AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ನಿಷೇಧಿತ ಇ-ಸಿಗರೇಟ್ ಸೇದಿದ್ದ ರಿಯಾನ್ ಪರಾಗ್​ಗೆ ಭಾರಿ ದಂಡ

Riyan Parag Fined by BCCI: ಐಪಿಎಲ್ 2026 ರಲ್ಲಿ ರಾಜಸ್ಥಾನ್ ರಾಯಲ್ಸ್ ನಾಯಕ ರಿಯಾನ್ ಪರಾಗ್ ಡ್ರೆಸಿಂಗ್ ರೂಂನಲ್ಲಿ ನಿಷಿದ್ಧ ಇ-ಸಿಗರೇಟ್ ಸೇದಿ ಬಿಸಿಸಿಐನಿಂದ ದಂಡಕ್ಕೆ ಗುರಿಯಾಗಿದ್ದಾರೆ. ನಿಯಮ ಉಲ್ಲಂಘನೆಗಾಗಿ ಅವರ ಪಂದ್ಯ ಶುಲ್ಕದ 25% ಕಡಿತಗೊಳಿಸಿ ಒಂದು ಡಿಮೆರಿಟ್ ಪಾಯಿಂಟ್ ನೀಡಲಾಗಿದೆ. ಭಾರತದಲ್ಲಿ ಇ-ಸಿಗರೇಟ್ ನಿಷಿದ್ಧವಾಗಿದ್ದು, ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.22 ಅಡಿಯಲ್ಲಿ ಪರಾಗ್ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ.

IPL 2026: ನಿಷೇಧಿತ ಇ-ಸಿಗರೇಟ್ ಸೇದಿದ್ದ ರಿಯಾನ್ ಪರಾಗ್​ಗೆ ಭಾರಿ ದಂಡ
Riyan Parag
ಪೃಥ್ವಿಶಂಕರ
|

Updated on: Apr 30, 2026 | 3:49 PM

Share

ಐಪಿಎಲ್ 2026 (IPL 2026) ರಲ್ಲಿ ಏಪ್ರಿಲ್ 28 ರಂದು ನಡೆದಿದ್ದ ಪಂಜಾಬ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯದ ವೇಳೆ ರಾಜಸ್ಥಾನ್ ನಾಯಕ ರಿಯಾನ್ ಪರಾಗ್ (Riyan Parag) ಭಾರತದಲ್ಲಿ ನಿಷೇಧಕ್ಕೊಳಪಟ್ಟಿರುವ ಇ-ಸಿಗರೇಟ್ ಅನ್ನು ತಂಡದ ಡ್ರೆಸಿಂಗ್ ಕೋಣೆಯಲ್ಲಿ ಸೇದಿ ಕ್ಯಾಮೆರಾ ಕಣ್ಣಿಗೆ ಸಿಕ್ಕಿಬಿದ್ದಿದ್ದರು. ಪಂದ್ಯದ ಸಮಯದಲ್ಲಿ ಪರಾಗ್ ಇ-ಸಿಗರೇಟ್ ಸೇದುತ್ತಿರುವ ವಿಡಿಯೋ ಕ್ಷಣ ಮಾತ್ರದಲ್ಲಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಪರಾಗ್​ಗೆ ಬಿಸಿಸಿಐನಿಂದ ಶಿಕ್ಷೆ ಖಚಿತ ಎಂಬ ಸುದ್ದಿಯೂ ಹರಿದಾಡಿತ್ತು. ಅದರಂತೆ ಇದೀಗ, ಐಪಿಎಲ್ ನಿಯಮವನ್ನು ಉಲ್ಲಂಘಿಸಿ ಇ-ಸಿಗರೇಟ್ ಸೇದಿದ್ದ ರಿಯಾನ್ ಪರಾಗ್​ಗೆ ಬಿಸಿಸಿಐ ಭಾರಿ ಮೊತ್ತದ ಹಣವನ್ನು ದಂಡವಾಗಿ ವಿಧಿಸಿದೆ.

