AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಐಪಿಎಲ್ ಆರಂಭಕ್ಕೆ 20 ದಿನಗಳ ವೇಳಾಪಟ್ಟಿ?

IPL 2026 Schedule: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2026) ಸೀಸನ್-19 ಮಾರ್ಚ್ 28 ರಿಂದ ಶುರುವಾಗಲಿದೆ. ಹತ್ತು ತಂಡಗಳ ನಡುವಣ ಈ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿ ಇದೇ ವಾರ ಬಿಡುಗಡೆಯಾಗಲಿದ್ದು, ಇದಾದ ಬಳಿಕ ದ್ವಿತೀಯ ಹಂತದ ವೇಳಾಪಟ್ಟಿ ರೂಪಿಸಲು ನಿರ್ಧರಿಸಲಾಗಿದೆ.

IPL 2026: ಐಪಿಎಲ್ ಆರಂಭಕ್ಕೆ 20 ದಿನಗಳ ವೇಳಾಪಟ್ಟಿ?
Ipl 2026
ಝಾಹಿರ್ ಯೂಸುಫ್
|

Updated on:Mar 11, 2026 | 8:28 AM

Share

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಇದಾಗ್ಯೂ ಐಪಿಎಲ್​ನ ವೇಳಾಪಟ್ಟಿ ಪ್ರಕಟವಾಗಿಲ್ಲ. ಇದಕ್ಕೆ ಮುಖ್ಯ ಕಾರಣ ಕೆಲ ರಾಜ್ಯಗಳಲ್ಲಿನ ಚುನಾವಣೆ. ಮುಂಬರುವ ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ಸೇರಿದಂತೆ ಕೆಲವು ರಾಜ್ಯಗಳ ವಿಧಾನಸಭಾ ಚುನಾವಣೆಗಳ ಹಿನ್ನೆಲೆಯಲ್ಲಿ ವೇಳಾಪಟ್ಟಿಗೆ ದಿನಾಂಕ ನಿಗದಿ ಮಾಡಲು ಸಮಸ್ಯೆ ಎದುರಾಗಿದೆ. ಹೀಗಾಗಿ ಐಪಿಎಲ್ ಆರಂಭಿಸಲು ಮೊದಲು 15 ದಿನಗಳ ವೇಳಾಪಟ್ಟಿ ಪ್ರಕಟಿಸಲು ಬಿಸಿಸಿಐ ಚಿಂತಿಸಿದೆ.

20 ದಿನಗಳ ವೇಳಾಪಟ್ಟಿ:

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಮಾರ್ಚ್ 28 ರಿಂದ ಶುರುವಾಗಲಿದೆ. ಇದಕ್ಕಾಗಿ ಮೊದಲಿಗೆ 20 ದಿನಗಳ ವೇಳಾಪಟ್ಟಿಯನ್ನು ಪ್ರಕಟಿಸಲು ಪ್ಲ್ಯಾನ್ ರೂಪಿಸಲಾಗುತ್ತಿದೆ. ಇನ್ನು ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕ ನಿಗದಿಯಾದ ಬಳಿಕ ಉಳಿದ ವೇಳಾಪಟ್ಟಿಯನ್ನು ಪ್ರಕಟಿಸಲಾಗುತ್ತದೆ.

ವಿಳಂಬ ಯಾಕೆ?

ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಚುನಾವಣಾ ಸಮಯದಲ್ಲಿ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಮತದಾನದ ಕರ್ತವ್ಯದಲ್ಲಿ ಇರುತ್ತಾರೆ. ಇದರಿಂದಾಗಿ ಪಂದ್ಯಗಳಿಗೆ ಅಗತ್ಯವಿರುವ ಹೆಚ್ಚಿನ ಭದ್ರತೆಯನ್ನು ಒದಗಿಸುವುದು ಕಷ್ಟವಾಗುತ್ತದೆ.

