AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಆರ್​ಸಿಬಿಯ ಕೊನೆಯ ಲೀಗ್ ಪಂದ್ಯ ಯಾವಾಗ? ಎದುರಾಳಿ ಯಾರು?

RCB in IPL 2026 Playoffs: ಐಪಿಎಲ್ 2026 ರ 61ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇಆಫ್‌ಗೆ ಅರ್ಹತೆ ಪಡೆದುಕೊಂಡಿದೆ. ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲೇ ಮುಂದುವರೆಯಲು ಆರ್​ಸಿಬಿ ತನ್ನ ಕೊನೆಯ ಲೀಗ್ ಪಂದ್ಯವನ್ನು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ. ಮೇ 22 ರಂದು ಹೈದರಾಬಾದ್‌ನಲ್ಲಿ ನಡೆಯಲಿರುವ ಈ ಪಂದ್ಯದ ದಿನಾಂಕ, ಸಮಯ, ಸ್ಥಳ ಮತ್ತು ನೇರಪ್ರಸಾರದ ಸಂಪೂರ್ಣ ಮಾಹಿತಿ ಇಲ್ಲಿದೆ.

IPL 2026: ಆರ್​ಸಿಬಿಯ ಕೊನೆಯ ಲೀಗ್ ಪಂದ್ಯ ಯಾವಾಗ? ಎದುರಾಳಿ ಯಾರು?
Rcb
ಪೃಥ್ವಿಶಂಕರ
|

Updated on:May 18, 2026 | 4:18 PM

Share

ಐಪಿಎಲ್ 2026 (IPL2026) ರ 61 ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಮೊದಲ ತಂಡವಾಗಿ ಪ್ಲೇಆಫ್​ಗೆ ಅರ್ಹತೆ ಪಡೆದುಕೊಂಡಿದೆ. ಲೀಗ್‌ನಲ್ಲಿ ತನ್ನ 13ನೇ ಪಂದ್ಯವನ್ನಾಡಿದ ಆರ್​ಸಿಬಿ ಮೊದಲು ಬ್ಯಾಟಿಂಗ್‌ ಮಾಡಿ 20 ಓವರ್​ಗಳಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 222 ರನ್ ಗಳಿಸಿ, ಪಂಜಾಬ್ ಗೆಲುವಿಗೆ 223 ರನ್‌ಗಳ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ 199 ರನ್ ಗಳಿಸಲಷ್ಟೇ ಶಕ್ತವಾಗಿ 23 ರನ್​ಗಳಿಂದ ಸೋಲೊಪ್ಪಿಕೊಂಡಿತು. ಈ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಆರ್​ಸಿಬಿ, ಅಗ್ರಸ್ಥಾನದಲ್ಲೇ ಮುಂದುವರೆಯಬೇಕಾದರೆ ತನ್ನ ಕೊನೆಯ ಲೀಗ್ ಪಂದ್ಯವನ್ನು ಗೆಲ್ಲಬೇಕು. ಆ ಕೊನೆಯ ಲೀಗ್ ಪಂದ್ಯ ಯಾವಾಗ ನಡೆಯಲಿದೆ? ಎದುರಾಳಿ ಯಾರು ಎಂಬುದರ ವಿವರ ಇಲ್ಲಿದೆ.

