IPL 2026: ಅಗಲಿದ 11 ಜೀವಗಳಿಗೆ 1 ನಿಮಿಷದ ಮೌನಾಚರಣೆ; ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿದ ತಂಡಗಳು
IPL 2026 RCB vs SRH Match: 2026ರ ಐಪಿಎಲ್ ಆವೃತ್ತಿಯು RCB vs SRH ಪಂದ್ಯದೊಂದಿಗೆ ಆರಂಭಗೊಂಡಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ, ಕಳೆದ ವರ್ಷ ಸಂಭ್ರಮಾಚರಣೆ ವೇಳೆ ಕಾಲ್ತುಳಿತದಲ್ಲಿ ಮೃತಪಟ್ಟ 11 ಅಭಿಮಾನಿಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಉಭಯ ತಂಡಗಳ ಆಟಗಾರರು ಕಪ್ಪು ಬ್ಯಾಂಡ್ ಧರಿಸಿ, ಒಂದು ನಿಮಿಷ ಮೌನಾಚರಣೆ ನಡೆಸಿದರು. ಅವರ ನೆನಪಿಗಾಗಿ ಸ್ಮಾರಕ ನಿರ್ಮಿಸಿದ್ದು, 11 ಆಸನಗಳನ್ನು ಖಾಲಿ ಇಡಲು ನಿರ್ಧರಿಸಲಾಗಿದೆ.

2026 ರ ಐಪಿಎಲ್ (IPL 2026) ಇಂದಿನಿಂದ ಆರಂಭವಾಗಿದೆ. ಲೀಗ್ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆರ್ಸಿಬಿ ಹಾಗೂ ಸನ್ರೈಸರ್ಸ್ ಹೈದರಾಬಾದ್ (RCB vs SRH) ತಂಡಗಳು ಮುಖಾಮುಖಿಯಾಗಿವೆ. ತವರಿನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ ನಾಯ ರಜತ್ ಪಾಟಿದರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಟಾಸ್ ಜೊತೆಗೆ ಎರಡು ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಅದರಂತೆ ಆರ್ಸಿಬಿ ಪರ ಇಬ್ಬರು ಆಟಗಾರರು ಐಪಿಎಲ್ಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಪಂದ್ಯ ಆರಂಭಕ್ಕೂ ಮುನ್ನ ಉಭಯ ತಂಡಗಳಿಂದ ಅಗಲಿದ 11 ಅಮಾಯಕ ಜೀವಗಳಿಗೆ ಸಂತಾಪ ಸೂಚಿಸಲಾಯಿತು.
11 ಜೀವಗಳಿಗೆ ಸಂತಾಪ ಸೂಚನೆ
ಟಾಸ್ ಬಳಿಕ ಉಭಯ ತಂಡಗಳು ಕಣಕ್ಕಿಳಿಯುವ ಮುನ್ನ 1 ನಿಮಿಷದ ಮೌನಾಚರಣೆ ನಡೆಸಿ, ಚಿನ್ನಸ್ವಾಮಿ ಮೈದಾನದಲ್ಲಿ ಬಳಿ ಕಳೆದ ವರ್ಷ ನಡೆದಿದ್ದ ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದ 11 ಜೀವಗಳಿಗೆ ಸಂತಾಪ ಸೂಚಿಸಲಾಯಿತು. ಇದರ ಜೊತೆಗೆ ಎರಡು ತಂಡಗಳ ಆಟಗಾರರು ತಮ್ಮ ಕೈಗೆ ಕಪ್ಪು ಬ್ಯಾಂಡ್ ಧರಿಸಿ ಕಣಕ್ಕಿಳಿಯುವ ಮೂಲಕ ಗೌರವ ಸಮರ್ಪಣೆ ಮಾಡಿದ್ದಾರೆ.
11 ಆಸನಗಳು ಖಾಲಿ ಇರಲಿವೆ
ಈ ಪಂದ್ಯಕ್ಕೂ ಮುನ್ನವೇ ಆರ್ಸಿಬಿ ಆಡಳಿತ ಮಂಡಳಿ ಹಾಗೂ ಕೆಎಸ್ಸಿಎ ಅಗಲಿದ 11 ಜೀವಗಳ ನೆನಪನ್ನು ಶಾಶ್ವತವಾಗಿರಿಸುವ ನಿಟ್ಟಿನಲ್ಲಿ ಕ್ರೀಡಾಂಗಣದ ಮುಖ್ಯಧ್ವಾರದ ಬಳಿ ಸ್ಮಾರಕವನ್ನು ನಿರ್ಮಾಣ ಮಾಡಿದೆ. ಹಾಗೆಯೇ ಸಾವನ್ನಪ್ಪಿದ್ದ 11 ಜನರ ಸ್ಮರಣಾರ್ಥವಾಗಿ ಮೈದಾನದಲ್ಲಿ 11 ಆಸನಗಳನ್ನು ಖಾಲಿ ಇಡಲು ನಿರ್ಧರಿಸಿದೆ. ಕೇವಲ ಐಪಿಎಲ್ ಪಂದ್ಯಗಳಿಗೆ ಮಾತ್ರವಲ್ಲದೆ, ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುವ ಅಂತರರಾಷ್ಟ್ರೀಯ ಪಂದ್ಯಗಳ ಸಮಯದಲ್ಲೂ ಆ 11 ಆಸನಗಳು ಖಾಲಿ ಇರಲಿವೆ.
RCB ತಂಡ 18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆದ ಹಿನ್ನಲೆ ತಂಡದ ಆಟಗಾರರು ಬೆಂಗಳೂರಿಗೆ ಬಂದಿದ್ದು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಚರಣೆ ನಡೆದಿತ್ತು. ಈ ಸಂಭ್ರಮಾಚರಣೆ ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಕ್ರೀಡಾಂಗಣದ ಬಳಿ ಸೇರಿದ್ದ ಪರಿಣಾಮ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿತ್ತು. ಘಟನೆಯಲ್ಲಿ 11 ಮಂದಿ ಆರ್ಸಿಬಿ ಅಭಿಮಾನಿಗಳು ಮೃತಪಟ್ಟಿದ್ದರೆ, ಹಲವರು ಅಸ್ವಸ್ಥಗೊಂಡಿದ್ದರು.
RCB vs SRH Live Score, IPL 2026: ಜಾಕೋಬ್ ಡಫಿಗೆ 3ನೇ ವಿಕೆಟ್
ಉಭಯ ತಂಡಗಳ ಪ್ಲೇಯಿಂಗ್ 11
ಆರ್ಸಿಬಿ: ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸುಯಾಶ್ ಶರ್ಮಾ, ಜಾಕೋಬ್ ಡಫ್ಫಿ, ಅಭಿನಂದನ್ ಸಿಂಗ್.
ಎಸ್ಆರ್ಎಚ್: ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಇಶಾನ್ ಕಿಶನ್ (ವಿಕೆಟ್ ಕೀಪರ್/ ನಾಯಕ), ಹೆನ್ರಿಚ್ ಕ್ಲಾಸೆನ್, ಅನಿಕೇತ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಸಲೀಲ್ ಅರೋರಾ, ಹರ್ಷ್ ದುಬೆ, ಹರ್ಷಲ್ ಪಟೇಲ್, ಜಯದೇವ್ ಉನದ್ಕತ್, ಇಶಾನ್ ಮಾಲಿಂಗ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:05 pm, Sat, 28 March 26
