AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ನಿರ್ಣಾಯಕ ಹಂತಕ್ಕೂ ಮುನ್ನ ವಿದೇಶಕ್ಕೆ ಹಾರಿದ RCB ಪಡೆ!

IPL 2026: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಈವರೆಗೆ 9 ಪಂದ್ಯಗಳನ್ನಾಡಿದೆ. ಈ 9 ಪಂದ್ಯಗಳಲ್ಲಿ 6 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಇನ್ನು ಆರ್​ಸಿಬಿ ತಂಡ ಸೋತಿರುವುದು ಗುಜರಾತ್ ಟೈಟಾನ್ಸ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ವಿರುದ್ಧ ಮಾತ್ರ. ಇನ್ನುಳಿದ 5 ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಆರ್​ಸಿಬಿ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವ ನಿರೀಕ್ಷೆಯಿದೆ.

IPL 2026: ನಿರ್ಣಾಯಕ ಹಂತಕ್ಕೂ ಮುನ್ನ ವಿದೇಶಕ್ಕೆ ಹಾರಿದ RCB ಪಡೆ!
RCB
ಝಾಹಿರ್ ಯೂಸುಫ್
|

Updated on:May 03, 2026 | 12:51 PM

Share

IPL 2026: ಐಪಿಎಲ್ 2026ರ ಸೀಸನ್ ಅತ್ಯಂತ ರೋಚಕ ಘಟ್ಟವನ್ನು ತಲುಪಿದೆ. ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ, ಮುಂದಿನ ಪಂದ್ಯಗಳಿಗೂ ಮುನ್ನ ಮಾನಸಿಕವಾಗಿ ಮತ್ತು ದೈಹಿಕವಾಗಿ ಸಜ್ಜಾಗಲು ಒಂದು ಪುಟ್ಟ ವಿರಾಮ ಪಡೆದುಕೊಂಢಿದೆ. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದ ನಂತರ ಸಿಕ್ಕ ಒಂದು ವಾರದ ಬಿಡುವನ್ನು ಬಳಸಿಕೊಂಡಿರುವ ತಂಡ, ಮಾಲ್ಡೀವ್ಸ್ ಪ್ರವಾಸ ಕೈಗೊಂಡಿದೆ.

ವಿಶ್ರಾಂತಿ ಮತ್ತು ರಿಫ್ರೆಶ್:

ಟೂರ್ನಿಯ ಸತತ ಪ್ರಯಾಣ ಮತ್ತು ಒತ್ತಡದಿಂದ ಹೊರಬರಲು ಮ್ಯಾನೇಜ್‌ಮೆಂಟ್ ಈ ಪ್ರವಾಸವನ್ನು ಆಯೋಜಿಸಿದೆ. ನ್ಯೂಝಿಲೆಂಡ್ ವೇಗಿ ಜೇಕಬ್ ಡಫಿ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಮಾಲ್ಡೀವ್ಸ್ ಫೋಟೋ ಹಂಚಿಕೊಳ್ಳುವ ಮೂಲಕ ಈ ಪ್ರವಾಸವನ್ನು ಖಚಿತಪಡಿಸಿದ್ದಾರೆ. ತಂಡದ ಬಹುತೇಕ ಆಟಗಾರರು ಈ ಪ್ರವಾಸದಲ್ಲಿದ್ದರೂ, ಗಾಯದ ಸಮಸ್ಯೆಯಿಂದ ಚೇತರಿಸಿಕೊಳ್ಳುತ್ತಿರುವ ಓಪನರ್ ಫಿಲ್ ಸಾಲ್ಟ್ ಈ ಪ್ರವಾಸದಿಂದ ಹೊರಗುಳಿದಿದ್ದಾರೆ ಎನ್ನಲಾಗಿದೆ.

