AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RR vs RCB: ವೈಭವ್- ಜುರೇಲ್ ಆಟಕ್ಕೆ ಸೋತ ಆರ್​ಸಿಬಿ

IPL 2026, RCB vs RR: ಐಪಿಎಲ್ 2026 ರ 16ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೋಲಿಸಿತು. ಗುವಾಹಟಿಯ ಬರ್ಸಪರ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್​ಸಿಬಿ ನೀಡಿದ 201 ರನ್​ಗಳ ಗುರಿಯನ್ನು ಆರ್‌ಆರ್ 18 ಓವರ್​ಗಳಲ್ಲಿ ಬೆನ್ನಟ್ಟಿತು. ವೈಭವ್ ಸೂರ್ಯವಂಶಿ ಮತ್ತು ಧೃವ್ ಜುರೇಲ್ ಅರ್ಧಶತಕ ಬಾರಿಸಿ ಗೆಲುವಿಗೆ ಕಾರಣರಾದರು. ಇದು ರಾಜಸ್ಥಾನ್​ಗೆ ಸತತ 4ನೇ ಗೆಲುವು ಹಾಗೂ ಆರ್‌ಸಿಬಿಗೆ ಈ ಆವೃತ್ತಿಯ ಮೊದಲ ಸೋಲಾಗಿದೆ.

RR vs RCB: ವೈಭವ್- ಜುರೇಲ್ ಆಟಕ್ಕೆ ಸೋತ ಆರ್​ಸಿಬಿ
Rajasthan Royals
ಪೃಥ್ವಿಶಂಕರ
|

Updated on:Apr 11, 2026 | 12:20 AM

Share

ಐಪಿಎಲ್ 2026 (IPL 2026) ರ 16 ನೇ ಪಂದ್ಯ ಗುವಾಹಟಿಯ ಬರ್ಸಪರ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ (RCB vs RR) ನಡುವೆ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 201 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ ತಂಡ 18 ಓವರ್​ಗಳಲ್ಲಿ ಕೇವಲ 4 ವಿಕೆಟ್ ಕಳೆದುಕೊಂಡು ಜಯದ ನಗೆಬೀರಿತು. ರಾಜಸ್ಥಾನದ ಈ ಗೆಲುವಿನಲ್ಲಿ ವೈಭವ್ ಸೂರ್ಯವಂಶಿ ಹಾಗೂ ಧೃವ್ ಜುರೇಲ್ ಅವರ ಅರ್ಧಶತಕ ಪ್ರಮುಖ ಪಾತ್ರವಹಿಸಿತು. ಈ ಗೆಲುವಿನೊಂದಿಗೆ ರಾಜಸ್ಥಾನ್ ಸತತ 4ನೇ ಗೆಲುವು ದಾಖಲಿಸಿದರೆ, ಇತ್ತ ಆರ್​ಸಿಬಿ ಈ ಆವೃತ್ತಿಯ ಮೊದಲ ಸೋಲು ಎದುರಿಸಿದೆ.

201 ರನ್ ಕಲೆಹಾಕಿದ ಆರ್​ಸಿಬಿ

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿಗೆ ಉತ್ತಮ ಆರಂಭ ಸಿಗಲಿಲ್ಲ. ವೇಗಿ ಜೋಫ್ರಾ ಆರ್ಚರ್ ಮೊದಲ ಎಸೆತದಲ್ಲೇ ಫಿಲ್ ಸಾಲ್ಟ್ ಅವರನ್ನು ಔಟ್ ಮಾಡಿ ಆರ್‌ಸಿಬಿಗೆ ಆರಂಭದಲ್ಲೇ ಆಘಾತ ನೀಡಿದರು. ಅಲ್ಲದೆ ಈ ಪಂದ್ಯದಲ್ಲಿ ಆರ್‌ಸಿಬಿಯ ಅಗ್ರ ಕ್ರಮಾಂಕ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಲಿಲ್ಲ. ಆದರೆ ನಾಯಕ ರಜತ್ ಪಾಟಿದಾರ್ 40 ಎಸೆತಗಳಲ್ಲಿ 63 ರನ್‌ಗಳ ಉಪಯುಕ್ತ ಇನ್ನಿಂಗ್ಸ್ ಆಡಿದರು. ವಿರಾಟ್ ಕೊಹ್ಲಿ ಕೂಡ 16 ಎಸೆತಗಳಲ್ಲಿ 32 ರನ್ ಬಾರಿಸಿದರು. ಇಂಪ್ಯಾಕ್ಟ್ ಪ್ಲೇಯರ್ ಆಗಿ ಬಂದಿದ್ದ ವೆಂಕಟೇಶ್ ಅಯ್ಯರ್ 15 ಎಸೆತಗಳಲ್ಲಿ ಅಜೇಯ 29 ರನ್ ಗಳಿಸಿದರು. ಹೀಗಾಗಿ ಆರ್‌ಸಿಬಿ 20 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 201 ರನ್ ಗಳಿಸಿತು.

