AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CSK vs RR: 15 ವರ್ಷದ ವೈಭವ್ ಸೂರ್ಯವಂಶಿ ಸುನಾಮಿಗೆ ಕೊಚ್ಚಿ ಹೋದ ಸಿಎಸ್​ಕೆ

IPL 2026, RR vs CSK: ಗುವಾಹಟಿಯಲ್ಲಿ ನಡೆದ ಐಪಿಎಲ್ 2026ರ 3ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್, ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 8 ವಿಕೆಟ್‌ಗಳಿಂದ ಸೋಲಿಸಿ ಗೆಲುವಿನ ಆರಂಭ ಮಾಡಿದೆ. ಸಿಎಸ್‌ಕೆ ನೀಡಿದ 127 ರನ್‌ಗಳ ಗುರಿಯನ್ನು ರಾಜಸ್ಥಾನ್ ಸುಲಭವಾಗಿ ಬೆನ್ನಟ್ಟಿತು. 15 ವರ್ಷದ ವೈಭವ್ ಸೂರ್ಯವಂಶಿ ಅವರ ಅಬ್ಬರದ ಅರ್ಧಶತಕವು ರಾಜಸ್ಥಾನ್ ಗೆಲುವಿಗೆ ಪ್ರಮುಖ ಪಾತ್ರ ವಹಿಸಿತು. ರಾಜಸ್ಥಾನ್ ಸಿಎಸ್‌ಕೆ ವಿರುದ್ಧ ತನ್ನ ಅಜೇಯ ಓಟವನ್ನು ಮುಂದುವರಿಸಿದೆ.

CSK vs RR: 15 ವರ್ಷದ ವೈಭವ್ ಸೂರ್ಯವಂಶಿ ಸುನಾಮಿಗೆ ಕೊಚ್ಚಿ ಹೋದ ಸಿಎಸ್​ಕೆ
Rr Vs Csk
ಪೃಥ್ವಿಶಂಕರ
|

Updated on:Mar 30, 2026 | 11:10 PM

Share

ಗುವಾಹಟಿಯಲ್ಲಿ ನಡೆದ ಐಪಿಎಲ್ 2026 (IPL 2026) ರ 3ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 8 ವಿಕೆಟ್​ಗಳಿಂದ ಸೋಲಿಸಿದ ರಾಜಸ್ಥಾನ್ ರಾಯಲ್ಸ್ (CSK vs RR) ಈ ಆವೃತ್ತಿಯನ್ನು ಗೆಲುವಿನೊಂದಿಗೆ ಆರಂಭಿಸಿದೆ. ಈ ಮೂಲಕ ಸಿಎಸ್​ಕೆ ವಿರುದ್ಧ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ಕಳೆದ ಆವೃತ್ತಿಯಲ್ಲಿ ಸಿಎಸ್​ಕೆ ವಿರುದ್ಧ ಆಡಿದ್ದ ಎರಡೂ ಪಂದ್ಯಗಳನ್ನು ಗೆದ್ದಿದ್ದ ರಾಜಸ್ಥಾನ್, ಈ ಆವೃತ್ತಿಯಲ್ಲೂ ತನ್ನ ಗೆಲುವಿನ ಓಟವನ್ನು ಮುಂದುವರೆಸಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸಿಎಸ್​ಕೆ ಕೇವಲ 127 ರನ್​ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ರಾಜಸ್ಥಾನ್, 15 ವರ್ಷದ ವೈಭವ್ ಸೂರ್ಯವಂಶಿಯ ಸಿಡಿಲಬ್ಬರದ ಅರ್ಧಶತಕದಿಂದಾಗಿ ಇನ್ನು 47 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ದಡ ಮುಟ್ಟಿತು.

ನಿರಾಶೆ ಮೂಡಿಸಿದ ಸಂಜು, ರುತುರಾಜ್

ಸಿಎಸ್​ಕೆ ವಿರುದ್ಧದ ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಆರಂಭದಿಂದಲೇ ಪಂದ್ಯದ ಮೇಲೆ ಸಂಪೂರ್ಣ ಪ್ರಾಬಲ್ಯ ಸಾಧಿಸಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್‌ಕೆ ತಂಡದ ಅಗ್ರ ಕ್ರಮಾಂಕವನ್ನು ನಾಂಡ್ರೆ ಬರ್ಗರ್ ಮತ್ತು ಜೋಫ್ರಾ ಆರ್ಚರ್ ಒಟ್ಟಾಗಿ ಕೆಡವಿದರು. ಟಿ20 ವಿಶ್ವಕಪ್‌ನಲ್ಲಿ ಯಶಸ್ವಿ ಪ್ರದರ್ಶನ ನೀಡಿದ್ದ ಸಂಜು ಸ್ಯಾಮ್ಸನ್, ಚೆನ್ನೈ ಪರ ತಮ್ಮ ಚೊಚ್ಚಲ ಪಂದ್ಯದಲ್ಲಿ ಕೇವಲ 6 ರನ್ ಗಳಿಸುವ ಮೂಲಕ ತಮ್ಮ ಹಿಂದಿನ ತಂಡದ ವಿರುದ್ಧ ಉತ್ತಮ ಪ್ರದರ್ಶನ ನೀಡಲು ವಿಫಲರಾದರು.

