SRH vs RCB: ಕೊನೆಯ ಲೀಗ್ ಪಂದ್ಯದಲ್ಲಿ ಆರ್​ಸಿಬಿಗೆ ಸನ್‌ರೈಸರ್ಸ್ ಎದುರಾಳಿ; ಪಂದ್ಯ ಎಷ್ಟು ಗಂಟೆಗೆ ಆರಂಭ?

RCB vs SRH IPL 2026 Hyderabad: ಹೈದರಾಬಾದ್‌ನಲ್ಲಿ ನಡೆಯಲಿರುವ ಐಪಿಎಲ್ 2026 ಲೀಗ್‌ನ ಕೊನೆಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ಅಗ್ರ 2 ಸ್ಥಾನಗಳಿಗಾಗಿ ಹೋರಾಡಲಿವೆ. ಆರ್‌ಸಿಬಿ ಗೆದ್ದರೆ ಮೊದಲ ಸ್ಥಾನ, ಎಸ್‌ಆರ್‌ಎಚ್‌ಗೆ ಗೆಲುವು ಅಗತ್ಯ. ಮೇ 22ರಂದು ಸಂಜೆ 7 ಗಂಟೆಗೆ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಈ ಮಹತ್ವದ ಪಂದ್ಯ ನಡೆಯಲಿದೆ. ಸ್ಟಾರ್ ಸ್ಪೋರ್ಟ್ಸ್ ಮತ್ತು ಜಿಯೋ ಹಾಟ್‌ಸ್ಟಾರ್‌ನಲ್ಲಿ ನೇರ ಪ್ರಸಾರ ಲಭ್ಯವಿರುತ್ತದೆ.

SRH vs RCB: ಕೊನೆಯ ಲೀಗ್ ಪಂದ್ಯದಲ್ಲಿ ಆರ್​ಸಿಬಿಗೆ ಸನ್‌ರೈಸರ್ಸ್ ಎದುರಾಳಿ; ಪಂದ್ಯ ಎಷ್ಟು ಗಂಟೆಗೆ ಆರಂಭ?
Srh Vs Rcb

Updated on: May 21, 2026 | 8:21 PM

ಹೈದರಾಬಾದ್‌ನಲ್ಲಿ ನಡೆಯಲಿರುವ ತಮ್ಮ ಕೊನೆಯ ಲೀಗ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ (RCB vs SRH) ತಂಡಗಳು ಮುಖಾಮುಖಿಯಾಗಲಿದ್ದು, ಅಗ್ರ ಎರಡು ಸ್ಥಾನಗಳಿಸುವ ಗುರಿಯನ್ನು ಹೊಂದಿವೆ. ಆರ್‌ಸಿಬಿ ಪ್ರಸ್ತುತ 18 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಹೀಗಾಗಿ ಸನ್‌ರೈಸರ್ಸ್ ವಿರುದ್ಧದ ಗೆಲುವು ಆರ್​ಸಿಬಿಗೆ ಮೊದಲ ಸ್ಥಾನ ಮತ್ತು ಫೈನಲ್ ತಲುಪಲು ಎರಡು ಅವಕಾಶಗಳನ್ನು ನೀಡುತ್ತದೆ. ಇತ್ತ ಸನ್‌ರೈಸರ್ಸ್ ಕೂಡ ಆಡಿರುವ 13 ಪಂದ್ಯಗಳಿಂದ 16 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದು ಅಗ್ರ ಎರಡು ಸ್ಥಾನಗಳಲ್ಲಿ ಸ್ಥಾನ ಪಡೆಯಲು ಆರ್​ಸಿಬಿ ವಿರುದ್ಧ ಗೆಲ್ಲಲೇಬೇಕಾಗಿದೆ.

ಸನ್‌ರೈಸರ್ಸ್ ಹಾಗೂ ಆರ್​ಸಿಬಿ ನಡುವಿನ ಐಪಿಎಲ್ 2026 ರ 67ನೇ ಪಂದ್ಯ ಯಾವಾಗ ನಡೆಯಲಿದೆ?

ಸನ್‌ರೈಸರ್ಸ್ ಹಾಗೂ ಆರ್​ಸಿಬಿ ನಡುವಿನ ಐಪಿಎಲ್ 2026 ರ 67ನೇ ಪಂದ್ಯ ಮೇ 22 ರಂದು ನಡೆಯಲಿದೆ.

ಸನ್‌ರೈಸರ್ಸ್ ಹಾಗೂ ಆರ್​ಸಿಬಿ ನಡುವಿನ ಐಪಿಎಲ್ 2026 ರ 67ನೇ ಪಂದ್ಯ ಎಲ್ಲಿ ನಡೆಯಲಿದೆ?

ಸನ್‌ರೈಸರ್ಸ್ ಹಾಗೂ ಆರ್​ಸಿಬಿ ನಡುವಿನ ಐಪಿಎಲ್ 2026 ರ 67ನೇ ಪಂದ್ಯ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣ, ಹೈದರಾಬಾದ್​ನಲ್ಲಿ ನಡೆಯಲಿದೆ.