ಮತ್ತೊಂದೆಡೆ, ರಾಜಸ್ಥಾನ್ ರಾಯಲ್ಸ್ ಪರ ಬೌಲಿಂಗ್​ನಲ್ಲಿ ಮಿಂಚಿದ ವೇಗಿ ಜೋಫ್ರಾ ಆರ್ಚರ್ ಎರಡು ವಿಕೆಟ್ ಪಡೆದರೆ, ರವಿ ಬಿಷ್ಣೋಯ್ ಮತ್ತು ಬ್ರಿಜೇಶ್ ಶರ್ಮಾ ತಲಾ ಎರಡು ವಿಕೆಟ್ ಪಡೆದರು. ರವೀಂದ್ರ ಜಡೇಜಾ ಮತ್ತು ಸಂದೀಪ್ ಶರ್ಮಾ ಕೂಡ ತಲಾ ಒಂದು ವಿಕೆಟ್ ಪಡೆದರು.

RR vs RCB: ಪವರ್‌ಪ್ಲೇನಲ್ಲಿ ರನ್ ಬಂದರೂ ಪ್ರಮುಖ 5 ವಿಕೆಟ್ ಕಳೆದುಕೊಂಡ ಆರ್​​ಸಿಬಿ

ವೈಭವ್- ಜುರೇಲ್ ಗೆಲುವಿನ ಅರ್ಧಶತಕ

ಈ ಗುರಿಯನ್ನು ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ ತಂಡ ಯಶಸ್ವಿ ಜೈಸ್ವಾಲ್ ಅವರ ವಿಕೆಟ್ ಅನ್ನು ಬೇಗನೇ ಕಳೆದುಕೊಂಡಿತು. ಆದರೆ ವೈಭವ್ ಸೂರ್ಯವಂಶಿ ಕೇವಲ 26 ಎಸೆತಗಳಲ್ಲಿ 8 ಬೌಂಡರಿ ಮತ್ತು 7 ಸಿಕ್ಸರ್‌ಗಳ ಸಹಿತ 78 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಆಡಿ ಈ ಪಂದ್ಯವನ್ನು ಆರಂಭದಲ್ಲೇ ಆರ್​ಸಿಬಿ ಕೈನಿಂದ ಕಿತ್ತುಕೊಂಡರು. ಹಾಗೆಯೇ ಧ್ರುವ್ ಜುರೆಲ್ ಜೊತೆಗೂಡಿ ಎರಡನೇ ವಿಕೆಟ್‌ಗೆ 108 ರನ್‌ಗಳ ಜೊತೆಯಾಟ ನಡೆಸಿದರು. ನಂತರ ಧ್ರುವ್ ಜುರೆಲ್, 43 ಎಸೆತಗಳಲ್ಲಿ 8 ಬೌಂಡರಿ ಮತ್ತು 3 ಸಿಕ್ಸರ್‌ಗಳ ಸಹಿತ ಅಜೇಯ 81 ರನ್ ಬಾರಿಸಿ ತಂಡದ ಗೆಲುವನ್ನು ಖಚಿತಪಡಿಸಿದರು. ಅನುಭವಿ ಜಡೇಜಾ ಕೂಡ 25 ಎಸೆತಗಳಲ್ಲಿ ಅಜೇಯ 24 ರನ್ ಗಳಿಸಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:09 am, Sat, 11 April 26

Follow Us
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