ಸಿಎಸ್​ಕೆ ಬ್ಯಾಟಿಂಗ್ ವೈಫಲ್ಯ

ನಾಯಕ ರುತುರಾಜ್ ಕೂಡ 6 ರನ್​ಗಳಿಗೆ ಔಟಾದರು. ಆಲ್​ರೌಂಡರ್ ಶಿವಂ ದುಬೆ ಇನ್ನಿಂಗ್ಸ್ ಕೂಡ ಬೇಗನೇ ಮುಗಿಯಿತು. ಇದರ ಪರಿಣಾಮವಾಗಿ ಸಿಎಸ್‌ಕೆ ಕೇವಲ 51 ರನ್‌ಗಳಿಗೆ ಐದು ವಿಕೆಟ್‌ಗಳನ್ನು ಮತ್ತು 94 ರನ್‌ಗಳಿಗೆ ಒಂಬತ್ತು ವಿಕೆಟ್‌ಗಳನ್ನು ಕಳೆದುಕೊಂಡಿತು. ಇದರಿಂದ ತಂಡ 100 ರನ್‌ ಗಳಿಸುವುದು ಕೂಡ ಅಸಂಭವವೆಂದು ತೋರುತ್ತಿತ್ತು. ಆದರೆ 8ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಜೇಮೀ ಓವರ್ಟನ್ ನಿರ್ಣಾಯಕ 43 ರನ್‌ಗಳ ಇನ್ನಿಂಗ್ಸ್ ಆಡಿ ತಂಡವನ್ನು ಮುಜುಗರದಿಂದ ಪಾರು ಮಾಡಿದರು.

CSK vs RR: ಒಂದಂಕಿ ದಾಟದ 8 ಬ್ಯಾಟರ್ಸ್​; ಕಷ್ಟಪಟ್ಟು 100 ರನ್ ಗಡಿ ದಾಟಿದ ಸಿಎಸ್​ಕೆ

ವೈಭವ್ ಮುಂದೆ ತಲೆವಾಗಿದ ಸಿಎಸ್​ಕೆ

ಸಿಎಸ್​ಕೆ ತಂಡವನ್ನು 127 ರನ್​ಗಳಿಗೆ ಆಲೌಟ್ ಮಾಡಿದ್ದ ರಾಜಸ್ಥಾನ, ವೈಭವ್ ಸೂರ್ಯವಂಶಿ ಬ್ಯಾಟಿಂಗ್‌ನಲ್ಲಿ ಗುರಿ ತಲುಪಲು ಎಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂದು ಕಾಯುವುದಷ್ಟೇ ಬಾಕಿ ಇತ್ತು. ಆದಾಗ್ಯೂ, ಕಾರ್ತಿಕ್ ಶರ್ಮಾ, ಮೊದಲ ಓವರ್​ನಲ್ಲೇ ವೈಭವ್ ನೀಡಿದ್ದ ಕ್ಯಾಚ್ ಹಿಡಿದಿದ್ದರೆ ಮೊದಲ ಓವರ್‌ನಲ್ಲಿಯೇ ಈ ಎಲ್ಲಾ ಭರವಸೆಗಳು ಭಗ್ನವಾಗುತ್ತಿದ್ದವು. ತಮ್ಮ ಮೊದಲ ಎಸೆತವನ್ನು ಎದುರಿಸಿದ ವೈಭವ್ ಹೈ ಶಾಟ್ ಬಾರಿಸಿದರು, ಆದರೆ ಕಾರ್ತಿಕ್​ಗೆ ಅದನ್ನು ಹಿಡಿಯಲು ಸಾಧ್ಯವಾಗಲಿಲ್ಲ. ಇದರ ಲಾಭ ಪಡೆದ ವೈಭವ್ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ವೈಭವ್ ಜೊತೆಗೆ, ಸ್ಟಾರ್ ಓಪನರ್ ಯಶಸ್ವಿ ಜೈಸ್ವಾಲ್ ಸಂಯೋಜಿತ ಇನ್ನಿಂಗ್ಸ್ ಆಡಿ, ಕೇವಲ 12.1 ಓವರ್‌ಗಳಲ್ಲಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:45 pm, Mon, 30 March 26

