AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಸ್ಟಾರ್ ವೇಗಿಗಳಿಗೆ ಇಂಜುರಿ; ಥಂಡಾ ಹೊಡೆದ ತಂಡಗಳು

IPL Injury Crisis: ಐಪಿಎಲ್ ಆರಂಭಕ್ಕೂ ಮುನ್ನವೇ ಹಲವು ತಂಡಗಳಿಗೆ ಸ್ಟಾರ್ ಆಟಗಾರರ ಗಾಯದ ಸಮಸ್ಯೆ ಎದುರಾಗಿದೆ. ಅದರಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಸನ್‌ರೈಸರ್ಸ್ ಹೈದರಾಬಾದ್, ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ತಮ್ಮ ಪ್ರಮುಖ ವೇಗಿಗಳ ಅನುಪಸ್ಥಿತಿಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಹೇಜಲ್‌ವುಡ್, ಪ್ಯಾಟ್ ಕಮ್ಮಿನ್ಸ್ ಮತ್ತು ನಾಥನ್ ಎಲಿಸ್ ಅವರಂತಹ ಪ್ರಮುಖ ಬೌಲರ್‌ಗಳು ಗಾಯದಿಂದ ಬಳಲುತ್ತಿದ್ದು, ಇದು ತಂಡಗಳ ಸಿದ್ಧತೆ ಮತ್ತು ಚಾಂಪಿಯನ್‌ಶಿಪ್ ಕನಸಿಗೆ ದೊಡ್ಡ ಅಡಚಣೆಯಾಗಿದೆ.

IPL 2026: ಸ್ಟಾರ್ ವೇಗಿಗಳಿಗೆ ಇಂಜುರಿ; ಥಂಡಾ ಹೊಡೆದ ತಂಡಗಳು
Ipl 2026
ಪೃಥ್ವಿಶಂಕರ
|

Updated on: Mar 19, 2026 | 7:18 PM

Share

ಐಪಿಎಲ್ (IPL 2026) ಆರಂಭಕ್ಕೆ ಇನ್ನು ಹೆಚ್ಚು ದಿನಗಳು ಉಳಿದಿಲ್ಲ. ಹೀಗಾಗಿ ಎಲ್ಲಾ ಫ್ರಾಂಚೈಸಿಗಳು ತಯಾರಿಯಲ್ಲಿ ತೊಡಗಿದ್ದು, ಬಲಿಷ್ಠ ತಂಡದೊಂದಿಗೆ ಕಣಕ್ಕಿಳಿಯಲು ತಂತ್ರ ರೂಪಿಸುತ್ತಿವೆ. ಆದಾಗ್ಯೂ ಕೆಲವು ತಂಡಗಳಿಗೆ ಸ್ಟಾರ್ ಆಟಗಾರರ ಇಂಜುರಿ ಸಮಸ್ಯೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅದರಲ್ಲೂ ಸ್ಟಾರ್ ವೇಗಿಗಳೇ ಗಾಯದಿಂದ ಬಳಲುತ್ತಿರುವುದು ತಂಡಗಳನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಬೌಲರ್​ಗಳ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ತಂಡಗಳ ಪಟ್ಟಿಯಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಸನ್‌ರೈಸರ್ಸ್ ಹೈದರಾಬಾದ್ (SRH), ಕೋಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ಸೇರಿದೆ.

ಹೇಜಲ್‌ವುಡ್ ಬರುವುದು ಯಾವಾಗ?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಸ್ಟ್ರೇಲಿಯಾದ ವೇಗಿ ಜೋಶ್ ಹೇಜಲ್‌ವುಡ್ ಗಾಯದಿಂದಾಗಿ ಬಹಳ ದಿನಗಳಿಂದ ಕ್ರಿಕೆಟ್​ನಿಂದ ದೂರ ಉಳಿದಿದ್ದಾರೆ. ಇದರಿಂದಾಗಿ ಅವರು ಆಶಸ್ ಹಾಗೂ ಟಿ20 ವಿಶ್ವಕಪ್ ಆಡಲು ಸಾಧ್ಯವಾಗಿರಲಿಲ್ಲ. ಇದೀಗ ಐಪಿಎಲ್ ಸಮೀಪಿಸುತ್ತಿದ್ದು, ಅವರು ಐಪಿಎಲ್‌ನಲ್ಲಿ ಆಡುವುದು ಇದುವರೆಗೆ ಖಚಿತವಾಗಿಲ್ಲ. ಕಳೆದ ಬಾರಿ ಆರ್‌ಸಿಬಿಯ ವೇಗದ ದಾಳಿಗೆ ಬಲ ತುಂಬಿದ್ದ ಹೇಜಲ್‌ವುಡ್ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಯಶಸ್ವಿಯಾಗಿದ್ದರು. ಆದರೆ ಈ ಬಾರಿ ಅವರ ಲಭ್ಯತೆ ಅನುಮಾನವಾಗಿದೆ.

