AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DC vs RCB: ಡೆಲ್ಲಿ ವಿರುದ್ಧದ ಸೇಡಿನ ಸಮರವನ್ನು ಗೆದ್ದು ಬೀಗಿದ ಆರ್​ಸಿಬಿ

IPL 2026 RCB vs DC: ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ 39ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿತು. ಹಿಂದಿನ ಸೋಲಿಗೆ ಸೇಡು ತೀರಿಸಿಕೊಂಡ RCB, ಡೆಲ್ಲಿಯನ್ನು ಕೇವಲ 75 ರನ್‌ಗಳಿಗೆ ಆಲೌಟ್ ಮಾಡಿ, 1 ವಿಕೆಟ್ ಕಳೆದುಕೊಂಡು ಸುಲಭವಾಗಿ ಗುರಿ ತಲುಪಿತು. ಇದು RCB ಯ 6ನೇ ಗೆಲುವಾಗಿದೆ.

DC vs RCB: ಡೆಲ್ಲಿ ವಿರುದ್ಧದ ಸೇಡಿನ ಸಮರವನ್ನು ಗೆದ್ದು ಬೀಗಿದ ಆರ್​ಸಿಬಿ
Rcb
ಪೃಥ್ವಿಶಂಕರ
|

Updated on:Apr 27, 2026 | 11:02 PM

Share

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಐಪಿಎಲ್ 2026 (IPL 2026) ರ 39ನೇ ಪಂದ್ಯ ದೆಹಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (DC vs RCB) ನಡುವೆ ನಡೆಯಿತು. ಇದು ಈ ಆವೃತ್ತಿಯಲ್ಲಿ ಎರಡು ತಂಡಗಳ ಎರಡನೇ ಮುಖಾಮುಖಿ ಇದಾಗಿತ್ತು. ಮೊದಲ ಮುಖಾಮುಖಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್, ಆರ್​ಸಿಬಿ ವಿರುದ್ಧ ಗೆಲುವು ಸಾಧಿಸಿತ್ತು. ಹೀಗಾಗಿ ಈ ಪಂದ್ಯ ಆರ್​ಸಿಬಿ ಪಾಲಿಗೆ ಸೇಡಿನ ಸಮರವಾಗಿತ್ತು. ಈ ಸೇಡಿನ ಸಮರದಲ್ಲಿ ಡೆಲ್ಲಿ ತಂಡವನ್ನು ಅವರ ನೆಲದಲ್ಲಿ ಹೀನಾಯವಾಗಿ ಮಣಿಸಿದ ಆರ್​ಸಿಬಿ ತನ್ನ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಜೊತೆಗೆ ಲೀಗ್​ನಲ್ಲಿ ತನ್ನ 6ನೇ ಗೆಲುವನ್ನು ದಾಖಲಿಸಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ತಂಡ ಕೇವಲ 75 ರನ್​ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಆರ್​ಸಿಬಿ ಕೇವಲ 1 ವಿಕೆಟ್ ಕಳೆದುಕೊಂಡು 6.3 ಓವರ್​ಗಳಲ್ಲಿ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದುಕೊಂಡಿತು.

ಡೆಲ್ಲಿ ಪೆವಿಲಿಯನ್ ಪರೆಡ್

ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿಕೆಟ್​ಗಳು ಮೊದಲ ಓವರ್‌ನ ಎರಡನೇ ಎಸೆತದಿಂದಲೇ ತರಗೆಲೆಗಳಂತೆ ಉದುರಲು ಆರಂಭಿಸಿದವು. ಭುವನೇಶ್ವರ್ ಕುಮಾರ್ ಎಸೆದ ಎರಡನೇ ಎಸೆತದಲ್ಲಿ ಸಾಹಿಲ್ ಪರಾಖ್ 0 ರನ್ ಗಳಿಸಿ ಔಟಾದರು. ನಂತರ, ಮುಂದಿನ ಓವರ್‌ನಲ್ಲಿ ಹೇಜಲ್‌ವುಡ್ ಕೆಎಲ್ ರಾಹುಲ್ ಅವರನ್ನು 1 ರನ್‌ಗೆ ಔಟ್ ಮಾಡಿದರು. ಸಮೀರ್ ರಿಜ್ವಿ ಮುಂದಿನ ಎಸೆತದಲ್ಲಿಯೇ ಶೂನ್ಯಕ್ಕೆ ಔಟ್ ಆದರು. ನಂತರ ಭುವನೇಶ್ವರ್ ಕುಮಾರ್ ಒಂದೇ ಓವರ್‌ನಲ್ಲಿ ಟ್ರಿಸ್ಟಾನ್ ಸ್ಟಬ್ಸ್ ಮತ್ತು ಡೆಲ್ಲಿ ನಾಯಕ ಅಕ್ಷರ್ ಪಟೇಲ್ ಅವರನ್ನು ಔಟ್ ಮಾಡಿದರು.

