AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SRH vs KKR: ಕನ್ನಡಿಗ ಸ್ಮರಣ್​ಗೆ ಸ್ಮರಣೀಯವಾಗದ ಚೊಚ್ಚಲ ಐಪಿಎಲ್ ಪಂದ್ಯ

IPL 2026: ಐಪಿಎಲ್ 2026ರ 45ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಪರ ಸ್ಮರಣ್ ರವಿಚಂದ್ರನ್ ಚೊಚ್ಚಲ ಪಂದ್ಯವಾಡಿದರು. ಕೆಕೆಆರ್ ವಿರುದ್ಧದ ಈ ಪಂದ್ಯದಲ್ಲಿ ಕನ್ನಡಿಗ ಸ್ಮರಣ್ ಕೇವಲ 4 ರನ್ ಗಳಿಸಿ ನಿರಾಸೆ ಮೂಡಿಸಿದರು. ದೇಶಿ ಕ್ರಿಕೆಟ್‌ನಲ್ಲಿ ಕರ್ನಾಟಕದ ಪರ ರಣಜಿ ಮತ್ತು ವಿಜಯ್ ಹಜಾರೆ ಟ್ರೋಫಿಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ಸ್ಮರಣ್‌ಗೆ ಈ ಪದಾರ್ಪಣೆ ಸ್ಮರಣೀಯವಾಗಲಿಲ್ಲ. ಮತ್ತೊಬ್ಬ ಕನ್ನಡಿಗ ಮನೀಶ್ ಪಾಂಡೆ ಕೆಕೆಆರ್ ಪರ ಆಡಿದರು.

SRH vs KKR: ಕನ್ನಡಿಗ ಸ್ಮರಣ್​ಗೆ ಸ್ಮರಣೀಯವಾಗದ ಚೊಚ್ಚಲ ಐಪಿಎಲ್ ಪಂದ್ಯ
Smaran Ravichandran
ಪೃಥ್ವಿಶಂಕರ
|

Updated on: May 03, 2026 | 5:12 PM

Share

ಐಪಿಎಲ್ 2026 (IPL 2026) ರ 45ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ (SRH vs KKR )​ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಉಭಯ ತಂಡಗಳು ಕನ್ನಡಿಗರಿಗೆ ಪ್ಲೇಯಿಂಗ್ 11ನಲ್ಲಿ ಅವಕಾಶ ನೀಡಿದ್ದವು. ಸನ್‌ರೈಸರ್ಸ್ ಪರ ಸ್ಮರಣ್ ರವಿಚಂದ್ರನ್ (Smaran Ravichandran) ತಮ್ಮ ಚೊಚ್ಚಲ ಐಪಿಎಲ್ ಪಂದ್ಯವನ್ನಾಡಿದರೆ, ಇತ್ತ ಕೆಕೆಆರ್ ಪರ ಮನೀಶ್ ಪಾಂಡೆ ಕಣಕ್ಕಿಳಿದಿದ್ದರು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ ಪರ ಸ್ಮರಣ್​ಗೆ ಬ್ಯಾಟಿಂಗ್‌ ಮಾಡುವ ಅವಕಾಶ ಸಿಕ್ಕಿತು. ಆದರೆ ಸಿಕ್ಕ ಜೊಚ್ಚಲ ಅವಕಾಶವನ್ನು ಬಳಸಿಕೊಳ್ಳುವಲ್ಲಿ ಸ್ಮರಣ್ ಎಡವಿದರು.

ಬದಲಿ ಆಟಗಾರನಾಗಿ ಆಯ್ಕೆ

ನಿತೀಶ್ ಕುಮಾರ್ ರೆಡ್ಡಿ ಅನುಪಸ್ಥಿತಿಯಿಂದಾಗಿ ಸ್ಮರಣ್​ಗೆ ಈ ಪಂದ್ಯದಲ್ಲಿ ಆಡುವ ಅವಕಾಶ ಸಿಕ್ಕಿತು. ವಾಸ್ತವವಾಗಿ 2025 ರ ಐಪಿಎಲ್‌ನಲ್ಲಿ ಆಡಮ್ ಜಂಪಾ ಗಾಯಗೊಂಡ ನಂತರ ಸ್ಮರಣ್ ಅವರನ್ನು ಸನ್‌ರೈಸರ್ಸ್ ಫ್ರಾಂಚೈಸಿ ಬದಲಿ ಆಟಗಾರನಾಗಿ ತಂಡಕ್ಕೆ ಸೇರಿಸಿಕೊಂಡಿತ್ತು. ಆದಾಗ್ಯೂ ಆ ಆವೃತ್ತಿಯಲ್ಲಿ ಸ್ಮರಣ್​ಗೆ ಆಡುವ ಅವಕಾಶ ಸಿಗಲಿಲ್ಲ. ಇದರ ಹೊರತಾಗಿಯೂ ಸನ್‌ರೈಸರ್ಸ್ ಅವರನ್ನು ತಂಡದಲ್ಲೇ ಉಳಿಸಿಕೊಂಡಿತ್ತು. ಇದೀಗ ಪ್ಲೇಯಿಂಗ್​ 11 ನಲ್ಲಿ ಆಡುವ ಅವಕಾಶ ಪಡೆದ ಸ್ಮರಣ್ 4 ಎಸೆತಗಳಲ್ಲಿ 1 ಬೌಂಡರಿ ಸಹಿತ 4 ರನ್ ಕಲೆಹಾಕಲಷ್ಟೇ ಶಕ್ತರಾಗಿ ವಿಕೆಟ್ ಒಪ್ಪಿಸಿದರು. ಅಂದರೆ ಸ್ಮರಣ್​ಗೆ ತಮ್ಮ ಚೊಚ್ಚಲ ಐಪಿಎಲ್ ಪಂದ್ಯ ಸ್ಮರಣೀಯವಾಗಲಿಲ್ಲ.