ಎಸ್​ಆರ್​ಹೆಚ್​ ನಾಯಕನಿಗೆ ಇಂಜುರಿ

ಕಳೆದ ಆವೃತ್ತಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ನಾಯಕನಾಗಿ ಮುನ್ನಡೆಸಿದ್ದ ಪ್ಯಾಟ್ ಕಮ್ಮಿನ್ಸ್ ಕೂಡ ಗಾಯದಿಂದ ಬಳಲುತ್ತಿದ್ದಾರೆ. ಆಶಸ್ ಟೆಸ್ಟ್ ಪಂದ್ಯದಲ್ಲಿ ಕಮ್ಮಿನ್ಸ್ ಗಾಯಗೊಂಡಿದ್ದರು. ಅಂದಿನಿಂದ ಕಮ್ಮಿನ್ಸ್ ಕ್ರಿಕೆಟ್ ಆಡಿಲ್ಲ. ಇದೀಗ ಕಮ್ಮಿನ್ಸ್ ಐಪಿಎಲ್‌ನಲ್ಲಿ ಆಡುವುದು ಅನುಮಾನವಾಗಿದೆ. ಹೀಗಾಗಿ ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಪ್ಯಾಟ್ ಕಮ್ಮಿನ್ಸ್ ಬದಲಿಗೆ ಇಶಾನ್ ಕಿಶನ್​ಗೆ ತಂಡದ ನಾಯಕತ್ವ ವಹಿಸಿದೆ.

ಕೋಲ್ಕತ್ತಾಗೆ ಎರಡೆರಡು ಆಘಾತ

ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೂ ಸ್ಟಾರ್ ವೇಗಿಗಳ ಇಂಜುರಿ ದೊಡ್ಡ ತಲೆನೋವಾಗಿದೆ. ತಂಡದ ಪ್ರಮುಖ ವೇಗಿಗಳಾದ ಹರ್ಷಿತ್ ರಾಣಾ ಮತ್ತು ಮಥಿಶಾ ಪತಿರಾನ ಗಾಯಗಳಿಂದಾಗಿ ಈ ಆವೃತ್ತಿಯಿಂದಲೇ ಹೊರಗುಳಿದಿದ್ದಾರೆ. ಅಲ್ಲದೆ ಮುಸ್ತಾಫಿಜುರ್ ರೆಹಮಾನ್ ಅವರನ್ನು ಐಪಿಎಲ್‌ನಿಂದ ಹೊರ ಹಾಕಿದ ಬಳಿಕ ಇದೀಗ ಕೆಕೆಆರ್ ಜಿಂಬಾಬ್ವೆಯ ವೇಗಿ ಬ್ಲೆಸ್ಸಿಂಗ್ ಮುಸರಬಾನಿಯನ್ನು ಬದಲಿಯಾಗಿ ತಂಡಕ್ಕೆ ಸೇರಿಸಿಕೊಂಡಿದೆ.

