IPL 2026: ತವರಿನಿಂದ ಹೊರಗೆ ಆರ್​ಸಿಬಿಗೆ ಮೊದಲ ಪಂದ್ಯ; ಎದುರಾಳಿ ಯಾರು ಗೊತ್ತಾ?

RCB vs RR IPL 2026: ಐಪಿಎಲ್ 2026ರಲ್ಲಿ ಸತತ ಎರಡು ಗೆಲುವುಗಳೊಂದಿಗೆ ಶುಭಾರಂಭ ಮಾಡಿರುವ ಆರ್‌ಸಿಬಿ, ಇದೀಗ ರಾಜಸ್ಥಾನ್ ರಾಯಲ್ಸ್ ವಿರುದ್ಧ ತಮ್ಮ ಮೊದಲ ತವರಿನ ಹೊರಗಿನ ಪಂದ್ಯಕ್ಕೆ ಸಜ್ಜಾಗಿದೆ. ಏಪ್ರಿಲ್ 10 ರಂದು ಗುವಾಹಟಿಯ ಬರ್ಸಾಪರ ಸ್ಟೇಡಿಯಂನಲ್ಲಿ ನಡೆಯಲಿರುವ 16ನೇ ಪಂದ್ಯದಲ್ಲಿ ಆರ್‌ಸಿಬಿ ಮತ್ತು ಆರ್‌ಆರ್ ಮುಖಾಮುಖಿಯಾಗಲಿವೆ. ಈ ಮಹತ್ವದ ಪಂದ್ಯದ ಸಮಯ, ನೇರ ಪ್ರಸಾರ ವಿವರಗಳು ಮತ್ತು ಉಭಯ ತಂಡಗಳ ಸಿದ್ಧತೆಯ ಕುರಿತು ಸಂಪೂರ್ಣ ಮಾಹಿತಿ ಪಡೆಯಿರಿ.

IPL 2026: ತವರಿನಿಂದ ಹೊರಗೆ ಆರ್​ಸಿಬಿಗೆ ಮೊದಲ ಪಂದ್ಯ; ಎದುರಾಳಿ ಯಾರು ಗೊತ್ತಾ?
Rcb

Updated on: Apr 09, 2026 | 6:01 PM

ಐಪಿಎಲ್‌ನ (IPL 2026) ಹಾಲಿ ಚಾಂಪಿಯನ್ ಆಗಿರುವ ಆರ್​​ಸಿಬಿ (RCB) ಇದುವರೆಗೆ ಆಡಿರುವ ಮೊದಲ ಎರಡು ಪಂದ್ಯಗಳನ್ನು ಗೆದ್ದುಕೊಂಡಿದೆ. ತನ್ನ ತವರಿನಲ್ಲಿ ಮೊದಲ ಎರಡು ಪಂದ್ಯಗಳನ್ನು ಆಡಿದ ಆರ್​ಸಿಬಿ ಎರಡು ಪಂದ್ಯಗಳಲ್ಲೂ ಏಕಪಕ್ಷೀಯ ಗೆಲುವು ಸಾಧಿಸಿದೆ. ಲೀಗ್​ನ ಉದ್ಘಾಟನಾ ಪಂದ್ಯದಲ್ಲಿ ಬಲಿಷ್ಠ ಬ್ಯಾಟಿಂಗ್‌ ವಿಭಾಗವನ್ನು ಹೊಂದಿರುವ ಸನ್​ರೈಸರ್ಸ್​ ಹೈದರಾಬಾದ್ ತಂಡವನ್ನು ಏಕಪಕ್ಷೀಯವಾಗಿ ಸೋಲಿಸಿದ್ದ ಆರ್​ಸಿಬಿ, ಅದಾದ ಬಳಿಕ ನಡೆದಿದ್ದ ಎರಡನೇ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಸಿಎಸ್​ಕೆ ತಂಡವನ್ನು ಕೂಡ ಏಕಪಕ್ಷೀಯವಾಗಿ ಸೋಲಿಸಿತ್ತು. ಇದೀಗ ತವರಿನಿಂದ ಹೊರಗೆ ಮೊದಲ ಪಂದ್ಯವನ್ನಾಡಲು ರಜತ್ ಪಡೆ ಸಜ್ಜಾಗಿದೆ. ಹೀಗಾಗಿ ತವರಿನ ಹೊರಗೆ ಆರ್​ಸಿಬಿ ಯಾವ ರೀತಿಯ ಪ್ರದರ್ಶನ ನೀಡುತ್ತದೆ ಎಂಬುದನ್ನು ನೋಡಲು ಅಭಿಮಾನಿಗಳು ಕಾತುರರಾಗಿದ್ದಾರೆ.

ಆರ್​ಸಿಬಿ ಮತ್ತು ರಾಜಸ್ಥಾನ್ ನಡುವಿನ ಐಪಿಎಲ್ 2026 ರ 16 ನೇ ಪಂದ್ಯ ಯಾವಾಗ ನಡೆಯಲಿದೆ?

ಆರ್​ಸಿಬಿ ಮತ್ತು ರಾಜಸ್ಥಾನ್ ನಡುವಿನ ಐಪಿಎಲ್ 2026 ರ 16 ನೇ ಪಂದ್ಯವು ಏಪ್ರಿಲ್ 10 ರ ಶುಕ್ರವಾರದಂದು ನಡೆಯಲಿದೆ.

ಆರ್​ಸಿಬಿ ಮತ್ತು ರಾಜಸ್ಥಾನ್ ನಡುವಿನ ಐಪಿಎಲ್ 2026 ರ 16 ನೇ ಪಂದ್ಯ ಎಲ್ಲಿ ನಡೆಯಲಿದೆ?

