
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಸೀಸನ್‌ನಲ್ಲಿ ರಾಜಸ್ಥಾನ್ ರಾಯಲ್ಸ್ (RR) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವಿನ ಪಂದ್ಯವು ಒಂದು ಅನಿರೀಕ್ಷಿತ ವಿವಾದಕ್ಕೆ ಸಾಕ್ಷಿಯಾಗಿದೆ. ಪಂದ್ಯದ ವೇಳೆ ರಾಜಸ್ಥಾನ್ ರಾಯಲ್ಸ್ ತಂಡದ ಮ್ಯಾನೇಜರ್ ರೋಮಿ ಭಿಂದರ್ ಅವರು ಡಗೌಟ್‌ನಲ್ಲಿ ಕುಳಿತು ಮೊಬೈಲ್ ಫೋನ್ ಬಳಸುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದು ಕ್ರಿಕೆಟ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.
ಏಪ್ರಿಲ್ 10, ಶುಕ್ರವಾರದಂದು ಗುವಾಹಟಿಯಲ್ಲಿ ನಡೆದ ಪಂದ್ಯದಲ್ಲಿ, ರಾಜಸ್ಥಾನ್ ರಾಯಲ್ಸ್ ತಂಡ ಗುರಿ ಬೆನ್ನಟ್ಟುತ್ತಿದ್ದಾಗ 11ನೇ ಓವರ್‌ನಲ್ಲಿ ಈ ಘಟನೆ ನಡೆದಿದೆ. ತಂಡದ ಮ್ಯಾನೇಜರ್ ರೋಮಿ ಭಿಂದರ್ ಅವರು ಯುವ ಆಟಗಾರ ವೈಭವ್ ಸೂರ್ಯವಂಶಿ ಅವರ ಪಕ್ಕದಲ್ಲಿ ಕುಳಿತು ಮೊಬೈಲ್‌ನಲ್ಲಿ ಏನನ್ನೋ ಟೈಪ್ ಮಾಡುತ್ತಿರುವುದು ಲೈವ್ ಟಿವಿಯಲ್ಲಿ ಪ್ರಸಾರವಾಯಿತು.
— Cricket Iconic (@ankanghosh335) April 11, 2026
ಬಿಸಿಸಿಐನ (BCCI) ಭ್ರಷ್ಟಾಚಾರ ವಿರೋಧಿ ಘಟಕದ (ACSU) ನಿಯಮಗಳ ಪ್ರಕಾರ, ಪಂದ್ಯ ನಡೆಯುವಾಗ ‘ಪ್ಲೇಯರ್ಸ್ ಅ್ಯಂಡ್ ಮ್ಯಾಚ್ ಅಫಿಶಿಯಲ್ಸ್ ಏರಿಯಾ’ (PMOA) ಅಂದರೆ ಡಗೌಟ್ ಮತ್ತು ಮೈದಾನದ ಆಸುಪಾಸಿನಲ್ಲಿ ಮೊಬೈಲ್ ಫೋನ್ ಸೇರಿದಂತೆ ಯಾವುದೇ ಸಂವಹನ ಸಾಧನಗಳನ್ನು ಬಳಸುವುದು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಮ್ಯಾನೇಜರ್‌ಗಳಿಗೆ ಲಾಜಿಸ್ಟಿಕ್ಸ್ ಉದ್ದೇಶಗಳಿಗಾಗಿ ಫೋನ್ ಇಟ್ಟುಕೊಳ್ಳಲು ಅನುಮತಿ ಇದೆಯಾದರೂ, ಅದನ್ನು ಕೇವಲ ಡ್ರೆಸ್ಸಿಂಗ್ ರೂಮ್‌ನಲ್ಲಿ ಮಾತ್ರ ಬಳಸಬೇಕು.
ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ಅವರು ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಇದು ಅಕ್ಷಮ್ಯ ಅಪರಾಧ. ಆ್ಯಂಟಿ-ಕರಪ್ಷನ್ ಅಧಿಕಾರಿಗಳು ಅಲ್ಲಿ ಏನು ಮಾಡುತ್ತಿದ್ದರು?” ಎಂದು ಅವರು ಪ್ರಶ್ನಿಸಿದ್ದಾರೆ.
ಈ ಗಂಭೀರ ನಿಯಮ ಉಲ್ಲಂಘನೆಯ ಬಗ್ಗೆ ಬಿಸಿಸಿಐ ತನಿಖೆ ಆರಂಭಿಸಿದೆ ಎನ್ನಲಾಗುತ್ತಿದೆ. ಒಂದು ವೇಳೆ ತಪ್ಪಿತಸ್ಥರೆಂದು ಸಾಬೀತಾದರೆ…
ಇದನ್ನೂ ಓದಿ: IPL 2026: ಸತತ ಸೋಲುಗಳಿಂದ ಕಂಗೆಟ್ಟ KKRಗೆ ಸಿಕ್ತು ಗುಡ್ ನ್ಯೂಸ್
ಈ ವಿವಾದದ ನಡುವೆಯೂ ರಾಜಸ್ಥಾನ್ ರಾಯಲ್ಸ್ ತಂಡವು ಆರ್‌ಸಿಬಿ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು. 15 ವರ್ಷದ ವೈಭವ್ ಸೂರ್ಯವಂಶಿ ಕೇವಲ 26 ಎಸೆತಗಳಲ್ಲಿ 78 ರನ್ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
ಈ ಪ್ರಕರಣವು ಮುಂಬರುವ ದಿನಗಳಲ್ಲಿ ಐಪಿಎಲ್‌ನ ಶಿಸ್ತು ಕ್ರಮಗಳ ಮೇಲೆ ಎಂತಹ ಪರಿಣಾಮ ಬೀರಲಿದೆ ಎಂಬುದನ್ನು ಕಾದು ನೋಡಬೇಕಿದೆ.