ಸನ್​ರೈಸರ್ಸ್​ಗೆ ಸೇಡಿನ ಸಮರ

ಆರ್‌ಸಿಬಿ ತನ್ನ ಕೊನೆಯ ಲೀಗ್ ಪಂದ್ಯವನ್ನು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ. ಈ ಲೀಗ್‌ನಲ್ಲಿ ಉಭಯ ತಂಡಗಳು ಮುಖಾಮುಖಿಯಾಗುತ್ತಿರುವುದು ಇದು ಎರಡನೇ ಬಾರಿ. ಇದಕ್ಕೂ ಮುನ್ನ ಉಭಯ ತಂಡಗಳು ಲೀಗ್​ನ ಉದ್ಘಾಟನಾ ಪಂದ್ಯದಲ್ಲಿ ಎದುರುಬದುರಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ್ದ ಸನ್‌ರೈಸರ್ಸ್ 201 ರನ್ ಕಲೆಹಾಕಿತ್ತು. ಈ ಗುರಿ ಬೆನ್ನಟ್ಟಿದ ಆರ್‌ಸಿಬಿ 16ನೇ ಓವರ್​ನಲ್ಲಿಯೇ ಜಯದ ನಗೆ ಬೀರಿತ್ತು. ಹೀಗಾಗಿ ಸನ್‌ರೈಸರ್ಸ್ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿದ್ದರೆ, ಇತ್ತ ಆರ್​ಸಿಬಿ ಈ ಪಂದ್ಯವನ್ನು ಗೆದ್ದು ಅಗ್ರಸ್ಥಾನದಲ್ಲಿ ಉಳಿಯಲು ಯತ್ನಿಸಲಿದೆ.

ಸನ್‌ರೈಸರ್ಸ್ ಹಾಗೂ ಆರ್​ಸಿಬಿ ನಡುವಿನ ಐಪಿಎಲ್ 2026 ರ 67ನೇ ಪಂದ್ಯ ಯಾವಾಗ ನಡೆಯಲಿದೆ?

ಸನ್‌ರೈಸರ್ಸ್ ಹಾಗೂ ಆರ್​ಸಿಬಿ ನಡುವಿನ ಐಪಿಎಲ್ 2026 ರ 67ನೇ ಪಂದ್ಯ ಮೇ 22 ರಂದು ನಡೆಯಲಿದೆ.

ಸನ್‌ರೈಸರ್ಸ್ ಹಾಗೂ ಆರ್​ಸಿಬಿ ನಡುವಿನ ಐಪಿಎಲ್ 2026 ರ 67ನೇ ಪಂದ್ಯ ಎಲ್ಲಿ ನಡೆಯಲಿದೆ?

ಸನ್‌ರೈಸರ್ಸ್ ಹಾಗೂ ಆರ್​ಸಿಬಿ ನಡುವಿನ ಐಪಿಎಲ್ 2026 ರ 67ನೇ ಪಂದ್ಯ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣ, ಹೈದರಾಬಾದ್​ನಲ್ಲಿ ನಡೆಯಲಿದೆ.

ಸನ್‌ರೈಸರ್ಸ್ ಹಾಗೂ ಆರ್​ಸಿಬಿ ನಡುವಿನ ಐಪಿಎಲ್ 2026 ರ 67ನೇ ಪಂದ್ಯ ಎಷ್ಟು ಗಂಟೆಗೆ ಆರಂಭ?

ಸನ್‌ರೈಸರ್ಸ್ ಹಾಗೂ ಆರ್​ಸಿಬಿ ನಡುವಿನ ಐಪಿಎಲ್ 2026 ರ 67ನೇ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ. ಟಾಸ್ ಸಂಜೆ 6:30 ಕ್ಕೆ ನಡೆಯಲಿದೆ.

ಸನ್‌ರೈಸರ್ಸ್ ಹಾಗೂ ಆರ್​ಸಿಬಿ ನಡುವಿನ ಐಪಿಎಲ್ 2026 ರ 67ನೇ ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

ಸನ್‌ರೈಸರ್ಸ್ ಹಾಗೂ ಆರ್​ಸಿಬಿ ನಡುವಿನ ಐಪಿಎಲ್ 2026 ರ 67ನೇ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಹಾಗೆಯೇ ಮೊಬೈಲ್ ಅಥವಾ ಲ್ಯಾಪ್‌ಟಾಪ್‌ನಲ್ಲಿ ಪಂದ್ಯವನ್ನು ವೀಕ್ಷಿಸಲು ಇಷ್ಟಪಡುವ ವೀಕ್ಷಕರಿಗೆ, ಜಿಯೋ ಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಲಭ್ಯವಿರುತ್ತದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:15 pm, Mon, 18 May 26

Follow Us
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್