ಸನ್‌ರೈಸರ್ಸ್ ಹಾಗೂ ಆರ್​ಸಿಬಿ ನಡುವಿನ ಐಪಿಎಲ್ 2026 ರ 67ನೇ ಪಂದ್ಯ ಎಷ್ಟು ಗಂಟೆಗೆ ಆರಂಭ?

ಸನ್‌ರೈಸರ್ಸ್ ಹಾಗೂ ಆರ್​ಸಿಬಿ ನಡುವಿನ ಐಪಿಎಲ್ 2026 ರ 67ನೇ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ. ಟಾಸ್ ಸಂಜೆ 6:30 ಕ್ಕೆ ನಡೆಯಲಿದೆ.

ಸನ್‌ರೈಸರ್ಸ್ ಹಾಗೂ ಆರ್​ಸಿಬಿ ನಡುವಿನ ಐಪಿಎಲ್ 2026 ರ 67ನೇ ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

ಸನ್‌ರೈಸರ್ಸ್ ಹಾಗೂ ಆರ್​ಸಿಬಿ ನಡುವಿನ ಐಪಿಎಲ್ 2026 ರ 67ನೇ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಹಾಗೆಯೇ ಮೊಬೈಲ್ ಅಥವಾ ಲ್ಯಾಪ್‌ಟಾಪ್‌ನಲ್ಲಿ ಪಂದ್ಯವನ್ನು ವೀಕ್ಷಿಸಲು ಇಷ್ಟಪಡುವ ವೀಕ್ಷಕರಿಗೆ, ಜಿಯೋ ಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಲಭ್ಯವಿರುತ್ತದೆ.

IPL 2026: ‘ಈ ವರ್ಷವೂ ಆರ್‌ಸಿಬಿಯದ್ದೇ ಟ್ರೋಫಿ’; ಭವಿಷ್ಯ ನುಡಿದ ಸೆಹ್ವಾಗ್

ಉಭಯ ತಂಡಗಳು

ಸನ್ ರೈಸರ್ಸ್ ಹೈದರಾಬಾದ್: ಪ್ಯಾಟ್ ಕಮಿನ್ಸ್ (ನಾಯಕ), ಸಲೀಲ್ ಅರೋರಾ, ಟ್ರಾವಿಸ್ ಹೆಡ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅನಿಕೇತ್ ವರ್ಮಾ, ಅಭಿಷೇಕ್ ಶರ್ಮಾ, ಆರ್. ಅಂಬ್ರಿಸ್, ಹರ್ಷ್ ದುಬೆ, ಕ್ರೆನ್ಸ್ ಫುಲೆತ್ರಾ, ಲಿಯಾಮ್ ಲಿವಿಂಗ್‌ಸ್ಟೋನ್, ಕಮಿಂದು ಮೆಂಡಿಸ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಲ್ ಪಟೇಲ್, ಶಿವಂಗ್ ಕುಮಾರ್, ಅಮಿತ್ ಕುಮಾರ್, ಜೆರಾಲ್ಡ್ ಕೋಟ್ಜಿ, ಪ್ರಫುಲ್ ಹಿಂಗೆ, ದಿಲ್ಶನ್ ಮಧುಶಂಕ, ಇಶಾನ್ ಮಾಲಿಂಗ, ಸಾಕಿಬ್ ಹುಸೇನ್, ಓಂಕಾರ್ ತರ್ಮಲೆ, ಜಯದೇವ್ ಉನದ್ಕತ್, ಜೀಶನ್ ಅನ್ಸಾರಿ.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ರಜತ್ ಪಾಟಿದಾರ್ (ನಾಯಕ), ಟಿಮ್ ಡೇವಿಡ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲಿಪ್ ಸಾಲ್ಟ್, ಜಿತೇಶ್ ಶರ್ಮಾ, ಜಾಕೋಬ್ ಬೆಥೆಲ್, ಕೃನಾಲ್ ಪಾಂಡ್ಯ, ರೊಮಾರಿಯೊ ಶೆಫರ್ಡ್, ಅಭಿನಂದನ್ ಸಿಂಗ್, ಜೋಶ್ ಹ್ಯಾಜಲ್‌ವುಡ್, ರಸಿಕ್ ಸಲಾಂ ದಾರ್, ಭುವನೇಶ್ವರ್ ಕುಮಾರ್, ಸುಯಶ್ ಶರ್ಮಾ, ಸ್ವಪ್ನಿಲ್ ಸಿಂಗ್, ನುವಾನ್ ತುಷಾರ, ವೆಂಕಟೇಶ್ ಅಯ್ಯರ್, ಜಾಕೋಬ್ ಡಫಿ, ಮಂಗೇಶ್ ಯಾದವ್, ಜೋರ್ಡಾನ್ ಕಾಕ್ಸ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕನಿಷ್ಕ್ ಚೌಹಾಣ್, ಸಾತ್ವಿಕ್ ದೇಸ್ವಾಲ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Loading...
Unable to load recommendations.
Follow Us