Follow Us
BJP ರೋಡ್ ಶೋಗೆ ಕಾಂಗ್ರೆಸ್ ಧ್ವಜ ಹಿಡಿದು 'ಕೈ' ಕಾರ್ಯಕರ್ತರ ಎಂಟ್ರಿ!
BJP ರೋಡ್ ಶೋಗೆ ಕಾಂಗ್ರೆಸ್ ಧ್ವಜ ಹಿಡಿದು 'ಕೈ' ಕಾರ್ಯಕರ್ತರ ಎಂಟ್ರಿ!
ಕೈ ಮುಖಂಡನ ಹತ್ಯೆ ಯತ್ನ: ಚಾಕುವಿನಿಂದ ಚುಚ್ಚುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕೈ ಮುಖಂಡನ ಹತ್ಯೆ ಯತ್ನ: ಚಾಕುವಿನಿಂದ ಚುಚ್ಚುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಗ್ಯಾಸ್ ರೀಫಿಲ್ ಮಾಡುವಾಗ ಏಕಾಏಕಿ ಸಿಲಿಂಡರ್​ ಸ್ಫೋಟ: ಮನೆ ಛಿದ್ರಛಿದ್ರ
ಗ್ಯಾಸ್ ರೀಫಿಲ್ ಮಾಡುವಾಗ ಏಕಾಏಕಿ ಸಿಲಿಂಡರ್​ ಸ್ಫೋಟ: ಮನೆ ಛಿದ್ರಛಿದ್ರ
ಐಪಿಎಲ್ ಮ್ಯಾಚ್ ನೋಡಲು ಹೋಗುವ ಕ್ರಿಕೆಟ್ ಅಭಿಮಾನಿಗಳೇ ಈ ಮಹಿಳೆಯ ಮಾತು ಕೇಳಿ
ಐಪಿಎಲ್ ಮ್ಯಾಚ್ ನೋಡಲು ಹೋಗುವ ಕ್ರಿಕೆಟ್ ಅಭಿಮಾನಿಗಳೇ ಈ ಮಹಿಳೆಯ ಮಾತು ಕೇಳಿ
ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್‌: ಪ್ರಯಾಣಿಕರು ಬದುಕುಳಿದಿದ್ದೇ ಪವಾಡ
ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್‌: ಪ್ರಯಾಣಿಕರು ಬದುಕುಳಿದಿದ್ದೇ ಪವಾಡ
ಅಪಘಾತದಲ್ಲಿ ನವ ದಂಪತಿ ಸ್ಥಳದಲ್ಲೇ ದುರ್ಮರಣ: ಆಪ್ತರ ನೋವಿನ ಮಾತು
ಅಪಘಾತದಲ್ಲಿ ನವ ದಂಪತಿ ಸ್ಥಳದಲ್ಲೇ ದುರ್ಮರಣ: ಆಪ್ತರ ನೋವಿನ ಮಾತು
ಹೋಟೆಲ್​​ ಮಾಲೀಕರಿಗೆ ಗುಡ್​​ನ್ಯೂಸ್​​ ಕೊಟ್ಟ ಸಚಿವ ಮುನಿಯಪ್ಪ
ಹೋಟೆಲ್​​ ಮಾಲೀಕರಿಗೆ ಗುಡ್​​ನ್ಯೂಸ್​​ ಕೊಟ್ಟ ಸಚಿವ ಮುನಿಯಪ್ಪ
ಬಾಗಲಕೋಟೆಯಲ್ಲಿ ಸಿದ್ದರಾಮಯ್ಯ 5 ದಿನ ಕ್ಯಾಂಪೇನ್​​​ಗೆ ಶ್ರೀರಾಮುಲು ವ್ಯಂಗ್ಯ
ಬಾಗಲಕೋಟೆಯಲ್ಲಿ ಸಿದ್ದರಾಮಯ್ಯ 5 ದಿನ ಕ್ಯಾಂಪೇನ್​​​ಗೆ ಶ್ರೀರಾಮುಲು ವ್ಯಂಗ್ಯ
ಚಕ್ರದ ಅಡಿಯಲ್ಲಿ ಸಿಲುಕಿದ ಕರು
ಚಕ್ರದ ಅಡಿಯಲ್ಲಿ ಸಿಲುಕಿದ ಕರು
ಮಂಟಪವನ್ನೇ ಹಾರದಂತೆ ತಡೆದವನು ಎಂದಾದರೂ ಪತ್ನಿ ಕೈ ಬಿಡುವುದುಂಟೇ!
ಮಂಟಪವನ್ನೇ ಹಾರದಂತೆ ತಡೆದವನು ಎಂದಾದರೂ ಪತ್ನಿ ಕೈ ಬಿಡುವುದುಂಟೇ!