ಭಾರತೀಯ ಚುನಾವಣಾ ಆಯೋಗವು ಈ ರಾಜ್ಯಗಳ ಮತದಾನದ ದಿನಾಂಕಗಳನ್ನು ಇನ್ನೂ ಅಂತಿಮಗೊಳಿಸಿಲ್ಲ. ದಿನಾಂಕಗಳು ತಿಳಿದ ನಂತರವಷ್ಟೇ ಪಂದ್ಯಗಳ ಸ್ಥಳ ಮತ್ತು ಸಮಯವನ್ನು ಬಿಸಿಸಿಐ  ಖಚಿತಪಡಿಸಿಕೊಳ್ಳಲು ಸಾಧ್ಯ.

ಬಿಸಿಸಿಐ ಈ ಹಿಂದೆಯೂ (ಉದಾಹರಣೆಗೆ 2024 ಮತ್ತು 2019 ರಲ್ಲಿ) ಸಾರ್ವತ್ರಿಕ ಚುನಾವಣೆಗಳ ಕಾರಣದಿಂದ ಇದೇ ರೀತಿಯಲ್ಲಿ ಹಂತ-ಹಂತವಾಗಿ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿತ್ತು.

ಇದೀಗ ಕೇವಲ ಮೊದಲ 15 ದಿನಗಳ (ಮಾರ್ಚ್ 28 ರಿಂದ ಏಪ್ರಿಲ್ ಮಧ್ಯಭಾಗದವರೆಗೆ) ವೇಳಾಪಟ್ಟಿಯನ್ನು ಮಾತ್ರ ಬಿಡುಗಡೆ ಮಾಡಲು ಬಿಸಿಸಿಐ ಚಿಂತಿಸಿದೆ. ಉಳಿದ ಪಂದ್ಯಗಳ ಪಟ್ಟಿಯು ಮಾರ್ಚ್ ತಿಂಗಳ ಅಂತ್ಯದೊಳಗೆ ಹೊರಬರುವ ನಿರೀಕ್ಷೆಯಿದೆ.

ಉದ್ಘಾಟನಾ ಪಂದ್ಯ ಎಲ್ಲಿ?

ಈ ಬಾರಿಯ ಐಪಿಎಲ್​ನ ಉದ್ಘಾಟನಾ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುವುದು ಬಹುತೇಕ ಖಚಿತವಾಗಿದೆ. ಅಲ್ಲದೆ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು  ಪಂಜಾಬ್ ಕಿಂಗ್ಸ್ ಅಥವಾ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಕಣಕ್ಕಿಳಿಯಲಿದೆ ಎಂದು ವರದಿಯಾಗಿದೆ.

ಫೈನಲ್ ಯಾವಾಗ?

ಪ್ರಸ್ತುತ ಮಾಹಿತಿಯಂತೆ ಈ ಬಾರಿಯ ಐಪಿಎಲ್​ನ ಫೈನಲ್ ಪಂದ್ಯವು ಮೇ 31 ರಂದು ನಡೆಯಲಿದೆ. ಈ ಪಂದ್ಯವನ್ನೂ ಕೂಡ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ ಆಯೋಜಿಸಲು ಚಿಂತಿಸಲಾಗಿದೆ.

ಇದನ್ನೂ ಓದಿ: ಅಬ್ಬಾ ಇಷ್ಟೊಂದಾ! ಟೀಮ್ ಇಂಡಿಯಾಗೆ ಬಹುಮಾನ ಘೋಷಣೆ

ಅಂದರೆ ಮುಂಬರುವ ಐಪಿಎಲ್​ನ ಉದ್ಘಾಟನಾ ಪಂದ್ಯ ಮತ್ತು ಫೈನಲ್​ ಮ್ಯಾಚ್​ಗೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸುವುದು ಬಹುತೇಕ ಖಚಿತವಾಗಿದೆ.

Published On - 3:06 pm, Tue, 10 March 26

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?