ಸ್ವಲ್ಪ ಸಮಯದೊಳಗೆ ಡೆಲ್ಲಿ ಕೇವಲ 8 ರನ್‌ಗಳಿಗೆ 6 ವಿಕೆಟ್‌ಗಳನ್ನು ಕಳೆದುಕೊಂಡಿತು. ಆದಾಗ್ಯೂ ಇಂಪ್ಯಾಕ್ಟ್ ಪ್ಲೇಯರ್ ಆಗಿ ಬಂದ ಅಭಿಷೇಕ್ ಪೊರೆಲ್ (30) ಮತ್ತು ಡೇವಿಡ್ ಮಿಲ್ಲರ್ (18) ಎರಡಂಕಿ ಮೊತ್ತ ಕಲೆಹಾಕುವ ಮೂಲಕ ತಂಡವನ್ನು 75 ರನ್​ಗಳಿಗೆ ಕೊಂಡೊಯ್ದರು. ಆರ್​​ಸಿಬಿ ಪರ ಮಾರಕ ದಾಳಿ ನಡೆಸಿದ ಜೋಶ್ ಹೇಜಲ್‌ವುಡ್ ಕೇವಲ 12 ರನ್‌ ನೀಡಿ 4 ವಿಕೆಟ್‌ಗಳನ್ನು ಕಬಳಿಸಿದರೆ, ಭುವನೇಶ್ವರ್ ಕುಮಾರ್ 3 ಓವರ್‌ಗಳಲ್ಲಿ ಕೇವಲ 5 ರನ್‌ಗಳಿಗೆ 3 ವಿಕೆಟ್‌ ಪಡೆದರು. ಉಳಿದಂತೆ ಸುಯಾಶ್ ಶರ್ಮಾ 7 ರನ್‌ಗಳಿಗೆ 1 ವಿಕೆಟ್, ಕೃನಾಲ್ ಮತ್ತು ರಸಿಕ್ ಸಲಾಂ ಕೂಡ ತಲಾ 1 ವಿಕೆಟ್ ಪಡೆದರು.

DC vs RCB IPL 2026 Highlights: ಡೆಲ್ಲಿ ವಿರುದ್ಧ ಆರ್​ಸಿಬಿಗೆ ಏಕಪಕ್ಷೀಯ ಜಯ

39 ಎಸೆತಗಳಲ್ಲಿ ಪಂದ್ಯ ಗೆದ್ದ ಆರ್​ಸಿಬಿ

ಈ ಗುರಿ ಬೆನ್ನಟ್ಟಿದ ಆರ್‌ಸಿಬಿ ಅತಿದೊಡ್ಡ ಗೆಲುವು ದಾಖಲಿಸಿತು. ಆರ್​ಸಿಬಿ ಕೇವಲ 39 ಎಸೆತಗಳಲ್ಲಿ ಗುರಿ ಸಾಧಿಸಿದ್ದು ಇದೇ ಮೊದಲು. ಏತನ್ಮಧ್ಯೆ, ದೆಹಲಿ ಮೊದಲ ಬಾರಿಗೆ ಇಷ್ಟು ಹೀನಾಯವಾಗಿ ಸೋತಿತು. ಈ ಗೆಲುವಿನೊಂದಿಗೆ ಆರ್‌ಸಿಬಿ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ ಉಳಿದಿದ್ದರೂ, ನೆಟ್​ ರನ್​ ರೇಟ್​ನಲ್ಲಿ ಭಾರಿ ಏರಿಕೆ ಕಂಡಿದೆ. ಆರ್​ಸಿಬಿ ಆಡಿರುವ ಎಂಟು ಪಂದ್ಯಗಳಿಂದ ಆರು ಗೆಲುವುಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಏತನ್ಮಧ್ಯೆ, ಪಂಜಾಬ್ 13 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ಇಲ್ಲಿಯವರೆಗೆ ಒಂದು ಪಂದ್ಯವನ್ನು ಸೋಲದ ಏಕೈಕ ತಂಡ ಪಂಜಾಬ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:58 pm, Mon, 27 April 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