AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs GT: ಏಕಪಕ್ಷೀಯವಾಗಿ ಗುಜರಾತ್ ಮಣಿಸಿ ಸತತ 2ನೇ ಬಾರಿಗೆ ಫೈನಲ್​ಗೇರಿದ ಆರ್​ಸಿಬಿ

IPL 2026 Qualifier-1 RCB vs GT Result: ಆರ್​ಸಿಬಿ ಸತತ ಎರಡನೇ ಬಾರಿಗೆ ಐಪಿಎಲ್ ಫೈನಲ್‌ಗೆ ಪ್ರವೇಶಿಸಿದೆ. ಧರ್ಮಶಾಲಾದಲ್ಲಿ ನಡೆದ ಕ್ವಾಲಿಫೈಯರ್ 1ರಲ್ಲಿ ಗುಜರಾತ್ ವಿರುದ್ಧ ರಾಜತ್ ಪಾಟಿದಾರ್ ಅವರ ಅಬ್ಬರದ ಬ್ಯಾಟಿಂಗ್‌ನಿಂದ 255 ರನ್‌ಗಳ ಬೃಹತ್ ಮೊತ್ತ ಪೇರಿಸಿ, ಸುಲಭ ಗೆಲುವು ಸಾಧಿಸಿತು. ಹಾಲಿ ಚಾಂಪಿಯನ್ ಆರ್​ಸಿಬಿ ಟ್ರೋಫಿ ಎತ್ತಿಹಿಡಿಯುವ ಕನಸು ಮತ್ತಷ್ಟು ಹತ್ತಿರವಾಗಿದೆ. ಗುಜರಾತ್‌ಗೆ ಫೈನಲ್‌ಗೆ ಬರಲು ಇನ್ನೊಂದು ಅವಕಾಶವಿದೆ.

RCB vs GT: ಏಕಪಕ್ಷೀಯವಾಗಿ ಗುಜರಾತ್ ಮಣಿಸಿ ಸತತ 2ನೇ ಬಾರಿಗೆ ಫೈನಲ್​ಗೇರಿದ ಆರ್​ಸಿಬಿ
Rcb 2026Image Credit source: RCB X
ಪೃಥ್ವಿಶಂಕರ
|

Updated on:May 27, 2026 | 12:02 AM

Share

ಸತತ ಎರಡನೇ ಬಾರಿಗೆ ಐಪಿಎಲ್ (IPL 2026) ಟ್ರೋಫಿ ಎತ್ತಿಹಿಡಿಯುವ ತವಕದಲ್ಲಿರುವ ಹಾಲಿ ಚಾಂಪಿಯನ್ ಆರ್​ಸಿಬಿ (RCB), ತಾನು ಏಕೆ ಮತ್ತೊಮ್ಮೆ ಚಾಂಪಿಯನ್ ಆಗಬೇಕು ಎಂಬುದನ್ನು ಕ್ವಾಲಿಫೈಯರ್ 1 ಪಂದ್ಯದಲ್ಲಿಯೇ ಸಾಭೀತುಪಡಿಸಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆದ ಗುಜರಾತ್ ವಿರುದ್ಧದ ಈ ಪಂದ್ಯದಲ್ಲಿ ಕೆಚ್ಚೆದೆಯ ಆಟ ಪ್ರದರ್ಶಿಸಿದ ಆರ್​ಸಿಬಿ ದಾಖಲೆಯ ಗೆಲುವು ದಾಖಲಿಸಿ ಸತತ ಎರಡನೇ ಬಾರಿಗೆ ಐಪಿಎಲ್ ಫೈನಲ್​ಗೇರಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ ನಾಯಕ ರಜತ್ ಪಾಟಿದರ್ (Rajat Patidar) ಅವರ ಸಿಡಿಲಬ್ಬರದ ಬ್ಯಾಟಿಂಗ್​ನಿಂದಾಗಿ ದಾಖಲೆಯ 255 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಗುಜರಾತ್, ಆರ್​ಸಿಬಿ ಬೌಲರ್​ಗಳಿಗೆ ದಾಳಿಗೆ ನಲುಗಿ 162 ರನ್​ಗಳಿಗೆ ಆಲೌಟ್ ಆಯಿತು. ಆದಾಗ್ಯೂ ಗುಜರಾತ್​ಗೆ ಫೈನಲ್​ಗೇರಲು ಇನ್ನೊಂದು ಅವಕಾಶವಿದ್ದು, ಕ್ವಾಲಿಫೈಯರ್ 2 ಅನ್ನು ಆಡಲಿದೆ. ಆ ಪಂದ್ಯದಲ್ಲಿ ಗೆದ್ದರೆ ಮತ್ತೆ ಫೈನಲ್​ನಲ್ಲಿ ಆರ್​ಸಿಬಿಯನ್ನು ಎದುರಿಸಲಿದೆ.ಮೇಲೆ ಹೇಳಿದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸತತ ಎರಡನೇ ಬಾರಿಗೆ ಮತ್ತು ಐಪಿಎಲ್ ಇತಿಹಾಸದಲ್ಲಿ ಐದನೇ ಬಾರಿಗೆ ಫೈನಲ್ ತಲುಪಿದ ಸಾಧನೆ ಮಾಡಿದೆ.

