಲಿ ಆಡುವ ಅವಕಾಶ ಪಡೆದರು. ಅದರಂತೆ ಆಡಿದ ಏಳು ಪಂದ್ಯಗಳಲ್ಲಿ ಕೇವಲ 96 ರನ್ ಕಲೆಹಾಕಲಷ್ಟೇ ಶಕ್ತರಾದರು. ಬೆಥೆಲ್ ಈಗ ಇಂಗ್ಲೆಂಡ್​ನಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಗಾಗಲಿದ್ದಾರೆ.

ಕೊಹ್ಲಿ ಜೊತೆ ಆರಂಭಿಕರು ಯಾರು?

ಬೆಥೆಲ್ ತಂಡ ತೊರೆದಿರುವುದರಿಂದ ಅವರ ಸ್ಥಾನದಲ್ಲಿ ಯಾರು ಆಡುತ್ತಾರೆ ಎಂಬುದು ಪ್ರಶ್ನೆಯಾಗಿದೆ. ಆ ಪ್ರಶ್ನೆಗೆ ಉತ್ತರ ಸಿಕ್ಕಿದ್ದು, ಗಾಯದಿಂದ ತಂಡ ತೊರೆದಿದ್ದ ಫಿಲ್ ಸಾಲ್ಟ್ ಚೇತರಿಸಿಕೊಂಡು ತಂಡಕ್ಕೆ ಮರಳಿದ್ದಾರೆ. ಮೇ 22 ರಂದು ಹೈದರಾಬಾದ್‌ನಲ್ಲಿ ನಡೆದ ಸನ್​ರೈಸರ್ಸ್​ ಹೈದರಾಬಾದ್​ ವಿರುದ್ಧದ ಪಂದ್ಯಕ್ಕೂ ಮುನ್ನ ಸಾಲ್ಟ್ ಆರ್‌ಸಿಬಿ ತಂಡವನ್ನು ಸೇರಿಕೊಂಡಿದ್ದಾರೆ. ಹೀಗಾಗಿ ಅವರು ಪ್ಲೇಆಫ್‌ ಸುತ್ತಿನಲ್ಲಿ ಕಣಕ್ಕಿಳಿಯುವುದು ಖಚಿತ. ಇಲ್ಲಿಯವರೆಗೆ ಆರು ಪಂದ್ಯಗಳನ್ನು ಆಡಿರುವ ಸಾಲ್ಟ್ ಸರಾಸರಿ 33.66 ಮತ್ತು 168 ಸ್ಟ್ರೈಕ್ ರೇಟ್‌ನಲ್ಲಿ 202 ರನ್ ಗಳಿಸಿದ್ದಾರೆ. ಗಾಯಗೊಳ್ಳುವ ಮೊದಲು ಅವರು ಎರಡು ಅರ್ಧಶತಕಗಳನ್ನು ಬಾರಿಸಿದ್ದರು. ಹೀಗಾಗಿ ಸಾಲ್ಟ್ ಆಗಮನ ಆರ್​ಸಿಬಿಗೆ ಆನೆಬಲ ತಂದಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:19 pm, Sat, 23 May 26

pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us