AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ತಂಡ ಮಾರಾಟಕ್ಕಿದೆ… ಇಷ್ಟು ಕೋಟಿ ಇದ್ದರೆ ನೀವು ಸಹ ಖರೀದಿಸಬಹುದು!

RCB on sale; : ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಡಿಯಾಜಿಯೋ ಕಂಪೆನಿಯ ಒಡೆತನದಲ್ಲಿದೆ. ಬ್ರಿಟನ್ ಮೂಲದ ಡಿಯಾಜಿಯೋ ತನ್ನ ಭಾರತೀಯ ಘಟಕವಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಎಂಬ ಆಲ್ಕೋಹಾಲ್ ಕಂಪನಿಯ ಮೂಲಕ ಆರ್​ಸಿಬಿ ಫ್ರಾಂಚೈಸಿಯನ್ನು ಹೊಂದಿದೆ. ಇದೀಗ ಡಿಯಾಜಿಯೋ ಕಂಪೆನಿಯು ಆರ್​ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲು ಮುಂದಾಗಿದ್ದಾರೆ.

RCB ತಂಡ ಮಾರಾಟಕ್ಕಿದೆ... ಇಷ್ಟು ಕೋಟಿ ಇದ್ದರೆ ನೀವು ಸಹ ಖರೀದಿಸಬಹುದು!
Rcb
ಝಾಹಿರ್ ಯೂಸುಫ್
|

Updated on: Feb 04, 2026 | 10:19 AM

Share

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಮಾರಾಟಕ್ಕೆ ಡಿಯಾಜಿಯೋ ಕಂಪೆನಿ ಮುಂದಾಗಿದೆ. ಈ ಮಾರಾಟ ಪ್ರಕ್ರಿಯೆಗೆ ಅಧಿಕೃತ ಚಾಲನೆ ನೀಡಲಾಗಿದ್ದು, ಆರ್​ಸಿಬಿ ಫ್ರಾಂಚೈಸಿಯ ಮೌಲ್ಯ ಸುಮಾರು 2 ಬಿಲಿಯನ್ ಡಾಲರ್ ಎಂದು ಘೋಷಿಸಲಾಗಿದೆ. ಅಂದರೆ ಭಾರತೀಯ ರೂಪಾಯಿ ಮೌಲ್ಯ ಸುಮಾರು 18,000 ಕೋಟಿ ರೂ.

ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಬಿಡ್ಡಿಂಗ್ ಸುಮಾರು 18 ಸಾವಿರ ಕೋಟಿ ರೂ.ನಿಂದ ಶುರುವಾಗಲಿದೆ. ಈಗಾಗಲೇ ಕೆಲ ಉದ್ಯಮಿಗಳು ಆರ್​ಸಿಬಿ ತಂಡದ ಖರೀದಿಗೆ ಆಸಕ್ತಿ ತೋರಿದ್ದು, ಹೀಗಾಗಿ ಈ ಮೊತ್ತವು ಮತ್ತಷ್ಟು ಏರಿಕೆಯಾಗುವುದರಲ್ಲಿ ಅನುಮಾನವೇ ಇಲ್ಲ.

ಝೆರೋಧಾ ಕಂಪೆನಿಯ ಸಹ-ಸಂಸ್ಥಾಪಕ ನಿಖಿಲ್ ಕಾಮತ್ ಮತ್ತು ಮಣಿಪಾಲ್ ಶಿಕ್ಷಣ ಮತ್ತು ವೈದ್ಯಕೀಯ ಸಂಸ್ಥೆಯ (MEMG) ಅಧ್ಯಕ್ಷ ರಂಜನ್ ಪೈ ಜೊತೆಗೂಡಿ  ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಖರೀದಿಗೆ ಆಸಕ್ತಿ ತೋರಿದ್ದಾರೆ ಈ ಹಿಂದೆ ವರದಿಯಾಗಿತ್ತು.

ಅತ್ತ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆದಾರ್ ಪೂನವಾಲ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಖರೀದಿಗೆ ಆಸಕ್ತಿ ಹೊಂದಿದ್ದಾರೆ.

ಮತ್ತೊಂದೆಡೆ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯ ಸಹ ಮಾಲೀಕರಾದ ಪಾರ್ಥ್ ಜಿಂದಾಲ್ ಕೂಡ ಆರ್​ಸಿಬಿ ಮೇಲೆ ಕಣ್ಣಿಟ್ಟಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಗಾಗಿ ಅವರ ಜೆಎಸ್​ಡಬ್ಲ್ಯೂ ಗ್ರೂಪ್ ಬಿಡ್ ಮಾಡಲಿದೆ ಎಂದು ತಿಳಿದು ಬಂದಿದೆ.