ದೇಶಿ ಟೂರ್ನಿಯಲ್ಲಿ ಅಬ್ಬರ

ದೇಶಿ ಟೂರ್ನಿಯಲ್ಲಿ ಕರ್ನಾಟಕದ ಪರ ಆಡುವ ಸ್ಮರಣ್, ತಮ್ಮ ಅಲ್ಪ ವೃತ್ತಿಜೀವನದಲ್ಲೇ ತಂಡದ ನಂಬಿಕಸ್ತ ಆಟಗಾರನಾಗಿದ್ದಾರೆ. 2024 ರಲ್ಲಿ ಕರ್ನಾಟಕ ಪರ ದೇಶೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಸ್ಮರಣ್, 2024-25 ರ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡಿದ ಏಳು ಇನ್ನಿಂಗ್ಸ್‌ಗಳಲ್ಲಿ 72.16 ಸರಾಸರಿಯಲ್ಲಿ ಮತ್ತು 100 ಕ್ಕಿಂತ ಹೆಚ್ಚಿನ ಸ್ಟ್ರೈಕ್ ರೇಟ್‌ನಲ್ಲಿ 433 ರನ್ ಗಳಿಸಿದರು ಮತ್ತು ಕರ್ನಾಟಕ ಟ್ರೋಫಿ ಗೆಲ್ಲಲು ಸಹಾಯ ಮಾಡಿದರು.

CSK vs DC: ಸಿಎಸ್​​ಕೆ ವಿರುದ್ಧ ಸೋತ ಮುಂಬೈ ಐಪಿಎಲ್​ನಿಂದ ಭಾಗಶಃ ಔಟ್

ರಣಜಿಯಲ್ಲಿ ರನ್ ಮಳೆ

ಅದೇ ಆವೃತ್ತಿಯಲ್ಲಿ ಸ್ಮರಣ್, ಕರ್ನಾಟಕ ಪರ ಏಳು ರಣಜಿ ಟ್ರೋಫಿ ಪಂದ್ಯಗಳಲ್ಲಿ 64.50 ಸರಾಸರಿಯಲ್ಲಿ 516 ರನ್ ಗಳಿಸಿದ್ದರು. ಇನ್ನು ಕಳೆದ ರಣಜಿ ಟ್ರೋಫಿಯಲ್ಲಿ ರನ್​ಗಳ ಶಿಖರ ಕಟ್ಟಿದ್ದ ಸ್ಮರಣ್, ಒಂಬತ್ತು ಪಂದ್ಯಗಳಲ್ಲಿ ನಾಲ್ಕು ಶತಕಗಳು ಮತ್ತು ಮೂರು ಅರ್ಧಶತಕಗಳೊಂದಿಗೆ 86.36 ಸರಾಸರಿಯೊಂದಿಗೆ 950 ರನ್ ಗಳಿಸಿ ಅತಿ ಹೆಚ್ಚು ರನ್ ಕಲೆಹಾಕಿದ ಆಟಗಾರ ಎನಿಸಿಕೊಂಡಿದ್ದರು. ಅವರ ವಿಜಯ್ ಹಜಾರೆ ಟ್ರೋಫಿ ಅಭಿಯಾನವು ಅಷ್ಟೇನೂ ಯಶಸ್ವಿಯಾಗಲಿಲ್ಲ, ಆದರೆ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ, ಆಡಿದ ಏಳು ಪಂದ್ಯಗಳಲ್ಲಿ 63.80 ಸರಾಸರಿ ಮತ್ತು 158.70 ಸ್ಟ್ರೈಕ್ ರೇಟ್‌ನಲ್ಲಿ ವೃತ್ತಿಜೀವನದ ಅತ್ಯಧಿಕ 319 ರನ್ ಕಲೆಹಾಕಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