ಪ್ಲೇ-ಆಫ್ ಹಾದಿ ಸುಗಮ:

ಪ್ರಸ್ತುತ ರಾಯಲ್ ಚಾಲೆಂಕರ್ಸ್ ಬೆಂಗಳೂರು ತಂಡವು 9 ಪಂದ್ಯಗಳಲ್ಲಿ 6 ಜಯದೊಂದಿಗೆ 12 ಅಂಕಗಳನ್ನು ಗಳಿಸಿ ಭದ್ರವಾದ ಸ್ಥಾನದಲ್ಲಿದೆ. ಪ್ಲೇ-ಆಫ್ ಹಂತಕ್ಕೇರಲು ತಂಡಕ್ಕೆ ಇನ್ನು ಕೇವಲ ಎರಡು ಗೆಲುವುಗಳ ಅವಶ್ಯಕತೆಯಿದೆ. ಈ ವಿಶ್ರಾಂತಿಯು ಆಟಗಾರರು ಹೊಸ ಉತ್ಸಾಹದೊಂದಿಗೆ ಮೈದಾನಕ್ಕಿಳಿಯಲು ಸಹಕಾರಿಯಾಗಲಿದೆ.

ಮುಂದಿನ ಸವಾಲುಗಳು:

ಮಾಲ್ಡೀವ್ಸ್‌ನಿಂದ ಹಿಂದಿರುಗಿದ ನಂತರ, ಮೇ 7ರಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆರ್​ಸಿಬಿ ಸೆಣಸಲಿದೆ. ಆನಂತರ ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯಗಳು ರಾಯ್‌ಪುರದಲ್ಲಿ ನಡೆಯಲಿವೆ. ಈ ಪಂದ್ಯಗಳ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇಆಫ್​ಗೇರುವ ನಿರೀಕ್ಷೆಯಿದೆ.

ಇದನ್ನೂ ಓದಿ: ಸಿಕ್ಸರ್‌ನಿಂದ ಗಾಯಗೊಂಡ ಅಭಿಮಾನಿಗೆ ಭರ್ಜರಿ ಗಿಫ್ಟ್​ ನೀಡಿದ ಪಂಜಾಬ್ ಕಿಂಗ್ಸ್

ಆರ್​ಸಿಬಿ ತಂಡದ ಮುಂದಿನ ಪಂದ್ಯಗಳ ವೇಳಾಪಟ್ಟಿ:

  •  ಲಕ್ನೋ ಸೂಪರ್ ಜೈಂಟ್ಸ್ (LSG): ಮೇ 7, ರಾತ್ರಿ 7:30ಕ್ಕೆ ಲಕ್ನೋದ ಏಕನಾ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ. ಲಕ್ನೋದ ಸ್ಪಿನ್ ಸ್ನೇಹಿ ಪಿಚ್‌ನಲ್ಲಿ ಆರ್‌ಸಿಬಿ ಬ್ಯಾಟರ್‌ಗಳಿಗೆ ದೊಡ್ಡ ಸವಾಲು ಎದುರಾಗಲಿದೆ.
  •  ಮುಂಬೈ ಇಂಡಿಯನ್ಸ್ (MI): ಮೇ 10ರಂದು ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಕ್ರೀಡಾಂಗಣದಲ್ಲಿ ಆರ್​ಸಿಬಿ ತಂಡ ಮುಂಬೈ ಇಂಡಿಯನ್ಸ್​ ಸವಾಲನ್ನು ಎದುರಿಸಲಿದೆ.
  • ಕೋಲ್ಕತ್ತಾ ನೈಟ್ ರೈಡರ್ಸ್ (KKR): ಮೇ 13ರಂದು ಮತ್ತೆ ರಾಯ್‌ಪುರದಲ್ಲಿ ಕೆಕೆಆರ್ ಮತ್ತು ಆರ್​ಸಿಬಿ ಸೆಣಸಲಿದೆ.
  •  ಪಂಜಾಬ್ ಕಿಂಗ್ಸ್ (PBKS): ಮೇ 17ರಂದು ಧರ್ಮಶಾಲಾದಲ್ಲಿ ನಡೆಯಲಿರುವ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಆರ್​ಸಿಬಿ ಮುಖಾಮುಖಿಯಾಗಲಿದೆ.
  • ಸನ್‌ರೈಸರ್ಸ್ ಹೈದರಾಬಾದ್ (SRH): ಮೇ 22ರಂದು ಹೈದರಾಬಾದ್‌ನಲ್ಲಿ ನಡೆಯಲಿರುವ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಎಸ್​ಆರ್​​ಹೆಚ್ ಮತ್ತು ಆರ್​ಸಿಬಿ ತಂಡಗಳು ಮುಖಾಮುಖಿಯಾಗಲಿದೆ.

