AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಬೆಂಗಳೂರಿನಲ್ಲಿ ಆರ್​​ಸಿಬಿಗೆ ಕೊನೆಯ ಲೀಗ್ ಪಂದ್ಯ; ಎದುರಾಳಿ ಯಾರು ಗೊತ್ತಾ?

IPL 2026, RCB vs GT: ಆರ್‌ಸಿಬಿ ಮತ್ತು ಗುಜರಾತ್ ಟೈಟಾನ್ಸ್ ನಡುವೆ ಐಪಿಎಲ್ 2026 ರ 34ನೇ ಪಂದ್ಯ ಏಪ್ರಿಲ್ 24 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಆವೃತ್ತಿಯಲ್ಲಿ ಆರ್‌ಸಿಬಿ ಬೆಂಗಳೂರಿನಲ್ಲಿ ಆಡುವ ಕೊನೆಯ ಲೀಗ್ ಪಂದ್ಯ ಇದಾಗಿದ್ದು, ಅಭಿಮಾನಿಗಳಿಗೆ ವಿಶೇಷವಾಗಿದೆ. ಸಂಜೆ 7:30 ಕ್ಕೆ ಪಂದ್ಯ ಆರಂಭವಾಗಲಿದ್ದು, ಸ್ಟಾರ್ ಸ್ಪೋರ್ಟ್ಸ್ ಮತ್ತು ಹಾಟ್‌ಸ್ಟಾರ್‌ನಲ್ಲಿ ವೀಕ್ಷಿಸಬಹುದು.

IPL 2026: ಬೆಂಗಳೂರಿನಲ್ಲಿ ಆರ್​​ಸಿಬಿಗೆ ಕೊನೆಯ ಲೀಗ್ ಪಂದ್ಯ; ಎದುರಾಳಿ ಯಾರು ಗೊತ್ತಾ?
Rcb
ಪೃಥ್ವಿಶಂಕರ
|

Updated on:Apr 23, 2026 | 8:56 PM

Share

ಐಪಿಎಲ್ 2026 (IPL 2026) ರ 34ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ತಂಡ, ಗುಜರಾತ್ ಟೈಟಾನ್ಸ್ (RCB vs GT) ತಂಡವನ್ನು ಎದುರಿಸಿದೆ. ಈ ಆವೃತ್ತಿಯಲ್ಲಿ ಉಭಯ ತಂಡಗಳ ಮೊದಲ ಮುಖಾಮುಖಿ ಇದಾಗಿದೆ. ಹಾಗೆಯೇ ಆರ್​ಸಿಬಿ ತನ್ನ ಮೊದಲ ತವರು ನೆಲವಾದ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ಕೊನೆಯ ಲೀಗ್ ಪಂದ್ಯವನ್ನು ಆಡಲಿದೆ. ಹೀಗಾಗಿ ಈ ಪಂದ್ಯ ಆರ್​​ಸಿಬಿ ಅಭಿಮಾನಿಗಳಿಗೆ ಬಹಳಷ್ಟು ವಿಶೇಷವಾಗಿದೆ. ವಾಸ್ತವವಾಗಿ ಆರ್​ಸಿಬಿ ಈ ಆವೃತ್ತಿಯಲ್ಲಿ ಎರಡು ತವರು ಮೈದಾನಗಳನ್ನು ಆಯ್ಕೆ ಮಾಡಿಕೊಂಡಿದೆ. ಅದರಂತೆ ಮೊದಲ ತವರು ಮೈದಾನವಾದ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 5 ಪಂದ್ಯಗಳನ್ನು ಆಡಲಿದ್ದು, ಎರಡನೇ ತವರು ಮೈದಾನದ ರಾಯ್​ಪುರದಲ್ಲಿ ಉಳಿದ ಎರಡು ಪಂದ್ಯಗಳನ್ನು ಆಡಲಿದೆ. ಹಾಗಾಗಿ ಬೆಂಗಳೂರಿನಲ್ಲಿ ಆರ್​ಸಿಬಿಗೆ ನಾಳಿನ ಪಂದ್ಯ ಕೊನೆಯ ಲೀಗ್ ಪಂದ್ಯವಾಗಲಿದೆ.

ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್ ಪಂದ್ಯ ಯಾವಾಗ ನಡೆಯಲಿದೆ?

ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್ ಪಂದ್ಯ ಏಪ್ರಿಲ್ 24 ರಂದು ನಡೆಯಲಿದೆ.

ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್ ಪಂದ್ಯ ಎಲ್ಲಿ ನಡೆಯಲಿದೆ?

ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್ ಪಂದ್ಯ ಸಂಜೆ 7:30 ಕ್ಕೆ ಗಂಟೆಗೆ ಆರಂಭವಾಗಲಿದೆ. ಟಾಸ್ ಸಂಜೆ 7 ಗಂಟೆಗೆ ನಡೆಯಲಿದೆ.

ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್ ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್​ವರ್ಕ್​ನ ವಿವಿದ ಚಾನೆಲ್​ಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಹಾಟ್ ಸ್ಟಾರ್​​ನಲ್ಲಿಯೂ ಪಂದ್ಯವನ್ನು ವೀಕ್ಷಿಸಬಹುದಾಗಿದೆ.

ಸಹೋದರರ ನಡುವಿನ ಶೀತಲ ಸಮರಕ್ಕೆ ಅಂತ್ಯ ಹಾಡುತ್ತಾ ಆರ್​ಸಿಬಿ- ಮುಂಬೈ ಪಂದ್ಯ?

ಉಭಯ ತಂಡಗಳು

ಆರ್​ಸಿಬಿ ಪೂರ್ಣ ತಂಡ: ರಜತ್ ಪಾಟಿದಾರ್, ವಿರಾಟ್ ಕೊಹ್ಲಿ, ದೇವದತ್ತ್ ಪಡಿಕ್ಕಲ್, ರಜತ್ ಪಾಟಿದಾರ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋರ್ಡಾನ್ ಕಾಕ್ಸ್, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಜಾಕೋಬ್ ಬೆಥೆಲ್, ವೆಂಕಟೇಶ್ ಅಯ್ಯರ್, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ವಿಕ್ಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾಣ್, ಜೋಶ್ ಹೇಜಲ್​ವುಡ್, ರಸಿಖ್ ದಾರ್, ಸುಯಶ್ ಶರ್ಮಾ, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ಅಭಿನಂದನ್ ಸಿಂಗ್, ಜಾಕೋಬ್ ಡಫಿ,

ಗುಜರಾತ್ ಟೈಟಾನ್ಸ್: ಶುಭ್​ಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಕುಮಾರ್ ಕುಶಾಗ್ರಾ, ಅನುಜ್ ರಾವತ್, ಜೋಸ್ ಬಟ್ಲರ್, ನಿಶಾಂತ್ ಸಿಂಧು, ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್, ಅರ್ಷದ್ ಖಾನ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಇಶಾಂತ್ ಶರ್ಮಾ, ಗುರ್ನೂರ್ ಸಿಂಗ್ ಬ್ರಾರ್, ರಶೀದ್ ಖಾನ್, ಮಾನವ್ ಸುತಾರ್, ಸಾಯಿ ಕಿಶೋರ್, ಜಯಂತ್ ಯಾದವ್, ಅಶೋಕ್ ಶರ್ಮಾ, ಜೇಸನ್ ಹೋಲ್ಡರ್, ಟಾಮ್ ಬ್ಯಾಂಟನ್, ಪೃಥ್ವಿ ರಾಜ್ ಯಾರ್ರಾ, ಲ್ಯೂಕ್ ವುಡ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:53 pm, Thu, 23 April 26

Follow Us