IPL 2026: ವೃತ್ತಿಜೀವನಕ್ಕಾಗಿ ಮಹಾ ತ್ಯಾಗ ಮಾಡಿದ ಯುಜ್ವೇಂದ್ರ ಚಾಹಲ್

ಸಿಎಸ್​ಕೆ ವೇಗಿಗೂ ಗಾಯ

ಇದೀಗ ಐದು ಬಾರಿಯ ಚಾಂಪಿಯನ್‌ ತಂಡ ಸಿಎಸ್​ಕೆಗೂ ಸ್ಟಾರ್ ವೇಗಿಯ ಗಾಯದ ಸಮಸ್ಯೆ ದೊಡ್ಡ ಆಘಾತ ಎದುರಾಗಿದೆ. ವರದಿಯ ಪ್ರಕಾರ, ಆಸ್ಟ್ರೇಲಿಯಾದ ವೇಗಿ ನಾಥನ್ ಎಲಿಸ್ ಮಂಡಿರಜ್ಜು ಗಾಯದಿಂದ ಬಳಲುತ್ತಿದ್ದು, ಅವರು ಪಂದ್ಯಾವಳಿ ಪ್ರಾರಂಭಕ್ಕೂ ಮುನ್ನ ಅಥವಾ ಪಂದ್ಯಾವಳಿ ನಂತರವೂ ಸಂಪೂರ್ಣವಾಗಿ ಚೇತರಿಸಿಕೊಳ್ಳುವ ಸಾಧ್ಯತೆಯಿಲ್ಲ ಎಂದು ವರದಿಯಾಗಿದೆ. ಇದರಿಂದಾಗಿ ಅವರು ಈ ಬಾರಿಯ ಐಪಿಎಲ್‌ನಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಲಾಗುತ್ತಿದೆ. ಇದು ಸಿಎಸ್​ಕೆ ಪಾಳಯಕ್ಕೆ ದೊಡ್ಡ ಆಘಾತವಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: JDS ಕಟ್ಟರ್ ಕಾರ್ಯಕರ್ತರೇ ಆರೋಪಿಗಳು!
ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: JDS ಕಟ್ಟರ್ ಕಾರ್ಯಕರ್ತರೇ ಆರೋಪಿಗಳು!
'ಕೈ' ಟಿಕೆಟ್​​ ಸಿಗದಿದ್ರೆ BJPಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ!: ಯತ್ನಾಳ್​
'ಕೈ' ಟಿಕೆಟ್​​ ಸಿಗದಿದ್ರೆ BJPಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ!: ಯತ್ನಾಳ್​
ಇರಾನ್ ದಾಳಿಗೆ ಹೊತ್ತಿ ಉರಿದ ಕತಾರ್​ನ ಅತಿದೊಡ್ಡ ಎಲ್​ಎನ್​ಜಿ ಸ್ಥಾವರ
ಇರಾನ್ ದಾಳಿಗೆ ಹೊತ್ತಿ ಉರಿದ ಕತಾರ್​ನ ಅತಿದೊಡ್ಡ ಎಲ್​ಎನ್​ಜಿ ಸ್ಥಾವರ
ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ವೇಣುಗೋಪಾಲ್​​ ಹೇಳಿಕೆಗೆ ಡಿಕೆಶಿ ಉತ್ತರ ನೋಡಿ
ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ವೇಣುಗೋಪಾಲ್​​ ಹೇಳಿಕೆಗೆ ಡಿಕೆಶಿ ಉತ್ತರ ನೋಡಿ
ಸೊಸೆ ಕೈ ಮುರಿದಿದೆ ಕಷ್ಟವಾಗುತ್ತೆಂದು ರೊಟ್ಟಿ ಲಟ್ಟಿಸಿಕೊಟ್ಟ ಮಾವ
ಸೊಸೆ ಕೈ ಮುರಿದಿದೆ ಕಷ್ಟವಾಗುತ್ತೆಂದು ರೊಟ್ಟಿ ಲಟ್ಟಿಸಿಕೊಟ್ಟ ಮಾವ
ಯುಗಾದಿ ವರ್ಷ ಭವಿಷ್ಯ; ಈ ವರ್ಷ ಮೀನ ರಾಶಿಯವರಿಗೆ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ವರ್ಷ ಮೀನ ರಾಶಿಯವರಿಗೆ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ವರ್ಷ ಕುಂಭ ರಾಶಿಯವರಿಗೆ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ವರ್ಷ ಕುಂಭ ರಾಶಿಯವರಿಗೆ ಹೇಗಿರಲಿದೆ?
ರಂಜಾನ್ ಉಪವಾಸದ ಲಾಂಗ್ ಡ್ರೈವ್ ಹೆಸರಲ್ಲಿ ಬಂದು ಅಪಾಯಕಾರಿ ವ್ಹೀಲಿಂಗ್
ರಂಜಾನ್ ಉಪವಾಸದ ಲಾಂಗ್ ಡ್ರೈವ್ ಹೆಸರಲ್ಲಿ ಬಂದು ಅಪಾಯಕಾರಿ ವ್ಹೀಲಿಂಗ್
ಸೌದೆ ಒಲೆಯಲ್ಲಿ ಸಿದ್ಧವಾಗುತ್ತಿದೆ ಬಿಸಿ ಬಿಸಿ ಹೋಳಿಗೆ!
ಸೌದೆ ಒಲೆಯಲ್ಲಿ ಸಿದ್ಧವಾಗುತ್ತಿದೆ ಬಿಸಿ ಬಿಸಿ ಹೋಳಿಗೆ!
ಹರಿತವಾದ ಆಯುಧಗಳೊಂದಿಗೆ ಬಂದು ಪೊಲೀಸರನ್ನೇ ಹೆದರಿಸಿ ಓಡಿಸಿದ ಗೂಂಡಾಗಳು
ಹರಿತವಾದ ಆಯುಧಗಳೊಂದಿಗೆ ಬಂದು ಪೊಲೀಸರನ್ನೇ ಹೆದರಿಸಿ ಓಡಿಸಿದ ಗೂಂಡಾಗಳು