ಇನ್ನೊಂದೆಡೆ ಅದಾನಿ ಗ್ರೂಪ್ ಕೂಡ ಆರ್​ಸಿಬಿ ಫ್ರಾಂಚೈಸಿಯನ್ನು ಖರೀದಿಸಿ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಎಂಟ್ರಿ ಕೊಡಲು ಪ್ಲ್ಯಾನ್ ರೂಪಿಸುತ್ತಿದೆ. ಹೀಗಾಗಿ ಅದಾನಿ ಗ್ರೂಪ್​ ಕಡೆಯಿಂದ ಬಿಡ್ಡಿಂಗ್​ನಲ್ಲಿ ಪೈಪೋಟಿ ಎದುರಾಗಲಿದೆ.

ಈ ಉದ್ಯಮಿಗಳಲ್ಲದೆ ದೇವಯಾನಿ ಇಂಟರ್​ನ್ಯಾಷನಲ್ ಗ್ರೂಪ್ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಖರೀದಿಗೆ ಆಸಕ್ತಿ ತೋರಿದೆ. ಹಾಗೆಯೇ ಅಮೆರಿಕದ ಪ್ರೈವೆಟ್ ಇನ್​ವೆಸ್ಟ್​ಮೆಂಟ್ ಕಂಪೆನಿಯೊಂದು ಕೂಡ ಆರ್​ಸಿಬಿ ಫ್ರಾಂಚೈಸಿ ಖರೀದಿಗಾಗಿ ಡಿಯಾಜಿಯೊ ಕಂಪೆನಿ ಜೊತೆ ಮಾತುಕತೆ ನಡೆಸಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: 5 ಓವರ್​ಗಳಲ್ಲಿ ವಿಶ್ವ ದಾಖಲೆ ನಿರ್ಮಿಸಿದ ವೆಸ್ಟ್ ಇಂಡೀಸ್

ಇದೀಗ 18 ಸಾವಿರ ಕೋಟಿ ರೂ. ಬ್ರ್ಯಾಂಡ್ ಮೌಲ್ಯದೊಂದಿಗೆ ಆರ್​ಸಿಬಿ ಫ್ರಾಂಚೈಸಿಯನ್ನು ಡಿಯಾಜಿಯೋ ಕಂಪೆನಿ ಮಾರಾಟಕ್ಕಿಟ್ಟಿದೆ ಎಂದು  Sportico ವರದಿ ಮಾಡಿದೆ. ಈ ಮಾರಾಟ ಪ್ರಕ್ರಿಯೆಗೆ ಅಧಿಕೃತ ಚಾಲನೆ ದೊರೆತಿರುವುದರಿಂದ ಪ್ರಮುಖ ಕಂಪೆನಿಗಳ ಕಡೆಯಿಂದ ಬಿಡ್ಡಿಂಗ್​ನಲ್ಲಿ ಪೈಪೋಟಿ ನಡೆಯಬಹುದು. ಈ ಪೈಪೋಟಿಯೊಂದಿಗೆ ಆರ್​ಸಿಬಿ ಫ್ರಾಂಚೈಸಿಯು ಎಷ್ಟು ಕೋಟಿಗೆ ಮಾರಾಟವಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

RCB ಫ್ರಾಂಚೈಸಿ ಖರೀದಿಗೆ ಆಸಕ್ತಿ ಹೊಂದಿರುವವರು:

  • ಜೆಎಸ್​ಡಬ್ಲ್ಯೂ ಗ್ರೂಪ್ (ಪಾರ್ಥ್ ಜಿಂದಾಲ್)
  • ಅದಾನಿ ಗ್ರೂಪ್ (ಗೌತಮ್ ಅದಾನಿ)
  • ಪೂನಾವಾಲ ಗ್ರೂಪ್ (ಆದಾರ್ ಪೂನಾವಾಲ)
  • ನಿಖಿಲ್ ಕಾಮತ್ (ಝೆರೋಧಾ ಕಂಪೆನಿ)
  • ರಂಜನ್ ಪೈ (ಮಣಿಪಾಲ್ ಗ್ರೂಪ್)
  • ದೇವಯಾನಿ ಇಂಟರ್ನ್ಯಾಷನಲ್ ಗ್ರೂಪ್ (ರವಿಕಾಂತ್ ಜೈಪುರಿಯಾ)
  • ಅಮೆರಿಕದ ಪ್ರೈವೆಟ್ ಇನ್​ವೆಸ್ಟ್​ಮೆಂಟ್ ಕಂಪೆನಿ