ಶೇಕಡಾ 25 ರಷ್ಟು ದಂಡ

ಡ್ರೆಸ್ಸಿಂಗ್ ಕೋಣೆಯಲ್ಲಿ ಇ-ಸಿಗರೇಟ್ ಸೇದಿದ್ದಕ್ಕಾಗಿ ಶಿಕ್ಷೆಯಾಗಿ, ರಿಯಾನ್ ಪರಾಗ್ ಅವರ ಪಂದ್ಯ ಶುಲ್ಕದಲ್ಲಿ ಶೇಕಡಾ 25 ರಷ್ಟು ಮೊತ್ತವನ್ನು ಕಡಿತಗೊಳಿಸಲಾಗಿದೆ. ಇದಲ್ಲದೆ, ಅವರಿಗೆ ಒಂದು ಡಿಮೆರಿಟ್ ಪಾಯಿಂಟ್ ಕೂಡ ನೀಡಲಾಗಿದೆ. ಐಪಿಎಲ್ 2026 ರಲ್ಲಿ ಪರಾಗ್​ಗಿಂತ ಮೊದಲು ಕೆಲವು ತಂಡಗಳ ನಾಯಕರಿಗೆ ದಂಡ ವಿಧಿಸಲಾಗಿದೆ, ಆದರೆ ವೇಪಿಂಗ್ ಅಥವಾ ಇ-ಸಿಗರೇಟ್ ಸೇದಿದ್ದಕ್ಕಾಗಿ ದಂಡ ಕಟ್ಟುತ್ತಿರುವ ಮೊದಲ ನಾಯಕ ರಿಯಾನ್ ಪರಾಗ್. ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.22 ರ ಅಡಿಯಲ್ಲಿ ರಿಯಾನ್ ಪರಾಗ್ ತಪ್ಪಿತಸ್ಥನೆಂದು ಸಾಬೀತಾಗಿದ್ದು, ಪರಾಗ್ ಕೂಡ ಮ್ಯಾಚ್ ರೆಫರಿ ಅಮಿತ್ ಶರ್ಮಾ ಅವರ ಮುಂದೆ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಹೀಗಾಗಿ ಹೆಚ್ಚಿನ ವಿಚಾರಣೆಯ ಅಗತ್ಯವಿಲ್ಲವೆಂದು ಬಿಸಿಸಿಐ ತಿಳಿಸಿದೆ.

ಭಾರತದಲ್ಲಿ ಇ-ಸಿಗರೇಟ್‌ ನಿಷೇಧ

ಭಾರತದಲ್ಲಿ 2019 ರಿಂದ ವೇಪಿಂಗ್ ಅಥವಾ ಇ-ಸಿಗರೇಟ್‌ಗಳನ್ನು ನಿಷೇಧಿಸಲಾಗಿದೆ. ಹಾಗೆಯೇ ಆಯ್ದ ಪ್ರದೇಶಗಳನ್ನು ಹೊರತುಪಡಿಸಿ ಧೂಮಪಾನ ಮತ್ತು ವೇಪಿಂಗ್ ಮಾಡುವುದನ್ನು ಬಿಸಿಸಿಐ ಕಟ್ಟುನಿಟ್ಟಾಗಿ ನಿಷೇಧಿಸಿದೆ. ಆದಾಗ್ಯೂ, ರಿಯಾನ್ ಪರಾಗ್ ಡ್ರೆಸ್ಸಿಂಗ್ ಕೋಣೆಯಲ್ಲಿ ವೇಪಿಂಗ್ ಮಾಡುವ ಮೂಲಕ ನಿಯಮ ಉಲ್ಲಂಘಿಸಿದ್ದಾರೆ. ಪರಿಣಾಮವಾಗಿ, ಈಗ ಅವರಿಗೆ ಶೇಕಡಾ 25 ರಷ್ಟು ದಂಡ ವಿಧಿಸಲಾಗಿದೆ. ಆದಾಗ್ಯೂ, ರಿಯಾನ್ ಪರಾಗ್ ಸಿಗರೇಟ್ ಅಥವಾ ಇ-ಸಿಗರೇಟ್ ಸೇದಿದ ಏಕೈಕ ಕ್ರಿಕೆಟಿಗನಲ್ಲ. ಅವರಿಗೂ ಮೊದಲು, 2020 ರಲ್ಲಿ ಆರನ್ ಫಿಂಚ್ ಮತ್ತು SA20 ಲೀಗ್ ಸಮಯದಲ್ಲಿ ಎಬಿ ಡಿವಿಲಿಯರ್ಸ್ ಇ-ಸಿಗರೇಟ್ ಸೇದಿ ಸಿಕ್ಕಿಬಿದಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್