ಆರ್​ಸಿಬಿಗೆ ಉತ್ತಮ ಆರಂಭ

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿಗೆ ಸಾಧಾರಣ ಆರಂಭ ಸಿಕ್ಕಿತು. ವೆಂಕಟೇಶ್ ಅಯ್ಯರ್ 19 ರನ್​ಗಳ ಇನ್ನಿಂಗ್ಸ್ ಆಡಿ ಔಟಾದರು. ಆದರೆ ಆ ಬಳಿಕ ಜೊತೆಯಾದ ವಿರಾಟ್ ಕೊಹ್ಲಿ ಹಾಗೂ ದೇವದತ್ ಪಡಿಕ್ಕಲ್ ಅರ್ಧಶತಕದ ಜೊತೆಯಾಟವನ್ನಾಡುವ ಮೂಲಕ ತಂಡವನ್ನು ಪವರ್​ಪ್ಲೇನಲ್ಲಿಯೇ 70 ರನ್​ಗಳ ಗಡಿ ದಾಟಿಸಿದರು. ಜೊತೆಗೆ ಇವರಿಬ್ಬರು ಅರ್ಧಶತಕದತ್ತ ದಾಪುಗಾಲಿಟ್ಟಿದ್ದರು. ಆದರೆ ಈ ವೇಳೆ ದಾಳಿಗಿಳಿದ ಜೇಸನ್ ಹೊಲ್ಡರ್ ಒಂದೇ ಓವರ್​ನಲ್ಲಿ ಇವರಿಬ್ಬರನ್ನು ಔಟ್ ಮಾಡಿದರು.

ನಾಯಕನ ಇನ್ನಿಂಗ್ಸ್ ಆಡಿದ ರಜತ್

ವಿರಾಟ್ ಕೊಹ್ಲಿ 25 ಎಸೆತಗಳಲ್ಲಿ 43 ರನ್‌ ಬಾರಿಸಿದರೆ, ದೇವದತ್ ಪಡಿಕ್ಕಲ್ 30 ರನ್​ಗಳ ಕಾಣಿಕೆ ನೀಡಿದರು. ಮಧ್ಯಮ ಕ್ರಮಾಂಕದಲ್ಲಿ ನಾಯಕನ ಇನ್ನಿಂಗ್ಸ್ ಆಡಿದ ರಜತ್ ಪಾಟಿದಾರ್ ಕೇವಲ 33 ಎಸೆತಗಳಲ್ಲಿ ಅಜೇಯ 93 ರನ್ ಬಾರಿಸಿದರು. ಅವರು ತಮ್ಮ ಇನ್ನಿಂಗ್ಸ್‌ನಲ್ಲಿ ಒಂಬತ್ತು ಸಿಕ್ಸರ್‌ಗಳು ಮತ್ತು ಐದು ಬೌಂಡರಿಗಳನ್ನು ಬಾರಿಸಿದರು. ಪಾಟಿದಾರ್ ಅವರ ಸ್ಟ್ರೈಕ್ ರೇಟ್ 281 ಕ್ಕಿಂತ ಹೆಚ್ಚಿತ್ತು. ಪಾಟಿದಾರ್ ಜೊತೆಗೆ, ಕೃನಾಲ್ ಪಾಂಡ್ಯ ಕೂಡ 43 ರನ್ ಗಳಿಸಿ ಆರ್​​ಸಿಬಿ 254 ತಲುಪಲು ಸಹಾಯ ಮಾಡಿದರು.