Published On - 12:50 pm, Sun, 3 May 26

Follow Us
ರಾಜ್ಯ ಕಾಂಗ್ರೆಸ್ ನಲ್ಲಿ ಕುರ್ಚಿ ಕದನಕ್ಕೆ ಮತ್ತೊಂದು ತಿರುವು
ರಾಜ್ಯ ಕಾಂಗ್ರೆಸ್ ನಲ್ಲಿ ಕುರ್ಚಿ ಕದನಕ್ಕೆ ಮತ್ತೊಂದು ತಿರುವು
ನಟ ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಆಗಿದ್ದೇನು?
ನಟ ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಆಗಿದ್ದೇನು?
ಒಂದೇ ಸೂರಿನಡಿ ಪ್ರಮುಖ ಶಿಕ್ಷಣ ಸಂಸ್ಥೆಗಳನ್ನು ಪರಿಚಯಿಸಿದ ಟಿವಿ9
ಒಂದೇ ಸೂರಿನಡಿ ಪ್ರಮುಖ ಶಿಕ್ಷಣ ಸಂಸ್ಥೆಗಳನ್ನು ಪರಿಚಯಿಸಿದ ಟಿವಿ9
ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರದ ಮತ ಎಣಿಕೆಗೆ ಕ್ಷಣಗಣನೆ
ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರದ ಮತ ಎಣಿಕೆಗೆ ಕ್ಷಣಗಣನೆ
ಮೈಸೂರು ಬೆಂಗಳೂರು ಎಕ್ಸ್‌‍‌ಪ್ರೆಸ್‌ವೇನಲ್ಲಿ ವಾಹನ ಪಲ್ಟಿ, ಭಯಾನಕ ದೃಶ್ಯ!
ಮೈಸೂರು ಬೆಂಗಳೂರು ಎಕ್ಸ್‌‍‌ಪ್ರೆಸ್‌ವೇನಲ್ಲಿ ವಾಹನ ಪಲ್ಟಿ, ಭಯಾನಕ ದೃಶ್ಯ!
ರಾಯಚೂರು: ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅಗ್ನಿ ಅವಘಡ; ವಿಡಿಯೋ ನೋಡಿ
ರಾಯಚೂರು: ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅಗ್ನಿ ಅವಘಡ; ವಿಡಿಯೋ ನೋಡಿ
19 ಕೆಜಿ ಕಮರ್ಷಿಯಲ್ ಗ್ಯಾಸ್​ ಸಿಲಿಂಡರ್​ಗೆ ಎಷ್ಟು ಖರ್ಚು ಆಗುತ್ತೆ ಗೊತ್ತಾ?
19 ಕೆಜಿ ಕಮರ್ಷಿಯಲ್ ಗ್ಯಾಸ್​ ಸಿಲಿಂಡರ್​ಗೆ ಎಷ್ಟು ಖರ್ಚು ಆಗುತ್ತೆ ಗೊತ್ತಾ?
‘ಕೆಡಿ’ ರೀತಿ ಸಿನಿಮಾ ಮಾಡೋಕೆ ತುಂಬ ತಾಕತ್ತು ಬೇಕು: ಆರ್. ಚಂದ್ರು ಮೆಚ್ಚುಗೆ
‘ಕೆಡಿ’ ರೀತಿ ಸಿನಿಮಾ ಮಾಡೋಕೆ ತುಂಬ ತಾಕತ್ತು ಬೇಕು: ಆರ್. ಚಂದ್ರು ಮೆಚ್ಚುಗೆ
13 ವರ್ಷದ 7ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ
13 ವರ್ಷದ 7ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ
ರೈಲಿನ ಸೀಟುಗಳ ಹರಿದು ಯುವಕರ ಪುಂಡಾಟ
ರೈಲಿನ ಸೀಟುಗಳ ಹರಿದು ಯುವಕರ ಪುಂಡಾಟ