ಆರ್​ಸಿಬಿ ಮತ್ತು ರಾಜಸ್ಥಾನ್ ನಡುವಿನ ಐಪಿಎಲ್ 2026 ರ 16 ನೇ ಪಂದ್ಯ ಬರ್ಸಾಪರ ಸ್ಟೇಡಿಯಂ, ಗುವಾಹಟಿಯಲ್ಲಿ ನಡೆಯಲಿದೆ.

ಆರ್​ಸಿಬಿ ಮತ್ತು ರಾಜಸ್ಥಾನ್ ನಡುವಿನ ಐಪಿಎಲ್ 2026 ರ 16 ನೇ ಪಂದ್ಯ ಯಾವ ಸಮಯಕ್ಕೆ ಪ್ರಾರಂಭವಾಗುತ್ತದೆ?

ಆರ್​ಸಿಬಿ ಮತ್ತು ರಾಜಸ್ಥಾನ್ ನಡುವಿನ ಐಪಿಎಲ್ 2026 ರ 16 ನೇ ಪಂದ್ಯವು ಭಾರತೀಯ ಕಾಲಮಾನ ಸಂಜೆ 7:30 ಕ್ಕೆ ಪ್ರಾರಂಭವಾಗಲಿದ್ದು, ಟಾಸ್ ಸಂಜೆ 7 ಗಂಟೆಗೆ ನಡೆಯಲಿದೆ.

ಆರ್​ಸಿಬಿ ಮತ್ತು ರಾಜಸ್ಥಾನ್ ನಡುವಿನ ಐಪಿಎಲ್ 2026 ರ 16 ನೇ ಪಂದ್ಯವನ್ನು ಟಿವಿಯಲ್ಲಿ ವೀಕ್ಷಿಸುವುದು ಹೇಗೆ?

ನೀವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಟಿವಿಯಲ್ಲಿ ಆರ್​ಸಿಬಿ ಮತ್ತು ರಾಜಸ್ಥಾನ್ ನಡುವಿನ ಐಪಿಎಲ್ 2026 ರ 16 ನೇ ಪಂದ್ಯವನ್ನು ವೀಕ್ಷಿಸಬಹುದು.

ಆರ್​ಸಿಬಿ ಮತ್ತು ರಾಜಸ್ಥಾನ್ ನಡುವಿನ ಐಪಿಎಲ್ 2026 ರ 16 ನೇ ಪಂದ್ಯವನ್ನು ಮೊಬೈಲ್‌ನಲ್ಲಿ ವೀಕ್ಷಿಸುವುದು ಹೇಗೆ?

ಜಿಯೋ-ಹಾಟ್‌ಸ್ಟಾರ್ ಅಪ್ಲಿಕೇಶನ್ ಬಳಸಿಕೊಂಡು ನಿಮ್ಮ ಮೊಬೈಲ್​ಲ್ಲಿ ಆರ್​ಸಿಬಿ ಮತ್ತು ರಾಜಸ್ಥಾನ್ ನಡುವಿನ ಐಪಿಎಲ್ 2026 ರ 16ನೇ ಪಂದ್ಯವನ್ನು ನೀವು ವೀಕ್ಷಿಸಬಹುದು.

ವಿರಾಟ್ ಕೊಹ್ಲಿ ಹೆಸರು ಕೇಳುತ್ತಿದ್ದಂತೆ ಕೆರಳಿ ಕೆಂಡವಾದ ಬಾಬರ್ ಆಝಂ

ಉಭಯ ತಂಡಗಳು

ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ವೈಭವ್ ಸೂರ್ಯವಂಶಿ, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರಿಯಾನ್ ಪರಾಗ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ರವೀಂದ್ರ ಜಡೇಜಾ, ಜೋಫ್ರಾ ಆರ್ಚರ್, ನಾಂದ್ರೆ ಬರ್ಗರ್, ಸಂದೀಪ್ ಶರ್ಮಾ, ರವಿ ಬಿಷ್ಣೋಯ್, ಬ್ರಿಜೇಶ್ ಶರ್ಮಾ, ಲುವಾನ್ ಸಿಂಗ್-ಪ್ರೇರಿರಾ, ರವಿ ಬಿಷ್ಣೋಯ್, ಎಸ್. ತುಷಾರ್ ದೇಶಪಾಂಡೆ, ಆಡಮ್ ಮಿಲ್ನೆ, ದಸುನ್ ಶನಕ, ಕುಲದೀಪ್ ಸೇನ್, ಯುದ್ವೀರ್ ಸಿಂಗ್ ಚರಕ್, ಶುಭಂ ದುಬೆ, ಕ್ವೀನಾ ಎಂಫಕಾ, ವಿಘ್ನೇಶ್ ಪುತ್ತೂರು, ಅಮನ್ ರಾವ್ ಪೆರಾಲ.

ಆರ್​ಸಿಬಿ ಪೂರ್ಣ ತಂಡ: ರಜತ್ ಪಾಟಿದಾರ್, ವಿರಾಟ್ ಕೊಹ್ಲಿ, ದೇವದತ್ತ್ ಪಡಿಕ್ಕಲ್, ರಜತ್ ಪಾಟಿದಾರ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋರ್ಡಾನ್ ಕಾಕ್ಸ್, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಜಾಕೋಬ್ ಬೆಥೆಲ್, ವೆಂಕಟೇಶ್ ಅಯ್ಯರ್, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ವಿಕ್ಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾಣ್, ಜೋಶ್ ಹೇಜಲ್​ವುಡ್, ರಸಿಖ್ ದಾರ್, ಸುಯಶ್ ಶರ್ಮಾ, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ಅಭಿನಂದನ್ ಸಿಂಗ್, ಜಾಕೋಬ್ ಡಫಿ,

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us