IPL 2026 Qualifier-1 RCB vs GT Highlights: ಗುಜರಾತ್ ವಿರುದ್ಧ ಗೆದ್ದು ಫೈನಲ್​ಗೇರಿದ ಆರ್​ಸಿಬಿ

ಗುಜರಾತ್ ಬ್ಯಾಟಿಂಗ್  ವೈಫಲ್ಯ

255 ರನ್‌ಗಳ ಗುರಿ ಬೆನ್ನಟ್ಟಿದ ಗುಜರಾತ್‌ನ ಬ್ಯಾಟಿಂಗ್ ಸಂಪೂರ್ಣವಾಗಿ ಕುಸಿಯಿತು. ಸಾಯಿ ಸುದರ್ಶನ್ 14 ರನ್‌ಗಳಿಗೆ ಹಿಟ್ ವಿಕೆಟ್ ಆದರೆ, ನಾಯಕ ಶುಭ್​ಮನ್ ಗಿಲ್ ಕೇವಲ 2 ರನ್‌ಗಳಿಗೆ ಬೌಲ್ಡ್ ಆದರು. ವಿಕೆಟ್ ಕೀಪರ್ ಜೋಸ್ ಬಟ್ಲರ್ 11 ಎಸೆತಗಳಲ್ಲಿ 29 ರನ್ ಗಳಿಸಿ ಔಟಾದರು. ನಿಶಾಂತ್ ಸಿಂಧು 5 ರನ್ ಗಳಿಸಿ ಔಟಾದರೆ, ವಾಷಿಂಗ್ಟನ್ ಸುಂದರ್ ಕೂಡ 8 ರನ್ ಗಳಿಸಿ ಔಟಾದರು. ಜೇಸನ್ ಹೋಲ್ಡರ್​ಗೆ ತಮ್ಮ ಖಾತೆಯನ್ನು ತೆರೆಯಲೂ ಸಾಧ್ಯವಾಗಲಿಲ್ಲ. ಆದಾಗ್ಯೂ ತಂಡದ ಪರ ಏಕಾಂಗಿ ಹೋರಾಟ ನಡೆಸಿದ ರಾಹುಲ್ ತೆವಾಟಿಯಾ 68 ರನ್​ಗಳ ಇನ್ನಿಂಗ್ಸ್ ಆಡಿದರಾದರೂ ತಂಡವನ್ನು ಗೆಲುವಿನ ದಡ ಮುಟ್ಟಿಸಲು ಸಾಧ್ಯವಾಗಲಿಲ್ಲ. ಇತ್ತ ಆರ್‌ಸಿಬಿ ಪರ ವೇಗಿ ಜಾಕೋಬ್ ಡಫಿ ಮೂರು ವಿಕೆಟ್‌ಗಳನ್ನು ಪಡೆರೆ, ಜೋಶ್ ಹ್ಯಾಜಲ್‌ವುಡ್, ರಸಿಕ್ ಸಲಾಂ ದಾರ್ ಮತ್ತು ಕೃನಾಲ್ ಪಾಂಡ್ಯ ತಲಾ 2 ವಿಕೆಟ್ ಪಡೆದರು. ಇವರಲ್ಲದೆ, ಭುವನೇಶ್ವರ್ ಕುಮಾರ್ 1 ವಿಕೆಟ್ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:43 pm, Tue, 26 May 26

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